ಲೇಖಕ: admin

ಮಡಿಕೇರಿ ಫೆ.21 NEWSD DESK : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ತಾಲ್ಲೂಕು ಕೇಂದ್ರವಾಗಿರುವ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಮತ್ತು ಬಲ್ಯಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನೂರು ರಸ್ತೆ ಕಾಲೋನಿ, ಮಾಪಿಳ್ಳೆತೋಡು ಸೇತುವೆ, ಕಾವೇರಮ್ಮ ಬಡಾವಣೆ ಮತ್ತು ಇತರ ಬಡಾವಣೆಗಳು ಒಳಗೊಂಡಂತೆ ಸಂಪೂರ್ಣ ಮುಗುಟಗೇರಿ ಗ್ರಾಮವನ್ನು ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡಲಾಗಿದೆ.  ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್‍ಗಳನ್ನು 2011ರ ಜನಗಣತಿಯನ್ನು ಆಧರಿಸಿ ಪುನರ್ ವಿಂಗಡಣೆ ಮಾಡಿ, ವಾರ್ಡ್‍ನ ಹೆಸರು ಹಾಗೂ ವಾರ್ಡ್ ವ್ಯಾಪ್ತಿಗೆ ಒಳಪಡುವ ಪ್ರದೇಶದ ವಿವರ ಮತ್ತು ಚೆಕ್ಕುಬಂದಿಗಳನ್ನು ವಿವರವಾಗಿ ನಮೂದಿಸಿ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಈ ಕರಡು ಅಧಿಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆಯನ್ನು ಅಥವಾ ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು ಅದನ್ನು ಲಿಖಿತ ರೂಪದಲ್ಲಿ ಕಾರಣ ಸಹಿತವಾಗಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.21 NEWS DESK : ವಿರಾಜಪೇಟೆ ಪಟ್ಟಣದ ನಿವಾಸಿ ಮೌಂಟನ್ ವ್ಯೂ ಶಾಲೆಯ ಸಂಸ್ಥಾಪಕರಾದ ದಿ.ಸಯ್ಯದ್ ನಜೀರ್ ಅಹಮ್ಮದ್ ಮತ್ತು ಸೈಯದಾ ನಿಖತ್ ಅಸ್ಮ ಅವರ ಪುತ್ರಿ ಸೈಯದಾ ಕಾಶ್ಮೀರ ಸಿಮ್ರಾನ್ ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಸಿವಿಲ್ ಜಡ್ಜ್ ನೇಮಕಾತಿ ಪರೀಕ್ಷೆಯನ್ನು ಎದುರಿಸಿದ ಸೈಯದಾ ಕಾಶ್ಮೀರ ಸಿಮ್ರಾನ್ ಅವರು ಮೊದಲ ಪ್ರಯತ್ನದಲ್ಲಿಯೇ 30ನೇ ರ‍್ಯಾಂಕ್ ಗಳಿಸಿ ನ್ಯಾಯಾಧೀಶರ ಹುದ್ದೆಗೆ ನಿಯುಕ್ತಿಗೊಂಡಿದ್ದಾರೆ. ವಿರಾಜಪೇಟೆ ಮೌಂಟನ್ ವ್ಯೂ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆದ ಸೈಯದಾ ಅವರು, ಮಂಗಳೂರಿನಲ್ಲಿ ಪಿಯುಸಿ ಶಿಕ್ಷಣ, ಮೈಸೂರಿನ ವಿದ್ಯಾ ವಿಕಾಸ ಕಾಲೇಜಿನಲ್ಲಿ ಬಿಬಿಎ ಎಲ್‍ಎಲ್‍ಬಿ ಪದವಿ ಮುಗಿಸಿದರು. 2023ರಲ್ಲಿ ವಿರಾಜಪೇಟೆ ಪಟ್ಟಣದಲ್ಲಿ ಹಿರಿಯ ವಕೀಲ ಐ.ಆರ್.ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದರು. ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಸೈಯದಾ ಕಾಶ್ಮೀರ ಸಿಮ್ರಾನ್ ತನ್ನ ತಂದೆ, ತಾಯಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಮಾತ್ರವಲ್ಲ, ಹೆಣ್ಣುಮಕ್ಕಳು ಉನ್ನತ ವಿದ್ಯಾಭ್ಯಾಸ ಪಡೆದು ಸ್ವಾವಲಂಬಿ ಜೀವನ ನಡೆಸಬೇಕು…

Read More

ಮಡಿಕೇರಿ NEWS DESK  ಫೆ.21 : ಸುತ್ತೂರು ಮಠದ 24 ನೇ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಸೋಮವಾರಪೇಟೆಯ ನಿವಾಸಕ್ಕೆ ಭೇಟಿ ನೀಡಿದರು. ಸ್ವಾಮೀಜಿಗಳ ಪಾದಪೂಜೆ ನೆರವೇರಿಸುವ ಮೂಲಕ ಶಾಸಕರು ಹಾಗೂ ಕುಟುಂಬದ ಸದಸ್ಯರು ಆಶೀರ್ವಾದ ಪಡೆದರು.

Read More

ಮಡಿಕೇರಿ NEWS DESK ಫೆ.21 : ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆೆ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು “ಕೊಡವ ಸತ್ಯಾಗ್ರಹ” ನಡೆಸಿತು. ಪ್ರಖ್ಯಾತ ಭಾಷಾ ತಜ್ಞ ಪಂಡಿತ್ ಡಾ. ಸೀತಕಾಂತ್ ಮಹಾಪಾತ್ರ ಆಯೋಗದ ವರದಿಯ ಶಿಫಾರಸ್ಸಿನಂತೆ ಕೊಡವ ತಕ್ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮಂಡಿಸಿದರು. ಕೊಂಕಣಿ ಭಾಷೆಯ ಮಾದರಿಯಲ್ಲಿ ಮತ್ತು ತುಳು ಭಾಷೆಯ ಪ್ರಸ್ತಾವನೆಯಂತೆ, ಸಂವಿಧಾನದ ವಿಧಿ 345 ಮತ್ತು 347 ರ ಅಡಿಯಲ್ಲಿ ಕೊಡವ ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಹಾಗೂ ವಿಧಿ 350 ರ ಅಡಿಯಲ್ಲಿ ಆಡಳಿತ ಮತ್ತು ಶಿಕ್ಷಣದಲ್ಲಿ ಜಾರಿಗೆ ತರಬೇಕು. ಭೌಗೋಳಿಕ ಸ್ವಾಯತ್ತತೆ ಮತ್ತು ಬುಡಕಟ್ಟು ವರ್ಗೀಕರಣ: ಸಂವಿಧಾನದ ವಿಧಿ 244 ಮತ್ತು 371 ರ ಅಡಿಯಲ್ಲಿ ‘ಕೊಡವಲ್ಯಾಂಡ್’ ಭೌಗೋಳಿಕ ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕು. ಅತ್ಯಲ್ಪ ಸಂಖ್ಯೆಯಲ್ಲಿರುವ ಕೊಡವ ಜನಾಂಗಕ್ಕೆ ‘ಪರಿಶಿಷ್ಟ ಪಂಗಡ’…

Read More

ಮಡಿಕೇರಿ NEWS DESK ಫೆ.21 : ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌ .ಎನ್‌ .ಬಿಂದುಮಣಿ ಅವರು  ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಅಪರಾಧದ ವಿವಿಧ ಪ್ರಕರಣಗಳ ತನಿಖೆಯ ಹಂತಗಳನ್ನು ಪರಾಮರ್ಶಿಸಿದರು. ಜಿಲ್ಲೆಯ ಕಾನೂನು ಸುವ್ಯವಸ್ಥೆ, ಅಪರಾಧ ತಡೆ, ಪತ್ತೆ ಮತ್ತು ಬಂದೋಬಸ್ತುಗಳ ಬಗ್ಗೆ ಮಾಹಿತಿ ಪಡೆದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಇದಕ್ಕೂ ಮೊದಲು ಜಿಲ್ಲಾ ಕವಾಯತು ಮೈದಾನದಲ್ಲಿ ನಡೆದ ಜಿಲ್ಲಾ ಕವಾಯತುವಿನಲ್ಲಿ ಎಸ್‌ ಪಿ ಪಾಲ್ಗೊಂಡರು.

Read More

ಹುದಿಕೇರಿ NEWS DESK ಫೆ.21 : ಪೊನ್ನಂಪೇಟೆ ತಾಲ್ಲೂಕು ಹುದಿಕೇರಿಯಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಆಟೋ ತಂಗುದಾಣವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು ಇಂದು ಉದ್ಘಾಟಿಸಿದರು. ಆಟೋ ಚಾಲಕರೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು ಅಗತ್ಯ ಸಹಕಾರದ ಭರವಸೆ ನೀಡಿದರು. ಇದೇ ಸಂದರ್ಭ ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಿದೇರೀರ ನವೀನ್, ವಲಯ ಅಧ್ಯಕ್ಷರು ಚಂಗುಲಂಡ ಸೂರಜ್, ಡಿಸಿಸಿ ಸದಸ್ಯರು ಪೆಮ್ಮಂಡ ರಾಜ, ಹಿರಿಯರು ಚೆಕ್ಕೇರ ವಾಸು ಕುಟ್ಟಪ್ಪ, ಜಿಮ್ಮಿ ಅಣ್ಣಯ್ಯ, ಸುಧೀರ್, ಪಕ್ಷದ ಮುಖಂಡರು ಅಜ್ಜಿಕುಟ್ಟಿರ  ಗಿರೀಶ್, ಪಮ್ಮು, ನೊರೇರ ಮನೋಹರ್, ರಮೇಶ್, ಬಿಪಿನ್, ರೋನಿ, ಮದನ್ ಮಂದಣ್ಣ, ಕಿಸು, ಹುದಿಕೇರಿ ವಲಯ ಯುವ ಘಟಕದ ಅಧ್ಯಕ್ಷರು ರೀಕ್ಷಿತ್ ಕಾರ್ಯಪ್ಪ, ಮೌನ, ಮಂಜು ದೇವಯ್ಯ, ಬಾನಾಂಗಡ ಅರುಣ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಬೆಂಗಳೂರು NEWS DESK  ಫೆ.21 :  ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ BR ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ “ಅಭಯ ಹಸ್ತ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.   ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆಯನ್ನು ಕೂಡ ಇದೇ ಸಂದರ್ಭ ಮಾಡಿದರು.

Read More

ಮಡಿಕೇರಿ NEWS DESK  ಫೆ.21 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.6 ರಿಂದ ಏ.19 ರವರೆಗೆ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್-3 ಕ್ರಿಕೆಟ್ ಪಂದ್ಯಾವಳಿ ಗೋಣಿಕೊಪ್ಪದಲ್ಲಿ ನಡೆಯಲಿದೆ. ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿದ್ದು, 175 ಕ್ಕೂ ಅಧಿಕ ಆಟಗಾರರು ಪ್ರಶಸ್ತಿಗಾಗಿ ಸೆಣಸಾಡಲಿದ್ದಾರೆ. ಪ್ರೀಮಿಯರ್ ಲೀಗ್ ಸೀಸನ್-3 ಕ್ರಿಕೆಟ್ ಗಾಗಿ ಫೆ.21 ರಂದು ಮಾಯಮುಡಿಯ ಎಲ್ಲೋ ಬೇಂಬೋ ರೆಸಾರ್ಟ್ ನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಟೀಮ್ ಕೊಡವ ಟ್ರೈಬ್‌, ಕೂರ್ಗ್ ಬ್ಲಾಸ್ಟರ್ಸ್, ಟೀಮ್ ಲಿವರೇಜ್, ಕೂರ್ಗ್ ಯುನೈಟೆಡ್, ಪ್ರಗತಿ ಕ್ರಿಕೆಟ್ ಅಕಾಡೆಮಿ, ಎಂಟಿಬಿ ರಾಯಲ್ಸ್, ಕೊಡವ ರೈಸಿಂಗ್ ಸ್ಟರ‍್ಸ್, ಅಂಜಿಗೇರಿ ನಾಡ್, ಕೂರ್ಗ್ ಟೈಟಾನ್ಸ್ ಹಾಗೂ ಬ್ಲೇಜ಼್ ಬ್ರಿಗೇಡ್ ತಂಡಗಳು ಪಾಲ್ಗೊಳ್ಳಲಿವೆ. ಗೋಣಿಕೊಪ್ಪದ ಕಾವೇರಿ ಕಾಲೇಜು ಮೈದಾನದಲ್ಲಿ ಏ.6 ರಿಂದ 14 ದಿನಗಳ ಕಾಲ ಐಪಿಎಲ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದ್ದು, ಎಲ್ಲಾ ಕೊಡವ ಭಾಷಿಕ ಜನಾಂಗದವರಿಗೆ ಅವಕಾಶ ಕಲ್ಪಿಸಲಾಗಿದೆ. ಕೊಡಗು ಮಾತ್ರವಲ್ಲದೆ ಜಿಲ್ಲೆಯ ಹೊರಗೆ ನೆಲೆಸಿರುವ…

Read More

ಮಡಿಕೇರಿ ಫೆ.20 NEWS DESK : ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಮೇ 9 ಮತ್ತು 10 ರಂದು ನಡೆಯಲಿರುವ ಮೂರನೇ ರಾಷ್ಟ್ರೀಯ ಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆಯ ಕರಪತ್ರ (Broucher) ಬಿಡುಗಡೆಗೊಂಡಿತು. ಕಾಲೇಜಿನ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ವಕೀಲರಾದ ಕೆ.ವಿ.ಮನೋಹರ್ ಪುತ್ತೂರು ಕರಪತ್ರವನ್ನು ಬಿಡುಗಡೆಗೊಳಿಸಿ ಕಾನೂನು ಮಹಾವಿದ್ಯಾಲಯದಲ್ಲಿ ಅಣುಕು ನ್ಯಾಯಾಲಯ ಸ್ಪರ್ಧೆಗಳ ಪ್ರಾಮುಖ್ಯತೆ ಮತ್ತು ವಿಶಿಷ್ಟತೆಯನ್ನು ವಿವರಿಸಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ನಿರ್ದೇಶಕ ಡಾ. ಬಿ.ಕೆ.ರವೀಂದ್ರ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಇವರು ಅಣುಕು ನ್ಯಾಯಾಲಯದ ಸಮಿತಿಯನ್ನು ಘೋಷಿಸಿದರು. ಉಡುಪಿ ಸ್ಟೇರಾ ಎಲ್ ಎಲ್ ಸಿ ಲೀಗಲ್ ಎಕ್ಸಿಕ್ಯೂಟಿವ್ ಮನೀಶ್ ಕೆ ಸಾಲಿಯಾನ್ ಅಣುಕು ನ್ಯಾಯಾಲಯದ ರೂಪುರೇಷೆಗಳನ್ನು ವಿವರಿಸಿದರು. ಕಾಲೇಜಿನ ಸಂಚಾಲಕರಾದ ಕೆ.ಎಂ.ವಿಜಯನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಸಹಾಯಕ ಕಾರ್ಯನಿರ್ವಣಾಧಿಕಾರಿ ವೆಂಕಟರಮಣ ರಾವ್, ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲರಾದ ಎ.ಪಿ.ಅಕ್ಷತಾ, ಸಹಾಯಕ ಪ್ರಾಧ್ಯಾಪಕರಾದ ಸುಭಾಷಿನಿ ಜೆ, ಸಂಗೀತಾ ಎಸ್.ಎಂ.,…

Read More

ಮಡಿಕೇರಿ ಫೆ.20 NEWS DESK : ನಾಪೋಕ್ಲು ಗ್ರಾಮದ ಶ್ರೀ ಚೆವೂಟು ಶಾಸ್ತಾವು ಈಶ್ವರ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಚೆವೂಟು ಬಾಳಿಯಾಡ ಐನ್ ಮನೆಯ ಪಟ್ಟಿಲ್ ಮುಡಿ ತೆರೆ ಉತ್ಸವದಲ್ಲಿ ಭಾಗವಹಿಸಿದರು.  ಇದೇ ಸಂದರ್ಭ ಬಾಳಿಯಾಡ ಕುಟುಂಬದ ಹಿರಿಯರು ತಮ್ಮ ಕುಟುಂಬದ ಪರವಾಗಿ ಶಾಸಕರನ್ನು ಸನ್ಮಾನಿಸಿ, ಶಾಸಕರು ನೀಡುತ್ತಿರುವ ಅನುದಾನಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಧನ್ಯವಾದಗಳು ಸಲ್ಲಿಸಿದರು. ನಾಪೋಕ್ಲು ವಲಯ ಅಧ್ಯಕ್ಷರಾದ ಕುಶಾಲಪ್ಪ, ಪಂಚಾಯಿತಿ ಸದಸ್ಯರಾದ ಅರುಣ್ ಬೇಬ, ಶಾಬಾ ತಿಮ್ಮಯ್ಯ, ಬಾಳಿಯಾಡ ಕರುಣ್ ಕಾಳಪ್ಪ, ಬಿ.ಕೆ ಸುಬ್ರಮಣಿ, ಹರೀಶ್, ದಿವ್ಯ, ಪ್ರತೀಶ್, ಅಪ್ಪ ಸ್ವಾಮಿ, ಪೂಣಚ್ಚ, ಕಡಿಯತ್ ಊರಿನವರು, ಅಧ್ಯಕ್ಷರಾದ ನಟೋಳಂಡ ಚರ್ಮಣ್ಣ, ದೇವತಕ್ಕ, ಬಸಪ್ಪ, ತೊರೇರ ಮುದ್ದಾಯ್ಯ, ದೀಪು, ಸರ್ವ ಸದಸ್ಯರುಗಳು ಹಾಗೂ ಪ್ತಮುಖರು ಉಪಸ್ಥಿತರಿದ್ದರು.

Read More