ಕಡಂಗ, ಸೆ 28 : ಬದ್ರಿಯ ಜುಮಾ ಮಸೀದಿ ಹಾಗೂ ತಾಜುಲ್ ಉಲಮಾ ಮದರಸ ವತಿಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಯಿತು. ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬ್ದುರಹ್ಮಾನ್ ಅರಫಾ ಧ್ವಜಾರೋಹಣ ನೆರವೆರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಜುಮಾ ಮಸೀದಿಯಿಂದ ಪಟ್ಟಣದಲ್ಲಿ ಮಿಲಾದ್ ಸಂದೇಶ ಜಾಥಾ ನಡೆಯಿತು. ವಿದ್ಯಾರ್ಥಿಗಳಿಂದ ಧಫ್, ಸ್ಕೌಟ್, ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಜಮಹತ್ ಖತೀಬ್ ಇಸ್ಮಾಯಿಲ್ ಲತೀಫಿ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭ ಮದರಸ ಮುಖ್ಯೋಪಾಧ್ಯಾಯ ಸಿಯಬುದ್ದಿನ್ ಜೌಹರಿ, ಜಮಾಅತ್ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತಿತ್ತರರು ಹಾಜರಿದ್ದರು. ವರದಿ : ನೌಫಲ್
ಲೇಖಕ: admin
ನವದೆಹಲಿ ಸೆ.28 : ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 116 ನೇ ಜನ್ಮದಿನವನ್ನು ದೇಶದೆಲ್ಲೆಡೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದರು. ನ್ಯಾಯ ಮತ್ತು ಸ್ವಾತಂತ್ರ್ಯಕ್ಕಾಗಿ ಭಗತ್ ಸಿಂಗ್ ಅವರು ಹೋರಾಡಿದರು. ಭಗತ್ ಸಿಂಗ್ ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತಿದ್ದೇವೆ. ಅವರ ತ್ಯಾಗ ಸ್ಫೂರ್ತಿ ನೀಡುತ್ತಲೇ ಇದೆ. ಅವರು ಭಾರತದ ನಿರಂತರ ಹೋರಾಟದ ಸಂಕೇತವಾಗಿದ್ದಾರೆ” ಎಂದು ಪ್ರಧಾನಿ ಹೇಳಿದರು.
ಮಡಿಕೇರಿ ಸೆ.28 : ಶಿಕ್ಷಕರಾದವರು ತಮ್ಮ ವೃತ್ತಿಧರ್ಮಕ್ಕೆ ನ್ಯಾಯಸಲ್ಲಿಸಿದಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯವೆಂದು ಕೂಡಿಗೆ ಕ್ರೀಡಾ ಶಾಲಾ ನಿವೃತ್ತ ಪ್ರಾಂಶುಪಾಲರಾದ ಕುಂತಿ ಬೋಪಯ್ಯ ಹೇಳಿದರು. ನಗರದ ರೋಟರಿ ಸಭಾಂಗಣದಲ್ಲಿ ಮಡಿಕೇರಿ ರೋಟರಿ ವುಡ್ಸ್‍ನಿಂದ ಆಯೋಜಿತ ಕಾರ್ಯಕ್ರಮದಲ್ಲಿ ಐವರು ಸಾಧಕ ಶಿಕ್ಷಕರಿಗೆ ‘ನೇಷನ್ ಬಿಲ್ಡರ್ಸ್’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿ, ಶಿಕ್ಷಕ ವೃತ್ತಿ ಬಹಳ ಖುಷಿ ಕೊಡುವಂತದ್ದು. ಮಕ್ಕಳೊಡನೆ ಮಕ್ಕಳಾಗಲು ಶಿಕ್ಷಕ ವೃತ್ತಿಯಿಂದ ಮಾತ್ರ ಸಾಧ್ಯವೆಂದು ತಿಳಿಸಿದರು. ರೋಟರಿ ಅಸಿಸ್ಟೆಂಟ್ ಗವರ್ನರ್ ದೇವಣಿರ ತಿಲಕ್ ಪೊನ್ನಪ್ಪ ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾದದ್ದು. ಸಾವಿರಾರು ಉತ್ತಮ ನಾಗರಿಕರನ್ನು ಸೃಷ್ಟಿಸುವ ಕೆಲಸ ಬಹಳ ಅಪೂರ್ವವಾದದ್ದು. ಇಂತಹ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವ ಮೂಲಕ ರೋಟರಿ ಮಡಿಕೇರಿ ವುಡ್ಸ್ ಉತ್ತಮವಾಗಿ ಮುಂದೆ ಸಾಗುತ್ತಿದೆ ಎಂದು ನುಡಿದರು. ರೋಟರಿ ಝೋನಲ್ ಲೆಫ್ಟಿನೆಂಟ್ ಸಂಪತ್ ಕುಮಾರ್ ಮಾತನಾಡಿ, ರೋಟರಿ ವುಡ್ಸ್ ಸಂಸ್ಥೆಯಿಂದ ಇಂತಹ ಕಾರ್ಯಕ್ರಮಗಳು ಮತ್ತಷ್ಟು ಮೂಡಿ ಬರಲಿ ಎಂದು ಆಶಿಸಿದರು. ಪ್ರಶಸ್ತಿಗೆ ಭಾಜನರಾದ ಶಿಕ್ಷಕರು : …
ಬೆಂಗಳೂರು ಸೆ.28 : ಖ್ಯಾತ ಕೃಷಿ ವಿಜ್ಞಾನಿ, ಹಸಿರು ಕ್ರಾಂತಿಯ ಹರಿಕಾರರಾದ ಎಂ.ಎಸ್ ಸ್ವಾಮಿನಾಥನ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಸುಸ್ಥಿರ ಕೃಷಿ ಉತ್ಪನ್ನಗಳ ಉತ್ಪಾದಕತೆಗೆ ಸ್ವಾಮಿನಾಥನ್ ಅವರು ನೀಡಿದ ಕೊಡುಗೆಗಳ ಫಲವಾಗಿ ಭಾರತವು ಕೃಷಿ ಉತ್ಪಾದಕತೆಯಲ್ಲಿ ಸ್ವಾವಲಂಬನೆ ಸಾಧಿಸಿ, ಜಾಗತಿಕ ಮನ್ನಣೆ ಗಳಿಸಲು ಸಾಧ್ಯವಾಯಿತು. ವಿಶ್ವಸಂಸ್ಥೆಯಿಂದ “ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ” ಎಂದು ಕರೆಯಲ್ಪಟ್ಟ ಹಿರಿಯ ಸಸ್ಯ ತಳಿಶಾಸ್ತ್ರಜ್ಞ ಸ್ವಾಮಿನಾಥನ್ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಬಂಧು ಮಿತ್ರರಿಗೆ ನೋವು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. (ಮುಖ್ಯಮುಂತ್ರಿ ಸಿದ್ದರಾಮಯ್ಯ)
ಕುಶಾಲನಗರ ಸೆ.27 : ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ ದಿನದ ಪ್ರಮುಕ್ತ ನಡೆಸಲಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಕುಶಾಲನಗರ ಹಾಗೂ ಕೂಡಿಗೆಯಲ್ಲಿ ಬೃಹತ್ ಮಿಲಾದ್ ಸಂದೇಶ ಜಾಥ ನಡೆಯಿತು. ಕುಶಾಲನಗರದ ದಾರುಲ್ ಉಲೂಂ ಮದ್ರಸ ಹಾಗೂ ಹಿಲಾಲ್ ಮಸೀದಿ ಆಡಳಿತ ಮಂಡಳಿ ವತಿಯಿಂದ ಕುಶಾಲನಗರದ ಮುಖ್ಯ ರಸ್ತೆ ಹಾಗೂ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಾಯಿತು. ಕುಶಾಲನಗರದ ಶಾದಿ ಮಹಲ್ ನಿಂದ ಪ್ರಾರಂಭಗೊಂಡ ಜಾಥ, ಮುಖ್ಯ ರಸ್ತೆ ಮೂಲಕ ಪಟ್ಟಣದ ಕಾರ್ಯಪ್ಪ ವೃತ್ತಕ್ಕೆ ತಲುಪಿತು. ಕಾರ್ಯಪ್ಪ ವೃತ್ತದಲ್ಲಿ ಪುಟಾಣಿ ಮಕ್ಕಳನ್ನು ಒಳಗೊಂಡಂತೆ ದಾರುಲ್ ಉಲೂಂ ಮದ್ರಸದ ವಿದ್ಯಾರ್ಥಿಗಳಿಂದ ದಫ್ ಪ್ರದರ್ಶನ ನೀಡಲಾಯಿತು. ವಿದ್ಯಾರ್ಥಿಗಳು ಆಕರ್ಷಕ ಸಮವಸ್ತ್ರಗಳನ್ನು ಧರಿಸಿ ಗಮನ ಸೆಳೆದರು. ನಂತರ ದಂಡಿನಪೇಟೆ ಮೂಲಕ ಸಾಗಿದ ಮೆರವಣಿಗೆ, ಅಯ್ಯಪ್ಪಸ್ವಾಮಿ ದೇವಾಲಯ ರಸ್ತೆ ಮೂಲಕ ಆಗಮಿಸಿ ಶಾಧಿ ಮಹಲ್ ನತ್ತ ಸಾಗಿತು. ಮೆರವಣಿಗೆಯಲ್ಲಿ ಪ್ರವಾದಿಯವರ ಶಾಂತಿ, ಸಾಹೋದರ್ಯತೆಯ ಸಂದೇಶಗಳನ್ನು ಸಾರಿ ಸಮಾಜಕ್ಕೆ ಶಾಂತಿ, ಸಹೋದರತೆಯ ಸಂದೇಶವನ್ನು ನೀಡಿದರು. ಕೂಡಿಗೆಯ ಮೊಹಿಯದ್ದೀನ್ ಜುಮಾ…
ಮೂರ್ನಾಡು ಸೆ.28 : ಇಲ್ಲಿನ ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ 15ನೇ ವರ್ಷದ ಓಣಂ ಹಬ್ಬಾಚರಣೆಯು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಹಬ್ಬಾಚರಣೆಯ ಸಮಾರಂಭವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಮ್ಮ ತಮ್ಮ ಮನೆಯಲ್ಲಿಯೆ ಓಣಂ ಹಬ್ಬವನ್ನು ಆಚರಿಸಿಕೊಂಡರೂ, ಸಮಾಜ ಬಾಂಧವರೆಲ್ಲರೂ ಕೂಡಿ ಸಂಘದ ಮುಖಾಂತರ ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುವುದು ಸಮಾಜದ ಒಗ್ಗಟ್ಟನ್ನು ಎತ್ತಿಹಿಡಿಯುತ್ತದೆಯಲ್ಲದೆ, ತಮ್ಮ ಸಮಾಜದ ಆಚಾರ-ವಿಚಾರ, ಸಂಸ್ಕೃತಿಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ಹೇಳಿದರು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ಹಿಂದೂಗಳಾದ ನಾವು ತಮ್ಮ ಸಂಸ್ಕೃತಿಗಳನ್ನು ಚಾಚೂ ತಪ್ಪದೆ ಪಾಲಿಸಿದಾಗ ಮಾತ್ರ ಹಿಂದೂ ಸಮಾಜ ಗಟ್ಟಿಗೊಳ್ಳುತ್ತದೆ. ಹೀಗೆ ತಮ್ಮ ಆಚಾರ-ವಿಚಾರ ಪಾಲನೆಗಳಿಂದ ಸಮಾಜ ಒಳಿತು ಕಂಡುಕೊಂಡಾಗ ದೇಶವು ಸಹ ಅಭಿವೃದ್ಧಿ…
ಮಡಿಕೇರಿ ಫೆ.28 : ಈದ್ ಮಿಲಾದ್ ಅಂಗವಾಗಿ ಮಡಿಕೇರಿಯ ಬದ್ರಿಯಾ ಜಮಾಅತ್ ಆಶ್ರಯದಲ್ಲಿ ನಗರದಲ್ಲಿ ಬೃಹತ್ ಮಿಲಾದ್ ರ‍್ಯಾಲಿ ನಡೆಯಿತು. ನಗರದ ಗದ್ದುಗೆ ಬಳಿಯಿಂದ ಆರಂಭಗೊಂಡ ಜಾಥಾ ಕಾವೇರಿ ಹಾಲ್ ನಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಾಗವಹಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಸಂದೇಶ ಸಾರಿದರು.
ಮಡಿಕೇರಿ ಸೆ.28 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸೆ.29 ರಂದು ಸಂಜೆ 4 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಮಡಿಕೇರಿ ಸೆ.28 : ಭಾಗಮಂಡಲದ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಜರುಗಲಿರುವ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ 2023” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಸೇರಿದ ‘ಮುಡಿ ಕಟ್ಟಡ’ದಲ್ಲಿ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ, ಪಾರಂಪರಿಕ ಆಚರಣೆಗಳಿಗೆ ಚ್ಯುತಿ ಬಾರದಂತೆ ಕಾವೇರಿ ಜಾತ್ರೆ ನಡೆಯಬೇಕೆಂದು ಸೂಚನೆ ನೀಡಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಜಿಲ್ಲಾಧಿಕಾರಿ ವೆಂಕಟರಾಜ, ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾಗರೀಕರು ಹಾಜರಿದ್ದರು.
ಕುಶಾಲನಗರ, ಸೆ.28 : ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್.ಇ.ಆರ್.ಟಿ.) ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ ಸೆ.27 ರಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿ ಗಮನ ಸೆಳೆದರು. ವಿಜ್ಞಾನ ನಾಟಕ ಸ್ಪರ್ಧೆ ಉದ್ಘಾಟಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರೂ ಆದ ಡಯಟ್ ನ ಪ್ರಾಂಶುಪಾಲ ಎಂ.ಚಂದ್ರಕಾಂತ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದೆ. ಲೋಕ ಶಿಕ್ಷ ಣದ ಸಂದೇಶವನ್ನು ಸಮಾಜಕ್ಕೆ ರವಾನಿಸುವ ಪ್ರಭಾವಿ ಮಾಧ್ಯಮವಾಗಿ ನಾಟಕಕಲೆ ಮಹತ್ವ ಪಡೆದುಕೊಂಡಿದೆ ಎಂದರು. ಕಲೆ ಮತ್ತು ವಿಜ್ಞಾನದ…






