ಮಡಿಕೇರಿ ಅ.27 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ 2022-23 ನೇ ಸಾಲಿನ 19 ನೇ ಗೌರಮ್ಮ ದತ್ತಿನಿಧಿ ಪ್ರಶಸ್ತಿಯನ್ನು ಸಾಹಿತಿ ಕಟ್ರತನ ಲಲಿತ ಅಯ್ಯಣ್ಣ ಮತ್ತು ಈರಮಂಡ ಹರಿಣ್ ವಿಜಯ್ ಅವರಿಗೆ ಗಣ್ಯರು ಪ್ರದಾನ ಮಾಡಿದರು. ಅಲ್ಲದೆ ಗೌರಮ್ಮ ದತ್ತಿನಿಧಿ ಕಥಾಸ್ಪರ್ಧೆ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕೊಡಗು ವಿಶ್ವ ವಿದ್ಯಾನಿಲಯದ ಚಿಕ್ಕಅಳುವಾರ ಜ್ಞಾನಕಾವೇರಿ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹ್ಮದ್ ಮಾತನಾಡಿ ಕತೆಗಾರ್ತಿ ಕೊಡಗಿನ ಗೌರಮ್ಮ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ವರ್ಣಿಸಿದರು. ಕೊಡಗಿನ ಗೌರಮ್ಮ ಸ್ವಾತಂತ್ರ್ಯ ಪೂರ್ವದಲ್ಲಿ ಸಣ್ಣ ಕತೆಗಳನ್ನು ಬರೆಯುವ ಮೂಲಕ ಮಹಿಳಾ ಸಬಲೀಕರಣ, ಸಮಾಜದಲ್ಲಿ ಸಮಾನತೆ ಹೀಗೆ ಹಲವು ವಿಚಾರಗಳ ಕುರಿತು ಕನ್ನಡ ಸಾಹಿತ್ಯದಲ್ಲಿ ಬೆಳಕು ಚೆಲ್ಲಿದ್ದಾರೆ ಎಂದು ಅವರು ನುಡಿದರು. ಬದುಕಿದ 27 ವರ್ಷದಲ್ಲಿ ಸಾಮಾಜಿಕ ಕ್ರಾಂತಿಯನ್ನೇ ಉಂಟು ಮಾಡಿದ್ದರು. ಮಹಾತ್ಮ…
ಲೇಖಕ: admin
ಬೇಕಾಗುವ ಪದಾರ್ಥಗಳು : ಮಶ್ರೂಮ್ – 200 ಗ್ರಾಂ, ಕಬಾಬ್ ಪೌಡರ್ –ಒಂದು ಪ್ಯಾಕೆಟ್, ಶುಂಠಿ– ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಖಾರದಪುಡಿ –ಅರ್ಧ ಚಮಚ, ಚಿಕನ್ ಮಸಾಲ– ಅರ್ಧ ಚಮಚ, ಮೊಟ್ಟೆ –ಒಂದು, ಉಪ್ಪು- ರುಚಿಗೆ ತಕ್ಕಷ್ಟು, ಎಣ್ಣೆ – ಸ್ವಲ್ಪ ಮಾಡುವ ವಿಧಾನ : ಮಶ್ರೂಮ್ ಗಳನ್ನು ಚೆನ್ನಾಗಿ ತೊಳೆದುಕೊಳ್ಳಿ. ನಂತರ ಇದಕ್ಕೆ ಕಬಾಬ್ ಪೌಡರ್, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಖಾರದಪುಡಿ, ಚಿಕನ್ ಮಸಾಲೆ ಪುಡಿ, ಮೊಟ್ಟೆ, ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಸ್ವಲ್ಪ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಮಸಾಲೆ ಹಿಡಿಯುವವರೆಗೆ ಕೈಯಾಡಿಸಿ. 10 ರಿಂದ 15 ನಿಮಿಷಗಳ ಕಾಲ ನೆನೆಯಲು ಬಿಡಿ. ನಂತರ ಪಾತ್ರೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿ. ಅದಕ್ಕೆ ನೆನೆಸಿಟ್ಟಿದ್ದ ಮಶ್ರೂಮ್ ಹಾಕಿ. ಅದು ಕೆಂಪು ಬಣ್ಣಕ್ಕೆ ತಿರುಗುವವರೆಗೂ ಬೇಯಿಸಿ. ಇದೀಗ ಬಿಸಿ ಬಿಸಿಯಾದ ಮಶ್ರೂಮ್ ಕಬಾಬ್ ಸವಿಯಲು ಸಿದ್ಧ.
ಮಡಿಕೇರಿ ಅ.27 : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಅ.30 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಮಡಿಕೇರಿ ಅ.27 : ಅಕ್ಟೋಬರ್, 28 ರಂದು ಖಂಡಗ್ರಾಸ ಚಂದ್ರಗ್ರಹಣ ಇರುವುದರಿಂದ ದೇವಾಲಯದ ಪ್ರಧಾನ ಅರ್ಚಕರ ನಿರ್ದೇಶನದಂತೆ, ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಮಾಸಿಕವಾಗಿ ಹುಣ್ಣಿಮೆಯಂದು ನಡೆಸಲಾಗುತ್ತಿದ್ದ “ಸಾಮೂಹಿಕ ಸತ್ಯನಾರಾಯಣ” ಪೂಜಾ ಕಾರ್ಯ ಇರುವುದಿಲ್ಲ ಹಾಗೂ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸಂಜೆ 6.30 ಕ್ಕೆ ಮಹಾಪೂಜೆ ನಡೆಯಲಿದ್ದು, ನಂತರ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ. (ಗ್ರಹಣ ಸ್ವರ್ಶ: ರಾತ್ರಿ 1.04, ಗ್ರಹಣ ಮೋಕ್ಷ: ರಾತ್ರಿ 2.24).
ಮಡಿಕೇರಿ ಅ.27 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವು ಅ.28 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಶ್ರೀಧರ ಆರ್. ಹೆಗಡೆ, ಇತರರು ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ…
ಮಡಿಕೇರಿ ಅ.27 : ಡಿಸೆಂಬರ್ 2023ರ ಅಂತ್ಯಕ್ಕೆ ಬಂದೂಕು ಪರವಾನಗಿಯ ಅವಧಿ ಮುಕ್ತಾಯಗೊಳ್ಳುತ್ತಿರುವ ಎಲ್ಲಾ ಬಂದೂಕು ಪರವಾನಗಿದಾರರು ಕೇಂದ್ರ ಗೃಹ ಮಂತ್ರಾಲಯವು ರೂಪಿಸಿರುವ National Database of Arms Licence-Arms Licence Issuance System (NDAL-ALIS) ತಂತ್ರಾಂಶದ https://ndal-alis.gov.in/armslicence/ ಲಿಂಕ್ ಬಳಸಿ 2 ತಿಂಗಳ ಮುಂಚಿತವಾಗಿ ಬಂದೂಕು ನವೀಕರಣಕ್ಕೆ ಅರ್ಜಿ ಸಲ್ಲಿsಸಿ ಅರ್ಜಿ ಪ್ರತಿ ಹಾಗೂ ಮೂಲ ಬಂದೂಕು ಪರವಾನಗಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ತಿಳಿಸಿದೆ. NDAL-ALIS ತಂತ್ರಾಂಶವನ್ನು ಬಳಸಿ ಬಂದೂಕು ನವೀಕರಣಕ್ಕೆ ಅರ್ಜಿ ಸಲ್ಲಿಸುವ ಬಗ್ಗೆ kodagu.nic.in ನಲ್ಲಿ user manual ನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಮಡಿಕೇರಿ ಅ.27 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಹುತಾತ್ಮ ದಿನಾಚರಣೆಯ ಪ್ರಯುಕ್ತ ಅ.31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಮೈಸೂರು ವಿಭಾಗದ ಕರ್ನಾಟಕ ಅರೆಭಾಷೆ ಸಂಸ್ಕೃತಿ…
ಮೂರ್ನಾಡು ಅ.27 : ಮೂರ್ನಾಡುವಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಪಾಂಡಾಣೆ ಶಾಲಾ ಮೈದಾನದಲ್ಲಿ ನಿರ್ಮಿಸಲಾದ ಭವ್ಯ ಬಯಲು ಅಲಂಕೃತ ವೇದಿಕೆಯಲ್ಲಿ 30ನೇ ವರ್ಷದ ಆಯುಧ ಪೂಜೆ ನೆರವೇರಿತು. ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯನ್ನು ನೆರವೇರಿಸಿ, ನಂತರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಪಟ್ಟಣದ ಮುಖ್ಯ ಬೀದಿಗಳಲ್ಲಿ ತೆರಳಲಾಯಿತು. ಈ ಸಂದರ್ಭ ವಿಶೇಷವಾಗಿ ಅಲಂಕೃತಗೊಂಡ ವಾಹನಗಳಲ್ಲಿ ಚಂದ್ರಯಾನ-3, ಮದ್ಯಪಾನದಿಂದ ಆಗುವ ಅಪಘಾತಗಳ ಸ್ತಬ್ದ ಚಿತ್ರಣ, ಐತಿಹಾಸಿಕ ಹಿನ್ನಲೆಯುಳ್ಳ ಶ್ರೀರಾಮನಿಂದ ರಾವಣದ ಸಂಹಾರ, ದುರ್ಗೆಯಿಂದ ದುರ್ಗಾಸುರನ ವಧೆ, ಶುಂಭನ ವಧೆ, ಶಿವಾಂಶನಿಂದ ಕಾಲಾಂಶನ ವಧೆಯ ಚಿತ್ರಣಗಳು, ಭಾರತದ ಚಂದ್ರಯಾನ-3 ಯಶಸ್ವಿ ಉಡಾವಣೆ ಹಾಗೂ ಸುರಕ್ಷಿತ ಲ್ಯಾಂಡಿಂಗ್, ರೈತ ದೇಶದ ಬೆನ್ನುಲೆಬು, ಸರ್ಕಾರಿ ಶಾಲೆಗಳನ್ನು ಉಳಿಸಿ ಹೀಗೆ ಇನ್ನು ಹಲವಾರು ಸ್ತಬ್ದ ಚಿತ್ರಗಳು ಮತ್ತು ವಿಟ್ಲದ ಕಲಾ ರಸಿಕ ಆಟ್ರ್ಸ್ ಬೊಂಬೆ ಬಳಗದ ಗೊಂಬೆ ಕುಣಿತ ಮತ್ತು ವಾದ್ಯಗೋಷ್ಠಿಗಳು ವೀಕ್ಷಕರ ಗಮನ ಸೆಳೆದವು.…
ಸುಂಟಿಕೊಪ್ಪ ಅ.26 : ಸುಂಟಿಕೊಪ್ಪ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕುಂಜಿಲನ ಎಸ್.ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಕೆ.ವಿ.ರಮ್ಯಾ ಮೋಹನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೆ.ಎಸ್.ಮಂಜುನಾಥ್ ಅವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕೆ.ವಿ.ರಮ್ಯಾ ಮೋಹನ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಈ 2 ಸ್ಥಾನಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ, ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಬಿ.ಕೆ.ವಿಜೆಯೇಂದ್ರ ಅವರು ಕೆ.ಎಸ್.ಮಂಜುನಾಥ್ ಹಾಗೂ ಕೆ.ವಿ.ರಮ್ಯಾ ಮೋಹನ್ ಅವರುಗಳನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿದರು. ಸಭೆಯಲ್ಲಿ ನಿರ್ದೇಶಕರುಗಳಾದ ಎಂ.ಎನ್.ಕೊಮಾರಪ್ಪ, ದಾಸಂಡ ರಮೇಶ್ ಚಂಗಪ್ಪ, ಕೆ.ಪಿ.ಜಗನ್ನಾಥ್, ಡಿ.ಕೆ.ಗಂಗಾಧರ, ಪಟ್ಟೆಮನೆ ಪಿ.ಉದಯಕುಮಾರ್, ಎನ್.ಸಿ.ಪೊನ್ನಪ್ಪ, ಜರ್ಮಿಡಿಸೋಜ, ಕೆ.ಆರ್.ಮಂಜುನಾಥ್, ಕೆ.ಆರ್.ದಯಾನಂದ, ಪಿ.ಪಿ.ಲೀಲಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಮಿತ್ರ, ಸಿಬ್ಬಂದಿ ವರ್ಗ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಕೆ.ಎಸ್. ಮುಂಜುನಾಥ್ ಅವರು ತಾವು 4ನೇ ಅವಧಿಗೆ ನಿರ್ದೇಶಕನಾಗಿ ಆಯ್ಕೆಯಾಗಿದ್ದು, ಈ ಬಾರಿ ಸರ್ವರ…
ಮಡಿಕೇರಿ ಅ.26 : ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಕಾಫಿ ಬೆಳೆಗಾರರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಪೊನ್ನಣ್ಣ ಅವರಿಗೆ ವಿಧಾನಸೌಧದಲ್ಲಿ ಇಂದು ಮನವಿ ಸಲ್ಲಿಸಿದರು. ಕಾಫಿ ಬೆಳೆಗಾರರಿಗೆ ಒತ್ತುವರಿ ಕಂದಾಯ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಬೇಕು ಮತ್ತು ಕಾಫಿ ಬೆಳೆಯನ್ನು ಬರಗಾಲ ವ್ಯಾಪ್ತಿಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಪ್ರಮುಖರು ವಿವರಿಸಿದರು. ಈ ಕುರಿತು ಪೊನ್ನಣ್ಣ ಅವರು ಮಾತನಾಡಿ ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ನ್ಯಾಯಾಲಯಗಳಲ್ಲಿ ಈ ಬಗ್ಗೆ ಅನೇಕ ತೀರ್ಪುಗಳಾಗಿದ್ದು, ಕಾನೂನಾತ್ಮಕ ಅಂಶಗಳನ್ನು ಒಳಗೊಂಡಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾನೂನಿನಡಿಯಲ್ಲಿ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಲು ಶ್ರಮಿಸುವುದಾಗಿ ತಿಳಿಸಿದರು. ಸಂಘದ ಅಧ್ಯಕ್ಷರಾದ ಡಾ.ಹೆಚ್.ಟಿ. ಮೋಹನ್‍ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಬಿ.ಕೃಷ್ಣಪ್ಪ, ಕೊಡಗು – ಚಿಕ್ಕಮಂಗಳೂರು ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.






