ಸಿದ್ದಾಪುರ ಸೆ.25 : ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ವಿದ್ಯಾರ್ಥಿಗಳು ಕ್ರೀಡೆ, ಕಲಾ ಸಾಹಿತ್ಯ ಅಭಿಮಾನದಿಂದ ತಮ್ಮದೇಯಾದ ಪ್ರತಿಭೆ ಅನಾವರಣಗೊಳಿಸುವ ಮೂಲಕ ಪ್ರತಿಭಾನ್ವಿತರಾಗಿ ಸಮಾಜದಲ್ಲಿ ಗುರುತಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿ.ಪಂ ಮಾಜಿ ಸದಸ್ಯ ಮುಕೂಂಡ ವಿಜು ಸುಬ್ರಮಣಿ ಸಲಹೆ ನೀಡಿದರು. ಪಾಲಿಬೆಟ್ಟ ಲೂರ್ಡ್ಸ್ ಹಿಲ್ ಶಾಲೆಯ ಸಭಾಂಗಣದಲ್ಲಿ ನಡೆದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು, ಶಿಕ್ಷಣ ಇಲಾಖೆಯ ಮೂಲಕ ಯೋಜನೆಗಳನ್ನ ಸದ್ಬಳಕೆ ಮಾಡಿಕೊಂಡು ಸಾಧಿಸುವ ಛಲದೊಂದಿಗೆ ತಮ್ಮ ಕಲೆ ಪ್ರತಿಭೆಯನ್ನ ಪ್ರದರ್ಶಿಸುವ ಮೂಲಕ ಪ್ರತಿಭಾನ್ವಿತರಾಗಿ ಗುರುತಿಸಿಕೊಂಡಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು. ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಮಾತನಾಡಿ, ಶಿಕ್ಷಣ ಇಲಾಖೆಯಿಂದ ಮಕ್ಕಳ ಭವಿಷ್ಯ ರೂಪಿಸಲು ಹಲವಾರು ಯೋಜನೆಗಳು, ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಪಾಲಿಬೆಟ್ಟ ಕ್ಲಸ್ಟರ್ ವ್ಯಾಪ್ತಿಯ 10ಕ್ಕೂ ಹೆಚ್ಚು ವಿವಿಧ ಶಾಲೆಯ ನೂರಾರು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ…
ಲೇಖಕ: admin
ಮಡಿಕೇರಿ ಸೆ.25 : ನಗರದ ಹೃದಯ ಭಾಗ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಂಚಾರಿ ವ್ಯವಸ್ಥೆಗೆ ವೈಜ್ಞಾನಿಕ ರೂಪ ನೀಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಅಪಘಾತದಿಂದ ಹಾನಿಗೊಳಗಾಗಿರುವ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ಪುನರ್ ಪ್ರತಿಷ್ಠಾಪನೆಗೂ ಮೊದಲು ಸಂಚಾರಿ ವ್ಯವಸ್ಥೆಯನ್ನು ಸುಗಮಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ತಿಮ್ಮಯ್ಯ ವೃತ್ತಕ್ಕೆ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸುಗಮ ಸಂಚಾರ ವ್ಯವಸ್ಥೆಯ ಕುರಿತು ಚರ್ಚಿಸಿದರು. ಅಪಘಾತದಿಂದ ಹಾನಿಗೊಳಗಾಗಿರುವ ಡಿವೈಡರ್ ಗಳನ್ನು ಶೀಘ್ರ ತೆರವುಗೊಳಿಸಲಾಗುವುದು. ಬಾರಿಕೇಡ್ ಬಳಸಿ ವಾಹನಗಳ ಸಂಚಾರದ ಬಗ್ಗೆ ಅವಲೋಕಿಸಲಾಗುವುದು. ನಂತರ ಇಂಜಿನಿಯರ್ ಗಳ ಸಲಹೆ ಪಡೆದು ವೈಜ್ಞಾನಿಕ ರೂಪದಲ್ಲಿ ವೃತ್ತ ನಿರ್ಮಿಸಿ ತಿಮ್ಮಯ್ಯ ಅವರ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಸ್ಪಷ್ಟಪಡಿಸಿದರು. ಅಕ್ಟೋಬರ್ 2ನೇ ವಾರದಿಂದ ಐತಿಹಾಸಿಕ ಮಡಿಕೇರಿ ದಸರಾ ಆರಂಭಗೊಳ್ಳುವುದರಿಂದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಂಚಾರಿ ವ್ಯವಸ್ಥೆಯನ್ನು ಸುಗಮಗೊಳಿಸಲಾಗುವುದು. ನಗರಕ್ಕೆ ಪ್ರವೇಶ ಕಲ್ಪಿಸುವ ಮುಖ್ಯ…
ಮಡಿಕೇರಿ ಸೆ.25 : ಚೆಟ್ಟಳ್ಳಿಯ ಹಿಂದೂ ಮಲಯಾಳಿ ಸಮಾಜಂ ವತಿಯಿಂದ 15 ನೇ ವರ್ಷದ ಓಣಂ ಆಚರಣೆ ಸಂಭ್ರಮದಿಂದ ನಡೆಯಿತು. ಚೆಟ್ಟಳ್ಳಿಯ ಮಂಗಳ ಸಂಭಾಂಗಣದಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಮಹಿಳೆಯರು ರಚಿಸಿದ ಪೂಕಳಂ (ಹೂವಿನ ರಂಗೋಲಿ), ಚಂಡೆಮೇಳ, ವiಹಾಬಲಿ ಚಕ್ರವರ್ತಿಯ ವೇಷಭೂಷಣ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಮಲಯಾಳಿ ಸಮಾಜಂ ನಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಎಲ್ಲರ ಸಹಕಾರದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ, ಮಲಯಾಳಿ ಸಮಾಜದ ಅಭ್ಯುದಯಕ್ಕೆ ಸಹಕಾರ ನೀಡುತ್ತೇನೆ ಎಂದರು. ಮಲಯಾಳಿ ಸಮಾಜಂ ನ ಅಧ್ಯಕ್ಷ ಕೆ.ಕೆ.ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಗೌರವಾಧ್ಯಕ್ಷ ಎಸ್.ಕುಟ್ಟನ್ ಉದ್ಘಾಟಿಸಿದರು. ಸಮಾಜದ ಉಪಾಧ್ಯಕ್ಷ ಪಿ.ಕೆ.ವಿನಿಶ್, ಸದಸ್ಯೆ ಸುಲೋಚನಾ ನಾರಾಯಣ, ಚೆಟ್ಟಳ್ಳಿ ಗ್ರಾ.ಪಂ ಅಧ್ಯಕ್ಷರಾದ ಸಿಂಧು ರಾಜನ್, ಸಮಾಜದ ಮಾಜಿ ಅಧ್ಯಕ್ಷರುಗಳಾದ ವಿ.ಕೆ.ವಿನು, ಎನ್.ಚಂದ್ರನ್, ಒ.ಕೆ.ಶ್ರೀನಿವಾಸ್, ಎಸ್.ಎಲ್.ಎನ್ ಪ್ಲಾಂಟೇಶನ್ ನ ವ್ಯವಸ್ಥಾಪಕ ಪಿ.ಕಣ್ಣನ್, ಪ್ರಧಾನ ಕಾರ್ಯದರ್ಶಿ ಉಷಾಕುಮಾರಿ, ಖಜಾಂಚಿ ಕೆ.ಬಿ.ವಿಜಯನ್, ಪ್ರಮುಖರಾದ ಪ್ರವೀಣ್…
ಮಡಿಕೇರಿ ಸೆ.25 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 20ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಸೆ.24 ರಂದು ಸಂಜೆಯಿಂದಲೇ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಇಂದು ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ನಡೆಯಿತು. ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ. ಸಂಜೆ 6 ಗಂಟೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭವಾಗಲಿದ್ದು, ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿನಿಯೋಗವಾಗಲಿದೆ.
ಮಡಿಕೇರಿ ಸೆ.25 : ನಾಪೋಕ್ಲುವಿನ ಚೆರಿಯಪರಂಬು ಶಾದಿ ಮಹಲ್‍ನಲ್ಲಿ “ಜನತಾ ದರ್ಶನ” ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಉದ್ಘಾಟಿಸಿದರು. ಈ ಸಂದರ್ಭ ಶಾಸಕರಾದ ಶ್ರೀ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ , ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಂಬಂಧ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದೆ.
ನಾಪೋಕ್ಲು ಸೆ.25 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕೆಪಿಎಸ್ ಶಾಲೆಯಲ್ಲಿ ನಡೆದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆಯ 8 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸೆ.30 ರಂದು ಬೆಂಗಳೂರಿನ ಮಲ್ಲೇಶ್ವರಂ ಮಹಾರಾಣಿ ಕಾಲೇಜಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೇಟೊಳಿರ ರತ್ನ ಚರ್ಮಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಸೆ.25 : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಂಯುಕ್ತ ಆಶ್ರಯದಲ್ಲಿ ಯುವಜನೋತ್ಸವ – 2023ರ ಅಂಗವಾಗಿ ಏರ್ಪಡಿಸಲಾಗಿದ್ದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಎಂ.ಹರ್ಷಿತ ಕುಶಾಲಪ್ಪ ಮತ್ತು ಪಿ.ಎ.ನಸೀರ ತಂಡ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಸಪ್ರಶ್ನೆ ಸ್ಪರ್ಧೆಯಲ್ಲಿ 19 ಶಾಲೆಗಳ 38 ವಿದ್ಯಾರ್ಥಿಗಳು ತಂಡ ಪಾಲ್ಗೊಂಡಿತ್ತು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.25 : ಕಾನೂನು ಬಾಹಿರ ಚಟುವಟಿಕೆಗಳು ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತವೆ. ಆದ್ದರಿಂದ ಅಂತಹ ಚಟುವಟಿಕೆಗಳಿಂದ ವಿದ್ಯಾರ್ಥಿಗಳು ದೂರ ಇರಬೇಕು ಎಂದು ನಾಪೊಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಕುರಿತು ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಂದೆ-ತಾಯಿಗಳು ತಮಗಾಗಿ ಏನು ಮಾಡುತ್ತಿದ್ದಾರೆ ಎಂಬುದನ್ನು ಅರಿತುಕೊಂಡು ಮುಂದುವರಿಯಬೇಕು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕವಾಗಿ, ಮಾನಸಿಕವಾಗಿ ಹಲವು ತೊಂದರೆಗಳು ಉಂಟಾಗುತ್ತವೆ. ಉತ್ತಮ ಗೆಳೆಯರೊಂದಿಗೆ ಮಾತ್ರ ಬಾಂಧವ್ಯವನ್ನು ಇಟ್ಟುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ವಿದ್ಯಾರ್ಥಿಗಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಹಾಗೂ ಅದನ್ನು ತಡೆಗಟ್ಟುವ ಕುರಿತು ಮಾಹಿತಿ ನೀಡಿದ ಅವರು ತಾರುಣ್ಯಾವಸ್ಥೆಯಲ್ಲಿ ತಮ್ಮನ್ನು ಹಿಡಿದಿಟ್ಟುಕೊಳ್ಳುವ ಬಗ್ಗೆ ತಿಳಿಸಿದರು. ಮೊಬೈಲ್ ಬಳಸುವುದರಿಂದ ಹಲವು ಸಂದರ್ಭಗಳಲ್ಲಿ ಅನಾಹುತಗಳಾಗುತ್ತಿದ್ದು, ಮಿತವಾಗಿ ಮೊಬೈಲ್ ಬಳಕೆ ಮಾಡಬೇಕು.18 ವರ್ಷದೊಳಗಿನ ಯಾರೂ ವಾಹನ ಚಲಾಯಿಸಬಾರದು ಹಾಗೂ…
ನಾಪೋಕ್ಲು ಸೆ.25 : ಸದಸ್ಯರು ದವಸ ಭಂಡಾರದ ವ್ಯವಹಾರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಮೂಲಕ ದವಸ ಭಂಡಾರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಂಘದ ಅಧ್ಯಕ್ಷ ಕಂಗಾಂಡ ಜಾಲಿ ಪೂವಪ್ಪ ಮನವಿ ಮಾಡಿದರು. ದವಸ ಭಂಡಾರದ ಕಟ್ಟಡದಲ್ಲಿ ಆಯೋಜಿಸಲಾದ ನಂ. 90ನೇ ನಾಪೋಕ್ಲು ಧವಸ ಭಂಡಾರದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಸಂದರ್ಭ ಸಭೆಯಲ್ಲಿ ದವಸ ಭಂಡಾರದ ಅಭಿವೃದ್ಧಿಗೆ ಸುದೀರ್ಘವಾಗಿ ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರಲಾಯಿತು. ಚರ್ಚೆಯಲ್ಲಿ ಅರೆಯಡ ಅಶೋಕ್, ಕೊಂಬಂಡ ಗಣೇಶ್, ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಸಿ.ಎಸ್.ಜೋಯಪ್ಪ, ಬಿ.ಸಿ.ಕಾವೇರಪ್ಪ, ಕುಲ್ಲೇಟಿರ ದೇವಯ್ಯ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಿವಚಾಳಿಯಂಡ ಬೋಪಣ್ಣ, ನಿರ್ದೇಶಕರಾದ ಶಿವಚಾಳಿಯಂಡ ಸೋಮಯ್ಯ,ಕುಲ್ಲೇಟ್ಟೀರ ತಮ್ಮಯ್ಯ,ಅರೆಯಡ ವಿನೋದ್,ಬೊಪ್ಪಂಡ ಕಾಳಪ್ಪ,ಪಾಡಿಯಮ್ಮಂಡ ಮಹೇಶ್, ಅಮ್ಮಂಡ ಅಶೋಕ್, ಅಜ್ಜೇಟ್ಟೀರ ರಾಣಿ ಪಳಂಗಪ್ಪ, ಶಿವಚಾಳಿಯಂಡ ಸುಬ್ಬಮ್ಮ, ಹೆಚ್.ಎ.ಬೊಳ್ಳು ಸುಬ್ಬಮ್ಮ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.25 : ಗೌರಿ-ಗಣೇಶೋತ್ಸವದ ಅಂಗವಾಗಿ ಪಟ್ಟಣದ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಗಳನ್ನು ಶ್ರದ್ಧಾಭಕ್ತಿಯಿಂದ ವಿಸರ್ಜಿಸಲಾಯಿತು. ಗೌರಿ-ಗಣೇಶೋತ್ಸವವನ್ನು ಅದ್ದೂರಿಯಿಂದ ಆಚರಿಸಲು ಐದು ಸೇವಾ ಸಮಿತಿಗಳ ವತಿಯಿಂದ ತಯಾರಿ ನಡೆಸಿದ್ದು, ಸೆ.19 ರಂದು ಗಣೇಶ ಚತುರ್ಥಿಯಂದು ಸಂತೆ ಮೈದಾನದಿಂದ ಅಲಂಕೃತ ವಾಹನಗಳಲ್ಲಿ ಗೌರಿ ಗಣೇಶಮೂರ್ತಿಗಳನ್ನು ಮೆರವಣಿಗೆಯಲ್ಲಿ ತಂದು ವಿವಿಧ ದೇವಾಲಯಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಇಂದಿರಾನಗರದ ವಿವೇಕಾನಂದ ಸೇವಾ ಸಮಿತಿ,ರಾಮಟ್ರಸ್ಟ್ ಗಣೇಶೋತ್ಸವ ಸಮಿತಿ, ಪೊನ್ನುಮುತ್ತಪ್ಪ ದೇವಾಲಯದ ವಿನಾಯಕ ಸೇವಾ ಸಮಿತಿ, ನಾಪೋಕ್ಲು ನಾಡು ಗೌರಿ-ಗಣೇಶ ಸಮಿತಿ ಹಾಗೂ ಕಕ್ಕುಂದಕಾಡಿನ ಗಣೇಶೋತ್ಸವ ಸೇವಾಸಮಿತಿ ವತಿಯಿಂದ ಮೆರವಣಿಗೆಯಲ್ಲಿ ಉತ್ಸವ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿ ಕೊಂಡೊಯ್ದು ಸಂಜೆ ವಿಸರ್ಜಿಸಲಾಯಿತು. ಗೌರಿ-ಗಣೇಶಮೂರ್ತಿಗಳ ವಿಸರ್ಜನೆ ಸಂದರ್ಭ ವಿವಿಧ ಸೇವಾ ಸಮಿತಿಗಳು ಆಯೋಜಿಸಿದ ಮನೋರಂಜನಾ ಕಾರ್ಯಕ್ರಮದಲ್ಲಿ ಪುತ್ತೂರಿನ ಶಬರಿ ತಂಡದವರಿಂದ ನಾಸಿಕ್ ಬ್ಯಾಂಡ್, ಶ್ರೀ ಶಾರದಾ ಆರ್ಟ್ಸ್ ಜನಪದ ಗೊಂಬೆ ಬಳಗದಿಂದ ವಿವಿಧ ಆಕರ್ಷಕ ಕೀಲು ಬೊಂಬೆಯಾಟ ವಿಟ್ಲ ತಂಡದವರಿಂದ ಬೃಹತ್ ಗಾತ್ರದ ಆಂಜನೇಯ, ಚಲಿಸುವ ಮೂರ್ತಿಗಳೊಂದಿಗೆ…






