ಮಡಿಕೇರಿ ನ.2 : ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನ.3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆಯಲ್ಲಿ ನಡೆಯುವ ಕೃಷಿ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11.50 ಗಂಟೆಗೆ ಶ್ರೀಮಂಗಲ 66 ಕೆ.ವಿ.ವಿದ್ಯುತ್ ಉಪ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ಕೃಷಿ ಪ್ರಶಸ್ತಿ ವಿಜೇತರಾದ ರವಿಶಂಕರ್ ಅವರ ಹುದ್ದೂರು ಬಳಿಯ ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ ಸಂಜೆ 4 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ(ಜಿಲ್ಲಾಧಿಕಾರಿ ಕಚೇರಿ) ನಡೆಸಲಿದ್ದಾರೆ ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಎಚ್.ಜಿ.ಪ್ರಭಾಕರ್ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ನ.2 : ವಿರಾಜಪೇಟೆ ತಾಲ್ಲೂಕಿನ ಪೊದಕೋಟೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕಳೆದ ಒಂದು ವಾರದಿಂದ ಸುಮಾರು ಮೂರು ಕಾಡಾನೆಗಳು ಗದ್ದೆ ಮತ್ತು ತೋಟಗಳಿಗೆ ಲಗ್ಗೆ ಇಡುತ್ತಿದ್ದು, ಫಸಲನ್ನು ನಾಶ ಪಡಿಸುತ್ತಿವೆ. ಸ್ಥಳೀಯ ರೈತ ಮಂಡೇಪಂಡ ಗಣಪತಿ ಅವರ ಗದ್ದೆಯಲ್ಲಿ ಬೆಳೆದ ಬೆಳೆಯನ್ನು ಧ್ವಂಸ ಮಾಡಿರುವ ಆನೆಗಳು ತೋಟಗಳಿಗೂ ನುಗ್ಗಿ ಹಾನಿ ಮಾಡಿವೆ. ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆನಷ್ಟಕ್ಕೆ ತಕ್ಷಣ ಪರಿಹಾರ ವಿತರಿಸಬೇಕೆಂದು ಬೆಳೆಗಾರರು ಒತ್ತಾಯಿಸಿದ್ದಾರೆ.
ಕೊಪ್ಪಳ, ನ.2 : ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ , ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರಸರ್ಕಾರ ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ ಎಂದರು. *ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಗೆ ಚರ್ಚೆ :* ಕೇಂದ್ರ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲ ಹಾಗೂ ವೇಣುಗೋಪಾಲ್ ಅವರು ರಾಜ್ಯಕ್ಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನಾಯಕರು ರಾಜ್ಯಕ್ಕೆ…
ಮಡಿಕೇರಿ ನ.2 : ಚೆಟ್ಟಳ್ಳಿಯ ಅವರ್ ಕ್ಲಬ್ ವತಿಯಿಂದ ನ.4 ರಂದು ವಿವಾಹಿತ ಮಹಿಳೆಯರ ಮುಕ್ತ ನಾಕೌಟ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್ ನ ಅಧ್ಯಕ್ಷೆ ಐಚೆಟ್ಟಿರ ಸುನಿತಾ ಮಾಚಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೆಟ್ಟಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಬೆಳಗ್ಗೆ 8.30 ಗಂಟೆಗೆ ನಡೆಯಲಿರುವ ಪಂದ್ಯಾವಳಿಯನ್ನು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ನಿವೃತ್ತ ಪ್ರಾಂಶುಪಾಲರಾದ ಮಂಡೇಪಂಡ ಡಾ.ಪುಷ್ಪಾ ಕುಟ್ಟಣ್ಣ ಉದ್ಘಾಟಿಸಲಿದ್ದಾರೆ ಎಂದರು. 6 ಓವರ್ ಗಳ ಪಂದ್ಯಾವಳಿ ನಡೆಯಲಿದ್ದು, 25 ವರ್ಷ ಮೇಲ್ಪಟ್ಟ ವಿವಾಹಿತ ಮಹಿಳೆಯರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು 15 ತಂಡಗಳು ಪಾಲ್ಗೊಳ್ಳಲಿವೆ. ವಿಜೇತ ತಂಡಕ್ಕೆ ರೂ.21 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ರೂ.11 ಸಾವಿರ ನಗದು ಮತ್ತು ಟ್ರೋಫಿ, ತೃತೀಯ ರೂ.6 ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವುದು. ಅಲ್ಲದೆ, ಬೆಸ್ಟ್ ಬೌಲರ್, ಬೆಸ್ಟ್ ಬ್ಯಾಟರ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಬಹುಮಾನ ವಿತರಿಸಲಾಗುವದು. ಇದರೊಂದಿಗೆ ಚಿಯರ್ ಲೀಡಿಂಗ್…
ಮಡಿಕೇರಿ ನ.2 : ಸ್ಪಿಕ್ ಮೆಕೆ ಮತ್ತು ಭಾರತೀಯ ವಿದ್ಯಾಭವನ ಕೊಡಗು ಘಟಕದ ವತಿಯಿಂದ ನವಂಬರ್ 6 ರಂದು ಸೋಮವಾರ ನಗರದಲ್ಲಿ ಖ್ಯಾತ ವೇಣುವಾದಕ ಪ್ರವೀಣ್ ಗೋಡ್ಕಿಂಡಿ ಅವರ ಕೊಳಲು ವಾದನ ಆಯೋಜಿಸಲಾಗಿದೆ. ನಗರದ ಶ್ರೀ ಓಂಕಾರೇಶ್ವರ ದೇವಾಲಯ ಬಳಿಯ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಕಾಯ೯ಕ್ರಮ ನಡೆಯಲಿದೆ. ಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಕಿಂಡಿ ಅವರೊಂದಿಗೆ ತಬಲದಲ್ಲಿ ಕಿರಣ್ ಗೋಡ್ಕಿಂಡಿ ಜತೆಯಾಗಲಿದ್ದಾರೆ ಎಂದು ಭಾರತೀಯ ವಿದ್ಯಾಭವನ ಕೊಡಗು ಘಟಕದ ಕಾಯ೯ದಶಿ೯ ಬಾಲಾಜಿ ಕಶ್ಯಪ್ ತಿಳಿಸಿದ್ದಾರೆ .
ನಾಪೋಕ್ಲು ನ.2 : ಮೈಸೂರಿನ ಕೊಡಗು ಗೌಡ ಸಮಾಜ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೈಸೂರಿನ ಸಮಾಜದ ಸಾಂಸ್ಕೃತಿಕ ಸಭಾಂಗಣದಲ್ಲಿ ಹುತಾತ್ಮರ ಭಾವಚಿತ್ರಕ್ಕೆ ಗಣ್ಯರು ಹಾಗೂ ಸಮಾಜದ ಪ್ರಮುಖರು ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜದ ಅಧ್ಯಕ್ಷ ತೋಟಂಬೈಲ್ ಮನೋಹರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಮನೆತನ ಮತ್ತು ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಟದ ಸಂದರ್ಭ ಅವರನ್ನು ಅಮಾನವೀಯವಾಗಿ ಗಲ್ಲಿಗೇರಿಸಲ್ಪಟ್ಟ ಬಗ್ಗೆ ತಿಳಿಸಿದರು. ಮೈಸೂರು ಕೊಡಗು ಗೌಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚ೦ಡೀರ ಬಸಪ್ಪ ಮಾತನಾಡಿ, ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ವಾತಂತ್ರ್ಯ ಪೂರ್ವ ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಟ ಮತ್ತು ಗಲ್ಲಿಗೆರಿಸಲ್ಪಟ್ಟ ಸನ್ನಿವೇಶವನ್ನು ಎಳೆಯಾಗಿ ಬಿಡಿಸಿ ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷರಾದ ಕುಯ್ಯಮುಡಿ ರಾಮಪ್ಪ, ಕಾಯ೯ದಶಿ೯ ಕುಂಟಿಕಾನ ಗಣಪತಿ, ಆಡಳಿತ ಮಂಡಳಿಯ ಪದಾಧಿಕಾರಿಗಳು, ಕೊಡಗು ಗೌಡ ಮಾಜಿ…
ಮಡಿಕೇರಿ ನ.2 : ಕನ್ನಡ ಸಾಹಿತ್ಯ ಪರಿಷತ್ತು ಕೊಡ್ಲಿಪೇಟೆ ಹೋಬಳಿ ಘಟಕ, ಕೊಡ್ಲಿಪೇಟೆ ವಿದ್ಯಾ ಸಂಸ್ಥೆಯ ಸಹಯೊಗದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮ -50 ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು 5 ಕನ್ನಡ ಗೀತೆಗಳನ್ನು ಹಾಡಿ ಗಮನ ಸೆಳೆದರು. ಕ. ಸಾ. ಪ. ಹೋಬಳಿ ಘಟಕದ ಅಧ್ಯಕ್ಷ ಬಿ.ಪಿ.ಶಾಂತಮಲ್ಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಸೋಮಶೇಖರಪ್ಪ, ಯೊಗೇಂದ್ರ, ಮುಖ್ಯ ಶಿಕ್ಷಕರರಾದ ಅಬ್ದುಲ್ ರಬ್, ರಂಗಸ್ವಾಮಿ, ಮಂಜುನಾಥ್, ಕಿರಣಕುಮಾರ್, ಕ.ಸಾ.ಪ. ಹೋಬಳಿ ಘಟಕದ ಕಾರ್ಯದರ್ಶಿ ಶಾಂತಕುಮಾರ್, ಖಜಾಂಚಿ ಡಾ. ಉದಯಕುಮಾರ್, ನಿರ್ದೇಶಕರಾದ ಯು.ಪಿ.ನಾಗೇಶ್ ಹಾಜರಿದ್ದರು. ದೈಹಿಕ ಶಿಕ್ಷಕ ಸುನೀಲ್ ಸ್ವಾಗತಿಸಿದರು, ಉಪನ್ಯಾಸಕ ಅಭಿಲಾಷ್ ವಂದಿಸಿದರು.
ಕುಶಾಲನಗರ ನ.2 : ಪ್ರತಿಯೊಬ್ಬ ಮನುಷ್ಯನ ಯಶಸ್ಸು, ಸುಖ, ಶಾಂತಿ ಹಾಗೂ ನೆಮ್ಮದಿಯುಕ್ತ ಬದುಕಿಗೆ ಪರಿಶುದ್ಧವಾದ ಹಾಗೂ ದೃಢವಾದ ಮನಸೇ ಮೂಲ ಕಾರಣ ಎಂದು ಹರಿಹರಪುರದ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮಿ ನರಸಿಂಹ ಪೀಠದ ಅಧ್ಯಕ್ಷ ಶ್ರೀ ಮದ್ ಜಗದ್ಗುರು ಶಂಕರಾಚಾರ್ಯ ಸ್ವಾಮೀಜಿ ಹೇಳಿದರು. ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಶ್ರೀಮಠದ ವತಿಯಿಂದ ಹಮ್ಮಿಕೊಂಡಿದ್ದ ಸಮಾನ ಸಂಸ್ಕಾರ ಕಾರ್ಯಾಗಾರದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಪ್ರತಿಯೊಬ್ಬ ಮನುಷ್ಯನಲ್ಲೂ ಮಾನವೀಯ ಮೌಲ್ಯಗಳು ತುಂಬಿದ ತ್ಯಾಗ ಹಾಗೂ ಸಮರ್ಪಣಾ ಮನೋಭಾವ ಅಭಿವ್ಯಕ್ತವಾಗಿರಬೇಕು. ಅಮೂಲ್ಯವಾದ ಮಾನವ ಜನ್ಮ ಹೊತ್ತು ಬಂದ ಪ್ರತಿಯೊಬ್ಬರು ಹುಟ್ಟುವಾಗಲೇ ದೇವ ಋಣ, ಋಷಿ ಋಣ, ಪಿತೃ ಋಣ, ಮನುಷ್ಯ ಋಣ ಹಾಗೂ ಭೂತ ಋಣ ಎಂಬ ಐದು ಅಂಶಗಳಿಗೆ ಅಬಾರಿಯಾಗಿರಬೇಕು ಎಂದು ಶ್ರೀಗಳು ಸವಿವರವಾಗಿ ಮಾಹಿತಿ ನೀಡಿದರು. ವಿಶ್ವ ಮಾನವ ಪ್ರೇಮ ಪರಸ್ಪರರಲ್ಲೂ ಅಭಿವ್ಯಕ್ತಗೊಂಡಲ್ಲಿ ಶ್ರೇಷ್ಠ ಸಮಾಜ ನಿರ್ಮಾಣ ಸಾಧ್ಯವಿದೆ ಎಂದ ಸ್ವಾಮೀಜಿ ಶ್ರೀಗಳು ಕಾವೇರಿ ನದಿ ಹುಟ್ಟಿ ಹರಿದಿಹ…
ನಾಪೋಕ್ಲು ನ.2 : ಮೈಸೂರಿನ ಕೊಡಗು ಗೌಡ ಸಮಾಜ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೈಸೂರಿನ ಸಮಾಜದ ಸಾಂಸ್ಕೃತಿಕ ಸಭಾಂಗಣದಲ್ಲಿ ಹುತಾತ್ಮರ ಭಾವಚಿತ್ರಕ್ಕೆ ಗಣ್ಯರು ಹಾಗೂ ಸಮಾಜದ ಪ್ರಮುಖರು ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜದ ಅಧ್ಯಕ್ಷ ತೋಟಂಬೈಲ್ ಮನೋಹರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಮನೆತನ ಮತ್ತು ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಟದ ಸಂದರ್ಭ ಅವರನ್ನು ಅಮಾನವೀಯವಾಗಿ ಗಲ್ಲಿಗೇರಿಸಲ್ಪಟ್ಟ ಬಗ್ಗೆ ತಿಳಿಸಿದರು. ಮೈಸೂರು ಕೊಡಗು ಗೌಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚ೦ಡೀರ ಬಸಪ್ಪ ಮಾತನಾಡಿ, ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ವಾತಂತ್ರ್ಯ ಪೂರ್ವ ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಟ ಮತ್ತು ಗಲ್ಲಿಗೆರಿಸಲ್ಪಟ್ಟ ಸನ್ನಿವೇಶವನ್ನು ಎಳೆಯಾಗಿ ಬಿಡಿಸಿ ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷರಾದ ಕುಯ್ಯಮುಡಿ ರಾಮಪ್ಪ, ಕಾಯ೯ದಶಿ೯ ಕುಂಟಿಕಾನ ಗಣಪತಿ, ಆಡಳಿತ ಮಂಡಳಿಯ ಪದಾಧಿಕಾರಿಗಳು, ಕೊಡಗು ಗೌಡ ಮಾಜಿ…
ಮಡಿಕೇರಿ ನ.2 : ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಶಿವರಾಮೇ ಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ ಯು ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ನಡೆಯಿತು. ನಗರದ ಕೋಟೆ ಆವರಣದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಅವರ ಸ್ಮಾರಕಕ್ಕೆ ವೇದಿಕೆ ಸದಸ್ಯರುಗಳು ಹಾಗೂ ಸಂಘಟನೆಯ ಅಧ್ಯಕ್ಷರುಗಳು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ. ಖಲೀಲ್ ಭಾಷಾ, ವಿಷ್ಣು ಸೇನೆ ಜಿಲ್ಲಾಧ್ಯಕ್ಷ ರಫೀಕ್( ದಾದಾ). ವೀರಭದ್ರ ಮುನೇಶ್ವರ ದೇವಾಲಯದ ಗೌರವಾಧ್ಯಕ್ಷ ಪಿ.ಜಿ.ಮಂಜುನಾಥ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್, ಕೊಡಗು ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿಗೌಡ, ಶಿವರಾಮೇ ಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರುಗಳಾದ ಜಿ.ಎನ್.ಪುನೀತ್ ಹಾಗೂ ಆದರ್ಶ್ ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು.






