ಮಡಿಕೇರಿ ಅ.12 : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನವಾಗಿದೆ(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ 3 ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು.). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಸರ್ಕಾರಿ ಸೌಲಭ್ಯವನ್ನು(ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ…
ಲೇಖಕ: admin
ಮಡಿಕೇರಿ ಅ.11 : ಕೊಡವ ಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 3ನೇ ಹಂತದ ಪಾದಯಾತ್ರೆಯ ಮುಂದುವರಿದ ಭಾಗವನ್ನು ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ-ತೆರಾಲ್-ಬಿರುನಾಣಿಯ ಮರೆನಾಡ್, ಪಾಕೇರಿನಾಡ್, ಐವತ್ನಾಡ್, ಪೊನಾಡ್ ನಾಲ್ಕು ನಾಡು ಮಂದ್‌ಗಳಲ್ಲಿ ಪಾದಯಾತ್ರೆ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಕೋವಿಯೊಂದಿಗೆ ಸಾಗಿದ ಪ್ರಮುಖರು ಕೊಡವ ಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದರು. ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕೊಡವ ಜಾಗೃತಿ ಸಭೆ ನಡೆಸಿದ ನಾಚಪ್ಪ, ಸಿಎನ್‌ಸಿ ಹೋರಾಟಕ್ಕೆ ಬೆಂಬಲ ಕೋರಿದರು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಕೊಡಗಿನ ಆದಿಮಸಂಜಾತ ಕೊಡವ ಜನಾಂಗವನ್ನು ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. ಈ ಜನಾಂಗಕ್ಕೆ ಯಾವುದೇ ವಿಶೇಷ ಪರಿಚ್ಛೇದಗಳ ಷರತ್ತು ಇಲ್ಲದಿರುವುದರಿಂದ ಎಸ್.ಟಿ ಪಟ್ಟಿಗೆ ಸೇರಿಸುವುದು ವರ್ತಮಾನದ ಅನಿವಾರ್ಯ ಅವಶ್ಯಕತೆಯಾಗಿದೆ. ಆದ್ದರಿಂದ ಕರ್ನಾಟಕದ ಗೌರವಾನ್ವಿತ ಉಚ್ಚ ನ್ಯಾಯಾಲಯದ ಆದೇಶದಂತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ÷್ಮ, ಸಮಗ್ರ ಕುಲಶಾಸ್ತ್ರ ಅಧ್ಯಯನ ಆರಂಭಿಸಬೇಕು. ಕೊಡವ…
ಮಡಿಕೇರಿ ಅ.11 : ಇತ್ತೀಚಿನ ದಿನಗಳಲ್ಲಿ ಮಡಿಕೇರಿ ನಗರದ ವೃತ್ತಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕರ ಅಜಾಗರೂಕತೆ ಮತ್ತು ಸಂಚಾರಿ ಪೊಲೀಸರ ಅಲಭ್ಯತೆ ಕಾರಣವಾಗಿದೆ ಎಂದು ಕೊಡಗು ರಕ್ಷಣಾ ವೇದಿಕೆ ಆರೋಪಿಸಿದೆ. ಇಂದು ನಗರದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಕೆಎಸ್‌ಆರ್‌ಟಿಸಿ ಬಸ್ ಮತ್ತೆ ಡಿಕ್ಕಿಯಾಗಿ ಹಾನಿಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಅವರು ಕೆಎಸ್‌ಆರ್‌ಟಿಸಿ ಮತ್ತು ಪೊಲೀಸ್ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕೆಎಸ್‌ಆರ್‌ಟಿಸಿ ಯಲ್ಲಿ ನುರಿತ ಖಾಯಂ ಚಾಲಕರ ಕೊರತೆ ಎದುರಾಗಿರುವ ಕಾರಣ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಬಸ್ ಚಲಾಯಿಸಿ ಅನುಭವವಿಲ್ಲದ ಹೊರ ಜಿಲ್ಲೆಯ ಚಾಲಕರು ಬೆಟ್ಟ ಗುಡ್ಡ, ತಿರುವು ಪ್ರದೇಶದ ಕೊಡಗಿನಲ್ಲಿ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ. ಇತ್ತೀಚೆಗೆ ಸೂರ್ಲಬ್ಬಿಯಲ್ಲಿ ಬಸ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಸಾತ್ ದೊಡ್ಡ ಅನಾಹುತವೊಂದು ತಪ್ಪಿದೆ. ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತ ಮತ್ತು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಬಸ್…
ಮಡಿಕೇರಿ ಅ.11 : ಕಾಂತರಾಜ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿ ಜಾರಿಗೆ ತರುವಂತೆ ಮತ್ತು ಮುಸ್ಲಿಮರ 2ಬಿ ಮೀಸಲಾತಿ ಪ್ರಮಾಣವನ್ನು ಶೇ.8ಕ್ಕೆ ಏರಿಸುವಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಹಳೆ ಖಾಸಗಿ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ, ಮುಸ್ಲಿಮರಿಗೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, 2014ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಕಾಂತರಾಜು ಆಯೋಗವನ್ನು ನೇಮಿಸಿ ಜನಗಣತಿಗೆ ಆದೇಶಿಸಿದ್ದರು. ಅದರಂತೆ 2018ರಲ್ಲಿ ಆಯೋಗವು ವರದಿ ಸಿದ್ದಪಡಿಸಿತ್ತು. ಆದರೆ ಕಾರಣಾಂತರಗಳಿಂದ ವರದಿ ಪ್ರಕಟಗೊಂಡಿರಲಿಲ್ಲ. ನಂತರ ಬಂದ ಸರ್ಕಾರಗಳು ವರದಿಯನ್ನು ಅಂಗೀಕರಿಸುವ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದರು. ಇದೀಗ ಕಾಂತರಾಜು ಆಯೋಗ ವರದಿ ಸಿದ್ದವಿದ್ದು, ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಲು ತಕ್ಷಣವೇ ಅಂಗೀಕರಿಸಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು. 2ಬಿ ಮೂಲಕ ಮುಸ್ಲಿಮರಿಗಿದ್ದ ಮೀಸಲಾತಿಯನ್ನು ಹಿಂದಿನ ಬಿಜೆಪಿ ಸರ್ಕಾರ ರದ್ದು…
ಮಡಿಕೇರಿ ಅ.11 : ಪಡಿತರ ಚೀಟಿ ತಿದ್ದುಪಡಿ ಮತ್ತು ಹೆಸರು ಸೇರ್ಪಡೆಗಾಗಿ ಸರ್ಕಾರ ಅ.10 ರವರೆಗೆ ಕಾಲಾವಕಾಶ ನೀಡಿತ್ತಾದರೂ ಸರ್ವರ್ ಸಮಸ್ಯೆಯಿಂದ ಹಲವರು ಈ ಅವಕಾಶದಿಂದ ವಂಚಿತರಾಗಿದ್ದಾರೆ. ಆದ್ದರಿಂದ ಅರ್ಜಿದಾರರ ಹಿತದೃಷ್ಟಿಯಿಂದ ದಿನ ವಿಸ್ತರಣೆ ಮಾಡಬೇಕೆಂದು ನಗರಸಭಾ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ ಒತ್ತಾಯಿಸಿದ್ದಾರೆ. ಮಡಿಕೇರಿ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ್ದ ಅವರು ಸರ್ವರ್ ಸಮಸ್ಯೆ ಕುರಿತು ಸಾಲುಗಟ್ಟಿ ನಿಂತಿದ್ದ ಅರ್ಜಿದಾರರೊಂದಿಗೆ ಚರ್ಚಿಸಿದರು. ಸರ್ಕಾರ ಅ.10 ರವರೆಗೆ ಪಡಿತರ ಚೀಟಿ ತಿದ್ದುಪಡಿ ಮತ್ತು ಹೆಸರು ಸೇರ್ಪಡೆಗೆ ಅವಕಾಶ ನೀಡಿರುವುದಾಗಿ ಘೋಷಣೆ ಮಾಡಿತೇ ಹೊರತು ಸರ್ವರ್ ಸಮಸ್ಯೆಯನ್ನು ಬಗೆಹರಿಸಿಲ್ಲ. ಪ್ರತಿದಿನ ತಾಲ್ಲೂಕು ಕಚೇರಿಗೆ ಬರುತ್ತಿರುವ ಅರ್ಜಿದಾರರು ದಿನವಿಡೀ ಸಾಲುಗಟ್ಟಿ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ. ಹಲವರು ಅರ್ಜಿ ವಿಲೇವಾರಿಯಾಗದೆ ಮರಳಿದ್ದಾರೆ. ಪಡಿತರ ಚೀಟಿ ಇಲ್ಲದೆ ಅರ್ಹ ಫಲಾನುಭವಿಗಳು ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಲೀಲಾ ಶೇಷಮ್ಮ ಅಸಮಾಧಾನ ವ್ಯಕ್ತಪಡಿಸಿದರು. ತಾಂತ್ರಿಕ ವ್ಯವಸ್ಥೆಗಳನ್ನು ಮೇಲ್ದರ್ಜೆಗೇರಿಸುತ್ತಿಲ್ಲ. ಸರ್ವರ್ ಕೈಕೊಟ್ಟ ಪರಿಣಾಮ ನೂರಾರು ಅರ್ಜಿದಾರರ ಪಡಿತರ ಚೀಟಿ…
ಮಡಿಕೇರಿ ಅ.11 : ಯುವ ದಸರಾ ನೃತ್ಯ ಸ್ಪರ್ಧೆಗೆ ತಂಡಗಳನ್ನು ಆಯ್ಕೆ ಮಾಡಲು, ಆಯ್ಕೆ ಪ್ರಕ್ರಿಯೆಯನ್ನು ಅ.14 ರಂದು ನಗರದ ಹೋಟೆಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಆಯ್ಕೆಯಾದ ತಂಡಗಳ ನಡುವೆ ಅ.21 ರಂದು ನಗರದ ಗಾಂಧಿ ಮೈದಾನದ ಭವ್ಯ ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯ ನೀತಿ ನಿಯಮಗಳನ್ನು ಎಲ್ಲಾ ತಂಡಗಳು ಕಡ್ಡಾಯವಾಗಿ ಪಾಲಿಸಬೇಕು. ಶಾಸ್ತ್ರೀಯ ನೃತ್ಯ ಪ್ರಕಾರವನ್ನು ಹೊರತುಪಡಿಸಿ ಇತರೆ ಯಾವುದೇ ಪ್ರಕಾರವನ್ನು ಆಯ್ದುಕೊಳ್ಳಬಹುದು. ಸ್ಪರ್ಧೆಗೆ ವಯೋಮಿತಿಯ ನಿರ್ಬಂಧವಿಲ್ಲ. ತಂಡವು ಕನಿಷ್ಠ 12 ಮಂದಿ ಗರಿಷ್ಠ 35 ಮಂದಿ ಕಲಾವಿದರು ಇರತಕ್ಕದ್ದು. ನೃತ್ಯಗಳು ಪರಿಕಲ್ಪನೆ ಹಾಗೂ ಸಾಮಾಜಿಕ ಸಂದೇಶವನ್ನು ಒಳಗೊಂಡಿರಬೇಕು. ಹಾಡಿನ ಭಾಷೆ ಹಾಗೂ ಉಡುಗೆ ತೊಡುಗೆಗಳು ಸಭ್ಯವಾಗಿರಬೇಕು. ಯಾರ ನಂಬಿಕೆಗಳಿಗೂ ನೋವನ್ನುಂಟು ಮಾಡಬಾರದು. ಕಾಲಾವಧಿ 10+2 ನಿಮಿಷಗಳು. ಬೆಂಕಿ, ಬಣ್ಣ, ನೀರು ಸೇರಿದಂತೆ ವೇದಿಕೆಗೆ ಹಾನಿ ಉಂಟುಮಾಡುವ ಯಾವುದೇ ಪರಿಕರಗಳನ್ನು ಬಳಸುವಂತಿಲ್ಲ. ತೀರ್ಪುಗಾರರ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು. ಹೆಚ್ಚಿನ ಮಾಹಿತಿಗೆ ಕವನ್ ಕೋತ್ತೋಳಿ 9741292825, ಯುವ ದಸರಾ ಸಂಚಾಲಕರಾದ…
ಮಡಿಕೇರಿ ಅ.11 : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಭಾಗಮಂಡಲ ಫೀಡರ್‍ನಲ್ಲಿ ತುಲಾ ಸಂಕ್ರಮಣ ಕಾವೇರಿ ತೀರ್ಥೋಧ್ಬವ ಪ್ರಯುಕ್ತ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಅ.12 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ತಾಳತ್ತಮನೆ ಬೆಟ್ಟಗೇರಿ, ಅಪ್ಪಂಗಳ, ಚೇರಂಬಾಣೆ, ಕೋಪಟ್ಟಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಅ.11 : ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾಗಿದ್ದ ಪ್ರಾಕೃತಿಕ ವಿಕೋಪ ಎದುರಿಸಲು ಆಗಮಿಸಿದ್ದ ಎನ್‍ಡಿಆರ್‍ಎಫ್ ತಂಡಕ್ಕೆ ಜಿಲ್ಲಾಡಳಿತ ವತಿಯಿಂದ ಬೀಳ್ಕೊಡಲಾಯಿತು. ನಗರದ ಖಾಸಗಿ ಹೋಟೆಲ್‍ನಲ್ಲಿ 10 ನೇ ಬೆಟಾಲಿಯನ್‍ನ ಎನ್‍ಡಿಆರ್‍ಎಫ್ ತಂಡದ ಮುಖ್ಯಸ್ಥರಾದ ಶಾಂತಿಲಾಲ್ ಜಾಟಿಯಾ ಅವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶಾಲೂ, ಫಲ ತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ ರಾಜಾ ಮಾತನಾಡಿ ಕೊಡಗು ಜಿಲ್ಲೆಯಲ್ಲಿ 2018, 2019, 2020 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಹಿನ್ನೆಲೆ, ಈ ಬಾರಿಯೂ ಸಹ ಎನ್‍ಡಿಆರ್‍ಎಫ್ ತಂಡ ಜಿಲ್ಲೆಗೆ ಆಗಮಿಸಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿತ್ತು ಎಂದು ಹೇಳಿದರು. ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಬರುವ ಕೊಡಗು ವಿಶೇಷ ಜಿಲ್ಲೆಯಾಗಿದೆ. ಬರೆಕುಸಿತ, ಪ್ರವಾಹ ಉಂಟಾದ ಸಂದರ್ಭದಲ್ಲಿ ಹೇಗೆ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಅಣಕು ಪ್ರದರ್ಶನವನ್ನು ಏರ್ಪಡಿಸಿ ಜಿಲ್ಲೆಯ ಜನತೆಯಲ್ಲಿ ಧೈರ್ಯ ತುಂಬುವ ಕೆಲಸ ಮಾಡಿತ್ತು ಎಂದು ಹೇಳಿದರು. ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದ ಎನ್‍ಡಿಆರ್‍ಎಫ್ ತಂಡ ಹಲವು ಕಾರ್ಯ ಚಟುವಟಿಕೆಗಳನ್ನು…
ಕೂಡಿಗೆ ಅ.11: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉತ್ತರ ಕೊಡಗಿನ ಕೂಡಿಗೆ ಸರ್ಕಾರಿ ಕ್ರೀಡಾಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಶಾಲಾ ಮಕ್ಕಳ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗೆ ವರ್ಣ ರಂಜಿತ ತೆರೆಬಿತ್ತು. ಸುತ್ತಲೂ ಹಸಿರು ಪರಿಸರದಿಂದ ಕಂಗೊಳಿಸುತ್ತಿದ್ದ ಹಾಕಿ ಟರ್ಫ್ ಮೈದಾನದಲ್ಲಿ ರಾಜ್ಯಮಟ್ಟದ ಟೂರ್ನಿಯಿಂದ ರಾಷ್ಟ್ರೀಯ ಟೂರ್ನಿಗೆ ಆಯ್ಕೆಗೊಂಡ ಕ್ರೀಡಾಳುಗಳ ಸಂಭ್ರಮ ಮುಗಿಲು ಮುಟ್ಟುತ್ತಿತ್ತು. ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಹಾಕಿಯ ತವರಾದ ಕೊಡಗಿನಲ್ಲಿ ಹಾಕಿ ಕ್ರೀಡೆಗೆ ಕ್ರೀಡಾಭಿಮಾನಿಗಳು ನೀಡುತ್ತಿರುವ ಪ್ರೋತ್ಸಾಹ ಅನನ್ಯವಾದುದು. ಕೊಡಗಿನಲ್ಲಿ ಕಲೆ, ಸಾಂಸ್ಕೃತಿಕ ಪರಂಪರೆಯೊಂದಿಗೆ ಹಾಕಿ ಕ್ರೀಡೆ ಕೂಡ ಸಂಸ್ಕೃತಿಯ ಪ್ರತೀಕವಾಗಿದೆ ಎಂದರು. ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ರಾಷ್ಟ್ರೀಯ 17 ವಯೋಮಾನದ ಬಾಲಕಿಯರ ಹಾಕಿ ಟೂರ್ನಿಯ ಯಶಸ್ವಿ ಸಂಘಟನೆಗೆ ಎಲ್ಲರ ಪ್ರೋತ್ಸಾಹ ಅಗತ್ಯವಿದೆ ಎಂದು ಡಾ ಸದಾಶಿವಯ್ಯ ಪಲ್ಲೇದ್ ಹೇಳಿದರು. ಮೂರು ದಿನಗಳ ಕಾಲ ಹಾಕಿ ಟೂರ್ನಿ…
ಮಡಿಕೇರಿ ಅ.11 : ಕೂಡಿಗೆ ಸರ್ಕಾರಿ ಕ್ರೀಡಾಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯ ಮೈಸೂರು ವಿಭಾಗದಲ್ಲಿ ಮಡಿಕೇರಿ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ರಾಷ್ಟ್ರೀಯ ಕ್ರೀಡೆಗೆ ಆಯ್ಕೆಯಾಗಿದೆ. ಮೈಸೂರು ತಂಡದ ಸಿ.ಎಂ.ತ್ವಿಶ ದೇಚಮ್ಮ ಉತ್ತಮ ಗೋಲ್ ಕೀಪರ್ ಆಗಿ ಆಟ ಪ್ರದರ್ಶಿಸಿದರು. ಅಂತಿಮ ಟೂರ್ನಿಯಲ್ಲಿ ತೀವ್ರ ಸೆಣಸಾಟ ನಡೆಸಿದ ಉಭಯ ತಂಡಗಳು ಸಮಬಲ ಪ್ರದರ್ಶಿಸಿದವು. ಟೂರ್ನಿಯಲ್ಲಿ ಹೆಚ್ಚು ಗೋಲು ಗಳಿಸಿದ ಮೈಸೂರು ವಿಭಾಗದ ತಂಡವು ಪ್ರಥಮ ಸ್ಥಾನ ಗಳಿಸಿ ರಾಷ್ಟ್ರೀಯ ಟೂರ್ನಿಗೆ ಆಯ್ಕೆಗೊಂಡಿತು. ಕೂಡಿಗೆ ಕ್ರೀಡಾಶಾಲಾ ತಂಡವು ದ್ವಿತೀಯ ಸ್ಥಾನ ಗಳಿಸಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ರಾಷ್ಟ್ರೀಯ ಟೂರ್ನಿಗೆ ಆಯ್ಕೆಗೊಂಡ ತಂಡಗಳಿಗೆ ಟ್ರೋಫಿ ವಿತರಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್ ಪಲ್ಲೇದ್, ಕ್ರೀಡಾಶಾಲೆಯ ಮುಖ್ಯ ಶಿಕ್ಷಕ ಬಿ.ಟಿ.ದೇವಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ…






