ಲೇಖಕ: admin

ಮಡಿಕೇರಿ ಅ.18  : ಮಡಿಕೇರಿ ದಸರಾ ಪ್ರಯುಕ್ತ ಅ.22 ರಂದು ಆಯೋಜಿಸಲ್ಪಟ್ಟಿದ್ದ ಭಾರತದ ಹೆಸರಾಂತ ಗಾಯಕ ವಿಜಯಪ್ರಕಾಶ್ ಗಾಯನ ಕಾಯ೯ಕ್ರಮವನ್ನು ಅ.23 ರಂದು ಆಯುಧ ಪೂಜೆಗೆ ನಿಗಧಿ ಪಡಿಸಲಾಗಿದೆ. ವಿಜಯಪ್ರಕಾಶ್ ಅವರನ್ನು ಮೈಸೂರಿನಲ್ಲಿ ಭೇಟಿಯಾದ ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಮಡಿಕೇರಿ ದಸರಾ ಕಾಯ೯ಕ್ರಮಕ್ಕೆ ದಸರಾ ಸಮಿತಿ ಪರವಾಗಿ ಆಹ್ವಾನ ನೀಡಿದರು. ಶಾಸಕ ಡಾ.ಮಂಥರ್ ಗೌಡ ಅವರ ಸಹಕಾರದಲ್ಲಿ ನಡೆಯುವ ವಿಜಯಪ್ರಕಾಶ್ ಮತ್ತು ತಂಡದ ಸಂಗೀತ ರಸಮಂಜರಿ ಕಾಯ೯ಕ್ರಮವು ಅ.23 ರಂದು ಸೋಮವಾರ ರಾತ್ರಿ 8.30 ಗಂಟೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಲ್ಪಟ್ಟಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಮಾಹಿತಿ ನೀಡಿದ್ದಾರೆ. ಅ.22 ರಂದು ಸಂಜೆ 6 ಗಂಟೆಗೆ ಮಹಿಳಾ ದಸರಾ ಅಂಗವಾಗಿ ಜಿಲ್ಲೆಯ ಹಲವಾರು ಮಹಿಳಾ ತಂಡಗಳಿಂದ ವೈವಿಧ್ಯಮಯ ಕಾಯ೯ಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಮಡಿಕೇರಿ ಅ.18 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಐದು ಹಂತಗಳಲ್ಲಿ ನಡೆಸುತ್ತಿರುವ ಪಾದಯಾತ್ರೆಯ ನಾಲ್ಕನೇ ಹಂತ ಅ.20 ರಿಂದ ಆರಂಭಗೊಳ್ಳಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕುಂದದಿಂದ ಪಾದಯಾತ್ರೆ ಆರಂಭಗೊಳ್ಳಲಿದೆ. ಬೊಟ್ಟಿಯತ್‍ನಾಡ್ (ಕುಂದ), ಕುತ್‍ನಾಡ್ (ಬಿ.ಶೆಟ್ಟಿಗೇರಿ) ಮತ್ತು ಬೆರಳಿನಾಡ್ (ಕಂಡಂಗಾಲ) ನ ಮೂರು ನಾಡುಗಳ ಮಂದ್ “ಕೈಮುಡಿಕೆ ಮಂದ್” ನಲ್ಲಿ ಬೆಳಗ್ಗೆ 10.30 ಗಂಟೆಗೆ ಕೊಡವ ಜನಜಾಗೃತಿ ಸಭೆ ನಡೆಯಲಿದೆ. ಅ.21 ರಂದು ಬೆಳಗ್ಗೆ 10 ಗಂಟೆಗೆ ಬಿಟ್ಟಂಗಾಲ ಜಂಕ್ಷನ್ ಬಳಿಯಿಂದ ಪಾದಯಾತ್ರೆ ಆರಂಭಗೊಳಲಿದೆ. ನಂತರ ಪಟ್ಟಿಬಾಣೆ ಮಂದ್ ಪೆರವನಾಡ್ (ಬುಟ್ಟಂಗಾಲ) ನಲ್ಲಿ ಮತ್ತು ಮಧ್ಯಾಹ್ನ 2.30 ಗಂಟೆಗೆ ಬೋಟೋಳಿನಾಡ್ (ವಿರಾಜಪೇಟೆ ತಾಲ್ಲೂಕಿನ ಆರ್ಜಿ ಬೊಟೋಳಿ,)ನಲ್ಲಿ ಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ. ಕೊಡವ, ಕೊಡವತಿಯರು ಕೋವಿಯೊಂದಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ಪಾಲ್ಗೊಳ್ಳಲಿದ್ದು, 9 ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು…

Read More

ಬೆಂಗಳೂರು: ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ 2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು. ‘ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ. ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ.…

Read More

ಸೋಮವಾರಪೇಟೆ ಅ.18 :  ಗೋ ಸಂರಕ್ಷಣಾ ರಥಯಾತ್ರೆ ಇಂದು ಸೋಮವಾರಪೇಟೆ ಪಟ್ಟಣಕ್ಕೆ ಆಗಮಿಸಿತು. ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಹಾಗೂ ಗೋ ಸೇವಾ ಗತಿವಿಧಿ ಕರ್ನಾಟಕ ನೇತೃತ್ವದಲ್ಲಿ ನ.14 ರಿಂದ 24 ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುದು ಗ್ರಾಮದಲ್ಲಿ ನಡೆಯಲಿರುವ ಅಷ್ಟೋತ್ತರ ಶ್ರೀಮದ್ ಭಾಗವತ ಸಪ್ತಾಹ ಮತ್ತು 1108 ನಾರಾಯಣ ಕವಚದ ಮಹಾಯಜ್ಞಾದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸಲಿರುವ  ಗೋ ಸಂರಕ್ಷಣಾ ರಥ ಇಂದು ಸೋಮವಾರಪೇಟೆಗೆ ಪ್ರವೇಶಿಸಿತು. ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ದೊಡ್ಡಬಳ್ಳಾಪುರ ಮಠದ ಶ್ರೀ ನಿಶ್ಚಲ ದೇಶಿಕೇಂದ್ರ ಸ್ವಾಮೀಜಿ ಗೋವಿಗೆ ಪೂಜೆ ಸಲ್ಲಿ ಸುವುದರೊಂದಿಗೆ, ಅಕ್ಕಿ ಬೆಲ್ಲ ತಿನ್ನಿಸಿ ಆಶೀರ್ವದಿಸಿದರು. ಈ ಸಂದರ್ಭ ವೀರಶೈವ ಸಮಾಜದ ಪ್ರಮುಖರಾದ ಶಿವಕುಮಾರ್, ಜಯಣ್ಣ, ನಾಗರಾಜ್, ರಾಜಣ್ಣ, ಯೋಗೇಶ್, ಕಲಾಗಿರೀಶ್, ಮಂಜುಳಾ ಬಸವರಾಜ್, ಉಮಾರುದ್ರ ಪ್ರಸಾದ್ ಹಾಗೂ ಮತ್ತಿತರರು ಹಾಜರಿದ್ದರು.

Read More

ಕುಶಾಲನಗರ ಅ.18 : ಬಾರವಿ ಕನ್ನಡ ಸಂಘದ ವತಿಯಿಂದ  ಕೊಡಗು-ಮೈಸೂರು ಗಡಿಯಲ್ಲಿನ ಕಾವೇರಿ ಪ್ರತಿಮೆ ವೃತ್ತದಲ್ಲಿ 11ನೇ ವರ್ಷದ ಕಾವೇರಿ ಸಂಕ್ರಮಣ ಆಚರಣೆ  ಮಾಡಲಾಯಿತು. ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಕಾವೇರಿ ತೀರ್ಥ ವಿತರಣೆ ಮತ್ತು ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ನೂತನವಾಗಿ ನಿರ್ಮಿಸಿದ ಅನ್ನ ಸಂತರ್ಪಣ  ಭವನವನ್ನು  ಎಸ್.ಎಲ್.ಎನ್ ಕಂಪನಿ ಮಾಲೀಕ ಸಾತಪ್ಪನ್  ಉದ್ಘಾಟಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪಾಲ್ಗೊಂಡು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಬಾರವಿ ಕನ್ನಡ ಸಂಘದ ವತಿಯಿಂದ ಶಾಸಕರನ್ನು  ಸನ್ಮಾನಿಸಿ ಗೌರವಿಸಲಾಯಿತು.  ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು  ಕಾವೇರಿ ಪ್ರತಿಮೆ ಹಾಗೂ ಅನ್ನ ಸಂತರ್ಪಣೆ ಕಟ್ಟಡಕ್ಕೆ ತಾನು ವೈಯಕ್ತಿಕವಾಗಿಯೂ ಸರ್ಕಾರದಿಂದ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು  ನೀಡುವುದಾಗಿ ಭರವಸೆ ನೀಡಿದರು. ಬಾರವಿ ಕನ್ನಡ ಸಂಘದ ಅಧ್ಯಕ್ಷ ಬಬೀ0ದ್ರ ಪ್ರಸಾದ್, ವಿಜೇಂದ್ರ ಪ್ರಸಾದ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ವಿ.ಪಿ ಶಶಿಧರ್, ಕುಶಾಲನಗರ ಪುರಸಭೆ ಸದಸ್ಯ  ಪ್ರಮೋದ್ ಮುತ್ತಪ್ಪ,…

Read More

ಮಡಿಕೇರಿ ಅ.18 : ಸಾಹಿತ್ಯ ರಚನೆಯ ಮೂಲಕ ಪ್ರಾದೇಶಿಕ ಭಾಷಾ ಸಂಸ್ಕೃತಿಯ ಬೆಳವಣಿಗೆ ಸಾಧ್ಯವಿದೆ. ಆದ್ದರಿಂದ ಕವಿಗೋಷ್ಠಿ ಮತ್ತು ಸಾಹಿತ್ಯ ಕಾರ್ಯಕ್ರಮಗಳ ಮೂಲಕ ಪ್ರಾದೇಶಿಕ ಭಾಷೆಗಳಲ್ಲೂ ಕವನ, ಸಾಹಿತ್ಯ ಕೃಷಿ ವಿಫುಲವಾಗಿ ನಡೆಯಬೇಕಾಗಿದೆ ಎಂದು “ಕಾಂತಾರ” ಚಲನಚಿತ್ರದ ಗೀತ ರಚನಾಕಾರರು ಹಾಗೂ ಸೈಮಾ ಪ್ರಶಸ್ತಿ ವಿಜೇತ ಪ್ರಮೋದ್ ಮರವಂತೆ ಕರೆ ನೀಡಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿಯ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ‘ಕಲಾ ಸಂಭ್ರಮ’ ವೇದಿಕೆಯಲ್ಲಿ ನಡೆದ ‘ಬಹುಭಾಷಾ ಕವಿಗೋಷ್ಠಿ’ಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್‍ಗಳಲ್ಲಿ ಮಕ್ಕಳು ಮುಳುಗಿ ಹೋಗಿದ್ದಾರೆ. ಇಂತಹ ಪರಿಸ್ಥಿತಿಗಳ ನಡುವೆಯೂ ಬರಹಗಾರರು ಹಾಗೂ ಅದನ್ನು ಓದುವವರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಆದರೆ, ಅವರನ್ನು ಒಗ್ಗೂಡಿಸುವ ಕವಿಗೋಷ್ಠಿಯಂತಹ ಕಾರ್ಯಕ್ರಮಗಳು ಕಡಿಮೆಯಾಗಿದೆ. ಹೆಚ್ಚು ಹೆಚ್ಚಾಗಿ ಇಂತಹ ಸಾಹಿತ್ಯ ಪರವಾದ ಕಾರ್ಯಕ್ರಮಗಳು ನಡೆಸುವ ಮೂಲಕ ಬರಹಗಾರರಿಗೆ ಪ್ರೇರಣೆ ನೀಡಬೇಕು ಎಂದರು. ತಾನು ಕುಂದಾಪುರ ಮೂಲದವನಾಗಿದ್ದು, ಅಲ್ಲಿನ ಕುಂದಾಪುರ ಕನ್ನಡ ಭಾಷೆಯಲ್ಲಿ…

Read More

ನಾಪೋಕ್ಲು ಅ.18 : ತೊಟ್ಟಿಲು ತೂಗುವ ಕೈ ದೇಶವನ್ನು ಆಳುವುದು ಎನ್ನುವ ನಾಣ್ನುಡಿಗೆ ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಗೆ ಸ್ಥಾನಮಾನ ದೊರೆತ್ತಿರುವುದು ಸಾಕ್ಷಿಯಾಗಿದೆ ಎಂದು ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಹೇಳಿದರು. ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮುರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯುಕ್ತ ಆಶ್ರಯದಲ್ಲಿ ಮಂಡೇಪಂಡ ಅಕ್ಕಮ್ಮ ಗಣಪತಿ ದತ್ತಿನಿಧಿ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ “ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ನಾಪೋಕ್ಲು ಕಸಾಪ ಹೋಬಳಿ ಘಟಕದ ಅಧ್ಯಕ್ಷ ನೆರವಂಡ ಉಮೇಶ್ ಮಾತನಾಡಿ, ಮಹಿಳೆ ತ್ಯಾಗಮಯಿ. ತನ್ನ ಕುಟುಂಬ ನಿರ್ವಹಣೆಯೊಂದಿಗೆ ಸಾಮಾಜಿಕ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವುದು ಪ್ರಶಾಂಸನಾರ್ಹವಿಚಾರ ಎಂದರು. ವಿದ್ಯಾರ್ಥಿಗಳನ್ನು ಅವರ ಆಸಕ್ತಿಗನುಗುಣವಾಗಿ ಅವರ ಗುರಿ ತಲುಪಿಸಿ ಜೀವನವನ್ನು ರೂಪಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದರು. ಕರ್ನಾಟಕ…

Read More

ನಾಪೋಕ್ಲು ಅ.18 : ಮೂರ್ನಾಡು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ವಿಶೇಷ ವಾರ್ಷಿಕ ಶಿಬಿರದ ಅಂಗವಾಗಿ ನಾಪೋಕ್ಲುವಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ನಗರದ ಕೆಪಿಎಸ್ ಶಾಲೆಯಲ್ಲಿ ವಿಶೇಷ ವಾರ್ಷಿಕ ಶಿಬಿರದಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳು ನಾಪೋಕ್ಲು-ಮೂರ್ನಾಡು ರಸ್ತೆಯ ಎರಡು ಬದಿಯಲ್ಲಿ ಪ್ಲಾಸ್ಟಿಕ್, ಕಸ ಕಡ್ಡಿಗಳನ್ನು ಹೆಕ್ಕಿ ಶುಚಿಗೊಳಿಸಿದರು. ಈ ಸಂದರ್ಭ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ದಮಯಂತಿ, ಸಿಬ್ಬಂದಿ ಮಹೇಶ್ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ

Read More

ಮಡಿಕೇರಿ ಅ.18 :  ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಶರನ್ನವರಾತ್ರಿಯ 4ನೇ ದಿನ ಬಾಗಿನ ದೀಪದ ಅಲಂಕಾರ ಮಾಡಿ  ಪೂಜಿಸಲಾಯಿತು. ಅ.19 ರಂದು ಕಟೀಲು ದುರ್ಗಾ ಅಲಂಕಾರ ನೆರವೇರಲಿದೆ.

Read More

ಮಡಿಕೇರಿ ಅ.18 :  ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ  2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನ ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ವನಿತ್ ಕುಮಾರ್  ಉದ್ಘಾಟಿಸಿ, ಮಾತನಾಡಿ ಫೀಲ್ಡ್ ಮಾರ್ಷಲ್‌ ಕೆ.ಎಂ ಕಾರ್ಯಪ್ಪ ಕಾಲೇಜು ಕೊಡಗಿಗೆ ಒಂದು ಹೆಮ್ಮೆ.  ಎಲ್ಲಾ ಕಾಲೇಜುಗಳಿಗೂ ಇದು  ದೊಡ್ಡಣ್ಣನಂತಿದೆ ಎಂದು ಬಣ್ಣಿಸಿದರು. ಸಣ್ಣದಾಗಿ ಆರಂಭವಾದ ರಾಷ್ಟ್ರೀಯ ಸೇವಾಯೋಜನೆ ಇದೀಗ ಹೆಮ್ಮರವಾಗಿ ಬೆಳೆದಿದ್ದು, ಉತ್ತಮ ಮನೋಭಾವನೆಯ ಮೂಲಕ ದೇಶದ ಒಳಗೆ ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಿದೆ.  ಇದು ಸೇವಾ ಮನೋಭಾವ, ನಾಯಕತ್ವ ಗುಣ, ದೇಶ ಪ್ರೇಮ, ತಾಳ್ಮೆಯನ್ನ ಮೈಗೂಡಿಸಿ ಕೊಡುತ್ತದೆ ಎಂದರು. ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ಅನೇಕ ಸ್ವಯಂ ಸೇವಕರು ತಮ್ಮ ಜೀವದ ಹಂಗು ತೊರೆದು ರಕ್ಷಣೆಯಲ್ಲಿ‌‌  ಮುಂದಾಗಿದ್ದರು. ಅದರಂತೆ ವಿದ್ಯಾರ್ಥಿಗಳು ಕೂಡ ತುರ್ತು ಸಂದರ್ಭದಲ್ಲಿ ಸ್ವಯಂ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ರಾಘವ ಮಾತನಾಡಿ, ಕಾಲೇಜಿನ ಪ್ರಮುಖ ಆಧಾರ ಸ್ತಂಭ  ಎನ್‍ಎಸ್‍ಎಸ್ ಹಾಗೂ…

Read More