ಕುಶಾಲನಗರ ಅ.13: ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು(ಕ.ಸಾ.ಪ.) ಹಾಗೂ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಅ.17 ರಂದು ದಿವಂಗತ ಎನ್.ಮಹಾಬಲೇಶ್ವರ್ ಭಟ್ ಅವರ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 2.30 ಗಂಟೆಗೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಎನ್.ಸತೀಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಗೌರವ ಕಾರ್ಯದರ್ಶಿ ಎಸ್.ನಾಗರಾಜ್ ತಿಳಿಸಿದ್ದಾರೆ. ಜಿಲ್ಲಾ ಅಗ್ರಣಿ ಬ್ಯಾಂಕ್( ಲೀಡ್ ಬ್ಯಾಂಕ್) ನ ನಿವೃತ್ತ ಮುಖ್ಯಸ್ಥ, ವೃತ್ತಿ ಮಾರ್ಗದರ್ಶಕ ಆರ್.ಕೆ.ಬಾಲಚಂದ್ರ “ಕನ್ನಡದ ಏಳು ಬೀಳುಗಳು” ಕುರಿತು ದತ್ತಿ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪಂಚಾಯತ್ ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ಬಿಳಿಗೇರಿ ಗ್ರಾಮದ ಕೃಷಿಕ ಎನ್.ಎನ್.ಕುಮಾರ್ ಪಾಲ್ಗೊಳ್ಳಲಿದ್ದಾರೆ. ಈ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ…
ಲೇಖಕ: admin
ಸುಂಟಿಕೊಪ್ಪ ಅ.13 : ಸುಂಟಿಕೊಪ್ಪ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಚುನಾವಣೆಯು ಅ.16 ರಂದು ನಡೆಯಲಿದ್ದು, ಬಿಜೆಪಿ ಕಾಂಗ್ರೆಸ್ ಹೊಂದಾಣಿಕೆಯ ರಾಜಕೀಯ ಬೆಳವಣಿಗೆಯಿಂದ 13 ಸ್ಥಾನಗಳಲ್ಲಿ 6 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸುಂಟಿಕೊಪ್ಪ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ಹಿಂದಿನಿಂದಲೂ ಬಿಜೆಪಿ ಆಡಳಿತದಲಿದ್ದು, ವಿರೋಧ ಪಕ್ಷದಲ್ಲಿ ಕಾಂಗ್ರೆಸ್ಸಿನ ಕೆಲವು ನಿರ್ದೇಶಕರು ಇದ್ದರು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಸ್ಥಾನ ಹಂಚಿಕೆಯ ಪ್ರಸ್ತಾಪಕ್ಕೆ ಹಿರಿಯ ಸಹಕಾರಿಗಳು ಮುಂದಾದರು. ಪರಿಣಾಮವಾಗಿ ಇಂತಿಷ್ಟು ಸೀಟು ಬಿಜೆಪಿಗೆ ಹಾಗೂ ಕಾಂಗ್ರೆಸ್‍ಗೆ ಹಂಚಿಕೆ ಸೂತ್ರ ಅಳವಡಿಸಲಾಯಿತು. ಅದು ಯಶಸ್ವಿಯೂ ಆಯಿತು. ಆದರೆ ಸಾಲಗಾರರ ಸಾಮಾನ್ಯ 6 ಕ್ಷೇತ್ರದಲ್ಲಿ ಹಾಗೂ ಪರಿಶೀಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಬಿಗಿ ಪಟ್ಟಿನಿಂದ ಚುನಾವಣೆಯು ತಾ.16 ರಂದು ನಡೆಯಲಿದೆ. ಸಾಲಗಾರರ ಸಾಮಾನ್ಯ 6 ಕ್ಷೇತ್ರಕ್ಕೆ ಉದಯಕುಮಾರ್ ಪಟ್ಟೆಮನೆ, ಜೆರ್ಮಿ ಡಿಸೋಜ, ಕ್ಲೈವಾ ಪೊನ್ನಪ್ಪ, ಮೋಹನ್ ಆರ್.ಆರ್.ಕುಂಜಿಲನ…
ಮಡಿಕೇರಿ ಅ.13 : ಅಖಿಲ ಕರ್ನಾಟಕ ಅರುಂಧತಿಯಾರ್ ಆದಿದ್ರಾವಿಡ ಪೌರಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಕೃಷ್ಣ ಅವರನ್ನು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಥವಾ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾ ಒತ್ತಾಯಿಸಿದೆ. ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ವಿರಾಜಪೇಟೆಯ ಪಳನಿಪ್ರಕಾಶ್, ಪೌರಕಾರ್ಮಿಕ ಸಫಾಯಿ ಕರ್ಮಚಾರಿಗಳಿಗೆ ಪ್ರತ್ಯೇಕವಾಗಿ ಶೇ.3ರಷ್ಟು ಒಳಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಹೋರಾಟ ಮಾಡಿದ ಏಕೈಕ ನಾಯಕ ಆರ್.ಕೃಷ್ಣ ಅವರಾಗಿದ್ದಾರೆ. ಸಮುದಾಯದ ಪರವಾಗಿ ಕಳೆದ 25 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದು, ಅವರ ಪ್ರಯತ್ನದ ಫಲವಾಗಿ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕಿದೆ ಎಂದರು. 1996ರಲ್ಲಿ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ಪುರಸಭೆಗೆ ಅಧ್ಯಕ್ಷರು ಹಾಗೂ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಅನುಭವನ ಹೊಂದಿದ್ದಾರೆ. ಆರು ಜಿಲ್ಲೆಗಳಲ್ಲಿ ಸಮುದಾಯದ ಸಮಸ್ಯೆಗಳಿಗೆ ಹೋರಾಟ ಮಾಡುತ್ತಿರುವ ಕೃಷ್ಣ ಅವರಿಗೆ ರಾಜ್ಯ ಸರ್ಕಾರ ಉನ್ನತ ಹುದ್ದೆ…
ಮಡಿಕೇರಿ ಅ.13 : ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುವ ಮೂಲಕ ಪರಂಪರೆ, ಪದ್ಧತಿ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಯುವ ಸಮೂಹ ಮಾಡಬೇಕೆಂದು ಕಲಾವಿದೆ ಪದ್ಮಶ್ರೀ ರಾಣಿ ಮಾಚಯ್ಯ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಬರಹಗಾರ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಅವರು ಬರೆದಿರುವ ಕೊಡವ ಮಕ್ಕಡ ಕೂಟದಿಂದ ಹೊರ ತಂದಿರುವ ದಾಖಲೆಯ 75ನೇ ಪುಸ್ತಕ “ಆ ಪನ್ನೆರಂಡ್ ತಿಂಗ” ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಮ್ಮ ಪರಂಪರೆ, ಪದ್ಧತಿ ಮತ್ತು ಸಂಸ್ಕೃತಿಯನ್ನು ಅನುಸರಿಸಲು ಯುವ ಜನರು ಅಸಡ್ಡೆ ತೋರುತ್ತಿದ್ದಾರೆ. ಹಬ್ಬಗಳ ಆಚರಣೆಯಲ್ಲಿ ಪಾಲ್ಗೊಳ್ಳಲು ಕೂಡ ಹಿಂದೇಟು ಹಾಕುತ್ತಿದ್ದಾರೆ. ಜ್ಞಾನವನ್ನು ಹೆಚ್ಚಿಸುವ ಶಕ್ತಿ ಹೊಂದಿರುವ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಿಲ್ಲ. ಯುವ ಸಮೂಹದ ನಿರ್ಲಕ್ಷ್ಯ ಮನೋಭಾವದಿಂದ ಇಂದು ಪರಂಪರೆ, ಪದ್ಧತಿ ಮತ್ತು ಸಂಸ್ಕೃತಿ ನಾಶವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮಕ್ಕಳ ತಪ್ಪುಗಳನ್ನು ತಿದ್ದಬೇಕಾದ ತಂದೆ ತಾಯಿಯರು ಕೂಡ ಪದ್ಧತಿ, ಪರಂಪರೆ ಬಗ್ಗೆ ತಿಳಿ ಹೇಳದೆ ಮಕ್ಕಳು ಹೇಳಿದಂತೆ ಕೇಳುತ್ತಿದ್ದಾರೆ.…
ನಾಪೋಕ್ಲು ಅ.13 : ಎನ್ಎಸ್ಎಸ್ ಶಿಬಿರದಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳು ಶಿಸ್ತು, ಸಂಯಮ ಹಾಗೂ ಸೇವಾ ಮನೋಭಾವನೆಯನ್ನು ರೂಡಿಸಿಕೊಳ್ಳಬೇಕು ಎಂದು ಮೂರ್ನಾಡು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ ಹೇಳಿದರು. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮೂರ್ನಾಡು ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ವಾರ್ಷಿಕ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಶಿಬಿರಾರ್ಥಿಗಳು ಶ್ರಮದಾನದ ಮಹತ್ವವನ್ನು ಅರಿತುಕೊಳ್ಳಬೇಕು, ಮನೆ, ವಠಾರ, ಸಮುದಾಯದ ಸ್ವಚ್ಛತೆಯತ್ತ ಗಮನಹರಿಸಬೇಕು ಎಂದರು. ನಾಪೋಕ್ಲು ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಾವುದೇ ಹುದ್ದೆಯನ್ನು ಅಲಂಕರಿಸಿದರೂ ಜನಸೇವೆಯೇ ಮುಖ್ಯ ಎಂಬುದನ್ನು ಮರೆಯಬಾರದು ಎಂದರು. ಶಿಬಿರದ ಉದ್ಘಾಟನೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯ ಉಪಾಧ್ಯಕ್ಷ ಹ್ಯಾರಿಸ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಮೂರ್ನಾಡು ವಿದ್ಯಾಸಂಸ್ಥೆಯ ನಿರ್ದೇಶಕ ರಾಜ ಮಾದಪ್ಪ ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ, ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ , ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಶಿವಣ್ಣ,…
ನಾಪೋಕ್ಲು ಅ.13 : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟದಲ್ಲಿ ಮುರ್ನಾಡು ಪದವಿ ಕಾಲೇಜಿನ ಪ್ರಥಮ ಬಿಕಾಂ ನ ವಿದ್ಯಾರ್ಥಿ ಆರ್. ಕೃಷಿಕ ರಾಜ್ ಚಿನ್ನದ ಪದಕ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ವುಶು ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಅ.13 : ವಿರಾಜಪೇಟೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟೀಯ ಸೇವಾ ಯೋಜನಾ ಘಟಕದ ಸಂಯುಕ್ತಾಶ್ರಯದಲ್ಲಿ ‘ಹಿರಿಯ ನಾಗರೀಕರ ದಿನ ಮತ್ತು ಮಾನಸಿಕ ಆರೋಗ್ಯ ದಿನಾಚರಣೆ’ ಆಚರಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿರಾಜಪೇಟೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಆರ್.ಮಂಜುನಾಥ್ ಉದ್ಘಾಟಿಸಿ, ಮಾತನಾಡಿ, ಹಿರಿಯ ನಾಗರಿಕರನ್ನು ಸಮಾಜದಲ್ಲಿ ಮತ್ತು ಮನೆಯಲ್ಲಿ ಪ್ರೀತಿಯಿಂದ ಗೌರವದಿಂದ ಕಾಣಬೇಕೆಂದು ಕರೆ ನೀಡಿದರು. ಅಲ್ಲದೇ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ ಎಂದು ತಿಳಿಹೇಳಿದರು. ವಿರಾಜಪೇಟೆಯ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂತೋಷ್‍ಕೊಟಾರಿ, ಅಪರ ಸಿವಿಲ್ ನ್ಯಾಯಾಧೀಶ ಪ್ರದೀಪ ಪೋತದಾರ್, ರಾಷ್ಟ್ರೀಯ ಸೇವಾ ಯೋಜನಾ ಘಟಕದ…
ನಾಪೋಕ್ಲು ಅ.13 : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾ ನಿಲಯದ ವಿದ್ಯಾರ್ಥಿ ಎಸ್.ಡಿ.ಗವೀನ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಹಾಗೂ 4*100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಕೆ.ಎಲ್.ಚಿರಾಗ್ 400 ಮೀ.ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಾಜಿ 200 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ, 4*100 ಮೀ ರಿಲೆ ಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿ ದರ್ಶನ 4*100 ಮೀ ರಿಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಮೇಘನ್ 4*100 ಮೀ ರಿಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿ ನಿಕ್ಷಿತ್ 80 ಮೀ ಹಡಲ್ಸ್ ಪ್ರಥಮ ಸ್ಥಾನ, ಕೆ.ಸಿ.ಪೂರ್ವಿಕ 400 ಮೀ ಓಟದಲ್ಲಿ ಪ್ರಥಮ, 600 ಮೀ ನಲ್ಲಿ ಪ್ರಥಮ ಸ್ಥಾನ ಗಳಿದ್ದರೆ. ಬಿಸ್ಮಿತ 4*100 ಮೀ. ರಿಲೆಯಲ್ಲಿ ಪ್ರಥಮ ಸ್ಥಾನ, 80 ಮೀ…
ನಾಪೋಕ್ಲು ಅ.13 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಇರುವೈಲು ರಘುರಾಮ ಆಸ್ರಣ್ಣ ಮತ್ತು ಲೀಲಾ ಅಸ್ರಣ್ಣ ದತ್ತಿನಿದಿ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಉದ್ಘಾಟಿಸಿದರು. ಕಾಲೇಜಿನ ಇತಿಹಾಸ ಉಪನ್ಯಾಸಕ ಪರಶುರಾಮ ಕನ್ನಡ ನಾಡು ನುಡಿ ಪರಂಪರೆ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಪ್ರಾಂಶುಪಾಲರು, ಸಾಹಿತಿಗಳಾದ ಬಾರಿಯಂಡ ಜೋಯಪ್ಪ ಅವರು ಕೊಡಗಿನ ಆರ್ಥಿಕ ಸ್ಥಿತಿ ಅಂದು ಇಂದು ಈ ಕುರಿತು ತಮ್ಮ ಉಪನ್ಯಾಸ ದಲ್ಲಿ 60 ವರ್ಷಗಳ ಹಿಂದಿನ ಬರಗಾಲ ಆರ್ಥಿಕ ಸ್ಥಿತಿ ಬದುಕು ಬವಣೆ ಹಾಗೂ ಇಂದಿನ ಆರ್ಥಿಕ ಪರಿಸ್ಥಿತಿಗಳ ಕುರಿತು ಸವಿಸ್ತಾರವಾಗಿ ಮಾತನಾಡಿದರು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ಲು ನವೀನ್ ಮಾತನಾಡಿ, ದತ್ತಿನಿಧಿ ಹಾಗೂ ಪರಿಷತ್ತಿನ ಸದಸ್ಯತ್ವವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಮೂಲಕ…
ಮಡಿಕೇರಿ ಅ.13 : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಅ.15, 16 ಮತ್ತು 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಅಕ್ಟೋಬರ್, 15 ರಂದು ಬೆಳಗ್ಗೆ 11.30 ಗಂಟೆಗೆ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದ ತುಲಾ ಸಂಕ್ರಮಣ ಜಾತ್ರೆಯ ಪ್ರಯುಕ್ತ ನಡೆಯುವ (ಕಾವೇರಿ ಉತ್ಸವ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 4.30 ಗಂಟೆಗೆ ನಗರದ ಪಂಪಿನಕೆರೆಯಲ್ಲಿ ನಡೆಯುವ ಕರಗ ಉತ್ಸವದಲ್ಲಿ (ಮಡಿಕೇರಿ ದಸರಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ) ಪಾಲ್ಗೊಳ್ಳಲಿದ್ದಾರೆ. ನಂತರ ರಾತ್ರಿ 7.30 ಗಂಟೆಗೆ ಗೋಣಿಕೊಪ್ಪ ದಸರಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅಕ್ಟೋಬರ್, 16 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆಯಲ್ಲಿ ನಡೆಯುವ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 2.30 ಗಂಟೆಗೆ ಕುಶಾಲನಗರ, ನಂತರ ಸಂಜೆ 4 ಗಂಟೆಗೆ ಕೊಡಗು ವಿಶ್ವವಿದ್ಯಾಲಯಕ್ಕೆ ಭೇಟಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅಕ್ಟೋಬರ್,…






