ಮಡಿಕೇರಿ ಅ.13 : ಸ್ವಚ್ಛ ಕಾವೇರಿಗಾಗಿ ಅ.20 ರಿಂದ ನ.13ರ ವರೆಗೆ ಕಾವೇರಿ ಜಾಗೃತಿ ರಥಯಾತ್ರೆ ನಡೆಯಲಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಿಗೆ ನದಿ ಸಂರಕ್ಷಣೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಅಖಿಲ ಭಾರತ ಸನ್ಯಾಸಿ ಸಂಘ, ಕಾವೇರಿ ನದಿ ಸ್ವಚ್ಛತಾ ಆಂದೋಲನ, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ಅಣ್ಣೈ ಕಾವೇರಿ ರಿವರ್ ಪ್ರೊಟೆಕ್ಷನ್ ಅಶ್ರಯದಲ್ಲಿ ಅ.20ರಿಂದ ನ.13ರವರೆಗೆ 13ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ತಲಕಾವೇರಿಯಿಂದ ಪೊಂಪ್‌ಹಾರ್ ವರೆಗೆ ಯಾತ್ರೆ ಕೈಗೊಳ್ಳಲಾಗಿದ್ದು, ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಂದ ಸುಮಾರು 40ಕ್ಕೂ ಅಧಿಕ ಸಾಧುಸಂತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಅ.20 ರಂದು ಬೆಳಗ್ಗೆ 8.30 ಗಂಟೆಗೆ ತಲಕಾವೇರಿಯಲ್ಲಿ ಕಾವೇರಿ ಯಾತ್ರೆಗೆ ಚಾಲನೆ ದೊರೆಯಲಿದ್ದು, 10.30ಕ್ಕೆ ಭಾಗಮಂಡಲ ಸಂಗಮದಲ್ಲಿ ಆರತಿ, ಸಂಜೆ 4…
ಲೇಖಕ: admin
ಮಡಿಕೇರಿ ಅ.13 : ಒಡನಾಟ, ಸಾಮರಸ್ಯದೊಂದಿಗೆ ಜೀವನದಲ್ಲಿ ಸಾಮಾಜಿಕ ಸೇವೆಯ ಮೂಲಕ ಮನತೃಪ್ತಿಯೊಂದಿಗೆ ಸಂಭ್ರಮಿಸುವುದನ್ನೂ ರೋಟರಿ ಸಂಸ್ಥೆಗಳು ಕಲಿಸುತ್ತವೆ ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಎಚ್.ಆರ್.ಕೇಶವ್ ಹೇಳಿದ್ದಾರೆ. ಮಡಿಕೇರಿ ರೋಟರಿ ವುಡ್ಸ್ ಗೆ ಅಧಿಕೃತ ಭೇಟಿ ನೀಡಿದ ಸಂದಭ೯ ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಮಾತನಾಡಿದ ರೋಟರಿ ಜಿಲ್ಲೆ 3181 ಗವನ೯ರ್ ಎಚ್.ಆರ್.ಕೇಶವ್, ಹೊಸ ರೋಟರಿ ಸಂಸ್ಧೆಗಳು ಸಾಕಷ್ಟು ಚೈತನ್ಯದಾಯಿತ್ವದೊಂದಿಗೆ ಬೇರೆ ಸಂಸ್ಥೆಗಳಿಗಿಂತ ಉತ್ತಮವಾಗಿ ಕಾಯ೯ನಿವ೯ಹಿಸಲು ಸಾಧ್ಯ. 2 ನೇ ವಷ೯ದಲ್ಲಿ ಸಾಗುತ್ತಿರುವ ರೋಟರಿ ವುಡ್ಸ್ ಇದನ್ನೇ ಸಾಬೀತುಪಡಿಸಿದೆ ಎಂದರು. ರೋಟರಿ ವಲಯ ಸಹಾಯಕ ಗವನ೯ರ್ ದೇವಣಿರ ತಿಲಕ್, ಅಂಗನವಾಡಿಗಳ ಕಾಯಕಲ್ಪಕ್ಕೆ ರೋಟರಿ ಜಿಲ್ಲೆ 3181 ವಿಶೇಷ ಯೋಜನೆಗಳನ್ನು ರೂಪಿಸಿದೆ ಎಂದರು. ಅಧ್ಯಕ್ಷರು, ಕಾಯ೯ದಶಿ೯ ಜತೆ ಎಲ್ಲಾ ರೋಟರಿ ಸದಸ್ಯರು ಕೈಜೋಡಿಸಿದರೆ ಸಾಮಾಜಿಕ ಸೇವಾ ಕಾಯ೯ಗಳು ಸುಗಮವಾಗಿ ಸಾಗುತ್ತವೆ ಎಂದೂ ತಿಲಕ್ ಹೇಳಿದರು. ರೋಟರಿ ವುಡ್ಸ್ ಗೆ ಇದೇ ಸಂದಭ೯ 7 ಹೊಸ ಸದಸ್ಯರನ್ನು ಸೇಪ೯ಡೆಗೊಳಿಸಲಾಯಿತು. ಈ…
ಮಡಿಕೇರಿ ಅ.13 : ಕೊಡವ ಮಕ್ಕಡ ಕೂಟ, ಮಂಗಳೂರು ವಿಶ್ವವಿದ್ಯಾನಿಲಯದ ಕೊಡವ ಸಾಂಸ್ಕೃತಿ ಅಧ್ಯಯನ ಪೀಠ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಯುಕ್ತಶ್ರಯದಲ್ಲಿ ಅ.16 ರಂದು ಶ್ರೀ ಕಾವೇರಿ ದರ್ಶನಂ ಹಾಗೂ ಕೊಡಗಿನಿಂದ ಗಿರಿಯವರೆಗೆ ಕೃತಿಗಳ ಬಿಡುಗಡೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸೆಮಿನಾರ್ ಹಾಲ್ ಸಭಾಂಗಣದಲ್ಲಿ ಪೂರ್ವಹ್ನ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ, ಶ್ರೀ ಕಾವೇರಿ ದರ್ಶನಂ ಲೇಖಕ, ಕೊಡಗಿನಿಂದ ಗಿರಿಯವರೆಗೆ (ಮೂಲ ಲೇಖಕರು ದಿ.ಮಳವಂಡ ಗೌರಮ್ಮ ಅಚ್ಚಯ್ಯ) ಭಾಷಾಂತರಕಾರ ನಾಗೇಶ್ ಕಾಲೂರು ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ, ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸಂಯೋಜಕರಾದ ಡಾ. ಎಂ.ಎಂ.ಮೀನಾಕ್ಷಿ ಉಪಸ್ಥಿತರಿರಲಿದ್ದಾರೆ.
ಮಡಿಕೇರಿ ಅ.13 : ಮಾದಾಪುರದ ಶ್ರೀ ಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ 2023-2024 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ದೊರೆಯಿತು. ಶಿಬಿರವನ್ನು ಹರದೂರು ಗ್ರಾ.ಪಂ ಅಧ್ಯಕ್ಷೆ ಉಷಾ ಪೊನ್ನಪ್ಪ ಉದ್ಘಾಟಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಹರ್ಷ ಮಾತನಾಡಿ ಎನ್ ಎಸ್ ಎಸ್ ನಿಂದ ಸ್ವಯಂ ಶಿಸ್ತು ಸಮಯ ಪ್ರಜ್ಞೆ, ಸಮಾಜ ಸೇವೆ, ರಾಷ್ಟ್ರೀಯ ಭಾವೈಕ್ಯತೆ ರೂಡಿಸಿಕೊಳ್ಳ ಬಹುದು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಸಿ.ಜಿ. ಮಂದಪ್ಪ, ಕಾರ್ಯಕ್ರಮಾಧಿಕಾರಿ ಎನ್.ಎನ್. ಮನೋಹರ್ ಸಂಸ್ಥೆಯ ಬೋಧಕ ಬೋಧಕೇತರ ವರ್ಗ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಅ.13 : ಹಿಂದುಳಿದ ವರ್ಗಗಳ ಜಾತಿ ಪಟ್ಟಿಯ ಪ್ರವರ್ಗ 3ಎ ಕ.ಸಂ.2ರಲ್ಲಿ ನಮೂದಾಗಿರುವ ಕೊಡಗರು'(Kodagaru) ಎಂಬುದರ ಬದಲಾಗಿ ಕನ್ನಡ ಆವೃತ್ತಿಯಲ್ಲಿ “ಕೊಡವ” ಎಂದು ಮತ್ತು ಆಂಗ್ಲ ಆವೃತ್ತಿಯಲ್ಲಿ ‘Kodava’ಎಂದು ಬದಲಾಯಿಸಿ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಹೇಮಲತ ಎಂ. ಅವರು ಸರಕಾರದ ನಿರ್ಧಾರದಂತೆ ಆದೇಶ ಹೊರಡಿಸಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ನಂದಿನೆರವಂಡ ಯು.ನಾಚಪ್ಪ ಅವರ ನೇತೃತ್ವದ ನಿಯೋಗ ಡಾ.ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವನ್ನು ನಿರಂತರವಾಗಿ ಭೇಟಿಯಾಗಿ “ಕೊಡಗರು” ಬದಲಿಗೆ “ಕೊಡವ” ಎಂದು ಬದಲಾಯಿಸುವಂತೆ ಮನವಿ ಸಲ್ಲಿಸಿತ್ತು. ಅಲ್ಲದೆ ಕಳೆದ 14 ವರ್ಷಗಳಿಂದ ಹೈಕೋರ್ಟ್ ನಲ್ಲಿ ನ್ಯಾಯಾಂಗ ಹೋರಾಟದ ಮೂಲಕ ಗಮನ ಸೆಳೆದು ಸಂವಿಧಾನಿಕ ಹಕ್ಕು ನೀಡಬೇಕೆಂದು ಅರ್ಜಿ ಸಲ್ಲಿಸಿತ್ತು. ಅಲ್ಲದೆ ಇತ್ತೀಚೆಗೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೂಡ ಭೇಟಿಯಾಗಿ ನಾಚಪ್ಪ ಚರ್ಚಿಸಿದ್ದರು. ಸರ್ಕಾರ “ಕೊಡವ” ಎಂದು ಬದಲಾಯಿಸಿ ಆದೇಶ ಹೊರಡಿಸಿದ…
ವಿರಾಜಪೇಟೆ ಅ.13 : ವಿದ್ಯಾರ್ಥಿ ಜೀವನದ ಯಶಸ್ಸಿಗೆ ವಚನ ಸಾಹಿತ್ಯದ ಅರಿವು ಅತೀ ಮುಖ್ಯ ಪಾತ್ರ ವಹಿಸುತ್ತದೆ ಎಂದು ವಿರಾಜಪೇಟೆ ವೃತ್ತ ನಿರೀಕ್ಷಕ ಶಿವರುದ್ರ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ಹಾಗೂ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಜಂಟಿಯಾಗಿ ಹಮ್ಮಿಕೊಂಡಿದ್ದ “ವಿದ್ಯಾರ್ಥಿಗಳೆಡೆಗೆ ವಚನಗಳ ನಡಿಗೆ'” ಚಿಂತನಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯದ ಜೊತೆಗೆ ಕನ್ನಡ ಸಾಹಿತ್ಯಕ್ಕೆ ಹೊಸ ಹೊಳಪು ನೀಡಿದ ಹನ್ನೆರಡನೇ ಶತಮಾನದ ವಚನಕಾರರ ವಚನ ಸಾಹಿತ್ಯದ ಜ್ಞಾನವನ್ನು ಮೈಗೂಡಿಸಿಕೊಂಡಲ್ಲಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ಹಾಗೆಯೇ ಇಂದು ಜನರಲ್ಲಿರಲೇ ಬೇಕಾದ ಉತ್ತಮ ಸಂಸ್ಕಾರಗಳು ಹಾಗೂ ಆಚಾರ, ವಿಚಾರಗಳನ್ನು ಅರಿತು ಅದರಂತೆ ನಡೆಯುವಲ್ಲಿ ವಚನಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಶಿವರುದ್ರ ಹೇಳಿದರು. ಇದೇ ಸಂದರ್ಭ ವಿದ್ಯಾರ್ಥಿಗಳ ಸ್ಮರಣ ಶಕ್ತಿ ಹಾಗೂ ವಿಷಯ ಗ್ರಹಿಕಾ ಶಕ್ತಿಯನ್ನು ವೃದ್ದಿಸಲು ಅನುಕೂಲವಾಗುವ ಮನಸ್ಸನ್ನು ಕೇಂದ್ರೀಕರಿಸುವ ಯೋಗದ ಬಗ್ಗೆ ಮಾಹಿತಿ ನೀಡಿದರು. “ವಿದ್ಯಾರ್ಥಿಗಳೆಡೆಗೆ…
ಮಡಿಕೇರಿ ಅ.13 : ಸಿದ್ದಾಪುರದ ಶ್ರೀ ದುರ್ಗಾ ಭಗವತಿ ದೇವಾಲಯದಲ್ಲಿ ಅ.15 ರಿಂದ ಅ.24ರ ವರೆಗೆ ನವರಾತ್ರಿ ಮಹೋತ್ಸವ ಜರುಗಲಿದೆ. ದೇವಾಲಯದಲ್ಲಿ ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದ್ದು, ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, ಅಲಂಕಾರ ಪೂಜೆ, ಪ್ರಸಾದ ವಿತರಣೆ ಹಾಗೂ ಸಂಜೆ 6.30 ಗಂಟೆಗೆ ಅಲಂಕಾರ ದೀಪಾರಾಧನೆ, ಭಗವತಿ ಸೇವೆ, ಕುಮಾರಿ ಪೂಜೆ, ಮಹಾ ಪೂಜೆ ಹಾಗೂ ಪ್ರಸಾದ ವಿತರಣೆ ನೆರವೇರಲಿದೆ. ಅ.22ರ ದುರ್ಗಾಷ್ಠಮಿಯಂದು ಸಂಜೆ ಪುಸ್ತಕ ಪೂಜೆಗಿಡುವುದು, 23 ರಂದು ಮಹಾನವಮಿ (ಆಯುದ್ಧ ಪೂಜೆ) ಪ್ರಯುಕ್ತ 8.30 ಗಂಟೆಗೆಯಿಂದ ವಾಹನ ಪೂಜೆ ಜರುಗಲಿದ್ದು, ಅ.24 ರಂದು ವಿಜಯದಶಮಿಯಂದು ವಿದ್ಯಾರಂಭ, 9 ಗಂಟೆಯಿಂದ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ವಿದ್ಯಾರಂಭಕ್ಕೆ ಬರುವ ಮಕ್ಕಳು ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.
ಮಡಿಕೇರಿ ಅ.13 : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮೋದನೆಗೊಂಡು, ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಗೊಂಡ ಕಾಮಗಾರಿಗಳನ್ನೆ ನೂತನ ಕಾಮಗಾರಿಗಳೆಂದು ತಿಳಿಸಿ, ಜನರ ಹಾದಿ ತಪ್ಪಿಸುವ ಪ್ರಯತ್ನವನ್ನು ಕಾಂಗ್ರೆಸ್‍ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ ಮಾಡುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಳೂರು ಕಿಶೋರ್ ಕುಮಾರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತೆನ್ನಿರ ಮೈನಾ ಅವರು ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ, ತಾಳತ್‍ಮನೆ-ಮೇಕೇರಿ-ಬಿಳಿಗೇರಿ-ಅರ್ವತ್ತೊಕ್ಲು-ಬೆಟ್ಟಗೇರಿ ರಸ್ತೆಯನ್ನು ಜಿಲ್ಲಾ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ. ಈ ರಸ್ತೆ ಒಳಗೊಂಡಂತೆ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿನ 355 ಕಿ.ಮೀ. ದೂರದ ಒಟ್ಟು 34 ರಸ್ತೆ ಕಾಮಗಾರಿಗಳಿಗೆ 2020 ಸೆ.1 ರಂದು ಅನುಮೋದನೆಗೊಂಡು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ ಎಂದು ದಾಖಲೆ ಸಹಿತ ಮಾಹಿತಿ ನೀಡಿದರು. ಅರ್ವತ್ತೊಕ್ಲು, ಬೆಟ್ಟಗೇರಿ, ತಾಳತ್ತ್‍ಮನೆ ವಿಭಾಗಗಳಲ್ಲಿ ಈಗಾಗಲೆ ಸಾಕಷ್ಟು ಗ್ರಾಮೀಣ ರಸ್ತೆ ಕಾಮಗಾರಿಗಳು ನಡೆದಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಮಡಿಕೇರಿ ತಾಲ್ಲೂಕಿನ 132…
ಮಡಿಕೇರಿ ಅ.13 : ಸಹಕಾರ ಸಂಘಗಳು ಪ್ರಜಾಸತ್ತಾತ್ಮಕ ಸಂಸ್ಥೆಗಳಾಗಿದ್ದು, ಸದಸ್ಯರೇ ಸಹಕಾರ ಸಂಸ್ಥೆಗಳನ್ನ ನಿರ್ವಹಿಸುವ ಮತ್ತು ನಿಯಂತ್ರಿಸುವ ವ್ಯವಸ್ಥೆ ಇದೆ. ಸಹಕಾರ ಸಂಘಗಳು ಕಾರ್ಯನೀತಿ ರೂಪಿಸುವಲ್ಲಿ ನಿರ್ಧಾಗಳನ್ನು ಕೈಗೊಳ್ಳುವ ಕಾರ್ಯದಲ್ಲಿ ಮತ್ತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಲ್ಲಿ ಪ್ರತಿಯೊಬ್ಬ ಸದಸ್ಯನಿಗೆ ಹಕ್ಕುಂಟು. ಆದರೆ ಪ್ರಜಾಪ್ರಭುತ್ವ ಸ್ವೇಚ್ಛಾಚಾರವಾಗಿರಬಾರದು. ಕಾರ್ಯನಿರ್ವಹಣೆಯು ಉಪನಿಯಮಗಳ, ನಿಯಮಗಳ ಹಾಗೂ ಸಹಕಾರಿ ಅಧಿನಿಯಮ ಮತ್ತು ಇತರ ಅಧಿನಿಯಮಗಳ ಮಿತಿಗೊಳಪಟ್ಟು ನಿಯಂತ್ರಿಸಲ್ಪಟ್ಟಲ್ಲಿ ಸಂಘಗಳು ಉತ್ತಮ ರೀತಿಯಲ್ಲಿ ಸಾಗುತ್ತವೆ ಎಂದು ಕೊಡಗು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಂ.ಎಸ್.ಕೃಷ್ಣ ಪ್ರಸಾದ್ ಅಭಿಪ್ರಾಯಪಟ್ಟರು. ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಕಾರ್ಯದರ್ಶಿಗೆ ಸಹಕಾರ ಕಾಯ್ದೆ, ಕಾನೂನು, ಹಾಲಿನ ಶೇಖರಣೆ, ಸಂಗ್ರಹಣೆ ಹಾಗೂ ಲೆಕ್ಕಪತ್ರ ನಿರ್ವಹಣೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು…
ಮಡಿಕೇರಿ ಅ.13 : ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಉತ್ಸವಕ್ಕೆ ಸಾಹಿತ್ಯ ಸ್ಪರ್ಶವನ್ನು ನೀಡುವ ‘ಬಹುಭಾಷಾ ಕವಿಗೋಷ್ಠಿ’ ಅ.18 ರಂದು ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿದ್ದು, ನಾಡಿನ ಉದಯೋನ್ಮುಖ ಕವಿ, ಕವಿಯಿತ್ರಿಯರ ಕವನ ವಾಚನ ಸಾಹಿತ್ಯಾಭಿಮಾನಿಗಳನ್ನು ಸೆಳೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹುಭಾಷಾ ಕವಿಗೋಷ್ಠಿ ಸಮಿತಿಯ ಅಧ್ಯಕ್ಷ ಉಜ್ವಲ್ ರಂಜಿತ್ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯುವ ಕವಿಗೋಷ್ಠಿಯಲ್ಲಿ ಆಯ್ದ 60 ಕವನಗಳ ವಾಚನ ನಡೆಯಲಿದೆಯೆಂದು ತಿಳಿಸಿದರು. ಕವಿಗೋಷ್ಠಿಯನ್ನು ಡಿಸಿಸಿ ಬ್ಯಾಂಕ್ ರಸ್ತೆಯ ಬಳಿಯ ‘ರಾಷ್ಟ್ರಕವಿ ಕುವೆಂಪು’ ಪುತ್ಥಳಿಗೆ ಕವಿಗೋಷ್ಠಿಯ ಅಧ್ಯಕ್ಷರಾದ ಹಿರಿಯ ಕವಿ, ಸಾಹಿತಿ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಮತ್ತು ಸಮಿತಿಯ ಪದಾಧಿಕಾರಿಗಳು ಪುಷ್ಪಗುಚ್ಛವನ್ನಿರಿಸಿ ಗೌರವ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತದೆ ಎಂದರು. ಕವಿಗೋಷ್ಠಿಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಹೆಚ್.ಎಸ್. ಚಂದ್ರಮೌಳಿ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಂತಾರ ಚಲನ…






