ಮಡಿಕೇರಿ ಮೇ 11 NEWS DESK : ಪ್ಯಾಕೇಜ್ ನಂಬರ್ 808-ಇಂಪ್ರೂಮೆಂಟ್ಸ್ ಟು ಬೆಂಗಳೂರು-ಜಾಲ್ಸೂರು ರಸ್ತೆ ಎಸ್‍ಎಚ್-85 ರಿಂದ ಸಿಎಚ್ 239.76 ಕಿ.ಮೀ. ರಿಗೆ 254.71 ಕಿ.ಮೀ.(ಇನ್ ಸೆಲೆಕ್ಟೆಡ್ ರೀಚಸ್) ಇನ್ ಸೋಮವಾರಪೇಟೆ (ಸರಪಳಿ 239.76 ರಿಂದ 241.00 ಕಿ.ಮೀ.) ಸಿಸಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮೇ, 13 ರಿಂದ ಜೂನ್, 12 ರವರೆಗೆ ಸೋಮವಾರಪೇಟೆ ತಾಲ್ಲೂಕು-ಬೆಂಗಳೂರು ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಭಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಸಾರ್ವಜನಿಕರು ಸೋಮವಾರಪೇಟೆ-ಹಾನಗಲ್ಲು-ತಲ್ತಾರಶೆಟ್ಟಳ್ಳಿ-ತಾಕೇರಿ ಮಾರ್ಗ, ಮಾವಿನಕಟ್ಟೆ-ತಲ್ತಾರಶೆಟ್ಟಳಿ ಮಾರ್ಗವಾಗಿ ಬಳಸುವುದು. ಈ ಬಗ್ಗೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಮೇ 11 NEWS DESK : ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಅದರಂತೆ 2026ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಗಳು 2026 ರ ಎಸ್‍ಎಸ್‍ಎಲ್‍ಸಿ/ಪಿಯುಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. https://powermedia.info ಲಿಂಕ್ ಮುಖಾಂತರ ಅರ್ಜಿ ಸಲ್ಲಿಸುವುದು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು…
ಮಡಿಕೇರಿ ಮೇ 11 NEWS DESK : ಪತ್ರಕರ್ತರ ಸ್ನೇಹಿತರ ಬಳಗ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಡಿಕೇರಿ ನಗರದ ಪತ್ರಕರ್ತರಿಗೆ ಆಯೋಜಿಸಿದ್ದ ಸೌಹಾರ್ದ ಕ್ರಿಕೆಟ್ ಪಂದ್ಯಾಟದಲ್ಲಿ ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ ಸ್ಥಾನ ಪಡೆಯಿತು. ಬೆಸ್ಟ್ ಆಫ್ ತ್ರಿ ಪಂದ್ಯಾಟದ ಮೊದಲ ಪಂದ್ಯದಲ್ಲಿ ರಾಕೇಶ್ ಮಾಲೀಕತ್ವದ ಆದರ್ಶ್ ಅದ್ಕಲೇಗಾರ್ ನಾಯಕತ್ವದ ಮೀಡಿಯಾ ಮಾಸ್ಟರ್ಸ್ ತಂಡ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿತು. ನಿಗದಿತ 8 ಓವರ್‌ನಲ್ಲಿ 4 ವಿಕೆಟ್ ನಷ್ಟಕ್ಕೆ 72 ರನ್ ಕಲೆ ಹಾಕಿತು. ತಂಡದ ಪರ ಪ್ರೇಮ್ 20 ರನ್ ಕಲೆ ಹಾಕಿದರು. ಗುರಿ ಬೆನ್ನಟ್ಟಿದ ನವೀನ್ ಡಿಸೋಜ ಮಾಲೀಕತ್ವದ ಮಂಜುಸುವರ್ಣ ನಾಯಕತ್ವದ ಪವರ್ ಹಿಟ್ಟರ್ಸ್ ತಂಡ 5.2 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಗೆಲುವಿನ ದಡ ಸೇರಿತು. ತಂಡದ ಪರ ಮಂಜು ಸುವರ್ಣ 58 ರನ್ ಕಲೆ ಹಾಕಿದರು. 2ನೇ ಪಂದ್ಯದಲ್ಲಿ ಟಾಸ್ ಗೆದ್ದ ಮೀಡಿಯಾ ಮಾಸ್ಟರ್ಸ್ ತಂಡ ನಿಗದಿತ ಓವರ್‍ಗಳಲ್ಲಿ 2…
ಮಡಿಕೇರಿ ಮೇ 11 NEWS DESK : ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. 2014 ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾದ ಸಹನಾ ಎಸ್.ಹಾದಿಮನಿ ಅವರು ಈ ಹಿಂದೆ 6 ವರ್ಷಗಳ ಕಾಲ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅದಕ್ಕೂ ಮೊದಲು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಮಡಿಕೇರಿ NEWS DESK ಮೇ 11 : ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಕುಂಬೂರು ಗ್ರಾಮದಲ್ಲಿ ಲಭ್ಯವಿರುವ ಪೈಸಾರಿ ಜಾಗವನ್ನು ಸ್ಥಳೀಯ ಅರ್ಜಿದಾರರಿಗೆ ಮಾತ್ರ ಹಂಚಿಕೆ ಮಾಡಬೇಕೆಂದು ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹಾಗೂ ಎಐಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಬೇರೆ ಬೇರೆ ಗ್ರಾ.ಪಂ ವ್ಯಾಪ್ತಿಯ ಫಲಾನುಭವಿಗಳಿಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಬಹುಜನ ಕಾರ್ಮಿಕ ಸಂಘ ಲಕ್ಕೇರಿ ಪೈಸಾರಿಯಲ್ಲಿ ಕಳೆದ 9 ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಅರ್ಥಹೀನವಾಗಿದ್ದು, ಯಾವುದೇ ಕಾರಣಕ್ಕೂ ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಅರ್ಜಿದಾರರನ್ನು ಹೊರತು ಪಡಿಸಿ ಬೇರೆಯವರಿಗೆ ನಿವೇಶನ ನೀಡಬಾರದೆಂದು ಒತ್ತಾಯಿಸಿದರು. ಕುಂಬೂರು ಗ್ರಾಮದ ಸರ್ವೆ ಸಂಖ್ಯೆ 125/1 ರಲ್ಲಿ ಲಭ್ಯವಿರುವ ಪೈಸಾರಿ ಜಾಗವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರರಿಗೆ ನಿವೇಶನದ ರೂಪದಲ್ಲಿ ಮಂಜೂರಾತಿ ಮಾಡಬೇಕೆಂದು ಕೋರಿ ಕಳೆದ 20 ವರ್ಷಗಳಿಂದ ಅರ್ಹರು ಅರ್ಜಿ ಸಲ್ಲಿಸುತ್ತಾ ಬಂದಿದ್ದಾರೆ. ಅಲ್ಲದೆ ನಿರಂತರ…
ಕುಶಾಲನಗರ ಮೇ 11 : ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರಿನ ಖಾಸಗಿ ರೆಸಾರ್ಟ್ ಸಭಾಂಗಣದಲ್ಲಿ ನಡೆಯಿತು. ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತದೆ. ಜಿಲ್ಲಾಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ಪ್ರತಿ ಹಂತದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕಾರ್ಯಕರ್ತರ ವ್ಯಕ್ತಿತ್ವ ರೂಪಿಸಲು, ಶಿಸ್ತು ಮೂಡಿಸಲು ಜವಬ್ದಾರಿಯುತ ಸ್ಥಾನದಲ್ಲಿರುವವರ ಮೂಲಕ ಸಹಕಾರಿಯಾಗಲಿದೆ. ನಿರ್ದಿಷ್ಟ ಗುರಿ ಹೊಂದಿರುವ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ. ಕೇವಲ ಅಧಿಕಾರ ಗಳಿಸುವುದು ಮಾತ್ರ ನಮ್ಮ ಉದ್ದೇಶವಲ್ಲ. ಉತ್ತಮ ಸೇವೆ ಸಲ್ಲಿಸಲು ಅಧಿಕಾರ ನಮಗೆ ಒಂದು ಸಾಧನವಷ್ಟೆ. ಪಕ್ಷದ ಮೂಲ ತತ್ವ ಸಿದ್ದಾಂತ, ಪರಂಪರೆ ಯನ್ನು ಇಂದಿನ ಆಧುನಿಕ ಕಾಲಘಟ್ಟದ ಕಾರ್ಯಕರ್ತರಿಗೆ ಸ್ಮರಿಸಿ ಪಕ್ಷದೊಳಗೆ ಯಾವ ರೀತಿ ಕಾರ್ಯನಿರ್ವಹಿಸಬೇಕು, ಜನರಿಗೆ ಹೇಗೆ ಸೇವೆ ಸಲ್ಲಿಸಬೇಕು ಎಂಬುದನ್ನು ತಿಳಿಸಲು ಪ್ರಶಿಕ್ಷಣ ಕಾರ್ಯಕ್ರಮದ ಮೂಲಕ…
ಮಡಿಕೇರಿ NEWS DESK ಮೇ 10 : ಐಸಿಎಸ್‌ಇ 2025 – 26 ರ 10 ನೇ ತರಗತಿ ಪರೀಕ್ಷೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಪಿ.ಹೆಚ್.ಅಧೃತ್ ಶರ್ಮ ಶೇ.98.20 ಫಲಿತಾಂಶ ಗಳಿಸುವ ಮೂಲಕ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದ ಪಿ.ಎನ್.ಹರಿಶಂಕರ್ ಪ್ರಸಾದ್ ಹಾಗೂ ಡಾ.ವಿಜಯಲತಾ ಸಿ. ದಂಪತಿಯ ಪುತ್ರ.
ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ ನಡೆದ ಮೊದಲ ಇಂಡೋ ನೇಪಾಳ ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ಇಂಟರ್ ಗೆಲ್ ಫೈಟಿಂಗ್ ಸಿಸ್ಟಮ್ ಅಸೋಸಿಯೇಷನ್ ನ ಕೊಡಗು ಜಿಲ್ಲೆಯ ಐವರು ವಿದ್ಯಾರ್ಥಿಗಳು ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಮಿಥೇಶ್ ಜೆ. ಚಿನ್ನ, ಯಶಸ್ ಪಿ.ಆರ್, ಎಸ್.ಎಸ್.ಪಶುಪತಿ ಅರಸ್, ಯಶಸ್ಮಿತ್ ಗೌಡ ಬೆಳ್ಳಿ ಹಾಗೂ ಪ್ರಜ್ವಲ್ ಪ್ರದೀಪ್ ರಾಥೋಡ್ ಕಂಚು ಗೆದ್ದಿದ್ದಾರೆ. ಕರ್ನಾಟಕ ಇಂಟರ್ ಗೆಲ್ ಫೈಟಿಂಗ್ ಸಿಸ್ಟಮ್ ಅಸೋಸಿಯೇಷನ್ ನ ಅಧ್ಯಕ್ಷ ಸುದರ್ಶನ್ ಎನ್.ಸಿ ಹಾಗೂ ಪ್ರಧಾನ ಕಾರ್ಯದರ್ಶಿ ಪಲಂಗೋಟು ಯಶಸ್ ಪಿ.ಆರ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ.
ಮಡಿಕೇರಿ ಮೇ 9 NEWS DESK : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯ ವತಿಯಿಂದ 2026 ರ ಜುಲೈ, 01 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳು ನಮ್ಮ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವುದರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ, 11 ರಿಂದ ಅರ್ಜಿ ಸಲ್ಲಿಸಬಹುದು. ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.600 ಶಿಷ್ಯವೇತನ ನೀಡಲಾಗುವುದು ಹಾಗೂ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ. ಹಾಗೆಯೇ ದೂರಶಿಕ್ಷಣ“ಡಿಪ್ಲೊಮಾ…
ಮಡಿಕೇರಿ ಮೇ 9 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ, 12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಮಿನಿ “ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಪಿರಾಮಲ್ ಪೈನಾನ್ಸ್ ಲಿಮಿಟೆಡ್ ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋ ರೂಮ್, ಮಡಿಕೇರಿ, ಇನ್‍ಸ್ಟಂಟ್ ಐಟಿ ಟೆಕ್ನಾಲಜಿ ಮೈಸೂರು, ಹ್ಯೂಂಡಾಯಿ ಕಾರ್ ಶೋ ರೂಮ್, ಮಡಿಕೇರಿ, ಇವೊಲೋಬ್ಯಾಕ್ ರೆಸಾರ್ಟ್, ಮಡಿಕೇರಿ, ಮುತ್ತೂಟ್ ಮನಿ ಪೈನಾನ್ಸ್, ಮೈಸೂರು ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ಮಿನಿ ಉದ್ಯೋಗಮೇಳದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ…






