ಮಡಿಕೇರಿ ಸೆ.7 : ಮೈಸೂರಿನ ಅಲ್ ಅನ್ಸಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವಿರಾಜಪೇಟೆ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಸೆ.10 ರಂದು ಮಂಡಿ ಮತ್ತು ಸೊಂಟದ ಕೀಲು ನೋವಿನಿಂದ ಬಳಲುತ್ತಿರುವವರಿಗೆ ಉಚಿತ ಸಮಾಲೋಚನೆ, ಸಲಹೆ ಮತ್ತು ತಪಾಸಣಾ ಶಿಬಿರ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಜಪೇಟೆ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಸದಸ್ಯ ಏಜಸ್ ಅಹಮ್ಮದ್, ವಿರಾಜಪೇಟೆಯ ಗೋಣಿಕೊಪ್ಪ ರಸ್ತೆಯಲ್ಲಿರುವ ವೈಟ್ ಪ್ಯಾಲೇಸ್‍ನಲ್ಲಿ ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದರು. ಅಲ್ ಅನ್ಸಾರ್ ಆಸ್ಪತ್ರೆಯ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಸೊಂಟದ ಕೀಲು ಮತ್ತು ಮಂಡಿ ಮರು ಜೋಡಣೆ ಶಸ್ತ್ರ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಿಕೊಡಲಾಗುವುದು. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಅಲ್ ಅನ್ಸಾರ್ ಆಸ್ಪತ್ರೆಯ ವ್ಯವಸ್ಥಾಪಕ ಅಬ್ದುಲ್ ಮಾತನಾಡಿ, ಮಂಡಿ, ಕೀಲು ನೋವಿನಿಂದ ಬಳಲುವವರು ಒಮ್ಮೆ ಶಿಬಿರಕ್ಕೆ ಭೇಟಿ ನೀಡಿ ತಜ್ಞ ವೈದ್ಯರಿಂದ ಸಲಹೆ ಪಡೆದುಕೊಳ್ಳಬಹುದು. ಫಿಸಿಯೋಥೆರಪಿ ಸಮಾಲೋಚನೆಯೂ ನಡೆಯಲಿದ್ದು,…
ಲೇಖಕ: admin
ಅಗತ್ಯ ವಸ್ತುಗಳ ಬೆಲೆಯ ಮೇಲೆ ನಿಯಂತ್ರಣ ಸಾಧಿಸಬೇಕು, ಸಮರ್ಪಕ ಉದ್ಯೋಗ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಎಂ) ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದು. ಈ ಸಂದರ್ಭ ಮಾತನಾಡಿದ ಭಾರತ ಕಮ್ಯುನಿಸ್ಟ್ ಪಕ್ಷ(ಎಂ)ದ ಜಿಲ್ಲಾ ಸಂಘಟನಾ ಸಮಿತಿ ಕಾರ್ಯದರ್ಶಿ ಹೆಚ್.ಬಿ.ರಮೇಶ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ದೇಶದ ಜನತೆಗೆ ಅಗತ್ಯ ವಸ್ತುಗಳ ಬೆಳೆ ಕಡಿಮೆ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದಿದ್ದು, ಇದೀಗ ದಿನದಿಂದ ದಿನಕ್ಕೆ ಏರಿಕೆ ಮಾಡುತ್ತಿರುವುದರಿಂದ ಕೂಲಿ ಕಾರ್ಮಿಕರು ಜೀವನ ನಡೆಸುವುದೆ ಸಮಸ್ಯೆಯಾಗಿದೆ. ಆದ್ದರಿಂದ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಲು ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಜೌಷಧಿ ಬೆಲೆಗಳ ನಿಯಂತ್ರಣವನ್ನು ಮರು ಸ್ಥಾಪಿಸಬೇಕು, ಪೆಟ್ರೋಲ್ ಡಿಸೇಲ್ ಬೆಲೆಗಳ ಮೇಲಿನ ತೆರಿಗೆಗಳನ್ನು ಕಡಿತ ಮಾಡಬೇಕು, ಬಡವರ ವಿರೋಧಿ ನೀತಿಯನ್ನು ಕೈಬಿಟ್ಟು, ರಾಜ್ಯ…
ಮಡಿಕೇರಿ ಸೆ.7 : ಮಹಾವೀರ ಚಕ್ರ ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪುಣ್ಯ ಸ್ಮರಣೆಯ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ಪ್ರದಾನ ಮಾಡಲಾಯಿತು. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ ಮತ್ತು ಕೊಡವ ಮಕ್ಕಡ ಕೂಟದ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಗ್ರೂಪ್ ಕ್ಯಾಪ್ಟನ್ ಕಂಬೇಯಂಡ ಅಯ್ಯಪ್ಪ ಕಾರ್ಯಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಎಂವಿಸಿ ಮರಣೋತ್ತರವಾಗಿ ಮಹಾವೀರ ಚಕ್ರ (ಎಂವಿಸಿ) ಪಡೆದ ಭಾರತೀಯ ವಾಯುಪಡೆಯ ಮೊದಲ ಅಧಿಕಾರಿ. ಭಾರತ-ಪಾಕಿಸ್ತಾನ ನಡುವಿನ ಯುದ್ಧದಲ್ಲಿ ಹಾರುವ ಬೆಂಕಿ ಎಂಬ ಖ್ಯಾತಿ ಪಡೆದಿದ್ದರು. ಪಾಕಿಸ್ತಾನದ ಸರ್ಗೊಡ ವಾಯುನೆಲೆಯ ಮೇಲೆ ದಾಳಿ ನಡೆದ ಸಂದರ್ಭ ಅನುಮಾನಾಸ್ಪದವಾಗಿ ಕಣ್ಮರೆಯಾಗಿದ್ದರು. ಆದರೆ ಹಲವು ವರ್ಷಗಳ ಬಳಿಕ ಅವರು ಸಾವನ್ನಪ್ಪಿರುವುದಾಗಿ ತಿಳಿದು ಬಂತು. ದೇಶಕ್ಕಾಗಿ ಹೋರಾಡಿ ವೀರ ಮರಣವನ್ನಪ್ಪಿದ ದೇವಯ್ಯ…
ಮಡಿಕೇರಿ ಸೆ.7 : ಎರಡು ಗಂಡಾನೆಗಳ ನಡುವೆ ಕಾದಾಟ ನಡೆದು 19 ವರ್ಷದ ಒಂದು ಕಾಡಾನೆ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಸಮೀಪದ ಮಾಕಳಿ ಅರಣ್ಯದಲ್ಲಿ ನಡೆದಿದೆ. ದೊಡ್ಡಮಾಕಳಿ ಅರಣ್ಯ ಪ್ರದೇಶದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೀಟ್ ಗೆ ಹೋಗಿದ್ದ ಸಂದರ್ಭ ಆನೆ ಮೃತಪಟ್ಟಿರುವುದು ಕಂಡು ಬಂದಿದೆ. ಮೃತಪಟ್ಟ ಆನೆಯ ಹೊಟ್ಟೆ ಮತ್ತು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಕಾಡಾನೆಗಳ ಚೀರಾಟ ಅತಿಯಾಗಿತ್ತು ಎಂದು ಸ್ಥಳೀಯ ಗ್ರಾಮಸ್ಥರು ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಸೆ.7 : ಕಾವೇರಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಅಪರೂಪದ ಬಿಳಿ ಕಡವೆ ಪತ್ತೆಯಾಗಿದೆ. ವನ್ಯಜೀವಿ ತಜ್ಞರು ಅಳವಡಿಸಿರುವ ಕ್ಯಾಮರಾದಲ್ಲಿ ಚಿತ್ರ ಸೆರೆಯಾಗಿದೆ. ಹನೂರು ತಾಲೂಕಿನ ಕಾವೇರಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಚಿರತೆಯ ಬಗ್ಗೆ ಅಧ್ಯಯನ ನಡೆಸಲು ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಹಾಗೂ ಬಳಗ ಕ್ಯಾಮರಾ ಅಳವಡಿಸಿದ್ದರು. ಈ ಕ್ಯಾಮೆರಾಗಳಲ್ಲಿ ಬಿಳಿ ಕಡವೆಯ ಚಲನ-ವಲನದ ದೃಶ್ಯ ಸೆರೆಯಾಗಿದೆ. 2014ರಲ್ಲಿ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಬಿಳಿ ಕಡವೆ ಪತ್ತೆಯಾಗಿತ್ತು. ಅದಾದ ಬಳಿಕ ಇದೀಗ ಕಾವೇರಿ ವನ್ಯಜೀವಿ ವಲಯದಲ್ಲಿ ಕಂಡು ಬಂದಿದೆ. ಇದೇ ಅರಣ್ಯದಲ್ಲಿ ಬಿಳಿನವಿಲು ಕೂಡ ಇರುವುದನ್ನು ಅರಣ್ಯ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿದ್ದರು.
ಬೆಂಗಳೂರು ಸೆ 7: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು. ಕಳೆದ ಐದು ವರ್ಷಗಳಲ್ಲಿ ದಾಖಲಾದ 10893 ಪ್ರಕರಣಗಳಲ್ಲಿ 1100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್ ಶೀಟ್ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ ಅಸಡ್ಡೆಯನ್ನು ತೋರಿಸುತ್ತದೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ಕೊಡಿಸಿದಂತಾಗುವುದಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಅಡಿಯಲ್ಲಿ 90 ದಿನಗಳೊಳಗೆ ಚಾರ್ಜ್ ಶೀಟ್ ಹಾಕದಿದ್ದರೆ, ಎಸ್ ಸಿ /ಎಸ್ಟಿ ದೌರ್ಜನ್ಯ ತಡೆ…
ಸಿದ್ದಾಪುರ ಸೆ.7 : (ಅಂಚೆಮನೆ ಸುಧಿ) ಚಿತ್ರ ಕಲಾವಿದರೊಬ್ಬರು ತಮ್ಮ ಕಲೆಯನ್ನು ತಾವು ಶಿಕ್ಷಣ ಪಡೆದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಪರಿಚಯ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ನೀಡುವ ಪ್ರಯತ್ನ ಮಾಡುತ್ತಿದೆ. ಆದರೆ ಮಕ್ಕಳ ಅತಿ ಆಸಕ್ತಿಯ ಚಿತ್ರಕಲೆಗೆ ಕೊಂಚ ಪ್ರೋತ್ಸಾಹ ಕಡಿಮೆಯೇ ಇದೆ. ಇದನ್ನು ಮನಗಂಡ ಮಾಲ್ದಾರೆಯ ಚಿತ್ರ ಕಲಾವಿದ ರೆಹಮತ್ ಬಾವ ಅವರು ಬಡ ವಿದ್ಯಾರ್ಥಿಗಳಲ್ಲಿ ಚಿತ್ರಕಲೆಯ ಬಗ್ಗೆ ಅರಿವು ಮೂಡಿಸುವ ಕಾಯಕದಲ್ಲಿ ತೊಡಗಿದ್ದಾರೆ. ತಾವು ವ್ಯಾಸಂಗ ಮಾಡಿದ ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಉಚಿತವಾಗಿ ಚಿತ್ರಕಲೆಯ ಕುರಿತು ತರಬೇತಿ ನೀಡುತ್ತಿದ್ದಾರೆ. ರೆಹಮತ್ ಅವರ ಪ್ರಯತ್ನದ ಫಲವಾಗಿ ವಿದ್ಯಾರ್ಥಿಗಳು ಕೂಡ ಅತಿ ಆಸಕ್ತಿಯಿಂದ ಚಿತ್ರಕಲೆಯನ್ನು ಮೈಗೂಡಿಸಿಕೊಳ್ಳುತ್ತಿದ್ದಾರೆ. ಜಾಹೀರಾತು ಮತ್ತು ಜಾಗೃತಿ ಫಲಕಗಳಲ್ಲಿ ಚಿತ್ರವನ್ನು ರಚಿಸುವ ಕಲೆಗಾರ ರೆಹಮತ್ ಗೋಡೆ ಬರಹಗಳ ಮೂಲಕವೂ ಗಮನ ಸೆಳೆದಿದ್ದಾರೆ. ಕಳೆದ ಅನೇಕ ವರ್ಷಗಳಿಂದ…
ನಾಪೋಕ್ಲು ಸೆ.7 : ಕಕ್ಕುಂದ ಕಾಡಿನ ವೆಂಕಟರಮಣ ದೇವಸ್ಥಾನದ ಗಣಪತಿ ಸೇವಾ ಸಮಿತಿ ವತಿಯಿಂದ 18ನೇ ವರ್ಷದ ಗೌರಿ ಗಣೇಶೋತ್ಸವವು ಸೆ.19 ರಂದು ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, ಬಳಿಕ ಗೌರಿ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ. ಸೆ.20 ರಿಂದ 23ರ ವರೆಗೆ ಐದು ದಿನಗಳ ಕಾಲ ದೇವಾಲಯದಲ್ಲಿ ನಿತ್ಯ ಪೂಜೆ ಮಹಾಪೂಜೆ, ಮಂಗಳಾರತಿ ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಲಿದೆ. ಸೆ. 20 ರಂದು ರವಿ ಓಂಕಾರ ತಂಡದಿಂದ ಸಂಗೀತ ಕಾರ್ಯಕ್ರಮ, ಸೆ.21ರಂದು ಸಮುದಾಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸೆ.22 ರಂದು ಬೆಳಿಗ್ಗೆ 10 ಗಂಟೆಯಿಂದ ಕೆಸರು ಗದ್ದೆ ಕ್ರೀಡಾಕೂಟ, ಹಗ್ಗ ಜಗ್ಗಾಟ, ಕಬ್ಬಡಿ ಹಾಗೂ ವಿವಿಧ ಕ್ರೀಡಾಕೂಟ ನಡೆಯಲಿದೆ. ಸೆ.23 ರಂದು ಮಹಾ ಪೂಜೆಯ ಬಳಿಕ ಅಪರಾಹ್ನ ಒಂದು ಗಂಟೆಗೆ ಅನ್ನದಾನ ನಡೆಯಲಿದೆ. ಬಳಿಕ ಸುಳ್ಯದ ನಾಸಿಕ್ ಬ್ಯಾಂಡ್ ಮತ್ತು ಚಂಡೆ ಮೇಳದೊಂದಿಗೆ ಪಟ್ಟಣದಲ್ಲಿ ಅಲಂಕೃತ ಮಂಟಪ ದೊಂದಿಗೆ ಬರವಣಿಗೆಯಲ್ಲಿ ಸಾಗಿ ಉತ್ಸವ ಮೂರ್ತಿಯನ್ನು ಕಾವೇರಿ…
ಮಡಿಕೇರಿ ಸೆ.7 : ಶಾಲೆಗೆ ತೆರಳಲೆಂದು ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳಿಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲ್ಲೂಕಿನ ಸೀತಾಪುರ ಕಾವಲು ಗೇಟ್ ಬಳಿ ನಡೆದಿದೆ. ಬಾವಿಕೆರೆ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಸೀತಾಪುರ ಕಾವಲು ತುಳಸಿ (15) ಮೃತ ದುರ್ದೈವಿ. ಮತ್ತೋರ್ವ ವಿದ್ಯಾರ್ಥಿನಿ ನಿವೇದಿತ (14) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಮರ ಮತ್ತು ಮನೆಯೊಂದಕ್ಕೂ ಡಿಕ್ಕಿ ಹೊಡೆದಿದೆ. ಅಸಮಾಧಾನಗೊಂಡ ಸಾರ್ವಜನಿಕರು ಬಸ್ ನ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣವೂ ನಡೆಯಿತು. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಸೆ.7 : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 58ನೇ ಪುಣ್ಯಸ್ಮರಣೆಯನ್ನು ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಸಹಯೋಗದಲ್ಲಿ ನಗರದ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಜನಪ್ರತಿನಿಧಿಗಳು, ನಿವೃತ್ತ ಯೋಧರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ದೇವಯ್ಯ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಈ ಸಂದರ್ಭ ಮಾತನಾಡಿದ ಏರ್ ಮಾರ್ಷಲ್ (ನಿವೃತ್ತ) ಕೊಡಂದೇರ ನಂದಾ ಕಾರ್ಯಪ್ಪ, ವೀರ ಸೇನಾನಿ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ಅವರು ದೇಶ ರಕ್ಷಣೆಯ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಅಜ್ಜಮಾಡ ಬಿ.ದೇವಯ್ಯ ಹಾಗೂ ಕರ್ನಲ್ ಪುಟ್ಟಿಚಂಡ ಎಸ್. ಗಣಪತಿ ಅವರಿಗೆ ಮಹಾವೀರ ಚಕ್ರ ಪ್ರಶಸ್ತಿ ದೊರೆತ್ತಿದೆ. ಆ ಮೂಲಕ ಕೊಡಗು ಜಿಲ್ಲೆಗೆ ಎರಡು ಮಹಾವೀರ ಚಕ್ರ ಪ್ರಶಸ್ತಿ ದೊರೆತಂತ್ತಾಗಿದೆ. ಇಬ್ಬರು ಯೋಧರು ದಕ್ಷತೆ ಮತ್ತು ಶೌರ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಇವರ…






