ಮಡಿಕೇರಿ ಸೆ.21 : ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕಾವೇರಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಸೀನಪ್ಪ ಉದ್ಘಾಟಿಸಿದರು. ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ. ಶಿಕ್ಷಣ ಕೇವಲ ಸರ್ಕಾರಿ ನೌಕರಿ ಪಡೆಯುವುದಷ್ಟೇ ಅಲ್ಲದೆ ವಿದ್ಯಾರ್ಥಿಗಳು ಉತ್ತಮ ಪ್ರಜೆಯಾಗಿ ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕುವುದಕ್ಕೆ ಶಿಕ್ಷಣ ಅತ್ಯಂತ ಅವಶ್ಯಕವಾಗಿದೆ. 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿಯ ನಂತರ ವಿದ್ಯಾರ್ಥಿಗಳಿಗೆ ಹಲವು ವೃತ್ತಿಪರ ಶಿಕ್ಷಣ ತರಬೇತಿಗಳಿದ್ದು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂದರು. ವಿಶೇಷವಾಗಿ ಹೆಣ್ಣು ಮಕ್ಕಳು ಉತ್ತಮ ಸಾಧಕರಾಗಿ ಸಮಾಜಕ್ಕೆ ಹಾಗೂ ಶಾಲೆಗೆ ಕೀರ್ತಿಯನ್ನು ತಂದು ಕೊಡಿ ಎಂದು ಹೇಳಿದರು. ಶ್ರೀ ಬನಶಂಕರಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಹಾಗೂ ಕುಶಾಲನಗರ ಪಾಲಿಟೆಕ್ನಿಕ್ ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಎಚ್.ವಿ.ಶಿವಪ್ಪ ಅವರು ಮಾತನಾಡಿ ಈ ಸಂಸ್ಥೆಯು ನಮಗೆ ಬದುಕು ಕಟ್ಟಿಕೊಳ್ಳಲು ಬುನಾದಿ ಹಾಕಿಕೊಟ್ಟಿದೆ. ಈ ಶಾಲೆಯಲ್ಲಿ ಓದಿದ ಹಲವಾರು ಹಿರಿಯ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ…
ಲೇಖಕ: admin
ಮಡಿಕೇರಿ ಸೆ.21 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ನಿಯೋಗ ಇಂದು ಮಂಗಳೂರಿನಲ್ಲಿ ಕೇಂದ್ರದ ಮಾಜಿ ಕಾನೂನು ಸಚಿವ ಹಾಗೂ ಖ್ಯಾತ ಅರ್ಥ ಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರನ್ನು ಮಂಗಳೂರಿನ ವಿಎಚ್‍ಎಸ್ ಪ್ರಮುಖ ರಾಜೀವ್ ಶೆಟ್ಟಿ ಅವರ ನಿವಾಸದಲ್ಲಿ ಭೇಟಿ ಮಾಡಿತು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು 5 ಹಂತಗಳ ಪಾದಯಾತ್ರೆಯ ಕುರಿತು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಚರ್ಚಿಸಿದರು. ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆ ಮತ್ತಿತರ ಸಾಂವಿಧಾನಿಕ ಬೇಡಿಕೆಗಳ ಪ್ರಬಲ ಪ್ರತಿಪಾದಕರಾಗಿದ್ದಾರೆ. ಸಿಎನ್‍ಸಿಗೆ ಬೆಂಬಲವಾಗಿ ಕೊಡವರ ಪರ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯನ್ನು ಹೈಕೋರ್ಟ್‍ನಲ್ಲಿ ಮಂಡಿಸುವ ಮೂಲಕ ಕಾನೂನು ಹೋರಾಟವನ್ನು ಕೂಡ ನಡೆಸುತ್ತಿರುವುದು ಹೆಮ್ಮೆಯ ವಿಚಾರವೆಂದು ನಾಚಪ್ಪ ತಿಳಿಸಿದರು. ಅತಿ ಸೂಕ್ಷ್ಮ ಜನಾಂಗವಾಗಿರುವ ಕೊಡವರ ಅಸ್ತಿತ್ವವನ್ನು ಉಳಿಸಲು ಸಿಎನ್‍ಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ನಡೆಸುತ್ತಿದೆ. ಇದಕ್ಕೆ ಪೂರಕವಾಗಿ ಆಯೋಗವೊಂದನ್ನು ರಚಿಸಬೇಕೆನ್ನುವ ನಿಟ್ಟಿನಲ್ಲಿ ಸಾಂವಿಧಾನಿಕ ಪರಿಹಾರವನ್ನು ಸೂಚಿಸಲು ಸ್ವಾಮಿ ಅವರು ನಿರಂತರ ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದರು. ವಿರಾಟ್…
ಮಡಿಕೇರಿ ಸೆ.21 : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ರೋಟರಿ ವುಡ್ಸ್ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದ ಅಂಗವಾಗಿ ಮ್ಯಾರಾಥಾನ್ ಸ್ಪರ್ಧೆಯು(5 ಕಿ.ಮೀ) ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು. ಮ್ಯಾರಾಥಾನ್ ಸ್ಪರ್ಧೆಯನ್ನು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಉದ್ಘಾಟಿಸಿದರು. ಪ್ರಸಕ್ತ(2023-24) ಸಾಲಿನ ಯುವಜನೋತ್ಸವ-ಕಾರ್ಯಕ್ರಮದ ಅಂಗವಾಗಿ (ರೆಡ್ ರಿಬ್ಬನ್ ಓಟ, ಹೆಚ್‍ಐವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಕರು) ಎಚ್‍ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಾಥಾನ್ ಸ್ಪರ್ಧೆ ಹಮ್ಮಿಕೊಳ್ಳುವಂತೆ, ಕರ್ನಾಟಕ ಏಡ್ಸ್ ನಿಯಂತ್ರಣ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದೆ ಎಂದರು. ಎಚ್‍ಐವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಚ್‍ಐವಿ/ಎಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯಿದೆ 2017 ಮತ್ತಿತರ ಕುರಿತು ಅರಿವು…
ಮಡಿಕೇರಿ ಸೆ.21 : ಯುವ ಜನತೆ ದೇಶಕ್ಕೆ ಬೆನ್ನೆಲುಬು ಆಗಿದ್ದು, ಕ್ರೀಡೆ, ನೃತ್ಯ, ಸಂಗೀತ, ಸಾಹಿತ್ಯ ಮತ್ತಿತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅಗತ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ.ಜವರಪ್ಪ ತಿಳಿಸಿದರು. ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ಗುರುವಾರ ನಡೆದ ಸಾಂಸ್ಕೃತಿಕ ಕ್ರೀಡೆ, ಪಠ್ಯೇತರ ಮತ್ತು ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಹಿತ್ಯ, ಸಂಗೀತ, ಕ್ರೀಡೆ, ಹೀಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ಸದಾ ಚಟುವಟಿಕೆಯಿಂದ ಇರಬಹುದು. ಇದರಿಂದ ಬೇರೆಡೆ ಗಮನ ಹೋಗುವುದಕ್ಕೆ ಸಾಧ್ಯವಾಗುವುದಿಲ್ಲ. ಆ ನಿಟ್ಟಿನಲ್ಲಿ ಲಭ್ಯವಿರುವ ಕಾಲಾವಕಾಶವನ್ನು ಸರಿಯಾಗಿ ಬಳಸಿಕೊಂಡು ಮುನ್ನಡೆಯಬೇಕು ಎಂದು ಡಿ.ಜೆ.ಜವರಪ್ಪ ಸಲಹೆ ಮಾಡಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಲೇಖಕರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಅವರು ಮಾತನಾಡಿ ಮೊಬೈಲ್ ಗೀಳನ್ನು ಬಿಟ್ಟು ಒಳ್ಳೆಯ ಪುಸ್ತಕ…
ಮಡಿಕೇರಿ, ಸೆ.21: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ದಿಟ್ಟ ಹೆಜ್ಜೆಯೊಂದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇವುಗಳನ್ನು ಅನುಷ್ಠಾನಗೊಳಿಸುವ ಮೂಲಕ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಎಸ್‌ಎಸ್‌ಎಲ್‌ಸಿ ಫಲಿತಾಂಶ ವೃದ್ಧಿಗೆ ವಿಶೇಷ ಒತ್ತು ನೀಡಬೇಕು ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ( ಡಯಟ್ ) ಯ ಪ್ರಾಂಶುಪಾಲ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ಚಂದ್ರಕಾಂತ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಹಾಗೂ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ( ಡಯಟ್ ) ಯ ವತಿಯಿಂದ ಕೂಡಿಗೆ ಡಯಟ್ ನ ಸಭಾಂಗಣದಲ್ಲಿ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಕುರಿತಂತೆ ಏರ್ಪಡಿಸಿದ್ದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಫಲಿತಾಂಶವನ್ನು ಉತ್ತಮ ಪಡಿಸಲು ವಿಶೇಷ ಕಾರ್ಯಯೋಜನೆ ಮೂಲಕ ದಶ ಸೂತ್ರಗಳನ್ನು ಅನುಷ್ಠಾನಗೊಳಿಸಬೇಕು ಎಂದು ಹೇಳಿದರು. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಮಾನಸಿಕ…
ಮಡಿಕೇರಿ ಸೆ.21 : ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ನಿನಾದ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ ಬಾಲಕರ ತಂಡದ ರಾಹಿಲ್, ಪ್ರಶಾಂತ್, ರಮೀಜ್ ದ್ವಿತೀಯ ಸ್ಥಾನ ಪಡೆದುಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾದರು. ಪ್ರೌಢ ಶಾಲಾ ವಿಭಾಗದ ಬಾಲಕಿಯರ ತಂಡದ ತಶ್ಫಿಯಾ, ಗಾಯನ ದ್ವಿತೀಯ ಸ್ಥಾನ ಪಡೆದುಕೊಂಡು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾದರು. ವಿದ್ಯಾರ್ಥಿಗಳಿಗೆ ತರಬೇತುದಾರ ಹೆಚ್.ಹೆಚ್.ಆದರ್ಶ್ ತರಬೇತಿ ನೀಡಿದ್ದಾರೆ. ಶಾಲೆಯ ಆಡಳಿತಾಧಿಕಾರಿ ಕೆ.ಸಿ.ನಾಗೇಶ್ ಹಾಗೂ ಮುಖ್ಯೋಪಾಧ್ಯಯರಾದ ಸಿ.ಆರ್.ಶಿಲ್ಪಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಡಿಕೇರಿ ಸೆ.21 : ಚೇರಂಬಾಣೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ 2023-28ರ ಅವಧಿಗೆ ಆಡಳಿತ ಮಂಡಳಿಗೆ ಸಾಲಗಾರರ ಕ್ಷೇತ್ರದಿಂದ 12 ಮಂದಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಕಿ ಇರುವ ಸಾಲಗಾರರಲ್ಲದ ಒಂದು ಸ್ಥಾನಕ್ಕೆ ಸೆ.24 ರಂದು ಚುನಾವಣೆ ನಡೆಯಲಿದೆ. ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಬಾಚರಣಿಯಂಡ ಸುಮನ್, ಅಯ್ಯಂಡ ಸತೀಶ್ ಬೆಳ್ಯಪ್ಪ, ಮುಕ್ಕಾಟಿ ನಾಣಯ್ಯ, ಪೋಡೊನೋಳನ ಶ್ರೀನಿವಾಸ್, ಕೂರನ ಕಿಶೋರ್ ಕುಮಾರ್, ಕುಂಞ್ಞಳಿ ಸಂತೋಷ್ ಕುಮಾರ್, ಸಾಲಗಾರರ ಮಹಿಳಾ ಮೀಸಲು ಕ್ಷೇತ್ರದಿಂದ ಕೂರನ ಸುಶೀಲ ಅಪ್ಪಾಜಿ, ಚೀಯಬೆರ ವೀಣಾ ಸೋಮಯ್ಯ, ಬಿಸಿಎಂ (ಎ) ಕ್ಷೇತ್ರದಿಂದ ನಾಳಿಯಮ್ಮಂಡ ಜೀವನ್, ಬಿಸಿಎಂ (ಬಿ) ಕ್ಷೇತ್ರದಿಂದ ಕೇಕಡ ಸುಗುಣ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಸರಸಮ್ಮ ಹಾಗೂ ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಎಂ.ಕೆ.ವಸಂತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಯಾದ 12 ನಿರ್ದೇಶಕರಲ್ಲಿ 11 ಮಂದಿ ಬಿಜೆಪಿ ಬೆಂಬಲಿತರಾಗಿದ್ದಾರೆ.
ಮಡಿಕೇರಿ ಸೆ.21 : ತಾಳತ್ತಮನೆಯಲ್ಲಿ ಸೆ.22 ರಂದು ಉಚಿತ ರೇಬಿಸ್ (ಹುಚ್ಚು ನಾಯಿ) ಲಸಿಕಾ ಶಿಬಿರ ನಡೆಯಲಿದೆ. ಜಿಲ್ಲಾ ಪಂಚಾಯಿತಿ, ಕೊಡಗು ಪಶು ಪಲನಾ ಹಾಗೂ ಪಶು ವೈದ್ಯಕೀಯ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆ ನೇತಾಜಿ ಯುವತಿ ಮಂಡಳಿ ಹಾಗೂ ನೇತಾಜಿ ಯುವಕ ಮಂಡಲದ ಸಂಯುಕ್ತಶ್ರಾಯದಲ್ಲಿ ಬೆಳಿಗ್ಗೆ 9.30 ರಿಂದ 11.30 ಗಂಟೆಯವರೆಗೆ ತಾಳತ್ತಮನೆ ಆಟದ ಮೈದಾನದಲ್ಲಿ ಶಿಬಿರ ನಡೆಯಲಿದ್ದು, ತಾಳತ್ತಮನೆಯ ಹಾಗೂ ಸುತ್ತಮುತ್ತಲಿನ ಜನರು ತಮ್ಮ ಸಾಕು ಪ್ರಾಣಿಗಳನ್ನು ತರುವಂತೆ ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮನವಿ ಮಾಡಿದ್ದಾರೆ.
ಹೊದ್ದೂರು ಸೆ.8 : ಜಾಣೆ ಗೃಹಿಣಿಯಿಂದ ಕುಟುಂಬದ ಅಪೌಷ್ಠಿಕಾಂಶವು ಮುಕ್ತವಾಗಲಿದೆ. ಈ ನಿಟ್ಟಿನಲ್ಲಿ ಪ್ರತಿ ಮಹಿಳೆಯೂ ತಮ್ಮ ಮಹತ್ತರ ಜವಾಬ್ಧಾರಿಯನ್ನು ಅರಿತು ಕಾರ್ಯತತ್ಪರರಾಗಬೇಕು ಎಂದು ಸಾಹಿತಿ, ಪತ್ರಕರ್ತ ಕೂಡಂಡ ರವಿ ಅಭಿಪ್ರಾಯಿಸಿದರು. ಹೊದ್ದೂರಿನ ಪಂಚಾಯಿತಿ ಮತ್ತು ಸ್ಥಳೀಯ ಅಂಗನವಾಡಿಗಳ ಸಂಯುಕ್ತಾಶ್ರಯದಲ್ಲಿ ನಡೆದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು “ಸಮತೋಲನ ಆಹಾರದ ಸದ್ಭಳಕೆ” ಕುರಿತಾಗಿ ಮಾತನಾಡಿದರು. ಕಾರ್ಯಕ್ರಮವು ಪಂಚಾಯಿತಿಯ ದಿ. ಕೋರನ ದೇವಯ್ಯ ಸೀತಮ್ಮ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿತವಾಗಿತ್ತು. ಮಹಿಳೆಯರ ಜಾಣ್ಮೆಯು ಕುಟುಂಬಕ್ಕೆ ವರದಾನವಾಗಲಿದೆ. ಸಮತೋಲನ ಆಹಾರದ ಪಿರಮಿಡ್ ಕುರಿತಂತೆ ಬಹುತೇಕ ಮಹಿಳೆಯರು ಅರಿತಿದ್ದಾರೆ. 2023ರ ವರ್ಷವು ಅಂತರಾಷ್ಟೀಯ ಸಿರಿಧಾನ್ಯಗಳ ವರ್ಷವಾಗಿದೆ. ಇದರ ಮಹತ್ವವನ್ನು ಅರಿತು ಮಾನಿನಿಯರು ಸಿರಿಧಾನ್ಯಗಳನ್ನು ತಮ್ಮ ದೈನಿಕ ಆಹಾರದಲ್ಲಿ ಬಳಸುವಂತಾಗಬೇಕು. ದ್ವಿದಳ ಧಾನ್ಯಗಳನ್ನು ಮೊಳಕೆ ಬರಿಸಿ, ಅಡುಗೆಯಲ್ಲಿ ಬಳಸಿ ಕುಟುಂಬದ ಸರ್ವ ಸದಸ್ಯರ ಆರೋಗ್ಯವನ್ನು ಕಾಪಾಡುವ ಮಹತ್ತರ ಹೊಣೆ ಜಾಣೆ ಗೃಹಿಣಿಯ ಮೇಲಿದೆ ಎಂದು ಅವರು ವಿವರವಿತ್ತರು. ಆಯಾ ಋತುಮಾನದಲ್ಲಿ ಸುಲಭವಾಗಿ ಸ್ಥಳೀಯವಾಗಿ…
ನಾಪೋಕ್ಲು ಸೆ.21 : ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆಯು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಅವರ ಅಧ್ಯಕ್ಷತೆಯಲ್ಲಿ ಸುಳ್ಯದ ಕೊಡಿಯಾಲ ಬೈಲ್ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಮಾತನಾಡಿ, ಮಾ.31, 2023ರ ಅಂತ್ಯಕ್ಕೆ 16,960 ಜನ ವಿವಿಧ ವರ್ಗದ ಸದಸ್ಯರಿದ್ದು, ಇವರಿಂದ ರೂ.4.26 ಕೋಟಿ ಪಾಲು ಬಂಡವಾಳ, ರೂ. 156,53 ಕೋಟಿ ಠೇವಣಿ ಸಂಗ್ರಹಿಸಿದೆ. ಸದಸ್ಯರುಗಳಿಗೆ ರೂ.145.43 ಕೋಟಿ ವಿವಿಧ ಸಾಲಗಳನ್ನು ಈ ಸಹಕಾರಿ ವರ್ಷದಲ್ಲಿ ವಿತರಿಸಲಾಗಿದೆ. ರೂ. 13.69 ಕೋಟಿ ವಿವಿಧ ಬ್ಯಾಂಕ್ಗಳಲ್ಲಿ ಧನ ವಿನಿಯೋಗ ಮಾಡಿದ್ದು, ಸಂಘವು ಆರಂಭದಿಂದಲೂ ಲಾಭದಲ್ಲಿ ನಡೆಯುತ್ತಿದ್ದು, ವರದಿ ವರ್ಷದಲ್ಲಿ ರೂ. 879.65 ಕೋಟಿ ವಾರ್ಷಿಕ ವ್ಯವಹಾರ ನಡೆಸಿ ರೂ.1,51,88,550.61 ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.20 ಡಿವಿಡೆಂಡ್ ನೀಡಲಾಗುತ್ತಿದೆ. ಸಂಘದ 16 ಶಾಖೆಗಳಲ್ಲಿ ಇ- ಸ್ಟಾಂಪಿಂಗ್, ಸುಳ್ಯ ಶಾಖೆಯಲ್ಲಿ ಕಡಿಮೆ ಬಾಡಿಗೆಗೆ ಸೇಫ್ ಲಾಕರ್, ಗ್ರಾಹಕರ ಅನುಕೂಲಕ್ಕಾಗಿ ಆರ್.ಟಿ.ಜಿ.ಎಸ್, ನೇಫ್ಟ್ ಸೌಲಭ್ಯವನ್ನು ಕೂಡ ನೀಡುತ್ತಿದ್ದೇವೆ…






