ಸೋಮವಾರಪೇಟೆ ಅ.21 : ಸೋಮವಾರಪೇಟೆ ಶ್ರೀ ಬಸವೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾದೇವಿಗೆ ವಿಳ್ಯದೆಲೆ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ಲೇಖಕ: admin
ಸೋಮವಾರಪೇಟೆ ಅ.21 : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದ ಶ್ರೀ ಶಕ್ತಿ ಪಾರ್ವತಿ ಸನ್ನಿಧಿಯಲ್ಲಿ ಶರನ್ನವರಾತ್ರಿ ಉತ್ಸವ ಅಂಗವಾಗಿ ಶ್ರೀ ದೇವಿ ವಿಗ್ರಹಕ್ಕೆ ಮಯೂರ ವಾಹಿನಿ ಅಲಂಕಾರ ಮಾಡಿ ಪೂಜಿಸಲಾಯಿತು.
ಸುಂಟಿಕೊಪ್ಪ ಅ.21 : 7ನೇ ಹೊಸಕೋಟೆ ತೊಂಡೂರು ಗ್ರಾಮದಲ್ಲಿರುವ ವಿಕಾಸ್ ಜನಸೇವಾ ಟ್ರಸ್ಟ್‍ನ ಜೀವನದಾರಿ ಆಶ್ರಮಕ್ಕೆ ಶಾಸಕ ಮಂತರ್‍ಗೌಡ ಭೇಟಿ ನೀಡಿ ವೃದ್ಧರ ಯೋಗಕ್ಷೇಮ ವಿಚಾರಿಸಿದರು. ದಿವಂಗತ ರಮೇಶ್ ಹಾಗೂ ರೂಪ ರಮೇಶ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂತಾಪ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಶಾಸಕರು, ನಿಮ್ಮನ್ನೆಲ್ಲಾ ರಮೇಶ್ ಅವರು ಪೋಷಿಸಿದಂತೆ ಅವರ ಅಣ್ಣ ಮಂಜುನಾಥ್ ಅವರು ನೋಡಿಕೊಳ್ಳಲು ಮುಂದಾಗಿದ್ದಾರೆ. ಅವರ ಸೇವೆಗೆ ವೈಯಕ್ತಿಕವಾಗಿ ಮತ್ತು ಸರ್ಕಾರದ ಭಾಗದಿಂದಲೂ ಸಂಪೂರ್ಣ ಸಹಕಾರವನ್ನು ನೀಡಲಾಗುವುದೆಂದು ಭರವಸೆ ವ್ಯಕ್ತಪಡಿಸಿದರು. ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿಯವರೊಡನೆ ಮಾತನಾಡಿ, ಅನುದಾನ ವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ಒದಗಿಸಿಕೊಡಲು ಪ್ರಯತ್ನಿಸುವೆ ಎಂದು ತಿಳಿಸುವ ಮೂಲಕ ಆಶ್ರಮದ ನಿವಾಸಿಗಳಿಗೆ ಧೈರ್ಯ ತುಂಬಿದರು. ತಿಂಗಳಿಗೆ 2 ಬಾರಿಯಾದರೂ ಆಶ್ರಮದ ಕಾರ್ಯಚಟುವಟಿಕೆಗಳ ಬಗ್ಗೆ ಗಮನಕ್ಕೆ ತಂದಲ್ಲಿ ಆಶ್ರಮಕ್ಕೆ ಬೇಕಾದ ಅವಶ್ಯಕವಾದ ಅಗತ್ಯತೆಗಳನ್ನು ಪೂರೈಸಲು ಸಹಕಾರಿಯಾಗಲಿದೆ ಮಂಜುನಾಥ್ ರವರಿಗೆ ತಿಳಿಸಿದರು. ಇದೇ ಸಂದರ್ಭ ದಿ. ರಮೇಶ್ ತಂದೆ ಕರಿಯಪ್ಪ ಅವರಿಗೆ ಸಾಂತ್ವನ ಹೇಳಿ,…
ಕುಶಾಲನಗರ, ಅ.20 : ಸ್ವಚ್ಛ ಮನಸ್ಸಿನ ಮೂಲಕ ಸ್ವಚ್ಛ ಪ್ರಕೃತಿ, ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯ ಎಂದು ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಅಖಿಲ ಭಾರತ ಸನ್ಯಾಸಿ ಸಂಘ ಕಾವೇರಿ ನದಿ ಸ್ವಚ್ಛತಾ ಆಂದೋಲನ, ಕಾವೇರಿ ರಿವರ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸ್ವಚ್ಛ ಕಾವೇರಿಗಾಗಿ 13ನೇ ವರ್ಷದ ಕಾವೇರಿ ನದಿ ಜಾಗೃತಿ ರಥಯಾತ್ರೆಗೆ ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ ನೀಡಿ ಮಾತನಾಡಿದರು. ನಾಡಿನಲ್ಲಿ ಜಲಮೂಲ ಪ್ರಕೃತಿ ಮೂಲಗಳು ಹಲವು ರೀತಿಯಲ್ಲಿ ಕಲುಷಿತಗೊಳ್ಳುತ್ತಿದ್ದು ಈ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕಾಗಿದೆ. ಇಲ್ಲವಾದಲ್ಲಿ ಜೀವ ಸಂಕುಲಕ್ಕೆ ಅನಾಹುತ ಉಂಟಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿದರು. ಪ್ರತಿಯೊಬ್ಬರೂ ಮನೆಯ ಕಸ ವಿಲೇವಾರಿಯನ್ನು ಸಮರ್ಪಕವಾಗಿ ಸಹಜವಾಗಿ ಮಾಡಿದಲ್ಲಿ ಮಾತ್ರ ಸ್ವಚ್ಛತೆ ಕಾಣಲು ಸಾಧ್ಯ ಎಂದ ಶ್ರೀಗಳು ಜಾಗೃತಿಯ ಮತ್ತು ಅರಿವಿನ ಕೊರತೆ ನಡುವೆ ನದಿ ಸಂರಕ್ಷಣೆಗೆ ಹೆಣಗಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಹೇಳಿದರು. ಈ ನಡುವೆ ಜೀವನದಿ ಕಾವೇರಿಯ ಸಂರಕ್ಷಣೆಗೆ…
ಮಡಿಕೇರಿ ಅ.20 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ ಪಾದಯಾತ್ರೆಯ ನಾಲ್ಕನೇ ಹಂತ ಕುಂದದಿಂದ ಪಾದಯಾತ್ರೆ ಆರಂಭಗೊಂಡಿತು. ಬೊಟ್ಟಿಯತ್‍ನಾಡ್ (ಕುಂದ), ಕುತ್‍ನಾಡ್ (ಬಿ.ಶೆಟ್ಟಿಗೇರಿ) ಮತ್ತು ಬೆರಳಿನಾಡ್ (ಕಂಡಂಗಾಲ) ನ ಮೂರು ನಾಡುಗಳ ಮಂದ್ “ಕೈಮುಡಿಕೆ ಮಂದ್” ನಲ್ಲಿ ಕೊಡವ ಜನಜಾಗೃತಿ ಸಭೆ ನಡೆಯಿತು. ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸಭೆ ಆರಂಭಿಸಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವ ಲ್ಯಾಂಡ್ ಸೇರಿದಂತೆ 9 ಬೇಡಿಕೆಗಳ ಹಕ್ಕೊತ್ತಾಯಗಳನ್ನು ವಿವರಿಸಿದರು. ಕೊಡವರು ಕೊಡವ ನೆಲದ ಪ್ರಾಚೀನ ಬುಡಕಟ್ಟು ಜನರಾಗಿದ್ದು, ಕೊಡವ ಮಂದ್ ಗಳು, ಜಲದೇವತೆ ಕಾವೇರಿ, ಸೂರ್ಯ, ಚಂದ್ರ, ಭೂಮಿತಾಯಿಯಷ್ಟೇ ಪವಿತ್ರವೂ ಆಗಿದ್ದಾರೆ. ಪ್ರಾಚೀನ ಬುಡಕಟ್ಟು ಕೊಡವ ಜನಾಂಗವನ್ನು ಈ ದೇಶದ ಜನ ಹಾಗೂ ಸರ್ಕಾರ ಸಂವಿಧಾನದ 51 ಎ.ಎಫ್ ವಿಧಿ ಮತ್ತು ವಿಶ್ವ ರಾಷ್ಟ್ರ ಸಂಸ್ಥೆಯ ಸನದ್ ನ ಪ್ರಕಾರ ರಕ್ಷಿಸಿ ಪೋಷಿಸಿ ಕಾಪಾಡಬೇಕಾಗಿದೆ…
ಮಡಿಕೇರಿ ಅ.20 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ದುರ್ಗಾಷ್ಠಮಿಯ ಪ್ರಯುಕ್ತ ಅ.22 ರಂದು ಗಣಪತಿ ಹೋಮ, ಶ್ರೀ ದುರ್ಗಾ ಹವನ ಹಾಗೂ ವಿಶೇಷ ಅಲಂಕಾರ ಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಗಣಪತಿ ಹೋಮ, ಶ್ರೀ ದುರ್ಗಾ ಹವನ ಹಾಗೂ ವಿಶೇಷ ಅಲಂಕಾರ ಪೂಜೆ ನಡೆಯಲಿದ್ದು, 11 ಗಂಟೆಗೆ ದೇವಾಲಯದ ಪ್ರವೇಶ ದ್ವಾರದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಮಹಾಧ್ವಾರ ಭೂಮಿ ಪೂಜೆ ನೆರವೇರಲಿದೆ. ಸಂಜೆ 7 ಗಂಟೆಗೆ ದುರ್ಗಾ ಪೂಜೆಯೊಂದಿಗೆ ಅಲಂಕಾರ ಪೂಜೆ ಜರುಗಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.
ಮಡಿಕೇರಿ ಅ.20 : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಜರುಗಿದ 10 ನೇ ವಷ೯ದ ಮಕ್ಕಳ ದಸಾರ ಅತ್ಯಧಿಕ ಮಕ್ಕಳ ಪಾಲ್ಗೊಳ್ಳುವಿಕೆಗೆ ಕಾರಣವಾಯಿತು. ಮಕ್ಕಳ ಸಂತೆಯಲ್ಲಿ ಈ ಬಾರಿ 122 ಅಂಗಡಿಗಳು ಇದ್ದರೆ, ಮಕ್ಕಳ ಅಂಗಡಿಯಲ್ಲಿ 74 ಅಂಗಡಿಗಳಿದ್ದವು. ಮಕ್ಕಳ ಮಂಟಪದಲ್ಲಿ 18 ಸ್ಪಧಾ೯ ತಂಡಗಳು, ಛದ್ಮವೇಶ ಸ್ಪಧೆ೯ಯಲ್ಲಿ 66 ಸ್ಪಧಿ೯ಗಳು ಮತ್ತು ಕ್ಲೇಮಾಡೆಲಿಂಗ್ ಸ್ಪಧೆ೯ಗೆ 17 ಸ್ಪಧಿ೯ಗಳು ಪಾಲ್ಗೊಂಡಿದ್ದರು . ಮಕ್ಕಳ ದಸರಾದಲ್ಲಿ ಈ ವಷ೯ 620 ಕ್ಕೂ ಅಧಿಕ ಮಕ್ಕಳು ವಿವಿಧ ಸ್ಪಧೆ೯ಗಳಲ್ಲಿ ಪಾಲ್ಗೊಂಡು ದಾಖಲೆಯ ಸಂಖ್ಯೆಗೆ ಕಾರಣರಾದರು ಎಂದು ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ಮಾಹಿತಿ ನೀಡಿದ್ದಾರೆ. ವಿವಿಧ ಸ್ಪಧೆ೯ಗಳ ವಿಜೇತರು :: ಛದ್ಮವೇಶ ( ಎಲ್ ಕೆಜಿಯಿಂದ ಒಂದನೇ ತರಗತಿ) : ಮನ್ವಿತಾ ಬಿ.ಎನ್. (ಪ್ರಥಮ), ರಿಶಾ ಪೂಜಾರಿ (ದ್ವಿತೀಯ), ಆರುಶ್ ಜೆ.ಕೆ. (ತೖತೀಯ), ಶಾನ್ ಚಂಗಪ್ಪ ಮತ್ತು ಲಾಸ್ಯ ಮುತ್ತಮ್ಮ (ಸಮಧಾನಕರ ಬಹುಮಾನ)…
ಮಡಿಕೇರಿ ಅ.20 : ಐಜಿಪಿ ಸಂದೀಪ್ ಪಾಟೀಲ್ ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ಪೊಲೀಸ್ ಕವಾಯತು ಪರಿವೀಕ್ಷಣೆ ನಡೆಸಿ, ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರಗಳನ್ನು ನೀಡಿದರು. ಬಳಿಕ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಅಪರಾಧ ಪರಾಮರ್ಶನ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭ ದಕ್ಷಿಣ ವಲಯದ ಡಿಐಜಿಪಿ ಡಾ. ಎಂ.ಬಿ.ಬೋರಲಿಂಗಯ್ಯ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷ ಕೆ.ಎಸ್.ಸುಂದರ್ ರಾಜ್, ಕೆಎಸ್ಪಿಎಸ್ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಅ.20 : ಒಕ್ಕಲಿಗ ಸಮುದಾಯದ ವಿರುದ್ಧ ಪ್ರೊ. ಕೆ.ಎಸ್.ಭಗವಾನ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮತ್ತು ಅವರನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಪ್ರೊ. ಕೆ.ಎಸ್.ಭಗವಾನ್ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು. ಸಂಘದ ಕಾನೂನು ಸಲಹೆಗಾರ ಎಂ.ಎ.ನಿರಂಜನ್ ಮಾತನಾಡಿ, ಭಗವಾನ್ ಅವರು ತಮ್ಮ ಭಾಷಣದಲ್ಲಿ ಒಂದು ಸಮುದಾಯವನ್ನು ಅವಹೇಳನ ಮಾಡಿ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು. ಈ ಹಿಂದೆಯು ಇದೇ ರೀತಿ ಮಾಡಲಾಗಿದೆ, ಇದನ್ನು ಹೀಗೆ ಮುಂದುವರೆಯಲು ಬಿಟ್ಟರೆ ಸಂಘರ್ಷಕ್ಕೆ ದಾರಿ ಮಾಡಿದಂತಾಗುತ್ತದೆ. ಆದ್ದರಿಂದ ಪ್ರೊ. ಭಗವಾನ್ ರನ್ನು ಬಂಧಿಸಿ ಕರ್ನಾಟಕದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಶಾಂತಿಯುತವಾಗಿದ್ದ ಒಕ್ಕಲಿಗರ ಮನಸ್ಸನ್ನು ಕೆರಳಿಸಿದ್ದಾರೆ, ಒಬ್ಬ ವ್ಯಕ್ತಿ ಕೇವಲ ವಿದ್ಯಾವಂತರಾದರೆ ಸಾಲದು, ಪ್ರಜ್ಞಾವಂತರಾಗಿರಬೇಕು. ಆದರೆ, ಇವರಲ್ಲಿ ಅಂತಹ…
ಮಡಿಕೇರಿ ಅ.20 : ಪ್ರಸಕ್ತ(2023-24) ಸಾಲಿಗೆ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಾಕ್ರಮವು ನವೆಂಬರ್, 02 ರಿಂದ 2024 ರ ಜನವರಿ, 31 ರವರೆಗೆ ನಡೆಯಲಿದ್ದು, ಈ ಸಂಬಂಧ ಕೊಡಗು ಜಿಲ್ಲೆಯಿಂದ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು (ಸಾಮಾನ್ಯ ವರ್ಗ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್, 25 ರವರೆಗೆ ಅರ್ಜಿಯನ್ನು ಕಚೇರಿಯಲ್ಲಿ/ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ), ಮಡಿಕೇರಿ, ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರ, ಇಲಾಖಾ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅ.27 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ತಂದೆ/ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ), ಮಡಿಕೇರಿ ಇಲ್ಲಿಗೆ ಖುದ್ದು…






