ಲೇಖಕ: admin

ಮಡಿಕೇರಿ ಸೆ.22 : ಕಗ್ಗೋಡ್ಲು ಗ್ರಾಮದ ಹೂಕಾಡುವಿನಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ 18ನೇ ವರ್ಷದ ಗಣೇಶೋತ್ಸವ ಸಂಭ್ರಮದಿಂದ ಜರುಗಿತು. ಪೂಜಾ ಕಾರ್ಯದ ಬಳಿಕ ಶೋಭಾಯಾತ್ರೆಗು ಮುನ್ನ ಗ್ರಾಮದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಿತಿ ಅಧ್ಯಕ್ಷ ಉಮೇಶ್ ರೈ ಅಧ್ಯಕ್ಷತೆಯಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಸೈನಿಕರಾದ ಮಂದ್ರೀರ ಉಮೇಶ್, ಬಿ.ಜೆ. ಭರತ್ ಪೂಜಾರಿ, ಮಾಜಿ ಸೈನಿಕ ಹಗರಿಮನೆ ಮೇ. ವಾಸಪ್ಪ, ದಾನಿಗಳಾದ ದಿವಾಕರ ರೈ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗಾಗಿ ಎಂ.ವಿ.ಶ್ವೇತಾ , ಎಂ.ವಿ.ವಿವೇಕ್ , ತನಿಷ್ಕಾ ರೈ, ಎಂ.ಅಮೃತ  ಅವರನ್ನು ಸಮಿತಿ ಹಾಗೂ ಗ್ರಾಮದ ಪ್ರಮುಖರು ಸನ್ಮಾನಿಸಿದರು. ಕಾರ್ಯದರ್ಶಿ ಕೆ.ಆರ್. ಸತೀಶ್ ನಿರೂಪಿಸಿದರು. ಉಪಾಧ್ಯಕ್ಷ ಸುರೇಶ್(ರಾಜು), ಖಜಾಂತಿ ಗಣಪತಿ, ಸುರೇಶ್ ಮುಂತಾದವರು ಈ ಸಂದರ್ಭ ಇದ್ದರು. ಬಳಿಕ ಶೋಭಾಯಾತ್ರೆ ಮೂಲಕ ಉತ್ಸವ ಮೂರ್ತಿಯನ್ನು ಕೊಂಡೊಯ್ದು, ಸ್ಥಳೀಯ ಹೊಳೆಯಲ್ಲಿ‌ ವಿಸರ್ಜಿಸಲಾಯಿತು.  

Read More

ಕುಶಾಲನಗರ ಸೆ.22 : ಕುಶಾಲನಗರ ಮಾಜಿ ಸೈನಿಕರ ಸಂಘದ 25ನೇ ವಾರ್ಷಿಕೋತ್ಸವ ಸಮಾರಂಭ ಸೆ.28 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಕ್ಯಾಪ್ಟನ್ ಡಿ ಕೆ ಚಿಣ್ಣಪ್ಪ  ತಿಳಿಸಿದ್ದಾರೆ.  ಅವರು ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು 28ರಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರ ಗೌಡ ಸಮಾಜದಲ್ಲಿ ಸಂಘದ ಕಟ್ಟಡ ಸ್ಥಳದಾನಿಗಳಾದ ನಾಯಕ್ ಕೆದಂಬಾಡಿ ಸಣ್ಣಪ್ಪ ಅವರು ಉದ್ಘಾಟನೆ ಮಾಡುವವರು.  ಕ್ಯಾಪ್ಟನ್ ಡಿ ಕೆ ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ  ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಮೇಜರ್ ಜನರಲ್ ಬಿ.ಎ ಕಾರ್ಯಪ್ಪ, ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷರಾದ ಕರ್ನಲ್ ನಾರಾಯಣ ಮೂರ್ತಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ  ಕಾರ್ಯದರ್ಶಿ ಮೇಜರ್ ಚಿಂಗಪ್ಪ ಸುಂಟಿಕೊಪ್ಪ ಠಾಣಾಧಿಕಾರಿ ಎಂ ಸಿ ಶ್ರೀಧರ್,  ಮಡಿಕೇರಿಯ ಗ್ರೂಪ್ ಕ್ಯಾಪ್ಟನ್ ಕೆ ಎ ಕಾರ್ಯಪ್ಪ ಅವರು ಪಾಲ್ಗೊಳ್ಳುವರು..  ಸಂಘದ ಕಟ್ಟಡದ ಸ್ಥಳದಾನಿಗಳಿಗೆ ಹಾಗೂ ಸಂಘದ ಸಂಸ್ಥಾಪಕರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು…

Read More

ಮಡಿಕೇರಿ ಸೆ.22 : ಹಾಕತ್ತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಂದ್ರಿರ ತೇಜಸ್ ನಾಣಯ್ಯ ಹಾಗೂ ಉಪಾಧ್ಯಕ್ಷರಾಗಿ ಮಜ್ಞೀರ ಉಮೇಶ್ ಅಪ್ಪಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಇತ್ತೀಚೆಗೆ 13 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 10 ಹಾಗೂ ಕಾಂಗ್ರೆಸ್ ಬೆಂಬಲಿತ ಮೂವರು ನಿರ್ದೇಶಕರಾಗಿ ಗೆಲುವು ಸಾಧಿಸಿದ್ದರು.

Read More

ನಾಪೋಕ್ಲು ಸೆ.22 : ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ 2022-23ನೇ ಸಾಲಿನಲ್ಲಿ ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2022-23ರ ಸಾಲಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾ0ಕ್ ನಿರ್ದೇಶಕ ಕೊಡಂದೇರ ಗಣಪತಿ, ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಕೆ.ಲೋಕೇಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ವರದಿ : ದುಗ್ಗಳ ಸದಾನಂದ 

Read More

ವಿರಾಜಪೇಟೆ ಸೆ.22 : ಸ್ವ ಉದ್ಯೋಗ ತರಬೇತಿಗಳನ್ನು ನಿರಂತರವಾಗಿ ಹಮ್ಮಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಗ್ರಾಮೀಣ ಮಹಿಳೆಯರ ಪಾಲಿನ ಆಶಾಕಿರಣವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ಲೀಲಾವತಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಿ.ಸಿ ಟ್ರಸ್ಟ್, ವಿರಾಜಪೇಟೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ವಾಟೆಕಾಡು ಕಣ್ವ ಮುನಿಶ್ವರ ದೇವಾಲಯದ ಸಭಾಂಗಣದಲ್ಲಿ ಯೋಜನೆಯ ಸದಸ್ಯರುಗಳಿಗೆ ಸ್ವ ಉದ್ಯೋಗದೊಂದಿಗೆ ಸ್ವಾವಲಂಬನೆಯ ಮೂಲಕ ಮಹಿಳೆಯರ ಬದುಕು ಹಸನಾಗಿಸಲು ಅಣಬೆ ಬೇಸಾಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಇಂದು ಸ್ವ ಉದ್ಯೋಗ ಅನ್ನುವುದು ಅತ್ಯಂತ ಪ್ರಚಲಿತ ಹಾಗೂ ಸರ್ವರಿಗೂ ಸಲ್ಲುವ ಉದ್ಯೋಗವಾಗಿದೆ. ಇಂದಿನ ದಿನಗಳಲ್ಲಿ ವಿಶೇಷವಾಗಿ ಮಹಿಳೆಯರು ಹಲವಾರು ವಿಧದ ಸ್ವ ಉದ್ಯೋಗಗಳಲ್ಲಿ ತೊಡಗಿಸಿಕೊಂಡು ತಮ್ಮ ಸ್ವಾವಲಂಬನೆಯ ಬದುಕನ್ನು ತಾವೇ ಕಟ್ಟಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೂಡಾ ಈ ಹಾದಿಯಲ್ಲಿ…

Read More

ವಿರಾಜಪೇಟೆ ಸೆ.22 : ವಿರಾಜಪೇಟೆ ಕಾವೇರಿ ಪದವಿ ಕಾಲೇಜು ವಿದ್ಯಾರ್ಥಿ ಕ್ಷೇಮ ಪಾಲನ ಸಂಘ 2023-24 ನೇ ಸಾಲಿಗೆ ವಿದ್ಯಾರ್ಥಿ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಉಪಾಧ್ಯಕ್ಷರಾಗಿ ಅಂತಿಮ ಬಿ.ಎ ತರಗತಿಯ ದೀಕ್ಷಿತ್ ಪೊನ್ನಮ್ಮ ಸಿ.ಎಂ. ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಅಂತಿಮ ಬಿ.ಎ.ದೀಕ್ಷಾ, ಕ್ರೀಡಾ ಕಾರ್ಯದರ್ಶಿಯಾಗಿ ದಾನಿಶ್ ಪೊನ್ನಣ್ಣ, ಜಂಟಿ ಕಾರ್ಯದರ್ಶಿಗಳಾಗಿ ದ್ವಿತೀಯ ಬಿಕಾಂನ ಮುತ್ತಣ್ಣ ಹಾಗೂ ಸೋನಿ ಎಮ್.ಪಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಸಂಚಾಲಕಿ ಅಂಬಿಕಾ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ವೀಣಾ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಹಾಜರಿದ್ದರು. ಈ ಚುನಾವಣಾ ಪ್ರಕ್ರಿಯೆಯನ್ನು ಉಪನ್ಯಾಸಕರಾದ ಬೆನೆಡಿಕ್ ಸಲ್ದಾನ, ರಾಘವೇಂದ್ರ, ನಿರ್ಮಿತ ಇವರು ನಡೆಸಿಕೊಟ್ಟರು. 

Read More

ಮಡಿಕೇರಿ ಸೆ.21 : ಮಡಿಕೇರಿ ದಸರಾ ಸಮಿತಿ ನಿಯೋಗ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರನ್ನು ಭೇಟಿಯಾಗಿ ದಸರಾ ಉತ್ಸವ ಆಚರಣೆಗೆ ರೂ.2 ಕೋಟಿ ಅನುದಾನವನ್ನು ಸರ್ಕಾರದಿಂದ ಬಿಡುಗಡೆಗೊಳಿಸಿ ಕೊಡಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳನ್ನು ಭೇಟಿಯಾದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದರು. ಈ ಸಂದರ್ಭ ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರು ಹಾಗೂ ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಪ್ರಮುಖರಾದ ಟಿ.ಪಿ.ರಮೇಶ್,  ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಜೇಶ್, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮತ್ತಿತರರು ಹಾಜರಿದ್ದರು. ಇದೇ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೂ ನಿಯೋಗ ಮನವಿ ಪತ್ರ ಸಲ್ಲಿಸಿತು.

Read More

ಮಡಿಕೇರಿ ಸೆ.21 : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕರುಗಳಿಗೆ ಪದಗ್ರಹಣ ಹಾಗೂ ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಪದ್ಮಶ್ರೀ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ವರ್ಷದ ಕಾರ್ಯ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಮತ್ತು ಮೌಲ್ಯಗಳನ್ನು ಬೆಳೆಸಿಕೊಂಡು, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಗುರಿ ಸಾಧಿಸುವ ಛಲ ಇರಬೇಕೆಂದರು. ತಂದೆ, ತಾಯಿ, ಗುರುಗಳನ್ನು ಗೌರವದಿಂದ ಕಾಣಬೇಕು ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಭಾಗವಹಿಸಬೇಕೇಂದು ಕರೆ ನೀಡಿದರು. ಕಾವೇರಿ ಪದವಿ ಕಾಲೇಜಿನ ನಿವೃತ್ತ ಪ್ರಾಶುಂಪಾಲರಾದ ಪ್ರೊ.ಇಟ್ಟೀರ ಕಮಲಾಕ್ಷಿ ಬಿದ್ದಪ್ಪ, ವಿದ್ಯಾರ್ಥಿ ನಾಯಕರು ಮತ್ತು ತರಗತಿ ಪ್ರತಿನಿಧಿಗಳಿಗೆ ಪ್ರಮಾಣ ವಾಚನವನ್ನು ಬೋಧಿಸಿದರು. ನಂತರ ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು, ನಮ್ಮ ನಡೆ ಸಾಧನೆಯೆಡೆಗೆ ಎನ್ನುವಂತೆ ಸಾಧನೆಯನ್ನು ಮಾಡುವ ಮಾರ್ಗದಲ್ಲಿ ಎಡರು ತೊಡರು ಬರುತ್ತವೆ ಅದನ್ನು ಧೈರ್ಯದಿಂದ ಎದುರಿಸಿ ಕಠಿಣ ಪರಿಶ್ರಮ, ದೃಢನಂಬಿಕೆ, ಬದ್ದತೆ ಇದ್ದಾಗ ಮಾತ್ರ…

Read More

ಮಡಿಕೇರಿ ಸೆ.21 : ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಇದೇ ಸೆ.26 ರಿಂದ ಅಕ್ಟೋಬರ್, 25 ರವರೆಗೆ ನಾಲ್ಕನೇ ಸುತ್ತಿನಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ನೀಡಲಾಗುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಸಂಬಂಧ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ 2030 ರೊಳಗೆ ಜಾನುವಾರುಗಳ ಕಾಲುಬಾಯಿ ಜ್ವರವನ್ನು ನಿಯಂತ್ರಿಸುವಲ್ಲಿ ಹಲವು ಸುತ್ತಿನ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿ  ಕೋರಿದರು. ಕೃಷಿಗೆ ಪೂರಕವಾಗಿ ಜಾನುವಾರು ಸಾಕಾಣಿಕೆ ರೈತರ ಅವಿಭಾಜ್ಯ ಅಂಗವಾಗಿದೆ. ಆರ್ಥಿಕ ಚಟುವಟಿಕೆಗೆ ಪಶುಪಾಲನೆ ಸಹಕಾರಿಯಾಗಿದೆ. ಆ ದಿಸೆಯಲ್ಲಿ ಜಾನುವಾರು/ ರಾಸುಗಳಿಗೆ ಯಾವುದೇ ರೀತಿಯ ರೋಗ ಬರದಂತೆ ನಿಯಂತ್ರಿಸುವುದು ಅತ್ಯಗತ್ಯವಾಗಿದ್ದು, ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಜಾನುವಾರುಗಳು ಲಸಿಕಾ ಕಾರ್ಯಕ್ರಮದಿಂದ ಬಿಟ್ಟು ಹೋಗದಂತೆ ಗಮನಹರಿಸುವಂತೆ ಜಿಲ್ಲಾಧಿಕಾರಿ  ಸ್ಪಷ್ಟ…

Read More

ಮಡಿಕೇರಿ ಸೆ.21 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಕೊಡಗು ಜಿಲ್ಲೆಯಲ್ಲಿ ಆಚರಿಸುವ ಸಂಬಂಧ ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ನಗರದ ಗಾಂಧಿ ಮೈದಾನದಲ್ಲಿ ಸೆ.27 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ. ಹಿರಿಯ ನಾಗರಿಕರಿಗೆ ಕ್ರೀಡೆ (ನಡಿಗೆ, ರಿಂಗ್‍ನ್ನು ಬಕೆಟ್‍ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್) ಮತ್ತು ಸಾಂಸ್ಕೃತಿಕ ಕಾರ್ಯಕ್ರಮ (ಏಕಪಾತ್ರಾಭಿನಯ, ಗಾಯನ ಸ್ಪರ್ಧೆ (ಭಾವಗೀತೆ) ಮತ್ತು ಚಿತ್ರಕಲೆ) ಸ್ಪರ್ಧೆಗಳನ್ನು ವಯೋಮಿತಿವಾರು (60-69, 70-79 ಹಾಗೂ 80 ವರ್ಷ ಮೇಲ್ಪಟ್ಟು) ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಹಿರಿಯ ನಾಗರಿಕರು ಸ್ಪರ್ಧೆಯ ದಿನದಂದು ವಯಸ್ಸಿನ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್/ ಡಿಎಲ್/ ಪಡಿತರ ಚೀಟಿ / ಓಟರ್ ಐಡಿ ಇವುಗಳಲ್ಲಿ ಯಾವುದಾದರು ಒಂದರ ನಕಲು ಪ್ರತಿ ತರುವುದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರು ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…

Read More