ಲೇಖಕ: admin

ಮಡಿಕೇರಿ ಸೆ.26 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 20ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಸೆ.24 ರಂದು ಸಂಜೆಯಿಂದ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಸೆ.25 ರಂದು ಮುಂಜಾನೆಯಿಂದ ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಸಂಜೆ ವಾರ್ಷಿಕೋತ್ಸವ ಪ್ರಯುಕ್ತ ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿತರಿಸಲಾಯಿತು. ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ ಜರುಗಿತು. ನಂತರ ತೀರ್ಥಪ್ರಸಾದ ವಿನಿಯೋಗ ಹಾಗೂ ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿತ್ತು.

Read More

ಮಡಿಕೇರಿ ಸೆ.26 : ಭಾಗಮಂಡಲ ಗ್ರಾ.ಪಂ ವ್ಯಾಪ್ತಿಯ ತಲಕಾವೇರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಗ್ಲಾಸ್ ಬ್ರಿಡ್ಜ್ ನಿರ್ಮಿಸುವ ಯೋಜನೆಯನ್ನು ರೂಪಿಸಿರುವುದಕ್ಕೆ ಕೊಡಗು ಏಕೀಕರಣ ರಂಗ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಿಸಲು ನೀಡಿರುವ ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಜಿಲ್ಲಾಧಿಕಾರಿ ವೆಂಕಟರಾಜ ಅವರಿಗೆ ಏಕೀಕರಣ ರಂಗದ ಪ್ರಮುಖ ಎ.ಎ.ಪೂವಯ್ಯ ಮತ್ತಿತರರು ಮನವಿ ಸಲ್ಲಿಸಿದರು. ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಭಾಗಮಂಡಲ-ತಲಕಾವೇರಿ ನಡುವೆ ಎರಡು ಗ್ಲಾಸ್ ಬ್ರಿಡ್ಜ್ ನಿರ್ಮಿಸಲು ಉದ್ಯಮಿಗಳಿಗೆ ಅನುಮತಿ ನೀಡಲಾಗಿದೆ. 2020ರ ಆಗಸ್ಟ್ ತಿಂಗಳಿನಲ್ಲಿ ತಲಕಾವೇರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಐವರ ಜೀವಹಾನಿಯಾಗಿದೆ. ಈ ಬಗ್ಗೆ ಜಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ ನಡೆಸಿದ ಅಧ್ಯಯನದಲ್ಲಿ ಈ ಭೂಕುಸಿತಕ್ಕೆ ತಲಕಾವೇರಿಯ ಪರ್ವತ ಸಾಲುಗಳಲ್ಲಿ ಬೃಹತ್ ಯಂತ್ರಗಳನ್ನು ಬಳಸಿ ನಡೆಸಿದ ಭೂ ಅಭಿವೃದ್ಧಿ ಕಾಮಗಾರಿಯೇ ಕಾರಣ ಎಂಬುದು ದೃಢ ಪಟ್ಟಿದೆ. ತಲಕಾವೇರಿ ಜಿಲ್ಲೆಯ ಜನರ ಶ್ರದ್ಧಾಭಕ್ತಿಯ ಕ್ಷೇತ್ರವಾಗಿದೆ. ಈ ಕ್ಷೇತ್ರವನ್ನು ಪ್ರವಾಸಿ ಕೇಂದ್ರವಾಗಿ ಪ್ರಚಾರ…

Read More

ಮಡಿಕೇರಿ ಸೆ.26 : ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾಗಿ ಮುಂಡಂಡ ಸಿ.ನಾಣಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಕುಲ್ಲೇಟೀರ ಅಜಿತ್ ನಾಣಯ್ಯ ಅವರು ಕೂಡ ಆಕಾಂಕ್ಷಿಯಾಗಿದ್ದರು. ಆದರೆ ಯಾವುದೇ ಕಾರಣಕ್ಕು ಚುನಾವಣೆಗೆ ಅವಕಾಶ ನೀಡದೆ ಒಮ್ಮತದಿಂದ ಆಯ್ಕೆ ಪ್ರಕ್ರಿಯೆ ನಡೆಯಬೇಕೆಂದು ಹಿರಿಯರಿಂದ ಸಲಹೆ ಬಂದ ಹಿನ್ನೆಲೆ ಅಜಿತ್ ನಾಣಯ್ಯ ಅವರು ಸ್ಪರ್ಧೆಯಿಂದ ಹಿಂದೆ ಸರಿದರು. ಕಾರ್ಯದರ್ಶಿ ಸ್ಥಾನಕ್ಕೆ ಮೂವರು ಆಕಾಂಕ್ಷಿಗಳಿದ್ದರಾದರೂ ಹೊಂದಾಣಿಕೆ ಸೂತ್ರದ ಮೂಲಕ ಮುಕ್ಕಾಟಿರ ಎಂ.ವಿನಯ್ ಅವರು ಅವಿರೋಧವಾಗಿ ಆಯ್ಕೆಯಾದರು. ಆದರೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಅಜಿತ್ ನಾಣಯ್ಯ ಅವರಿಗೆ ಕಾರ್ಯದರ್ಶಿ ಸ್ಥಾನ ಬಿಟ್ಟುಕೊಡುವ ಮೂಲಕ ವಿನಯ್ ಸೌಹಾರ್ದತೆಯನ್ನು ಮೆರೆದರು. ಒಟ್ಟು 21 ಸ್ಥಾನಗಳಲ್ಲಿ 14 ಮಂದಿ ಅವಿರೋಧವಾಗಿ ಆಯ್ಕೆಯಾದರು, ಏಳು ಸ್ಥಾನಗಳಿಗೆ ಚುನಾವಣೆ ನಡೆಯಿತು. ಮುಂದೆ ನಡೆಯುವ ಆಡಳಿತ ಮಂಡಳಿಯ ಕಾರ್ಯಕಾರಿಣಿ ಸಭೆಯಲ್ಲಿ ಅಜಿತ್ ನಾಣಯ್ಯ ಅವರನ್ನು ಕಾರ್ಯದರ್ಶಿಯನ್ನಾಗಿ ಹಾಗೂ ವಿನಯ್ ಅವರನ್ನು ನಿರ್ದೇಶಕರನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಲು ಚುನಾವಣಾ ಪ್ರಕ್ರಿಯೆಯ ಸಭೆಯು ನಿರ್ಧರಿಸಿತು.

Read More

ಸುಂಟಿಕೊಪ್ಪ ಸೆ.26: ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ 59ನೇ ವರ್ಷದ ಗೌರಿ ಗಣೇಶೋತ್ಸವ ಪ್ರಯುಕ್ತ ಮಕ್ಕಳಿಗೆ ಛದ್ಮವೇಷ, ಭಕ್ತಿಗೀತೆ, ಭಾವಗೀತೆ, ಆಟೋಟ ಸ್ಪರ್ಧೆ ಹಾಗೂ ವಿವಿಧ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಂಜನಾಥಯ್ಯ ಮಿನಾಕ್ಷಮ ಕಲ್ಯಾಣ ಮಂಟಪದಲ್ಲಿ ನಡೆದ ಸ್ಪರ್ಧೆಯಲ್ಲಿ ಮಕ್ಕಳು ಛದ್ಮವೇಷಗಳನ್ನು ಧರಿಸಿ ಗಮನ ಸೆಳೆದರು. ಅಲ್ಲದೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿದರು. ಸಂಜೆ ಶ್ರೀ ರಾಮಮಂದಿರದಲ್ಲಿ ರಂಗಪೂಜೆ ನಡೆಯಿತು. ತಾ.27 ರಂದು ಸಂಜೆ 3 ಗಂಟೆಗೆ ರಾಮಮಂದಿರದಿಂದ ಗಣೇಶ ಮೂರ್ತಿಯನ್ನ ವಿದ್ಯುತ್ ದೀಪಾಲಂಕೃತ ವಾಹನದಲ್ಲಿ ವಾದ್ಯಗೋಷ್ಠಿಯೊಂದಿಗೆ ಮುಖ್ಯ ಬೀದಿಯಲ್ಲಿ ಮೆರವಣಿಗೆ ಮೂಲಕ ತೆರಳಿ ಉಲ್ಲಾಸ್ ಮತ್ತು ಕರುಂಬಯ್ಯ ಕುಟುಂಬಸ್ಥರ ಕೆರೆಯಲ್ಲಿ ವಿಸರ್ಜಿಲಾಗುವುದು.

Read More

ಮಡಿಕೇರಿ ಸೆ.26 : ಕರ್ನಾಟಕ ರಾಜ್ಯ ಎಸ್‍ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಸೆ.28 ರಂದು ಕುಶಾಲನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ಜಯಂತೋತ್ಸವವನ್ನು ಆಚರಿಸಲಾಗುವುದೆಂದು ಸಮಿತಿಯ ಅಧ್ಯಕ್ಷ ಎಂ.ಎಸ್.ಮಹೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರದ ಎಪಿಸಿಎಂ ಸಭಾಂಗಣದ ಜೈ ಭೀಮ್ ಸ್ಮರಣ ವೇದಿಕೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಕೊಡಗು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪುಷ್ಪಾರ್ಚನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಚಾಮರಾಜನಗರದ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಶ್ರಿ ಬಂತೇಜಿ ಬೋಧಿದತ್ತತೇರಾ ದಿವ್ಯ ಸಾನಿಧ್ಯ ವಹಿಸಲಿದ್ದು, ಪ್ರಧಾನ ಭಾಷಣಕಾರರಾಗಿ ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ್ ಪಾಲ್ಗೊಳ್ಳಲಿದ್ದಾರೆ. ಸಭಾ ಗೌರವಾಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಎಸ್‍ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ…

Read More

ಮಡಿಕೇರಿ ಸೆ.26 : ಕರ್ಣಂಗೇರಿ ಗ್ರಾಮದ ವಿದ್ಯಾ ಭಾರತಿ ಬಡಾವಣೆಯ ಸ್ಫೂರ್ತಿ ಯುವಕ ಸಂಘದ ವತಿಯಿಂದ 13 ನೇ ವರ್ಷದ ಗಣೇಶೋತ್ಸವ ಸಂಭ್ರಮದಿಂದ ನಡೆಯಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗಣೇಶ ಮೂರ್ತಿಯ ಪ್ರತಿಷ್ಠಾಪನಾ ಸ್ಥಳಕ್ಕೆ ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಗ್ರಾಮಸ್ಥರಿಗೆ ಸಿಹಿ ವಿತರಿಸಿ ಗಣೇಶೋತ್ಸವದ ಸಂಭ್ರಮವನ್ನು ಹಂಚಿಕೊಂಡರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಕಿರಿಯರು ಹಾಗೂ ಹಿರಿಯರು ಉತ್ಸಾಹದಿಂದ ಪಾಲ್ಗೊಂಡರು. ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಹಾಗೂ ಸ್ಫೂರ್ತಿ ಯುವಕ ಸಂಘದ ಅಧ್ಯಕ್ಷ ಸುರೇಂದ್ರ ಬಹುಮಾನ ವಿತರಿಸಿದರು. ವಿದ್ಯುತ್ ಅಲಂಕೃತ ಮಂಟಪದಲ್ಲಿ ಗಣೇಶನ ಮೂರ್ತಿಯನ್ನು ಮೆರವಣಿಗೆ ಮಾಡಿ ಸ್ಥಳೀಯ ಕೆರೆಯಲ್ಲಿ ವಿಸರ್ಜಿಸಲಾಯಿತು.

Read More

ಸುಂಟಿಕೊಪ್ಪ ಸೆ.26 : ಮಾದಾಪುರ ವಿವಿದೋದ್ಧೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರಾಗಿ ನಾಪಂಡ ಉಮೇಶ್ ಉತ್ತಪ್ಪ ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಹರೀಶ್ ಆಯ್ಕೆಯಾಗಿದ್ದಾರೆ. ಈ ಸಂಘದಲ್ಲಿ ಬಿಜೆಪಿ ಬೆಂಬಲಿತ 11 ಸದಸ್ಯರುಗಳು ಚುನಾಯಿತರಾಗಿದ್ದು, ಇಬ್ಬರು ಪಕ್ಷೇತರರು ನಿರ್ದೇಶಕರಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಬಿಜ್ಜಂಡ ಮೊಣ್ಣಪ್ಪ ಸುಬ್ರಮಣಿ ಹಾಗೂ ನಾಪಂಡ ಉಮೇಶ ಉತ್ತಪ್ಪ ಸ್ಪರ್ಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಪವಿತ್ರ ಹರೀಶ್ ಒಬ್ಬರೇ ನಾಮಪತ್ರ ಸಲ್ಲಿಸಿದರು. ಮಡಿಕೇರಿ ಸಹಕಾರಿ ಇಲಾಖೆಯ ಉಪ ನಿಬಂಧಕರ ಕಚೇರಿ ಅಧಿಕಾರಿ ಬಿ.ಜೆ.ಸಂದೀಪ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಅಧ್ಯಕ್ಷ ಸ್ಥಾನದ ಮತ ಎಣಿಕೆಗೊಂಡಾಗ ನಾಪಂಡ ಉಮೇಶ್ ಉತ್ತಪ್ಪ ಅವರಿಗೆ 8 ಮತ ಹಾಗೂ ಬಿಜ್ಜಂಡ ಸುಬ್ರಮಣಿ ಅವರಿಗೆ 4 ಮತಗಳು ಲಭಿಸಿತು. ಚುನಾವಣಾಧಿಕಾರಿ ಸಹಾಯಕರಾಗಿ ಸಂಘದ ಸಿಇಓ ಬಿ.ಎಸ್.ಕಾವೇರಪ್ಪ ಕಾರ್ಯನಿರ್ವಹಿಸಿದರು. ಉಪಾಧ್ಯಕ್ಷರಾಗಿ ಪವಿತ್ರ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆಯಲ್ಲಿ ನಿರ್ದೇಶಕರಾದ ಬಿಜ್ಜಂಡ ಮೊಣ್ಣಪ್ಪ, ತಿಲಕ್ ಕುಮಾರ್, ನಾಗಂಡ ಭವಿನ್, ಸೋನು ದೇಚಮ್ಮ, ಪವಿತ್ರ ಹರೀಶ್, ಕುಟ್ಟಂಡ ಕುಟ್ಟಪ್ಪ, ಮುಕ್ಕಾಟಿರ…

Read More

ಮಡಿಕೇರಿ ಸೆ.26 : ಕೊಡಗು ಜಿಲ್ಲಾ ಮಟ್ಟದ ಅಂತರ ಪ್ರಾಥಮಿಕ ಶಾಲಾ 14 ವಯೋಮಿತಿಯ ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸೋಮವಾರಪೇಟೆ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿ, ಫೈನಲ್ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರು. ವಿದ್ಯಾರ್ಥಿಗಳಾದ ಜಿ.ಎಸ್.ಶಿಶಿರ ಮತ್ತು ಎಮ್.ಎಸ್.ಗಗನ್ ಮುಂದೆ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಲ್.ಸಂದೇಶ್ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಎಸ್.ಡಿ.ಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದನೆ ಸಲ್ಲಿಸಿದರು.

Read More

ಮಡಿಕೇರಿ ಸೆ.26 : ಮಡಿಕೇರಿ ವಿವೇಕ ಜಾಗೃತ ಬಳಗದ ವತಿಯಿಂದ ಸೆ.28 ರಂದು ಅತ್ಯಪರೂಪದ ಆತ್ಮೋನ್ನತಿ ಶಿಬಿರ ನಡೆಯಲಿದೆ. ನಗರದ ಓಂಕಾರೇಶ್ವರ ದೇವಾಲಯ ಸಮೀಪದ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ಅಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ಶಿಬಿರ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಆಗಮಿಸಿ ಆತ್ಮೋನ್ನತಿ ಎಂಬ ವಿಶೇಷ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ವಿವೇಕ ಜಾಗೃತ ಬಳಗದ ಅಧ್ಯಕ್ಷರಾದ ಟಿ.ಎ.ಪದ್ಮವೇಣಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ವರವಾಗಿ ಬಂದಿರುವ ಈ ಮಾನವ ಜನ್ಮದ ಒಳಗಿರುವ ಪ್ರಾಣಶಕ್ತಿಯಾದ ದೇವರ ಮಧುರ ವಾಣಿಯನ್ನು ಒಳಕಿವಿಯಿಂದ ಕೇಳಿ, ದಿವ್ಯದರುಶನ ಭಾಗ್ಯ ಪಡೆದು ದೇವರೇ ಆಗಿ ಇತರರನ್ನೂ ದೇವರಾಗಿಸುವುದು ಶಿಬಿರದ ಉದ್ದೇಶವಾಗಿದೆ. ಒಳಗಿರುವ ಆತ್ಮಶಕ್ತಿಯನ್ನು ಮೇಲೇರಿಸಿ ಪುನೀತರಾಗುವುದೇ ಆತ್ಮೋನ್ನತಿಯ ಸರಳ ವಿಧಾನವಾಗಿದೆ. ಪಶುತ್ವದಿಂದ ಮಾನವತ್ವವನ್ನು ಪಡೆದು, ದೈವತ್ವಕ್ಕೇರುವ ಅತ್ಯಪರೂಪದ ಈ ಸೌಭಾಗ್ಯವೇ ಆತ್ಮೋನ್ನತಿ ಶಿಬಿರವಾಗಿದೆ. ಬಂಧನ, ಮನನ, ಸ್ಮರಣ, ಗಮನಗಳೆಲ್ಲವೂ ಇಲ್ಲಿವೆ. ಮಾನವನು ಎರಡು ಕಾಲಿನ ಹುಲಿ, ಸಿಂಹ, ಹಾವು, ಕರಡಿಯಂತೆ ವರ್ತಿಸಬಾರದು. ಜೀವನ…

Read More

ಮಡಿಕೇರಿ ಸೆ.26 : ಕೊಡಗಿನ ಮೂಲಭೂತ ಸಮಸ್ಯೆಗಳ ಕುರಿತು ತಮ್ಮ ಎರಡು ಅವಧಿಯಲ್ಲಿ ಕನಿಷ್ಠ ಕಾಳಜಿ ತೋರದ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅವರು, ಅತ್ಯಂತ ನಿಷ್ಕ್ರೀಯ ಸಂಸದರು ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಸಂದರ್ಭಗಳಲ್ಲಷ್ಟೆ ಪ್ರತ್ಯಕ್ಷರಾಗುವ ಪ್ರತಾಪ ಸಿಂಹ, ಭಾವನಾತ್ಮಕ ಮತ್ತು ಧರ್ಮಾಧಾರಿತ ವಿಚಾರಗಳೊಂದಿಗೆ ಮೋದಿ ಹೆಸರನ್ನು ಹೇಳಿ ಮತಯಾಚಿಸುತ್ತಾರೆಯೇ ಹೊರತು ಅಭಿವೃದ್ಧಿಪರ ಚಿಂತನೆ ಹೊಂದಿಲ್ಲ ಎಂದು ಆರೋಪಿಸಿದರು. ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕನಿಷ್ಟ 2 ಲಕ್ಷ ಮತಗಳ ಅಂತರದಿಂದ ಅವರು ಸೋಲುವುದು ಖಚಿತವೆಂದು ಭವಿಷ್ಯ ನುಡಿದರು. ಕಳೆದ ಒಂಭತ್ತೂವರೆ ವರ್ಷಗಳಲ್ಲಿ ಬೆಳೆಗಾರರ ಹಾಗೂ ಜನಸಾಮಾನ್ಯರ ಮೂಲಭೂತ ಸಮಸ್ಯೆಗಳನ್ನು ಸಂಸತ್‍ನಲ್ಲಿ ಪ್ರಬಲವಾಗಿ ಮಂಡಿಸಿ, ಕೇಂದ್ರದ ಗಮನ ಸೆಳೆಯುವಲ್ಲಿ ಪ್ರತಾಪ್ ಸಿಂಹ ಅವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಸಂಸದರಾಗಿ ಆಯ್ಕೆಯಾದ ಎರಡು ಬಾರಿಯೂ ಕೇಂದ್ರದಲ್ಲಿ ಅವರದ್ದೇ ಪಕ್ಷ ಅಧಿಕಾರದಲ್ಲಿದ್ದರೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವಲ್ಲಿ ಅವರು ಸೋತಿದ್ದಾರೆ. ಇವರ ಈ ಎಲ್ಲಾ…

Read More