ಮಡಿಕೇರಿ ಅ.9 : ಜೀವನದಾರಿ ಅನಾಥಾಶ್ರಮ ಆಶ್ರಮದ ಸ್ಥಾಪಕ ರಮೇಶ್ ಅವರ ನಿಧನಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್ ಎಸ್ ಭೋಸರಾಜು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜೀವನದಾರಿ ಆಶ್ರಮದ ಮೂಲಕ ರಮೇಶ್ ಅವರ ಸಮಾಜಸೇವೆ ಶ್ಲಾಘನೀಯ. ಅನಾಥಾಶ್ರಮದ ಉಸ್ತುವಾರಿ ರಮೇಶ್ ಅವರ ಅಕಾಲಿಕ ಮರಣದಿಂದ ಆಶ್ರಮವಾಸಿಗಳಿಗೆ ಯಾವುದೇ ತೊಂದರೆ ಆಗಬಾರದು. ಅನಾಥಾಶ್ರಮದಲ್ಲಿರುವವರಿಗೆ ತೊಂದರೆ ಆಗದಂತೆ ಅಗತ್ಯ ಸಹಕಾರವನ್ನು ಜಿಲ್ಲಾಡಳಿತ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಲೇಖಕ: admin
ಮಡಿಕೇರಿ ಅ.9 : ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾಗಿರುವ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈ ಯೋಜನೆ ಕಾಮಗಾರಿಗಳನ್ನು ಪರಿಶೀಲಿಸಲು ಕೇಂದ್ರ WASH (WATER, SANITATION and HYGIENE) ತಜ್ಞರ ತಂಡದ ಅನಿಲ್ ಬಿಹಾರಿ ಮತ್ತು ಜಾಲಿ ಕೇಶವನ್ ರವರು ಜಿಲ್ಲೆಗೆ ಆಗಮಿಸಿದ್ದು, 3 ದಿನಗಳ ಕಾಲ ಜೆ.ಜೆ.ಎಂ ಮತ್ತು ಎಸ್ ಬಿ ಎಂ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ಯೋಜನೆಯಡಿಯಲ್ಲಿ ಒಟ್ಟು 463 ಜನವಸತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿರುತ್ತದೆ. ಇದರಲ್ಲಿ ಮಡಿಕೇರಿ ತಾಲ್ಲೂಕಿನ ಮಕ್ಕಂದೂರು, ಕಾಟಕೇರಿ, ಮದೆ, ಮಲೆಚೆಂಬು ಮತ್ತು ಸೊಡ್ಲೂರು ಕಟ್ಟೆಮಾಡು ಗ್ರಾಮಗಳು, ಸೋಮವಾರಪೇಟೆ ತಾಲ್ಲೂಕಿನ 7ನೇ ಹೊಸಕೋಟೆ, ಶಾಂತಳ್ಳಿ, ಕುಂದಳ್ಳಿ, ಕುಂಬೂರು, ಸೂರ್ಲಬ್ಬಿ, ಬೇಲೂರು ಬಸವನಹಳ್ಳಿ, ದೊಡ್ಡಮಳ್ತೆ, ಗಣಗೂರು, ಹಿತ್ಲುಕೇರಿ ಹಾಗೂ ಮುಳ್ಳೂರು ಗ್ರಾಮಗಳು ಮತ್ತು ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿನ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಪರಿಶೀಲನೆ ನಡೆಸಿದ್ದಾರೆ. ಕೇಂದ್ರ WASH ತಂಡವು ಆಯಾ ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿ,…
ಮಡಿಕೇರಿ ಅ.9 : ನಗರದಲ್ಲಿ ನಡೆದ ಶಾಪಿಂಗ್ ಉತ್ಸವದಲ್ಲಿ ಆಯೋಜಿಸಲಾಗಿದ್ದ KODAGU”GOT TALENT ಜೂನಿಯರ್ ಸೋಲೋ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ನ 4ನೇ ತರಗತಿ ವಿದ್ಯಾರ್ಥಿನಿ ಪಿ.ಜಿ.ಸಿಂಚನ ಕಾವೇರಮ್ಮ ಪ್ರಥಮ ಸ್ಥಾನ ಪಡೆದಿದ್ದಾಳೆ. ಕೋಪಟ್ಟಿ ಗ್ರಾಮದ ಪೊಡನೋಳನ ಗಿರೀಶ್ ಹಾಗೂ ಪವಿತ್ರ ದಂಪತಿ ಪುತ್ರಿಯಾಗಿರುವ ಸಿಂಚನ ಕಾವೇರಮ್ಮ ಮಡಿಕೇರಿಯ ನಾಟ್ಯ ಕಲಾ ಡ್ಯಾನ್ಸ್ ಸ್ಟುಡಿಯೋದ ನೃತ್ಯ ತರಬೇತುದಾರ ಮತ್ತು ಸಂಯೋಜಕ ಅಭಿಷೇಕ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾಳೆ.
ಮಡಿಕೇರಿ ಅ.9 : ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಮಾಡಲಾಗುತ್ತಿದ್ದು, ನ.15 ರೊಳಗೆ ಅರ್ಜಿ ಸಲ್ಲಿಸಬೇಕೆಂದು ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯ ಕುಮಾರ್ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಕನ್ನಡ ಮಾಧ್ಯಮದಲ್ಲಿ ಶೇ.80 ಮೇಲ್ಪಟ್ಟು ಮತ್ತು ಆಂಗ್ಲ ಮಾಧ್ಯಮದಲ್ಲಿ ಶೇ.90 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿ.ಯು.ಸಿ ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಹಾಗೂ ಸಿ.ಇ.ಟಿ ಯಲ್ಲಿ 1000 ರ‍್ಯಾಂಕ್ ಒಳಗೆ, ಎನ್.ಇ.ಇ.ಟಿ ಯಲ್ಲಿ ರಾಷ್ಟ್ರ ಮಟ್ಟದಲ್ಲಿ 5000 ಒಳಗೆ ರ‍್ಯಾಂಕ್ ಗಳಿಸಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳು 2023 ನ.15 ರೊಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಛೇರಿಗೆ ತಲುಪಿಸಬೇಕು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ವೈದ್ಯಕೀಯ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಪಡೆದ ಮತ್ತು ಕ್ರೀಡೆ,…
ಮಡಿಕೇರಿ ಅ.9 : ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.5 ಲಕ್ಷ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2023-24ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ ಎಂದು ಸಾಂತ್ವನ ಕೇಂದ್ರದ ಅಧ್ಯಕ್ಷ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ನಮಿತ ರೈ ತಿಳಿಸಿದ್ದಾರೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 4928 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 4947 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2023-24ನೇ ಆರ್ಥಿಕ ಸಾಲಿನಲ್ಲಿ ಏಪ್ರಿಲ್ ತಿಂಗಳಿಂದ ಸೆಪ್ಟೆಂಬರ್, ತಿಂಗಳ ಅಂತ್ಯದವರೆಗೆ 143 ಪ್ರಕರಣಗಳು ದಾಖಲಾಗಿ 128 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ ಉಳಿದ 15 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ…
ಮಡಿಕೇರಿ ಅ.9 : ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಸಾರ್ವಜನಿಕ ಶಿಕ್ಷಣ, ಲೋಕೋಪಯೋಗಿ ಹೀಗೆ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಅನುದಾನವನ್ನು ಕಾಲಮಿತಿಯಲ್ಲಿ ನಿಯಮಾನುಸಾರ ಬಳಸುವಂತೆ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮ ಅನುಷ್ಠಾನ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪ್ರತೀ ಇಲಾಖೆಗೂ ಸಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಕಾರ್ಯಕ್ರಮಗಳು/ ಸೌಲಭ್ಯಗಳು ನಿಗಧಿಯಾಗಿದ್ದು, ಸರ್ಕಾರದ ನಿರ್ದೇಶನವನ್ನು ಪಾಲಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಕೌಶಲ್ಯ ಕಾರ್ಯಕ್ರಮದಡಿ ವಿವಿಧ ವೃತ್ತಿಪರ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಎಸ್‍ಸಿಎಸ್‍ಪಿ/ಟಿಎಸ್‍ಪಿ…
ಮಡಿಕೇರಿ ಅ.9 : ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ನೀಡಿರುವ ಸಲಹೆಗಳನ್ನು ಪರಿಗಣಿಸಿ, ಪರಿಶಿಷ್ಟರು ವಾಸಿಸುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ(ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಮಸ್ಯೆಗಳ ತ್ವರಿತ ಇತ್ಯರ್ಥಕ್ಕೆ ಇಲಾಖೆಗಳು ಆದ್ಯತೆ ನೀಡಬೇಕು ಮತ್ತು ಸಕಾಲದಲ್ಲಿ ಸ್ಪಂದಿಸಬೇಕು ಎಂದರು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಚ್.ಎಸ್.ಮುತ್ತಪ್ಪ ಅವರು ಐಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಪರಿಶಿಷ್ಟರು ವಾಸಿಸುವ ಗ್ರಾಮಗಳಿಗೆ ಕುಡಿಯುವ ನೀರು ಸಂಪರ್ಕ, ತಡೆಗೋಡೆ ನಿರ್ಮಾಣ, ಹೀಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ಕೋರಿದರು. ಮತ್ತೊಬ್ಬ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಅವರು ಮಾತನಾಡಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವಾಸಮಾಡುವ…
ಮಡಿಕೇರಿ ಅ.9 : ನಗರದಲ್ಲಿ ನಡೆದ ಶಾಪಿಂಗ್ ಉತ್ಸವದಲ್ಲಿ ಆಯೋಜಿಸಲಾಗಿದ್ದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಎಸ್.ಆರ್ವಿ ಪ್ರಥಮ ಸ್ಥಾನ ಪಡೆದಿದ್ದಾಳೆ. ನಗರದ ಕಾವೇರಿ ಹಾಲ್‍ನಲ್ಲಿ ನಡೆದ ನೃತ್ಯದಲ್ಲಿ ಸೋಲೋ ವಿಭಾಗದಲ್ಲಿ ಆರ್ವಿ ಪ್ರಥಮ ಸ್ಥಾನ ಗಳಿಸಿದ್ದಾಳೆ. ಇತ್ತೀಚೆಗೆ ಮಂಗಳೂರಿನ ಸ್ಪಂದನ ಟಿ.ವಿ ನಡೆಸಿದ ಕರ್ನಾಟಕ ಬೆಸ್ಟ್ ಡ್ಯಾನ್ಸ್ ಜೂನಿಯರ್ಸ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾಳೆ. ಕನ್ನಂಡಬಾಣೆಯ ನಿವಾಸಿ, ಪತ್ರಕರ್ತ ಎಸ್.ಪಿ.ಸುರ್ಜಿತ್ ಹಾಗೂ ಬಿ.ಸಿ.ಲೆಮಿತಾಶ್ವಿನಿ ದಂಪತಿಯ ಪುತ್ರಿಯಾಗಿರುವ ಆರ್ವಿ, ಮಡಿಕೇರಿಯ ನಾಟ್ಯ ಕಲಾ ಡ್ಯಾನ್ಸ್ ಸ್ಟುಡಿಯೋದ ನೃತ್ಯ ತರಬೇತುದಾರ ಮತ್ತು ಸಂಯೋಜಕ ಅಭಿಷೇಕ್ ಅವರ ಬಳಿ ಆರ್ವಿ ತರಬೇತಿ ಪಡೆಯುತ್ತಿದ್ದಾಳೆ.
ಮಡಿಕೇರಿ ಅ.9 : ಸಂವಿಧಾನದ ಆರ್ಟಿಕಲ್ 244 R/w 6 ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕೊಡವ ಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 3ನೇ ಹಂತದ ಪಾದಯಾತ್ರೆಯ ಮುಂದುವರಿದ ಭಾಗವನ್ನು ದಕ್ಷಿಣ ಕೊಡಗಿನ ಕಿರ್ನಾಲ್‍ನಾಡ್ – ಗುಮ್ಮತ್ಮಾಡ್ ನಾಡ್ ಮಂದ್ (ಕಿರ್ಗೂರ್-ಬೆಸಗೂರ್) ಮತ್ತು ಪತ್ತ್ ಕಟ್‍ನಾಡ್ (ಬೆಕ್ಕೆಸೆಡ್ಲೂರ್-ಕಾನೂರ್) ಮಂದ್ ನಲ್ಲಿ ನಡೆಸಿತು. ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕೊಡವ ಜಾಗೃತಿ ಸಭೆ ಆರಂಭಿಸಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, 9 ಪ್ರಮುಖ ಹಕ್ಕೊತ್ತಾಯಗಳನ್ನು ಮಂಡಿಸಿದರು. ಕೊಡವರ ಸಾಂವಿಧಾನಿಕ ಭದ್ರತೆಗಾಗಿ ಹಕ್ಕೊತ್ತಾಯಗಳ ಕುರಿತು ಸರ್ಕಾರದ ಗಮನ ಸೆಳೆಯಲು ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ. ಬೇಡಿಕೆ ಈಡೇರುವವರೆಗೆ ಸಿಎನ್‍ಸಿ ಹೋರಾಟ ಮುಂದುವರೆಯಲಿದೆ. ಸರ್ವ ಕೊಡವರು ಈ ಹೋರಾಟದೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ್ಮ ಸಮಗ್ರ ಕುಲಶಾಸ್ತ್ರ ಅಧ್ಯಯನ, ಕೊಡವ “ಸಂಸ್ಕಾರ ಗನ್” ಹಕ್ಕುಗಳನ್ನು ಸಿಖ್ಖರ “ಕಿರ್ಪಾನ್” ಗೆ…
ಕೂಡಿಗೆ ಅ.9 : ಉತ್ತರ ಕೊಡಗಿನ ಕೂಡಿಗೆಯ ಸರ್ಕಾರಿ ಕ್ರೀಡಾಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರು ಮತ್ತು ಬಾಲಕಿಯರ ಎರಡು ದಿನಗಳ ರಾಜ್ಯಮಟ್ಟದ ಮಕ್ಕಳ ಹಾಕಿ ಪಂದ್ಯಾವಳಿ ಆರಂಭಗೊಂಡಿತು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಉಪ ನಿರ್ದೇಶಕ ಹಾಗೂ ಸಂಸ್ಥೆಯ ಪ್ರಾಂಶುಪಾಲ ಎಂ.ಚಂದ್ರಕಾಂತ್ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕ್ರೀಡೆಯು ನಮ್ಮ ದೈಹಿಕ ದೃಢತೆ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯ ಕಾಪಾಡುವುದರೊಂದಿಗೆ ಶಿಸ್ತಿನ ಜೀವನ ಮತ್ತು ಉತ್ತಮ ಬದುಕನ್ನು ರೂಪಿಸಲು ಸಹಕಾರಿಯಾಗಿವೆ ಎಂದರು. ಕೊಡಗಿನಲ್ಲಿ ಹಾಕಿ ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹದಿಂದ ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಹಾಕಿ ಟೂರ್ನಿಯಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟಗಳಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕು ಎಂದರು. ಏಷ್ಯನ್ ಕ್ರೀಡಾಕೂಟದಲ್ಲಿ ಚೀನಾ ಮತ್ತು ಜಪಾನ್ ಮಾದರಿಯಲ್ಲಿ ಭಾರತದ ಕ್ರೀಡಾಳುಗಳಿಗೂ ಹೆಚ್ಚಿನ…






