ಕುಶಾಲನಗರ ಫೆ.19 NEWS DESK : ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಫೆ.20 ರಂದು ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 10.00 ಗಂಟೆಗೆ ಮುಂಬೈನ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಲಿಮಿಟೆಡ್ ಸಂಸ್ಥೆ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR: ಸಿ ಎಸ್ ಆರ್) ನಿಧಿಯ ಅನುದಾನದಿಂದ ನಿರ್ಮಾಣವಾಗಿರುವ ವಿವಿಧೋದ್ದೇಶ ಸಭಾಂಗಣದ ದ್ಘಾಟನೆಗೊಳ್ಳಲಿದೆ. ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಲಿಮಿಟೆಡ್ ನ ಸಿಇಒ ಸುಂದರ ರಾಮನ್ ರಾಮಮೂರ್ತಿ ಉದ್ಘಾಟಿಸಲಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ಮತ್ತು ಸ್ಥಳೀಯ ಜನಪ್ರತಿನಿದಿಗಳು ಹಾಗೂ ಇಲಾಖೆ ಅಧಿಕಾರಿ ವರ್ಗದವರು ಆಗಮಿಸಲಿದ್ದಾರೆ ಎಂದು ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎ.ಸಿ. ಮಂಜುನಾಥ್ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಫೆ.19 NEWS DESK : ಚೆಟ್ಟಳ್ಳಿಯ ವಿರಾಟ್ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಫೆ.22 ರಂದು ಚೆಟ್ಟಳ್ಳಿಯಲ್ಲಿ ಬೃಹತ್ ‘ವಿರಾಟ್ ಹಿಂದೂ ಸಂಗಮ’ವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಸಂಯೋಜಕ ಪೇರಿಯನ ಉದಯ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಅವರು ಭಾನುವಾರ ಮಧ್ಯಾಹ್ನ 2 ಗಂಟೆಗೆ ವ್ಯಾಲಿ ಪ್ಲೇ ಶಾಲೆ ಮುಂಭಾಗದಿಂದ ಚೆಟ್ಟಳ್ಳಿ ಪ್ರೌಢಶಾಲಾ ಆಟದ ಮೈದಾನದವರೆಗೆ ಬೃಹತ್ ಶೋಭಾಯಾತ್ರೆ ಸಾಗಲಿದೆ. ಶೋಭಾಯಾತ್ರೆಯಲ್ಲಿ ಶ್ರೀ ಮೂಕಾಂಬಿಕ ಭಜನೆ ಕುಣಿತ ತಂಡ ನೆಲ್ಯಹುದಿಕೇರಿ, ಪೂರ್ಣ ಕುಂಭ ಸ್ವಾಗತ, ಉಡತ್ಮೊಟ್ಟೆ ತಂಡದವರಿಂದ ಭಜನೆ ಕುಣಿತ, ಬೆಳ್ಳಿ ರಥದ ಮೆರವಣಿಗೆ, ಶ್ರೀ ಶಬರೀಶ ಚೆಂಡೆ ಮೇಳ ತಂಡ ಚೆಟ್ಟಳ್ಳಿ, ಹುಲಿ ವೇಷ ಪುತ್ತೂರು, ಬಾಳೆಗುಂಡಿ ತಂಡದಿಂದ ಹಾಡಿ ಕುಣಿತ ಮತ್ತು ಶ್ರೀ ಶೆಟ್ಟಿ ಆರ್ಟ್ಸ್ ಗೊಂಬೆ ಬಳಗ ಬೆಳ್ತಂಗಡಿ ಹಾಗೂ ಇತರ ಆಕರ್ಷಕ ಕಾರ್ಯಕ್ರಮ ಜರುಗಲಿದೆ ಎಂದರು. ಸಂಜೆ 5ಗಂಟೆಗೆ ಚೆಟ್ಟಳ್ಳಿಯ ಪ್ರೌಢಶಾಲಾ ಆಟದ ಮೈದಾನದಲ್ಲಿ ಸಭಾ ಕಾರ್ಯಕ್ರಮ…
ಮಡಿಕೇರಿ ಫೆ.19 NEWS DESK : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದಿಂದ ನೀಡಲಾಗುತ್ತಿದ್ದ ಮರಣ ನಿಧಿಯ ಮೊತ್ತ ರೂ.5 ಸಾವಿರವನ್ನು ರೂ.10 ಸಾವಿರಕ್ಕೆ ಏರಿಕೆ ಮಾಡಲಾಗಿದ್ದು, ಸದಸ್ಯರು ಇದರ ಲಾಭ ಪಡೆದುಕೊಳ್ಳುವಂತೆ ಸಂಘದ ಉಪಾಧ್ಯಕ್ಷ ಚೊಕ್ಕಾಡಿ ಎನ್.ಅಪ್ಪಯ್ಯ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 20 ವರ್ಷಗಳಿಂದ ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘವು ನಿವೃತ್ತ ಪೊಲೀಸರ ಯೋಗಕ್ಷೇಮಕ್ಕೆ ಬದ್ಧವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಸದಸ್ಯರು ಮರಣ ಹೊಂದಿದಾಗ ಮೃತರ ಕುಟುಂಬಕ್ಕೆ ಸಂಘವು ಮರಣ ನಿಧಿಯ ಮೂಲಕ ರೂ.5 ಸಾವಿರವನ್ನು ಅಂತ್ಯಕ್ರಿಯೆಯ ಸಂದರ್ಭ ನೀಡುತ್ತಿದೆ. ಈಗ ಇರುವ ರೂ.5 ಸಾವಿರದ ಮೊತ್ತವನ್ನು 10 ಸಾವಿರಕ್ಕೆ ಏರಿಕೆ ಮಾಡಲು ಸಂಘ ನಿರ್ಧರಿಸಿದೆ. ಏರಿಕೆಯಾದ ಮೊತ್ತವನ್ನು 2027 ಜನವರಿ 27 ರ ನಂತರ ಮರಣ ಹೊಂದುವ ಸದಸ್ಯರ ಕುಟುಂಬಕ್ಕೆ ನೀಡುವ ನಿಯಮವನ್ನು ಜಾರಿಗೆ ತರಲಾಗುವುದು ಎಂದರು. ಈ ಹಿಂದೆ ಮರಣ ನಿಧಿಯಲ್ಲಿ ಪಡೆದ ಸದಸ್ಯತ್ವಕ್ಕೆ ರೂ.5…
ಮಡಿಕೇರಿ ಫೆ.19 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಹಿಂದೂ ಧರ್ಮ ಮತ್ತು ಸಂಸ್ಕøತಿಯ ಸಂರಕ್ಷಣೆಯ ಮಹಾನ್ ಚಿಂತನೆಯಡಿ, ಹಿಂದೂ ಬಾಂಧವರನ್ನು ಸಂಘoಟಿಸುವ ಉದ್ದೇಶದಿಂದ ರೂಪಿಸಲಾಗಿರುವ “ಹಿಂದೂ ಸಂಗಮ” ಕಾರ್ಯಕ್ರಮ ಮೂರ್ನಾಡಿನಲ್ಲಿ ಫೆ.22 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮೂರ್ನಾಡು ಮಂಡಲ ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ ಚೆಟ್ಟಿಮಾಡ ಜಯಂತ್ ಕುಮಾರ್ ಕಾರ್ಯಕ್ರಮದ ವಿವರಗಳನ್ನು ನೀಡಿ, ಅಂದು ಮಧ್ಯಾಹ್ನ 2.15 ಗಂಟೆಗೆ ಮೂರ್ನಾಡು ವಿದ್ಯಾಸಂಸ್ಥೆಯ ಮೈದಾನದಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಇದರಲ್ಲಿ ಸುತ್ತಮುತ್ತಲ ಆರು ಗ್ರಾಮಗಳ ಸಹಸ್ರಾರು ಮಂದಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಶೋಭಾಯಾತ್ರೆಯು ಮೂರ್ನಾಡು ವಿದ್ಯಾಸಂಸ್ಥೆಯ ಮೈದಾನದಿಂದ ಆರಂಭಗೊಂಡು, ಗಾಂಧಿ ನಗರ, ಮಹಿಳಾ ಸಮಾಜವನ್ನು ಹಾದು, ಪಟ್ಟಣದ ಮುಖ್ಯ ಬೀದಿಗಾಗಿ ಕೊಂಡಂಗೇರಿಗೆ ತೆರಳುವ ಜಂಕ್ಷನ್‍ವರೆಗೆ ಹೋಗಿ, ಅದೇ ಮಾರ್ಗವಾಗಿ ಪಾಂಡಾಣೆ ನಾಡ್‍ಮಂದ್‍ಗೆ ಆಗಮಿಸಲಿದೆ. ಶೋಭಾಯಾತ್ರೆಯಲ್ಲಿ ಕೊಡಗಿನ ವಾಲಗ, ಕೇರಳದ ಚಂಡೆ, ಬೊಂಬೆ ಕುಣಿತ, ನಾಗರಹೊಳೆ ಗಿರಿಜನ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಶೋಭಾಯಾತ್ರೆಯ ಬಳಿಕ ಸಭಾ…
ಮಡಿಕೇರಿ ಫೆ.19 NEWS DESK : ಮಡಿಕೇರಿ ನಗರದಲ್ಲಿ ತಲೆದೋರಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನಗರಸಭೆಯ ಆಡಳಿತ ವಿಫಲವಾಗಿದೆ. ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸದಿದ್ದಲ್ಲಿ ಎಸ್‌ಡಿಪಿಐ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ನಗರಸಭೆಯ ವಿರೋಧ ಪಕ್ಷದ ನಾಯಕ ಅಮೀನ್ ಮೊಹಿಸಿನ್ ಎಚ್ಚರಿಕೆ ನೀಡಿದ್ದಾರೆ. ಮಡಿಕೇರಿ ನಗರದ ಬಹುತೇಕ ರಸ್ತೆಯ ಎರಡು ಬದಿಗಳಲ್ಲಿ ಅಮೃತ್ 2.0 ನೀರಿನ ಪೈಪ್ ಅಳವಡಿಸಲು ಅಗೆದಿದ್ದು, ನಗರ ಪೂರ್ತಿ ದೂಳು ಆವರಿಸಿಕೊಂಡಿದೆ. ಇದರಿಂದ ಜನರು ಅನಾರೋಗ್ಯಕ್ಕೆ ಒಳಗಾಗುವ ಆತಂಕವಿದೆ. ಹೆಚ್ಚಿನ ರಸ್ತೆಗಳು ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಪೈಪ್ ಅಳವಡಿಸಿದ ನಂತರ ಡಾಂಬರೀಕರಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಿಲ್ಲ. ಆಡಳಿತ ಪಕ್ಷ ಕಳೆದ ಹತ್ತು ತಿಂಗಳಿನಲ್ಲಿ ಕೇವಲ 4 ಸಾಮಾನ್ಯ ಸಭೆಯನ್ನು ನಡೆಸಿದೆ. 4 ಸ್ಥಾಯಿ ಸಮಿತಿ ರಚನೆಯಾಗಿ 2 ತಿಂಗಳಾದರೂ ಒಂದೇ ಒಂದು ಸಭೆ ಕರೆಯಲಿಲ್ಲ. ಕಳೆದ 5 ತಿಂಗಳು ಆಡಳಿತ ನಡೆಸಿದ ಬಿ.ಜೆ.ಪಿ…
ಮಡಿಕೇರಿ, NEWS DESK ಫೆ.19 : ಟ್ರ‍್ಯಾಕ್ಟರ್ ಹಳ್ಳಕ್ಕೆ ಮಗುಚಿದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಬಾಗಲಕೋಟೆಯ ನಿವಾಸಿ ಪ್ರವೀಣ್ (35) ಮೃತ ದುರ್ದೈವಿ. ಚಾಲಕನಿಲ್ಲದ ಸಂದರ್ಭ ಟ್ರ‍್ಯಾಕ್ಟರ್ ಚಲಾಯಿಸುವ ದುಸ್ಸಾಹಸಕ್ಕೆ ಪ್ರವೀಣ್ ಕೈಹಾಕಿದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ನಿಯಂತ್ರಣ ತಪ್ಪಿದ ಟ್ರ‍್ಯಾಕ್ಟರ್ ಹಳ್ಳಕ್ಕೆ ಮಗುಚಿದ್ದು, ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಫೆ.19 NEWS DESK : ಕರ್ನಾಟಕ ರಾಜ್ಯದ 2026-27ರ ಬಜೆಟ್‍ನಲ್ಲಿ ಕೊಡಗು ಜಿಲ್ಲೆಯ ಅಭವೃದ್ಧಿಗೆ 500 ಕೋಟಿ ರೂ.ಗಳ ವಿಶೇಷ ಪ್ಯಾಕೆಜ್ ಘೋಷಣೆ ಮಾಡಬೇಕು ಮತ್ತು ಪ್ರವಾಸೋದ್ಯಮದ ಅಭಿವೃದ್ಧಿಗೆ ರೂ.2,500 ಕೋಟಿ ಬಿಡುಗಡೆಗೊಳಿಸಬೇಕು ಎಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಬಜೆಟ್ ನ ಬೇಡಿಕೆಗಳ ಕುರಿತು ಕರಪತ್ರದ ಮೂಲಕ ಸರಕಾರದ ಗಮನ ಸೆಳೆಯಲಾಗುವುದು ಎಂದರು. ಕೊಡಗಿಗೆ ಅತೀ ಅಗತ್ಯವಾಗಿರುವ ರೈಲು ಸಂಪರ್ಕವನ್ನು ಕೇಂದ್ರ ಹಾಗೂ ರಾಜ್ಯದ ಪ್ರತಿಷ್ಠೆಯ ಕಿತ್ತಾಟದಿಂದ ಕೈ ಬಿಡಲಾಗಿದೆ. ಈ ಬಜೆಟ್‍ನಲ್ಲಿ ಕೊಡಗಿಗೆ ರೈಲು ಸಂಪರ್ಕಕ್ಕಾಗಿ ಬೇಕಿರುವ ಅನುದಾನವನ್ನು ಕರ್ನಾಟಕ ಸರಕಾರ ಮೀಸಲಿಟ್ಟು ಪ್ರಕ್ರಿಯೆ ಪ್ರಾರಂಭಿಸಬೇಕು. ಕೊಡಗಿನ ಲೋಕಸಭಾ ಸದಸ್ಯರು ಕೇಂದ್ರದೊಂದಿಗೆ ಚರ್ಚಿಸಿ ಸಹಕರಿಸಬೇಕು. ತುರ್ತು ಆರೋಗ್ಯ ಸೇವೆಗಾಗಿ ಜಿಲ್ಲೆಗೆ ಏರ್ ಆಂಬ್ಯುಲೆನ್ಸ್ ನೀಡಬೇಕು. ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅನುದಾನ ಮೀಸಲಿಡಬೇಕು. ವನ್ಯಜೀವಿ ಹಾಗೂ ಮಾನವ ಸಂಘರ್ಷ…
ಮಡಿಕೇರಿ, NEWS DESK ಫೆ.19:-ಜಿಲ್ಲಾಧಿಕಾರಿಗಳು ಹಾಗೂ ಪ್ರಾಣಿದಯಾ ಸಂಘದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಮಡಿಕೇರಿ ಕೆ.ನಿಡುಗಣೆ ಜಿಲ್ಲಾ ಸರ್ಕಾರಿ ಗೋಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಗೋಶಾಲೆಯಲ್ಲಿ 37 ಜಾನುವಾರುಗಳನ್ನು ಸಾಕುತ್ತಿದ್ದು, ಜಾನುವಾರುಗಳ ನಿರ್ವಹಣೆಗೆ ಬೇಕಾಗುವ ಒಣ ಮೇವು ದಾಸ್ತಾನು, ಪಶು ಆಹಾರ ದಾಸ್ತಾನು ಕೊಠಡಿ ಹಾಗೂ ಚಿಕಿತ್ಸೆಗೆ ಬೇಕಾಗುವ ಔಷಧ ದಾಸ್ತಾನನ್ನು ಜಿಲ್ಲಾಧಿಕಾರಿ ಅವರು ವೀಕ್ಷಿಸಿದರು. ಗೋಶಾಲೆಯಲ್ಲಿನ ಜಾನುವಾರುಗಳ ನಿರ್ವಹಣೆಗೆ 3 ಜನ ಹೊರಗುತ್ತಿಗೆ ‘ಡಿ’ ದರ್ಜೆ ನೌಕರರು 3 ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಗೋಶಾಲೆ ಉಸ್ತುವಾರಿ ಅಧಿಕಾರಿ ಡಾ.ಎಂ.ಸಿ.ಲತಾ ಅವರು ಮಾಹಿತಿ ನೀಡಿದರು. ಹಸಿರು ಮೇವು ಬೆಳೆಯುವ ಕ್ಷೇತ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಗೋಶಾಲೆಗೆ ಹೆಚ್ಚುವರಿ ಜಾನುವಾರುಗಳ ಸೇರ್ಪಡೆಗೆ ಬೇಡಿಕೆ ಇದ್ದು, ಹೆಚ್ಚುವರಿ ದನದ ಕೊಟ್ಟಿಗೆ, ಒಣ ಮೇವು ದಾಸ್ತಾನು ಕೊಠಡಿ ನಿರ್ಮಾಣ ಹಾಗೂ ಹೆಚ್ಚುವರಿ ಜಾನುವಾರುಗಳನ್ನು ಮೇಯಲು ಬಿಡಲು ಗೋಶಾಲೆಗೆ ಮಂಜೂರಾದ 8 ಎಕರೆ ಜಾಗದ ಪೈಕಿ ಬಾಕಿ ಉಳಿದಿರುವ 6…
ಮಡಿಕೇರಿ, NEWS DESK ಫೆ.19:-ಮಾಜಿ ಸೈನಿಕರು ಮತ್ತು ಅವಲಂಬಿತರು ನಿವೇಶನಕ್ಕಾಗಿ ಫೆಬ್ರವರಿ, 25 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಿಲ್ಲಾ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ, ನಿರ್ದೇಶನಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ಪತ್ರ ಶೀರ್ಷಿಕೆಯಡಿ ಸುಳ್ಳು ಪ್ರಕಟಣೆಯನ್ನು ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿದ್ದು, ಈ ರೀತಿಯ ಯಾವುದೇ ಪ್ರಕಟಣೆಯನ್ನು ನಮ್ಮ ಇಲಾಖೆ ಅಥವಾ ಕಚೇರಿಯಿಂದ ಪ್ರಕಟಿಸಿರುವುದಿಲ್ಲ. ಈ ರೀತಿಯ ಸುಳ್ಳು ಪ್ರಕಟಣೆಯನ್ನು ನೀಡಿ ಮಾಜಿ ಸೈನಿಕರನ್ನು ದಿಕ್ಕು ತಪ್ಪಿಸುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ, NEWS DESK ಫೆ.19:-ಛತ್ರಪತಿ ಶಿವಾಜಿ ಮಹಾರಾಜರು ಭರತಖಂಡದಲ್ಲಿ ಜನಿಸದಿದ್ದರೆ ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಸಾಗರ್ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿವಾಜಿ ಮಹಾರಾಜರ ತಾಯಿ ಜೀಜಾಬಾಯಿಯವರಿಂದ ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುದನ್ನು ಸಮಾಜಕ್ಕೆ ಹೇಳಿಕೊಟ್ಟಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ಹುಟ್ಟಿ ಬೆಳೆದು ಭರತಖಂಡದ ಸಾಮ್ರಾಜ್ಯವನ್ನು ಕಟ್ಟಿದ್ದಾರೆ ಎಂದು ಲೋಕೇಶ್ ಸಾಗರ್ ಅವರು ಹೇಳಿದರು.ತಾಯಿ ಜೀಜಾಬಾಯಿ ಅವರ ಕಥೆಯನ್ನು ಕೇಳಿ ಬೆಳೆದ ಶಿವಾಜಿ ಅವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಉದ್ದೇಶದಿಂದ ಇಡೀ ಭರತ ಸಾಮ್ರಾಜ್ಯವನ್ನು ಕಟ್ಟಲು ಪ್ರಯತ್ನಿಸುತ್ತಾರೆ ಎಂದರು. ಶಿವಾಜಿ ಮಹಾರಾಜರು ಎಲ್ಲರನ್ನು ಪ್ರೀತಿಸುತ್ತಿದ್ದರು. ಗೌರವಿಸುತ್ತಿದ್ದರು ಎಂದು ಹೇಳಿದರು. ಶಿವಾಜಿ ಅವರ ತಾಯಿ ಜಿಜಾಬಾಯಿ ಅವರು…






