ಲೇಖಕ: admin

ಮಡಿಕೇರಿ ಅ.10 : ಕೊಡಗು ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸೇವಾದಳದ ರಾಜ್ಯ ಮುಖ್ಯ ಸಂಘಟಕ ಎಂ.ರಾಮಚಂದ್ರ ಅವರು ಭಾರತ್ ಸೇವಾದಳವನ್ನು 1923 ಡಿ.26 ರಂದು ಎನ್.ಎಸ್.ಹಾರ್ಡಿಕರ್ ಅವರು ಸ್ಥಾಪನೆ ಮಾಡಿದ್ದು, ಇದೀಗ 100 ವರ್ಷ ಪೂರೈಸುತ್ತಿದೆ. ಶತಮಾನೋತ್ಸವದ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅ.29 ರಂದು ಪಾದಯಾತ್ರೆ ಮತ್ತು ಬೃಹತ್ ಸಮಾವೇಶ ನಡೆಯಲಿದೆ ಎಂದರು. ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಅವರ ನೇತೃತ್ವದಲ್ಲ್ಲಿ ನಡೆದ ಸಭೆಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಆಯೋಜಿಸಲಾಗುವ ಸೇವಾದಳ ಸಮಿತಿಯ ರಾಜ್ಯ ಮಟ್ಟದ ಸಮಾವೇಶ, ಮುಂಬರುವ ಜಿ.ಪಂ, ತಾ.ಪಂ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಸೇವಾದಳ ಸಕ್ರಿಯವಾಗುವ ಹಾಗೂ ಜಿಲ್ಲಾ, ಬ್ಲಾಕ್, ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸುವ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭ ಎಂ.ರಾಮಚಂದ್ರ ಅವರನ್ನು ಸೇವಾದಳದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸೇವಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ತೆರೆಸಾ ವಿಕ್ಟರ್, ರಾಜ್ಯ ಉಪಾಧ್ಯಕ್ಷರಾದ ಜಾಕೀರ್ ಹುಸೇನ್, ರಮೇಶ್,…

Read More

ಮಡಿಕೇರಿ ಅ.10 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಕೊಡವ ಸಮಗ್ರ ಕುಲಶಾಸ್ತ್ರ ಅಧ್ಯಯನ, ಕೊಡವ “ಸಂಸ್ಕಾರ ಗನ್” ಸಂವಿಧಾನದ 25 ಮತ್ತು 26ನೇ ವಿಧಿಗಳಡಿಯಲ್ಲಿ ಕೊಡವರ “ಧಾರ್ಮಿಕ ಸಂಸ್ಕಾರ”ವೆಂದು ರಕ್ಷಿಸುವುದು ಸೇರಿದಂತೆ 9 ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ತೊಡನಾಡ್ (ಕುಮಟೂರ್-ಶ್ರೀಮಂಗಲ) ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು) ಅಜ್ಜಮಾಡ ನಾಡ್ ಮಂದ್- ಕುರ್ಚಿಯಲ್ಲಿ ನಡೆದ ಮೂರನೇ ಹಂತದ ಪಾದಯಾತ್ರೆ ಮತ್ತು ಕೊಡವ ಜನಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೀವನದಿ ಕಾವೇರಿಗೆ “ಕಾನೂನು ವ್ಯಕ್ತಿ ಸ್ಥಿತಿಯೊಂದಿಗೆ ಜೀವಂತ ಘಟಕವನ್ನು ನೀಡಬೇಕು. ಕಾವೇರಿಯು ವೇದ ಕಾಲದ 7 ಪವಿತ್ರ ನದಿಗಳಲ್ಲಿ ಒಂದಾಗಿದೆ. ಜಲದೇವತೆ ಕಾವೇರಿಯ ಜನ್ಮಸ್ಥಳವನ್ನು ಸರ್ಕಾರವು ಪೂಜ್ಯ ಭಾವನೆಯಿಂದ ಗೌರವಿಸಬೇಕು. ಯಹೂದಿ ಜನರ ಮೌಂಟ್ ಮೊರೈಯಾ ದೇವನೆಲೆ ಮಾದರಿಯಲ್ಲಿ ಕೊಡವ ಜನಾಂಗದ ಪವಿತ್ರ ತೀರ್ಥಯಾತ್ರ ಕೇಂದ್ರವಾಗಿ ತಲಕಾವೇರಿಯನ್ನು ಪರಿಗಣಿಸಬೇಕು. ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿನ ಅರಮನೆಯ ಸಂಚಿನಲ್ಲಿನ ಘಟಿಸಿದ…

Read More

ಮಡಿಕೇರಿ ಅ.10 : ಜಾಗತಿಕವಾಗಿ ಕೊರೊನಾ ಬಳಿಕ 8 ಜನರಲ್ಲಿ ಒಬ್ಬರಿಗೆ ಮಾನಸಿಕ ಅಸ್ವಸ್ಥತೆ ಕಂಡುಬರುತ್ತಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ, ಮಡಿಕೇರಿ, ಎಸ್‍ವಿವೈಎಂ, ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯು ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು’ ಎಂಬ ಘೋಷವಾಕ್ಯದಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಭೋದಕ ಆಸ್ಪತ್ರೆಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಾನಸಿಕ ಆರೋಗ್ಯ ಮನುಷ್ಯನಿಗೆ ತುಂಬಾ ಮುಖ್ಯ. ಮಾನಸಿಕ ಆರೋಗ್ಯದಲ್ಲಿ ವ್ಯತ್ಯಾಸವಾದಲ್ಲಿ ಸಮಾಜದ ಸ್ಥಿತಿಗತಿಗಳಲ್ಲಿ ಏರುಪೇರು ಉಂಟಾಗುತ್ತದೆ. ಸಮಾಜದ ಒಳಿತಿಗೆ ಮಾನಸಿಕ ಖಾಯಿಲೆಗೆ ತಕ್ಕಂತೆ ಔಷಧಿ ಹಾಗೂ…

Read More

ಮಡಿಕೇರಿ ಅ.10 : ಉಪನ್ಯಾಸಕರ ನೇಮಕ ಮತ್ತು ಮೂಲಭೂತ ಸೌಲಭ್ಯಗಳಿಗಾಗಿ ಒತ್ತಾಯಿಸಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕೊಡಗು ವಿಶ್ವ ವಿದ್ಯಾನಿಲಯ ರಚನೆಯಾದ ನಂತರ ನಮಗೆ ತೊಂದರೆಗಳು ಎದುರಾಗಿದ್ದು, ಶೈಕ್ಷಣಿಕ ಪ್ರಗತಿಗೆ ಅಡಚಣೆಯಾಗಿದೆ. ಕಾಲೇಜ್ ಗೆ 93 ಉಪನ್ಯಾಸಕರ ಅಗತ್ಯವಿದ್ದು, ಕೇವಲ 43ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಾಠವನ್ನು ಮಾಡದೆ ಪರೀಕ್ಷೆ ಮಾಡಲಾಗುತ್ತಿದೆ, ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಲ್ಯಾಬ್ ನಲ್ಲಿ ಸೌಲಭ್ಯದ ಕೊರತೆ ಇದೆ ಮತ್ತು ಹಾಸ್ಟೆಲ್ ವ್ಯವಸ್ಥೆ ಇಲ್ಲವೆಂದು ವಿದ್ಯಾರ್ಥಿಗಳು ಆರೋಪಿಸಿದರು. ಸಮಸ್ಯೆಗಳ ಕುರಿತು ಕಾಲೇಜು ಆಡಳಿತ ಮಂಡಳಿಗೆ ಹಲವು ಬಾರಿ ತಿಳಿಸಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಉಪನ್ಯಾಸಕರ ನೇಮಕ ಸೇರಿದಂತೆ ಎಲ್ಲಾ ಬೇಡಿಕೆಗಳು ಈಡೇರುವವರೆಗೆ ತರಗತಿಗೆ ಹಾಜರಾಗುವುದಿಲ್ಲವೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಪ್ರತಿಭಟನೆಯ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಕೊಡಗು ವಿವಿ ಕುಲಪತಿ ಅಶೋಕ್ ಸಂಗಪ್ಪ ಆಲೂರ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಸೀನಪ್ಪ ಅವರುಗಳು ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು. ಕೊಡಗು ವಿಶ್ವ ವಿದ್ಯಾನಿಲಯ…

Read More

ಮಡಿಕೇರಿ ಅ.10 : ಬಾಳೆಲೆ ಕಾಲೇಜು ಕ್ರೀಡಾಂಗಣದಲ್ಲಿ ಬಿರ್ಸಾಮುಂಡ ಸಮಿತಿ ವತಿಯಿಂದ ನಡೆದ ಹಗ್ಗಜಗ್ಗಾಟ ಮುತ್ತು ತಟ್ಟೆಬಿಲ್ಲು ಸ್ಪರ್ಧೆಗೆ ಯರವ ಸಮುದಾಯದ ದೈವಾರಾಧಕ ಮುತ್ತ ಸಾಂಪ್ರದಾಯಿಕ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಬುಡಕಟ್ಟು ಸಾಮಾಜಿಕ ಹೋರಾಟಗಾರ ಗಪ್ಪು ಮಾತನಾಡಿ ಗಿರಿಜನ ಹಾಡಿಯ ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಜೊತೆಗೆ ಬುಡಕಟ್ಟು ಜನರ ಶ್ರೀಮಂತ ಸಾಂಸ್ಕೃತಿಯನ್ನು ಉಳಿಸುವಂತೆ ಕರೆ ನೀಡಿದರು. ಬಿರ್ಸಾಮುಂಡ ಸಮಿತಿಯ ಅಧ್ಯಕ್ಷ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಬಾಳೆಲೆ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿಮ್ಮಣಮಾಡ ಕೃಷ್ಣ ಗಣಪತಿ, ನಿಟ್ಟೂರು ಗ್ರಾ.ಪಂ ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ, ನಿವೃತ್ತ ಯೋಧ ಕಾಳ, ಗಿರಿಜನ ಮುಖಂಡರುಗಳಾದ ಗಪ್ಪು, ಅಪ್ಪಾಜಿ, ತಟ್ಟಕೆರೆ ದಾಸಪ್ಪ, ಬಿರ್ಸಾಮುಂಡ ಸಮಿತಿಯ ಕಾರ್ಯದರ್ಶಿ ದಿನೇಶ್ ತಿತಿಮತಿ, ಸಂಚಾಲಕ ಮಾಚಿಮಾಡ ರವೀಂದ್ರ, ನಿರ್ದೇಶಕರಾದ ಮುರುಗೇಶ್, ಕಾಯರ ಕಿರಣ್…

Read More

ಮಡಿಕೇರಿ ಅ.10 : ಮುಂದಿನ ಪೀಳಿಗೆಗಾಗಿ ನಾವು ಅಳಿವಿನಂಚಿನಲ್ಲಿರುವ ಜೀವ ಪ್ರಭೇದಗಳನ್ನು ಸಂರಕ್ಷಿಸುವ ಮೂಲಕ ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ನಾವು ಪಣ ತೊಡಬೇಕಿದೆ ಎಂದು ಕೂಡ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್ ವತಿಯಿಂದ ನಮ್ಮ ನಡೆ ಪರಿಸರದೆಡೆಗೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ 69ನೇ ರಾಷ್ಟ್ರೀಯ ವನ್ಯಜೀವಿ ಸಪ್ತಾಹ : 2023 ಕಾರ್ಯಕ್ರಮದಲ್ಲಿ ಮಕ್ಕಳಿಗೆ ವನ್ಯಜೀವಿಗಳ ಸಂರಕ್ಷಣೆಯ ಮಹತ್ವ ಕುರಿತು ಮಾತನಾಡಿದರು. ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವುದು ನಮ್ಮ ಆದ್ಯ ಕರ್ತವ್ಯ ಆಗಿದೆ ಎಂದರು. ವನ್ಯಜೀವಿ ಸಪ್ತಾಹದ ಉದ್ದೇಶ ಹಾಗೂ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿ ಮಕ್ಕಳೊಂದಿಗೆ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತು ಸಂವಾದ ನಡೆಸಿದ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪರಿಸರ…

Read More

ಮಡಿಕೇರಿ ಅ.10 : ಜಿಲ್ಲಾ ಮಟ್ಟದ ಆಯುಷ್ಮಾನ್ ಭವ ಕಾರ್ಯಕ್ರಮದ ಪ್ರಯುಕ್ತ ಸಿದ್ದಾಪುರದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಬೋಧಕ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರ, ಗ್ರಾ.ಪಂ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಬಿರದಲ್ಲಿ ಸಾಮಾನ್ಯ ವೈದಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಆಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು. ಶಿಬಿರದಲ್ಲಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರನ್ನು ಮಡಿಕೇರಿ ವ್ಯೆದ್ಯಕೀಯ ಆಸ್ಪತ್ರೆಗೆ ಕಳುಹಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದಾಪುರ ಗ್ರಾ.ಪಂ ಅಧ್ಯಕ್ಷೆ ಪ್ರೇಮ ಗೋಪಾಲ್, ಕೊಡಗಿನ ಗಡಿಯಲ್ಲಿ ಹೆಚ್ಚು ಮಾನವ ಪ್ರಾಣಿ ಸಂಘರ್ಷಗಳು ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಪಡೆಯುವುದು ಮುಖ್ಯವಾಗಿರುತ್ತದೆ ಹಾಗೂ ಕನಿಷ್ಠ…

Read More

ಮಡಿಕೇರಿ ಅ.10 : ಚದುರಂಗದಾಟ ಮಕ್ಕಳಲ್ಲಿ ಬೌದ್ದಿಕ ಕೌಶಲ್ಯವನ್ನು ಹೆಚ್ಚಿಸುವ ಮೂಲಕ ಸಂದಿಗ್ಧ ಪರಿಸ್ಥಿಯನ್ನು ನಿಭಾಯಿಸಲು ಸಹಕಾರಿಯಾಲಿದೆ ಎಂದು ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ. ಮಡಿಕೇರಿಯ ಮಾಸ್ಟರ್ ಮೈಂಡ್ ಚೆಸ್ ಸ್ಕೂಲ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಿದ್ದ ಕೊಡಗು ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳು ಟಿವಿ, ಮೊಬೈಲ್ ಗೆ ದಾಸರಾಗುವುದನ್ನು ತಪ್ಪಿಸಲು ಚೆಸ್ ಸೇರಿದಂತೆ ಇನ್ನಿತರ ಬೌದ್ಧಿಕ ಕೌಶಲ್ಯವನ್ನು ಹೆಚ್ಚಿಸುವ ಆಟಗಳಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಸ್ಟರ್ ಮೈಂಡ್ ಚೆಸ್ ಸ್ಕೂಲ್ ನ ಸಂಸ್ಥಾಪಕಿ ಕಾವ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್, ತಜ್ಞ ವೈದ್ಯರಾದ ಡಾ.ಅಭಿನಂದನ್, ಕೊಡಗು ಚಾನೆಲ್ ಸಂಪಾದಕ ಜಿ.ವಿ. ರವಿಕುಮಾರ್, ಕೊಡಗು ಚಾನೆಲ್ ನ ಹಿರಿಯ ವರದಿಗಾರ ಟಿ.ಜೆ.ಪ್ರವೀಣ್ ಕುಮಾರ್, ಡೈನಾಮಿಕ್ ಪತ್ರಿಕೆಯ ಉಪ ಸಂಪಾದಕ ಜಿ.ಎಸ್.ವಿನಯ್ ಕುಮಾರ್…

Read More

ಮಡಿಕೇರಿ ಅ.10 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವರ್ಷಂಪ್ರತಿ ಜಿಲ್ಲೆಯ ಮಹಿಳಾ ಲೇಖಕರಿಗೆ ನೀಡುತ್ತಿರುವ ಪ್ರತಿಷ್ಠಿತ ಕೊಡಗಿನ ಗೌರಮ್ಮ ಪ್ರಶಸ್ತಿಗೆ 2023-24 ಸಾಲಿಗೆ ಈರಮಂಡ ಹರಿಣಿ ವಿಜಯ್ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪ್ರಕಟಿಸಿದ ಅವರು, ಗೌರಮ್ಮ ಪುಸ್ತಕ ಪ್ರಶಸ್ತಿಗೆ ಈ ಬಾರಿ 12 ಲೇಖಕರು 15 ಪುಸ್ತಕಗಳನ್ನು ಕಳುಹಿಸಿದ್ದರು. ಇದರಲ್ಲಿ ಈರಮಂಡ ಹರಿಣಿ ವಿಜಯ್ ಅವರ ‘ಅಗ್ನಿ ಯಾತ್ರೆ’ ಮತ್ತು ಕಟ್ರತನ ಲಲಿತಾ ಅಯ್ಯಣ್ಣ ಅವರ ‘ಕಡಲಾಳದ ಮುತ್ತುಗಳು’ ಪುಸ್ತಕಗಳು ಸಮಾನ ಅರವತ್ತು ಅಂಕಗಳನ್ನು ಪಡೆದುಕೊಂಡ ಹಿನ್ನೆಲೆ. ಈ ಬಾರಿ ಪ್ರÀಶಸ್ತಿಯನ್ನು ಇಬ್ಬರು ಲೇಖಕಿಯರಿಗೆ ನೀಡಲಾಗುತ್ತಿದೆಯೆಂದು ಸ್ಪಷ್ಟಪಡಿಸಿದರು. ಜಿಲ್ಲಾ ಕಸಾಪದಿಂದ ಇದೇ ಅ.27 ರಂದು ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯುವ ಗೌರಮ್ಮ ದತ್ತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಅಂದಿನ ಕಾರ್ಯಕ್ರಮವನ್ನು ಕಾಲೇಜಿನ ವೆಂಕಟೇಶ್…

Read More

ಮಡಿಕೇರಿ ಅ.10 : ಅತ್ಯಂತ ಸರಳವಾಗಿ ಮಹಾಭಾರತದ ಬಗ್ಗೆ ಯುವ ಸಮೂಹಕ್ಕೆ, ಅದರಲ್ಲೂ ಎಳೆಯರಿಗೆ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಸಾಹಿತಿ ಬಾಚಮ್ಮಂಡ ಗೌರಮ್ಮ ಮಾದಮ್ಮಯ್ಯ ಅವರು ರಚಿಸಿರುವ ‘ಸಂಪೂರ್ಣ ಮಹಾಭಾರತ ಪ್ರಶ್ನೋತ್ತರ’ ಪುಸ್ತಕವನ್ನು ಕರ್ನಾಟಕ ಜಾನಪದ ಪರಿಷತ್‍ನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ಅನಾವರಣಗೊಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಆಯೋಜಿತ ಸುದ್ದಿಗೋಷ್ಠಿಯಲ್ಲಿ ಪುಸ್ತಕವನ್ನು ಉದ್ಘಾಟಿಸಿ ಮಾತನಾಡಿದ ಅನಂತಶಯನ, ನಮ್ಮ ಶ್ರೀಮಂತ ಸಂಸ್ಕೃತಿಯ ಸಂಪತ್ತು ಅರಿಯದ ನಮ್ಮ ನಡೆಗಳು ಹಲವಾರು ಬಾರಿ ಇತರರ ತಪ್ಪು ತಿಳುವಳಿಕೆಗೆ ಕಾರಣವಾಗುತ್ತದೆ. ಈ ಹಿನ್ನೆಲೆ ಗೌರಮ್ಮ ಮಾದಮ್ಮಯ್ಯ ಅವರು ಬರೆದಿರುವ ಮಹಾಭಾರತವನ್ನು ಪ್ರಶ್ನೋತ್ತರಗಳ ಮೂಲಕ ತಿಳಿಸಿಕೊಡುವ ಪ್ರಯತ್ನ ಅತ್ಯಂತ ಶ್ಲಾಘನೀಯವೆಂದು ಮೆಚ್ಚುಗೆಯ ನುಡಿಗಳನ್ನಾಡಿದರು. ಹಿರಿಯ ಸಾಹಿತಿ ಕಸ್ತೂರಿ ಗೋವಿಂದಮ್ಮಯ್ಯ ಅವರು ಮಾತನಾಡಿ, ನಮ್ಮ ಸಂಸ್ಕೃತಿ, ಆಚಾರ ವಿಚಾರಗಳಿಂದು ನಶಿಸುತ್ತಿರುವುದಕ್ಕೆ, ನಮ್ಮಲ್ಲಿನ ಶ್ರೀಮಂತ ಸಂಸ್ಕೃತಿಯ ಬಗ್ಗೆ ಅರಿವನ್ನು ಹೊಂದಿರುವುದೇ ಪ್ರಮುಖ ಕಾರಣ. ನಮ್ಮ ಸಾಂಸ್ಕೃತಿಕ ವೈಭವವನ್ನು ಮತ್ತೆ ಪಡೆಯಲು, ಯುವ ಸಮೂಹಕ್ಕೆ ಅರಿವು ಮೂಡಿಸುವ ಇಂತಹ ಪುಸ್ತಕಗಳು ಕಾರಣವಾಗಲ್ಲುದೆಂದು…

Read More