ಲೇಖಕ: admin

ಮಡಿಕೇರಿ ಅ.17 : ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಬಂಧಿಯಾಗಿರುವವರು ತಮ್ಮ ತಮ್ಮ ತಪ್ಪುಗಳನ್ನು ಅರಿತುಕೊಂಡು ಜೀವನದಲ್ಲಿ ಪರಿವರ್ತನೆಯಾಗುವ ಮೂಲಕ ಹೊಸ ವ್ಯಕ್ತಿಗಳಾಗಿ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಜಿಲ್ಲಾ ಕಾರಾಗೃಹದ ಅಧೀಕ್ಷಕ ಸಂಜಯ್ ಜಿತ್ತಿ ಕರೆ ನೀಡಿದ್ದಾರೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್, ದಿ ಆರ್ಗನೈಜ಼ೇಷನ್ ಫಾರ್ ದ ಡೆವಲಪ್‍ಮೆಂಟ್ ಆಫ್ ಪೀಪಲ್(ಒಡಿಪಿ) ಮೈಸೂರು ಹಾಗೂ ಕಾರಾಗೃಹ ಮತ್ತು ಸುಧಾರಣಾ ಸೇವೆ, ಜಿಲ್ಲಾ ಕಾರಾಗೃಹ, ಮಡಿಕೇರಿ, ಇವರುಗಳ ಸಹಯೋಗದೊಂದಿಗೆ ಜೈಲು ಕೈದಿಗಳ ಜೀವನೋಪಾಯ ಮತ್ತು ಪುನರ್ವಸತಿ ಯೋಜನೆಯಡಿ ಮಡಿಕೇರಿಯ ಜಿಲ್ಲಾ ಕಾರಾಗೃಹದಲ್ಲಿ ಎಲೆಕ್ಟ್ರಿಷಿಯನ್ ಹಾಗೂ ಪ್ಲಂಬಿಂಗ್ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಿತು. ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ನಿಮಗೆ ತಪ್ಪಿನ ಅರಿವಾಗಬೇಕು, ಜೀವನದಲ್ಲಿ ಸುಧಾರಣೆಯಾಗಬೇಕು, ನಿಮ್ಮ ಕುಟುಂಬದವರು ನೀವು ಹೊಸ ವ್ಯಕ್ತಿಗಳಾಗಿ ಹೊರ ಬರುವುದುದನ್ನು ಕಾಯುತ್ತಿದ್ದಾರೆ ಎಂದರು. ಎಲೆಕ್ಟ್ರಿಷಿಯನ್ ಹಾಗೂ ಪ್ಲಂಬಿಂಗ್ ತರಬೇತಿ 1 ತಿಂಗಳು ಇಲ್ಲಿ ನಡೆಯುತ್ತಿದ್ದು, ಆಸಕ್ತಿ ವಹಿಸಿ ಕಲಿಯಬೇಕು. ನಾನು ನಿಮ್ಮನ್ನು ಹೊರಗಡೆ ನೋಡಿದಾಗ, ಸ್ವ-ಉದ್ಯೋಗ ನಡೆಸುತ್ತಾ ತಮ್ಮ…

Read More

ಮಡಿಕೇರಿ ಅ.17 : ಕೊಡಗು ಜಿಲ್ಲೆಯಲ್ಲಿ ಹಲವು ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಯೋಜನೆಗಳಿಗೆ ಹಣವಿದ್ದರೂ ಪೂರ್ಣಗೊಳಿಸುತ್ತಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಅವರು ‘ಕೊಡವ ಹೆರಿಟೇಜ್’ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈಗಾಗಲೇ 3 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದ್ದು, ಉಳಿದ ಕಾಮಗಾರಿ ಆಗದಿರುವ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈಗ ಆಗಿರುವ ಕಾಮಗಾರಿಗಳು ಮತ್ತು ಆಗಬೇಕಿರುವ ಕಾಮಗಾರಿ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸಂಬಂಧಪಟ್ಟ ಎಂಜಿನಿಯರ್ ಗೆ ಸೂಚಿಸಿದರು. ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಅ.17 : ಪಶುಪಾಲನಾ ಇಲಾಖೆಯಿಂದ ಕಟ್ಟಡ ಮತ್ತು ಯಂತ್ರೋಪಕರಣ ಸೇರಿದಂತೆ ಸುಮಾರು 181 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರಾಣಿ ಪ್ರಯೋಗಾಲಯ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಅವರು ಮಂಗಳವಾರ ಭೂಮಿಪೂಜೆ ಮಾಡಿದರು. ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪಾಲಿಕ್ಲೀನಿಕ್ ಉಪ ನಿರ್ದೇಶಕ ಡಾ.ಸಿ.ಪಿ.ತಿಮ್ಮಯ್ಯ, ಸಹಾಯಕ ನಿರ್ದೇಶಕ ಪ್ರಸನ್ನ(ಮಡಿಕೇರಿ), ಬಾದಾಮಿ(ಸೋಮವಾರಪೇಟೆ), ಪಾಲಿಕ್ಲೀನಿಕ್ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಚಿದಾನಂದ ಮತ್ತಿತರರು ಉಪಸ್ಥಿತರಿದ್ದರು. ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಅವರು ಪ್ರಾಣಿಗಳಿಗೆ ಬರುವ ಸಾಂಕ್ರಾಮಿಕ ಕಾಯಿಲೆಗಳಿಗೆ ಬೇಕಾಗುವ ಲಸಿಕೆ ದಾಸ್ತಾನು ಮಾಡುವುದು ಹಾಗೂ ವಿಷಕಾರಿ ಸಸ್ಯಗಳಿಂದ ಬರುವ ಕಾಯಿಲೆಗಳ ತಪಾಸಣೆ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದರು.

Read More

ಮಡಿಕೇರಿ ಅ.17 : ಗುತ್ತಿಗೆದಾರರ ಮೇಲೆ ನಡೆದ ಐಟಿ ದಾಳಿ ಸಂದರ್ಭ ಪತ್ತೆಯಾದ ಕೋಟಿಗಟ್ಟಲೆ ಹಣ ಯಾರಿಗೆ ಸೇರಿದ್ದು ಎನ್ನುವುದನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಬಹಿರಂಗ ಪಡಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಹಣ ಸಂಗ್ರಹದ ಆರೋಪ ಮಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಮಾತನಾಡಿ ಐಟಿ ದಾಳಿಯಾದಾಗ ಸಿಕ್ಕ ಹಣದ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಜನರಿಗೆ ಸತ್ಯವನ್ನು ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಶೇ.40 ಕಮಿಷನ್ ಪಡೆಯುತ್ತಿದ್ದಾರೆ ಎಂದು ಹೋರಾಟ ಮಾಡುತ್ತಿದ್ದ ಕಾಂಗ್ರೆಸ್, ಈಗ ಎಷ್ಟು ಹಣ ವಸೂಲಿಯಲ್ಲಿ ತೊಡಗಿದೆ ಎಂದು ಪ್ರಶ್ನಿಸಿದರು. ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದೆ, ಆದರೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕೊಡಗಿನ ರಸ್ತೆಗಳ ಅಭಿವೃದ್ಧಿಯ ಬಗ್ಗೆ ಮೊದಲು…

Read More

ಮಡಿಕೇರಿ ಅ.17 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ ವತಿಯಿಂದ ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಆಯುಷ್ಮಾನ್ ಭವ ಕಾರ್ಯಕ್ರಮದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಸಾಮಾನ್ಯ ವೈದಶಾಸ್ತ್ರ, ಶಸ್ತ್ರಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವೈದ್ಯಕೀಯ, ದಂತ, ಮಾನಸಿಕ ರೋಗ, ಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವೈದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು. ಶಿಬಿರದಲ್ಲಿ ಸುಮಾರು 300 ಕ್ಕಿಂತ ಹೆಚ್ಚು ಹೊರ ರೋಗಿಗಳು ವ್ಯೆದ್ಯರ ಭೇಟಿ, 26 ಯುಡಿಐಡಿ ಕಾರ್ಡ್‍ಗಳು, 150 ಕ್ಕಿಂತ ಹೆಚ್ಚಿನ ಜನರು ಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು…

Read More

ಮಡಿಕೇರಿ ಅ.17 : ಡಿವೈನ್ ಪಾರ್ಕ್ ಸಂಸ್ಥೆಯ ಅಂಗ ಸಂಸ್ಥೆಯಾದ ಮೂರ್ನಾಡು ವಿವೇಕ ಜಾಗ್ರತ ಬಳಗದ ವತಿಯಿಂದ ಅತ್ಯಪರೂಪದ ಆತ್ಮೋನ್ನತಿ ಶಿಬಿರ ನಡೆಯಿತು. ಮರಗೋಡಿನ ಗೌಡ ಸಮಾಜದಲ್ಲಿ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದ ಡಿವೈನ್ ಪಾರ್ಕ್‍ನ ಅಧಿಕಾರಿಗಳಾದ ಪ್ರೇಮಾ ಪ್ರಭಾಕರ್ ಹಾಗೂ ರಾಜೇಶ್ ನಾಯರ್ ಆತ್ಮೋನ್ನತಿ ಕುರಿತು ವಿವರಿಸಿದರು. ಪ್ರತಿಯೊಬ್ಬ ವ್ಯಕ್ತಿ ವ್ಯಕ್ತಿತ್ವ ನಿರ್ಮಾಣದೆಡೆಗೆ ಸಾಗುವ ಪರಿ ಮತ್ತು ಮನುಷ್ಯ ಜನ್ಮದ ಪಾವಿತ್ರ್ಯತೆ ಬಗ್ಗೆ ಅರಿತುಕೊಳ್ಳಬೇಕು. ಭಗವಂತನಿಗೆ ಮೊದಲ ಆದ್ಯತೆ ನೀಡಿ ತನ್ನ ಪಾಲಿಗೆ ಒದಗಿದ ಕರ್ತವ್ಯಗಳನ್ನು ಅತ್ಯಂತ ಪ್ರೀತಿಯಿಂದ ನಿರ್ವಹಿಸುವ ಕಲೆಯನ್ನು ಕರಗತ ಮಾಡಿಕೊಂಡರೆ ಜೀವನ ಜೇನಾಗುತ್ತದೆ. ಸಂತೃಪ್ತಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮೂರ್ನಾಡು ವಿವೇಕ ಜಾಗ್ರತ ಬಳಗದ ಅಧ್ಯಕ್ಷೆ ದಿವ್ಯ ತೇಜ ಕುಮಾರ್, ಉಪಾಧ್ಯಕ್ಷ ಯಶವಂತ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಶೃತಿ ಸ್ವಾಗತಿಸಿ, ಬಿ.ಜಿ.ಸೌಮ್ಯ ವಂದಿಸಿದರು. ಸುಮಾರು 200ಕ್ಕೂ ಹೆಚ್ಚು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಅ.17: ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕವು ಅದ್ಧೂರಿಯ ಜಾನಪದ ದಸರಾ ಮೆರವಣಿಗೆ ಮತ್ತು ಕಾರ್ಯಕ್ರಮವನ್ನು ರೂಪಿಸಿದ್ದು, ಮಡಿಕೇರಿ ನಗರ ದಸರಾ ಸಮಿತಿಯ ಸಹಕಾರದೊಂದಿಗೆ ಅ.19 ರಂದು ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ತಿಳಿಸಿದ್ದಾರೆ. ಅಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ರಸ್ತೆಯ ವಿಶ್ರಾಂತಿ ಗೃಹ ಆವರಣದಿಂದ ವರ್ಣರಂಜಿತ ಮೆರವಣಿಗೆ ಆರಂಭಗೊಳ್ಳಲಿದೆ. ರಾಮನಗರದ ಪ್ರತಿಷ್ಠಿತ ಡೊಳ್ಳುಕುಣಿತ, ಪೂಜಾ ಕುಣಿತ, ವೀರಗಾಸೆ, ತಮಟೆ, ಕೊಡಗಿನ ಮುತ್ತಪ್ಪ ಚಂಡೆ ವಾದ್ಯ ಇತ್ಯಾದಿ ಕಲಾ ತಂಡಗಳು ಭಾಗವಹಿಸಲಿವೆ. ಶಾಸಕ ಡಾ. ಮಂತರ್‍ಗೌಡ, ಎಂ.ಎಲ್.ಸಿ. ಸುಜಾ ಕುಶಾಲಪ್ಪ, ದಸರಾ ಸಮಿತಿ ಅಧ್ಯಕ್ಷೆ ಅನಿತಾಪೂವಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್‍ಆಚಾರ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಅರುಣ್ ಶೆಟ್ಟಿ, ಜಿಲ್ಲಾಧಿಕಾರಿ ವೆಂಕಟ್‍ರಾಜ ಹಾಗೂ ಇತರರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಜಾನಪದ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಈ ಸಂದರ್ಭ ಜಾನಪದ…

Read More

ನಾಪೋಕ್ಲು ಅ.17 : ಮೂರ್ನಾಡು ಪದವಿ ಕಾಲೇಜಿನ 2023- 24ನೇ ಸಾಲಿನ ಎನ್ ಎಸ್ ಎಸ್ ಘಟಕವನ್ನು ಉದ್ಘಾಟಿಸಲಾಯಿತು. ಮೂರ್ನಾಡು ವಿದ್ಯಾಸಂಸ್ಥೆಯ ಶಿಕ್ಷಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್.ಡಿ.ಪ್ರಶಾಂತ್ ಮಾತನಾಡಿ, ಎನ್‍ಎಸ್‍ಎಸ್ ಘಟಕ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣ ಬೆಳೆಸಲು ಸಹಕಾರಿಯಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಾಚಿಟ್ಟಿರ.ಜಿ ಮಾದಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡುವಂಡ ಸುಬ್ರಮಣಿ ಹಾಜರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ ಎನ್ ಎಸ್ ಎಸ್ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಉಪನ್ಯಾಸಕಿ ಹಾಗೂ ಎನ್ ಎಸ್ ಎಸ್ ಅಧಿಕಾರಿ ಕಲ್ಪನಾ ಪ್ರಸ್ತಾವಿಕ ನುಡಿಯನ್ನಾಡಿದರು. 2023-24ನೇ ಸಾಲಿನ ಮೊದಲ ಸೆಮಿಸ್ಟರ್ ನ ಕಾಲೇಜಿನ ನ್ಯೂಸ್ ಲೆಟರ್ ಅನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರು, ವಿವಿಧ ವಿಭಾಗದ ಮುಖ್ಯಸ್ಥರು, ಎನ್ಎಸ್ಎಸ್ ವಿದ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು. ವರದಿ : ದುಗ್ಗಳ…

Read More

ನಾಪೋಕ್ಲು ಅ.17 : ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಚೀಯಕಪೂವಂಡ ಡಿ.ನಾಚಪ್ಪ, ಮಾಳೆಯಂಡ ಎಂ.ಅಪ್ಪಚ, ಮಣವಟ್ಟಿರ ಬಿ ದೀಪಕ್ ಪೊನ್ನಪ್ಪ ,ಮಚ್ಚುರ ಎಂ.ರವೀಂದ್ರ, ಬದಂಜೆಟ್ಟಿರ ಎಂ.ತಿಮ್ಮಯ್ಯ, ಕರವಂಡ ಜಿ.ಅಪ್ಪಣ್ಣ ಆಯ್ಕೆಯಾದರು. ಮಹಿಳಾ ಮೀಸಲು ಕ್ಷೇತ್ರದಿಂದ ಚೀಯಕಪೂವಂಡ ರೀನಾ, ಅಪ್ಪು ಮಣಿಯಂಡ ಕಾವೇರಮ್ಮ ಆಯ್ಕೆಯಾದರು. ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಐರಿರ ಜಿ.ಟಿಂಸ ಹಾಗೂ ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಮಣವಟ್ಟಿರ ದಯಾ ಚಿಣ್ಣಪ್ಪ ಹಾಗೂ ಪರಿಶಿಷ್ಠ ಜಾತಿ ಕ್ಷೇತ್ರದಿಂದ ಪಾಲೆರ ವಿಜು ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರತ್ ಪೂಣಚ್ಚ ಕಾರ್ಯನಿರ್ವಹಿಸಿದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಅ.17 : ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 27ನೇ ವರ್ಷದ ಕಾವೇರಿ ರಥಯಾತ್ರೆ ಅ.17ರಿಂದ 18ರ ವರೆಗೆ ನಡೆಯಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿಣ್ಣಪ್ಪ ಹೇಳಿದರು. ನಾಪೋಕ್ಲುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕಾಶಿ ಎಂದು ಪ್ರಖ್ಯಾತಿ ಪಡೆದಿರುವ ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಪ್ರತಿಮೆಯ ಭವ್ಯವಾದ ಪುಷ್ಪಾಲಂಕೃತ ಮೆರವಣಿಗೆಯು ನಾಪೋಕ್ಲುವಿನ ರಾಮಮಂದಿರದಿಂದ ಹೊರಡಲಿದ್ದು, ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚೇರಂಬಾಣೆ –ಚೆಟ್ಟಿಮಾನಿ ಮಾರ್ಗವಾಗಿ ಭಾಗಮಂಡಲ-ತಲಕಾವೆರಿಗೆ ತೆರಳಲಿದೆ. ತೀರ್ಥೋದ್ಭವದ ಬಳಿಕ ವಿವಿಧ ಸ್ಥಳಗಳಲ್ಲಿ ತೀರ್ಥ ವಿತರಿಸಿ ಪಾಲೂರಿನ ಸತ್ಯ ಹರಿಶ್ಚಂದ್ರ ದೇವಾಲಯದ ಕಾವೇರಿ ನದಿಯಲ್ಲಿ ತಾಯಿ ಕಾವೇರಿ ಮಾತೆಯ ಕಳಶ ವಿಸರ್ಜನೆಯೊಂದಿಗೆ ಅಂತ್ಯಗೊಳ್ಳಲಿದೆ ಎಂದರು. ಅ.18 ರಂದು ಬೆಳಿಗ್ಗೆ 6 ಗಂಟೆಗೆ ಭಾಗಮಂಡಲದಿಂದ ರಥಯಾತ್ರೆ ಆರಂಭಗೊಳ್ಳಲಿದ್ದು, ಚೇರಂಗಾಲ, 7 ಗಂಟೆಗೆ ಅಯ್ಯಂಗೇರಿ, ಪುಲಿಕೋಟು, 9 ಗಂಟೆಗೆ ಪೇರೂರು ಬಲ್ಲಮಾವಟಿ,11 ಗಂಟೆಗೆ ಚೋನಕೆರೆ ಮೂಲಕ ಮಧ್ಯಾಹ್ನ 12.30 ಗಂಟೆಗೆ ನಾಪೋಕ್ಲು ತಲುಪಲಿದೆ…

Read More