ಮಡಿಕೇರಿ ಅ.16 : ಕಾವೇರಿ ತುಲಾ ಸಂಕ್ರಮಣ ಜಾತ್ರೆಯ ಪ್ರಯುಕ್ತ ಕನ್ನಡ ಸ್ನೇಹ ಸಿರಿ ಬಳಗದ ವತಿಯಿಂದ ತಲಕಾವೇರಿ ಕ್ಷೇತ್ರದಲ್ಲಿ ಸಂಕ್ರಮಣ ಕವಿಗೋಷ್ಠಿ ಹಾಗೂ ಭಕ್ತಿಗೀತೆ ಗಾಯನ ಕಾರ್ಯಕ್ರಮ ನ.5 ರಂದು ಪುಣ್ಯ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕವಿಗಳು ಹಾಗೂ ಗಾಯಕರು ಇದೇ ತಾ.25ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಸರು ನೋಮದಾಯಿಸಿಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಸಾಗರ್ – 9980988123, ಕುಡೆಕಲ್ ಸಂತೋಷ್-9972538584 ಸಂಪರ್ಕಿಸುವಂತೆ ಸ್ನೇಹ ಬಳಗದ ಪ್ರಕಟಣೆ ತಿಳಿಸಿದೆ.
ಲೇಖಕ: admin
ಮಡಿಕೇರಿ ಅ.16 : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ.17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷ ಎ.ಕಾಳನ ರವಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ಎಚ್.ಬಸವರಾಜು, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ,…
ಮಡಿಕೇರಿ ಅ.16 : ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿ ಬಳಿ ಗುರುತಿಸಲಾಗಿರುವ 7 ಎಕರೆ ಜಾಗದಲ್ಲಿ ‘ವಿಜ್ಞಾನ ಉಪ ಪ್ರಾದೇಶಿಕ ಕೇಂದ್ರ’ ನಿರ್ಮಾಣಕ್ಕೆ ಎಲ್ಲಾ ಸಿದ್ಧತೆಗಳು ನಡೆದಿದೆ. ಈಗಾಗಲೇ 3 ಕೋಟಿ ರೂ. ಬಿಡುಗಡೆಯಾಗಿದ್ದು, ಇನ್ನಷ್ಟು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭರವಸೆ ನೀಡಿದ್ದಾರೆ. ಸೋಮವಾರಪೇಟೆಯ ಕೊಡವ ಸಮಾಜದಲ್ಲಿ ಸೋಮವಾರ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನ.1 ರಂದು ವಿಜ್ಞಾನ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು. ಸರ್ಕಾರ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಹೆಚ್ಚಿನ ಅನುದಾನ ನಿಗದಿ ಮಾಡಿದೆ. ಆ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಸಚಿವರು ವಿವರಿಸಿದರು. ಆಡಳಿತವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಬೇಕು ಎಂಬ ಉದ್ದೇಶದಿಂದ ಸರ್ಕಾರ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಅವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು. ಸ್ಥಳೀಯ ಸಮಸ್ಯೆಗಳನ್ನು…
ಮಡಿಕೇರಿ ಅ.16 : ಎಂ ಬಾಡಗ-1 ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಕೈತೊಳೆಯುವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸಹಯೋಗದಲ್ಲಿ “ಸ್ವಚ್ಛ ಕೈಗಳು ಸುಸ್ಥಿರ ಅಭಿವೃದ್ಧಿಗೆ ಕೀಲಿ ಎಂಬ ಘೋಷ ವಾಕ್ಯದೊಂದಿಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಕುಶನ್ ರೈ, ಮಕ್ಕಳಿಗೆ ಮತ್ತು ಗ್ರಾಮಸ್ಥರಿಗೆ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಜಯಂತಿ ಸ್ವಚ್ಛತೆ ಮತ್ತು ಕೈ ತೊಳೆಯುವ ಆರು ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು. ಗ್ರಾ.ಪಂ ಸದಸ್ಯರಾದ ನಿಂಗಪ್ಪ, ಅಂಗನವಾಡಿ ಸಹಾಯಕಿ ಪ್ರೀತ, ಮಕ್ಕಳು ಮತ್ತು ಪೋಷಕರು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಜಯಂತಿ ಸ್ವಾಗತಿಸಿ, ವಂದಿಸಿದರು.
ಮಡಿಕೇರಿ ಅ.16 : ಸರ್ಕಾರಿ ದಾಖಲೆಗಳಲ್ಲಿ “ಕೊಡವ” ಪದ ಬಳಕೆ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸಿದ ಹೋರಾಟದ ಫಲವಾಗಿ ಡಾ.ದ್ವಾರಕಾನಾಥ್ ಆಯೋಗ ಹೊರಡಿಸಿದ ವರದಿಯ ಶಿಫಾರಸ್ಸಿಗಾಗಿ ಸಿಎನ್‍ಸಿ ಪರ ಕಾನೂನು ಹೋರಾಟ ನಡೆಸಿದ ರಾಜ್ಯ ಸಾರ್ವಜನಿಕ ಅಭಿಯೋಜಕ ಬಲ್ಲಚಂಡ ಬೊಳ್ಳಿಯಪ್ಪ ಅವರಿಗೆ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದ ನಿಯೋಗ ಧನ್ಯವಾದಗಳನ್ನು ಅರ್ಪಿಸಿತು. ಬೆಂಗಳೂರಿನಲ್ಲಿರುವ ಬೊಳ್ಳಿಯಪ್ಪ ಅವರ ಹೈಕೋರ್ಟ್ ನ ಕಚೇರಿಯಲ್ಲಿ ಭೇಟಿಯಾದ ನಿಯೋಗ ಹೈಕೋರ್ಟ್ ನ ರಾಜ್ಯ ಸಾರ್ವಜನಿಕ ಅಭಿಯೋಜಕರಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿತು. ಸಿಎನ್‍ಸಿಯ ಕಾನೂನಾತ್ಮಕ ಹೋರಾಟಗಳಿಗೆ ಬೆಂಬಲವಾಗಿ ನಿಂತ ಕಾರಣಕ್ಕೆ ಧನ್ಯವಾದಗಳನ್ನು ಅರ್ಪಿಸಿ ಮಾತನಾಡಿದ ಎನ್.ಯು.ನಾಚಪ್ಪ, ಸುಮಾರು 15 ವರ್ಷಗಳ ನಿರಂತರ ಹೋರಾಟದ ಫಲವಾಗಿ “ಕೊಡವ” ಪದ ಬಳಕೆಯ ಹಕ್ಕು ದೊರೆತ್ತಿದೆ. ವಕೀಲರಾಗಿ ಬೊಳ್ಳಿಯಪ್ಪ ಅವರು 8 ವರ್ಷಗಳ ಕಾಲ ಕಾನೂನು ಹೋರಾಟದ ಮೂಲಕ ನಮಗೆ ವಿಜಯ ತಂದು ಕೊಟ್ಟಿದ್ದಾರೆ ಮತ್ತು ಕಳೆದ 10 ವರ್ಷಗಳಿಂದ ಸಿಎನ್‍ಸಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದರು. ವಿರಾಜಪೇಟೆ ಶಾಸಕ…
ಮಡಿಕೇರಿ ಅ.16 : ಮಡಿಕೇರಿ ದಸರಾ ಉತ್ಸವದ ಅಂಗವಾಗಿ ಕ್ರೀಡಾ ಸಮಿತಿಯಿಂದ ನಗರದ ರಾಜದರ್ಶನ್ ಹೊಟೇಲ್ ಸಭಾಂಗಣದಲ್ಲಿ ಇಂದು ನೂರಾರು ಶಾಲಾ ಮಕ್ಕಳ ಪಾಲ್ಗೊಳ್ಳುವಿಕೆಯೊಂದಿಗೆ ಚೆಸ್ ಪಂದ್ಯಾವಳಿ ಅತ್ಯಂತ ಕುತೂಹಲಕಾರಿಯಾಗಿ ನಡೆಯಿತು. ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಅವರ ನೇತೃತ್ವದಲ್ಲಿ ನಡೆದ ಚೆಸ್ ಹಾಗೂ ಕೇರಂ ಪಂದ್ಯಾವಳಿಗೆ ಜಿಲ್ಲೆಯ ವಿವಿಧೆಡೆಗಳಿಂದ ನೂರಾರು ವಿದ್ಯಾರ್ಥಿಗಳು ಆಗಮಿಸಿದ್ದು ವಿಶೇಷವಾಗಿತ್ತು. ಅಚ್ಚುಕಟ್ಟಾದ ವ್ಯವಸ್ಥೆಗಳ ನಡುವೆ ವಿದ್ಯಾರ್ಥಿಗಳು ಚೆಸ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರೆ, ಮತ್ತೊಂದೆಡೆ ಕೇರಂ ಪಂದ್ಯಗಳಲ್ಲಿ ಕ್ರೀಡಾ ಸ್ಫೂರ್ತಿ ಮೆರೆದರು. ದಸರಾ ಕ್ರೀಡಾಕೂಟದ ಅಥ್ಕೆಟಿಕ್ಸ್ ಸ್ಪರ್ಧೆಗಳು ಇದೇ ಅ.18 ರಂದು ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿವೆ.
ಮಡಿಕೇರಿ ಅ.16 : ಜನಪ್ರಿಯ ಚಲನಚಿತ್ರ “ಕಾಂತಾರ”ದ ದೈವದ ಕಲಾಕೃತಿ ಮಡಿಕೇರಿ ದಸರಾ ಜನೋತ್ಸವದಲ್ಲಿ ಕಲಾಭಿಮಾನಿಗಳನ್ನು ಆಕರ್ಷಿಸುತ್ತಿದೆ. ಮೈಸೂರಿನ ಮರಳು ಶಿಲ್ಪಿ ಎಂ.ಎನ್.ಗೌರಿ ಅವರು ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯ ಮುಂಭಾಗದಲ್ಲಿ ಕಳೆದ ಮೂರು ದಿನಗಳ ಸತತ ಪರಿಶ್ರಮದ ಮೂಲಕ ದೈವದ ಮರಳಿನ ಕಲಾಕೃತಿಯನ್ನು ಸುಂದರವಾಗಿ ರೂಪಿಸಿದ್ದಾರೆ. ‘ಕಾಂತಾರ” ಚಲನಚಿತ್ರದಲ್ಲಿ ಬರುವ ದೈವ ಪ್ರಕೃತಿಯ ರಕ್ಷಣೆಯ ದ್ಯೋತಕವಾಗಿ ಕಂಡು ಬರುತ್ತದೆ. ಈ ಹಿನ್ನೆಲೆ ಕೊಡಗಿನ ಸುಂದರ ಪರಿಸರ ರಕ್ಷಣೆಯಾಗಲಿ ಎನ್ನುವ ಸಂದೇಶವನ್ನು ನೀಡುವ ಮೂಲ ಚಿಂತನೆಯಡಿ ಕಾಂತಾರದ ದೈವವನ್ನು ಮರಳು ಶಿಲ್ಪವಾಗಿಸಿದ್ದೇನೆ’ ಎಂದು ಗೌರಿ ಹೇಳಿದರು. ದೇಶ ವಿದೇಶಗಳಲ್ಲಿ ಮರಳು ಶಿಲ್ಪವನ್ನು ರಚಿಸುವ ಮೂಲಕ ಪ್ರಖ್ಯಾತರಾಗಿರುವ ಮೈಸೂರಿನ ನಂಜುಂಡಸ್ವಾಮಿ ಮತ್ತು ನಾಗಲಾಂಬಿಕೆ ಅವರ ಪುತ್ರಿ, ಫೈನ್ ಆಟ್ರ್ಸ್ ಪದವೀಧರೆ ಗೌರಿ ಅವರು, ಮಡಿಕೇರಿ ದಸರಾಕ್ಕೆ ರಚಿಸಿರುವ ಕಾಂತಾರ ದೈವದ ಕಲಾಕೃತಿ, ಒಟ್ಟಾರೆ ಇವರ 66 ನೇ ಕಲಾಕೃತಿಯಾಗಿದೆ. ಸುಮಾರು ಹನ್ನೆರಡು ವರ್ಷಗಳ ಹಿಂದೆ ಮಡಿಕೇರಿ ದಸರಾದಲ್ಲಿ ‘ಮಹಿಷಾಸುರ ಮರ್ಧಿನಿ’ ಕಲಾಕೃತಿಯನ್ನು,…
ಪುತ್ತೂರು ಅ.16 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್ ರಾಮ್ ಜಗದೀಶ್ ಭಂಡಾರಿ ಇವರು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಭಾರ ಎತ್ತುವ ಸ್ಪರ್ಧೆಯಲ್ಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮೈಸೂರಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್ ರಾಮ್ 73 ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ. ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ದಂಪತಿ ಪುತ್ರ. ಭುವನ್ ರಾಮ್ ಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್ ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ. ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಅವರು ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಡಿಕೇರಿ ಅ.16 : ಮಡಿಕೇರಿ ದಸರಾ ಜನೋತ್ಸವದಲ್ಲಿ ಡಿಜೆ ಬಳಸುವ ಸಂದರ್ಭ ಸುಪ್ರೀಂಕೋರ್ಟ್ ಸೂಚಿಸಿರುವ ನಿಯಮವನ್ನು ಪಾಲಿಸದಿದ್ದಲ್ಲಿ ಜಿಲ್ಲಾಡಳಿತದ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ವಕೀಲರು ಹಾಗೂ ಸಮಾಜಿಕ ಹೋರಾಟಗಾರರಾದ ಅಮೃತೇಶ್ ಎನ್.ಪಿ. ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ವಾಯ್ಸ್ ಆಫ್ ಪಬ್ಲಿಕ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಅವರು ಡಿಜೆ ಶಬ್ಧದಿಂದ ಪ್ರಾಣಕ್ಕೆ ಕುತ್ತು ಬರಲಿದೆ ಮತ್ತು ಲೇಸರ್ ಬೆಳಕಿನಿಂದ ಕಣ್ಣಿಗೆ ಹಾನಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ವರ್ಷಗಳಿಂದ ವಿವಿಧ ಸಂಘಟನೆಗಳು ದಸರಾದಲ್ಲಿ ಡಿಜೆ ಬಳಕೆ ವಿರುದ್ಧ ಆಕ್ಷೇಪ ಸಲ್ಲಿಸುತ್ತಾ ಬಂದಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಈ ಬಾರಿ ನಡೆಯುವ ಮಡಿಕೇರಿ ದಸರಾವನ್ನು ಚಿತ್ರೀಕರಿಸಿ ನ್ಯಾಯಾಲಯಕ್ಕೆ ನೀಡಲಾಗುವುದು. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪರಿಸರ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಶಮಂಟಪ ಸಮಿತಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು ಎಂದರು. ಡಿಜೆಯನ್ನು ಸಂಪೂರ್ಣ ನಿಷೇಧ ಮಾಡಿ ಎಂದು ನಾವು…
ಮಡಿಕೇರಿ ಅ.15 : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಹಿನ್ನೆಲೆ ಶ್ರೀ ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ಪವಿತ್ರ ಕ್ಷೇತ್ರದಲ್ಲಿ ಸಿದ್ಧತೆಗಳು ಭರದಿಂದ ಸಾಗಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾನುವಾರ ಭಾಗಮಂಡಲ ಭಗಂಡೇಶ್ವರ ದೇವಾಲಯ, ತ್ರಿವೇಣಿ ಸಂಗಮ ಹಾಗೆಯೇ ತಲಕಾವೇರಿ ಕೇತ್ರಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಭಾಗಮಂಡಲ ದೇವಾಲಯದಲ್ಲಿ ನಂದಾದೀಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ತಕ್ಕ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ಷಯ ಪಾತ್ರೆ ಇರಿಸಿದರು. ನಂತರ ಭಾಗಮಂಡಲದ ಭಗಂಡೇಶ್ವರ, ಮಹಾಗಣಪತಿ, ಸುಬ್ರಮಣ್ಯ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿ, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾಂಸ್ಕೃತಿಕ ಗೀತಾ ಗಾಯನ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ, ಭಕ್ತಾಧಿಗಳ ಅನುಕೂಲಕ್ಕಾಗಿ…






