ಮಡಿಕೇರಿ ಅ.27 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮಡಿಕೇರಿ-208 ಮತ್ತು ವಿರಾಜಪೇಟೆ-209 ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಬಿಡುಗಡೆ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಈಗಾಗಲೇ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮನೆ ಮನೆ ಸಮೀಕ್ಷೆ ಮಾಡಿ ಕರಡು ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 2024 ರ ಜನವರಿ, 05 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಅದರೊಳಗೆ ಈ ಕರಡು ಮತದಾರರ ಪಟ್ಟಿಯನ್ನು ಗಮನಿಸಿ ಸರಿಪಡಿಸಿಕೊಳ್ಳಲು ಅವಕಾಶ ಇದೆ. 18 ವರ್ಷ ಪೂರ್ಣಗೊಂಡವರ ಹೆಸರು ಬಿಟ್ಟು ಹೋಗಿದ್ದಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶವಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವೆಂಕಟ್ ರಾಜಾ ಅವರು ಕೋರಿದರು. ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯ 546 ಮತಗಟ್ಟೆಯಲ್ಲಿ 2,26,392 ಪುರುಷ ಮತದಾರರು, 2,33,503 ಮಹಿಳಾ ಮತದಾರರು ಹಾಗೂ 21 ಇತರ ಮತದಾರರು,…
ಲೇಖಕ: admin
ಮಡಿಕೇರಿ ಅ.27 : ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ, ವಿವಿಧ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಮತ್ತು ಶಾಲೆಗೆ ದಾಖಲಾಗದ ಮಕ್ಕಳನ್ನು ಗುರುತಿಸುವ ಸಮೀಕ್ಷೆ ಜಿಲ್ಲೆಯಲ್ಲಿ ನ.4 ರವರೆಗೆ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ತಿಳಿಸಿದ್ದಾರೆ. ಶಾಲೆಯಿಂದ ಹೊರಗಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಜನವಸತಿ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ಶಾಲೆ ಬಿಟ್ಟವರನ್ನು ಗುರುತಿಸಲಾಗುತ್ತದೆ ಎಂದು ಹೇಳಿದ್ದಾರೆ. ಜನವಸತಿ ಪ್ರದೇಶದ ನಾಗರಿಕರು ಜನಪ್ರತಿನಿಧಿಗಳು ಅಂಗನವಾಡಿ ಆಶಾ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳು ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಒದಗಿಸಿ ಸಮೀಕ್ಷಾ ತಂಡಕ್ಕೆ ಸಹಕರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ಅವರು ಕೋರಿದ್ದಾರೆ. ಆರ್‍ಟಿಇ ಜಾರಿ ಹಿನ್ನೆಲೆಯಲ್ಲಿ ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗದಂತೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ವ್ಯಾಪ್ತಿಗೆ ತರುವುದು…
ಮಡಿಕೇರಿ ಅ.27 : ‘ಖಂಡಗ್ರಾಸ ಚಂದ್ರಗ್ರಹಣ’ ಇರುವುದರಿಂದ ನಗರದ ಶ್ರೀ ಓಂಕಾರೇಶ್ವರ ಮತ್ತು ಶ್ರೀ ಆಂಜನೇಯ ದೇವಾಲಯಗಳಲ್ಲಿ ಅ.28 ರಂದು ಸಂಜೆ 6.30 ಗಂಟೆಗೆ ಮಹಾಪೂಜೆ ನಡೆಯಲಿದೆ. ನಂತರ ಸಾರ್ವಜನಿಕ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಶ್ರೀ ಓಂಕಾರೇಶ್ವರ ದೇವಾಯದ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎಲ್.ದೇವರಾಜ್ ತಿಳಿಸಿದ್ದಾರೆ.
ಮಡಿಕೇರಿ ಅ.27 : ಕುಶಾಲನಗರ ವ್ಯಾಪ್ತಿಯ ಹಾರಂಗಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಸುಂದರನಗರದಿಂದ ಚಿಕ್ಕತ್ತೂರು ಗ್ರಾಮದವರೆಗೆ ನಿರ್ವಹಿಸಬೇಕಿರುವುದರಿಂದ 220/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಎಸ್‍ಎಲ್‍ಎನ್ ಫೀಡರ್‍ನಲ್ಲಿ ಅ.30 ರಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕೂಡ್ಲೂರು, ಕೂಡುಮಂಗಳೂರು, ಸುಂದರನಗರ, ಚಿಕ್ಕತ್ತೂರು, ದೊಡ್ಡತ್ತೂರು, ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಅ.28 : ಕೇಂದ್ರ ಸರ್ಕಾರ ಸಹಕಾರ ಸಚಿವಾಲಯವನ್ನು ನೂತನವಾಗಿ ಸ್ಥಾಪಿಸಿ ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟು, ಸಹಕಾರ ಕ್ಷೇತ್ರದ ಮೂಲಕ ಪಾರದರ್ಶಕ ಆಡಳಿತ ನೀಡಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವತ್ತ ಸಾಗುತ್ತಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ ಹಾಗೂ ಸಹಕಾರ ಇಲಾಖೆ, ಕೊಡಗು ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಎ.ಪಿ.ಸಿ.ಎಂ.ಎಸ್., ಮತ್ತು ಲ್ಯಾಂಪ್ಸ್ ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ಕೇಂದ್ರ ಸರ್ಕಾರದ ಸಹಕಾರ ಇಲಾಖೆಯ ನೂತನ 13 ಯೋಜನೆಗಳ ಕುರಿತು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆದ ಶಿಕ್ಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರವು ದೇಶದ ಎಲ್ಲಾ ಸಹಕಾರ ಸಂಘಗಳಿಗೆ ಅನ್ವಯಿಸುವಂತೆ ಏಕರೂಪದ ಉಪನಿಯಮವನ್ನು ಜಾರಿಗೆ ತರಲಾಗುತ್ತಿದ್ದು, ಆ ಮೂಲಕ ಸಂಘವು ಹಲವು ಉದ್ದೇಶಗಳನ್ನು ಹೊಂದಿ ಅವುಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತಿದೆ.…
ಕುಶಾಲನಗರ, ಅ.27 : ಕನ್ನಡ ಸಾಹಿತ್ಯ ಪರಿಷತ್ತು(ಕ.ಸಾ.ಪ.) ಜಿಲ್ಲಾ ಸಮಿತಿ, ಕ.ಸಾ.ಪ. ಕುಶಾಲನಗರ ತಾಲೂಕು ಸಮಿತಿ ಹಾಗೂ ಕ.ಸಾ.ಪ.ಹೆಬ್ಬಾಲೆ ವಲಯ ಘಟಕದ ವತಿಯಿಂದ ನವೆಂಬರ್ ತಿಂಗಳಲ್ಲಿ ಹೆಬ್ಬಾಲೆ ಗ್ರಾಮದಲ್ಲಿ ನಡೆಸಲುದ್ದೇಶಿರುವ ” ಕರ್ನಾಟಕ ಸುವರ್ಣ ಸಂಭ್ರಮ: 50″ ರ ಪೂರ್ವಭಾವಿ ಸಭೆಯು ಆ.28 ರಂದು ನಡೆಯಲಿದೆ ಎಂದು ಕುಶಾಲನಗರ ತಾಲ್ಲೂಕು ಕ.ಸಾ.ಪ.ಅಧ್ಯಕ್ಷ ಕೆ.ಎಸ್.ನಾಗೇಶ್ ತಿಳಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹೆಬ್ಬಾಲೆ ಪ್ರೌಢಶಾಲೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ: 50 ರ ಆಚರಣೆ ಕುರಿತು ಸಮಾಲೋಚನೆ ನಡೆಸಲಾಗುವುದು. ಸುವರ್ಣ ಸಂಭ್ರಮ ಆಚರಣೆಗೆ ಸ್ವಾಗತ ಸಮಿತಿ ಸೇರಿದಂತೆ ವಿವಿಧ ಉಪ ಸಮಿತಿಗಳ ರಚನೆ, ಸಾಂಸ್ಕೃತಿಕ ಮೆರವಣಿಗೆ, ವಿಚಾರ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಜನಪದ ವಸ್ತು ಪ್ರದರ್ಶನ, ಗ್ರಾಮದ ಅಲಂಕಾರ, ವೇದಿಕೆ ನಿರ್ಮಾಣ ಮತ್ತಿತರ ವಿಚಾರಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ: 50 ರ ಆಚರಣೆಯನ್ನು ಹೆಬ್ಬಾಲೆ ಮತ್ತು ತೊರೆನೂರು ಹಾಗೂ ಶಿರಂಗಾಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಸಹಕಾರಿ…
ಮಡಿಕೇರಿ ಅ.27 : ಉಡುಪಿಯ ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್ ನ ಅಂಗ ಸಂಸ್ಥೆಯಾದ ಮೂರ್ನಾಡುವಿನ ವಿವೇಕ ಜಾಗೃತ ಬಳಗದ ವತಿಯಿಂದ ಅ.29 ರಂದು ಓದುಗರ ಸಮಾವೇಶ ನಡೆಯಲಿದೆ. ಸಿದ್ದಾಪುರದ ಕರಡಿಗೋಡು ಬಸವೇಶ್ವರ ದೇವಾಲಯದ ಸಮುದಾಯ ಭವನದಲ್ಲಿ ಅಪರಾಹ್ನ 2.30 ಗಂಟೆಯಿಂದ ಸಂಜೆ 4.30 ರವರೆಗೆ ನಡೆಯಲಿರುವ ಓದುಗರ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವ ಉಡುಪಿಯ ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್ ನ ಗುರುಪ್ರಸಾದ್ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಮೂರ್ನಾಡು ವಿವೇಕ ಜಾಗೃತ ಬಳಗದ ಅಧ್ಯಕ್ಷರಾದ ಬಿ.ಟಿ.ದಿವ್ಯ ತೇಜಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಅ.27 : ನಗರದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿ ದೇವಾಲಯದಲ್ಲಿ ನ.4 ರಂದು ದಸರಾ ಮಂಟಪದ ಕಲಾಕೃತಿಗಳಿಗೆ ಶಾಂತಿ ಪೂಜೆ ನಡೆಯಲಿದೆ ಎಂದು ಕೋಟೆ ಮಹಾಗಣಪತಿ ಮಂಟಪ ಸಮಿತಿಯ ಅಧ್ಯಕ್ಷ ಹೆಚ್.ಪಿ.ಲೋಕೇಶ್ ತಿಳಿಸಿದ್ದಾರೆ. ಶಾಂತಿಪೂಜೆಯ ದಿನ ದಸರಾ ಪ್ರಯುಕ್ತ ಆಯೋಜಿಸಿದ್ದ ಲಕ್ಕಿಡಿಪ್ ನ ಡ್ರಾ ಕೂಡ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ::: ಬೇಸರ ::: ಐತಿಹಾಸಿಕ ಮಡಿಕೇರಿ ದಸರಾ ದಶಮಂಟಪ ಶೋಭಾಯಾತ್ರೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಯಶಸ್ಸಿಗೆ ಕಾರಣಕರ್ತರಾದ ಸರ್ವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಆದರೆ ಶೋಭಾಯಾತ್ರೆ ಸಂದರ್ಭ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಮಂಟಪವು ಅವಘಡಕ್ಕೀಡಾಗಿರುವುದು ಅತೀವ ಬೇಸರವನ್ನು ತಂದಿದೆ. ದೇವಿಯ ಅನುಗ್ರಹದಿಂದ ದೊಡ್ಡ ಅನಾಹುತವೊಂದು ತಪ್ಪಿದೆ ಎಂದು ಲೋಕೇಶ್ ಹೇಳಿದ್ದಾರೆ.
ಕುಶಾಲನಗರ ಅ.27: ಗ್ರಾ.ಪಂ ನೌಕರರ ಕನಿಷ್ಠ ವೇತನ ನಿಗದಿ ಹಾಗೂ ಪಿಂಚಣಿಗಾಗಿ ಒತ್ತಾಯಿಸಿ ನ.7ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾ.ಪಂ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಜಿಲ್ಲಾ ಪಂಚಾಯತ್ ಅನುಮೋದನೆಗಾಗಿ ಒತ್ತಾಯಿಸಿ ನ.3ರಂದು ಕೊಡಗು ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರು ಗಂಟಿಗಳು, ಜವಾನ, ಸ್ವಚ್ಛತಾ ಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರನಾಗಿ ಘೋಷಿಸಬೇಕು. ದಿನನಿತ್ಯದ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ 31 ಸಾವಿರ ನಿಗದಿಗೊಳಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರಿಗೆ ಪ್ರತಿ ತಿಂಗಳು ಕನಿಷ್ಠ 6 ಸಾವಿರ ರೂ ಪಿಂಚಣಿ ವ್ಯವಸ್ಥೆ ಜಾರಿಗೆ ಬರಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವರ್ಗಾವಣೆ ಅವಕಾಶ…
ವಿರಾಜಪೇಟೆ ಅ.27 : ಮೈಸೂರು ದಸರಾ ಮಹೋತ್ಸವದಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಪ್ರದರ್ಶನದಲ್ಲಿ ವಿರಾಜಪೇಟೆಯ ಬೇಟೋಳಿ ಗ್ರಾಮದ ಚಿತ್ರ ಕಲಾವಿದ ಸುನಾದ್ ಭಾರದ್ವಾಜ್ ರಚಿಸಿದ “ತಾಯಿಯ ಪಾದಗಳನ್ನು ಶೃಂಗರಿಸಿ” ಎಂಬ ಕಲಾಕೃತಿಗೆ ಅತ್ಯುತ್ತಮ ಕಲಾಕೃತಿ ಪ್ರಶಸ್ತಿ ಲಭಿಸಿದೆ. ರಾಜ್ಯಾದ್ಯಂತ ಒಟ್ಟು 150 ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅದರಲ್ಲಿ ಸುನಾದ್ ಭಾರದ್ವಾಜ್ ರ ಕಲಾಕೃತಿಯು ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸುನಾದ್ ಈ ಹಿಂದೆಯೂ ದಸರಾ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ಬೇಟೋಳಿ ಮಕ್ಕಿಯ ಬಿ.ಪಿ.ಪಾವನರಾಮ್, ಸುಧಾ ದಂಪತಿಗಳ ಪುತ್ರ.






