ಲೇಖಕ: admin

ವಿರಾಜಪೇಟೆ ಅ.9 : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ನಡೆದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮಂಗಳೂರಿನ ಸೇಕ್ರೆಡ್ ಹಾರ್ಟ್ ಕಾಲೇಜು ತಂಡ “ವಿನ್ನರ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಆತಿಥೇಯ ಸೆಂಟ್ ಆನ್ಸ್ ಪದವಿ ಕಾಲೇಜಿನ ತಂಡ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಸಮಾರೋಪ ಸಮಾರಂಭದಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್ ರತ್ನಕರ್ ಫೈನಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಆಟಗಾರರಿಗೆ ಶುಭ ಕೋರಿದರು. ಒಟ್ಟು 35 ತಂಡಗಳು ಭಾಗವಹಿಸಿದ್ದ ಈ ಪಂದ್ಯಾವಳಿಯಲ್ಲಿ ಮಂಗಳೂರಿನ ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ತಂಡವು ಜಯಭೇರಿಯನ್ನು ಬಾರಿಸಿ ವಿನ್ನರ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಆಯೋಜಕ ತಂಡವಾದ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ತಂಡವು ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟಿತ್ತು. ಒಟ್ಟು ಮೂರು ದಿವಸ ನಡೆದ ಈ ಪಂದ್ಯಾವಳಿಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಕ್ರೀಡೆಗಳು ಸಮಾಜದಲ್ಲಿ ವೈವಿದ್ಯತೆಯನ್ನು ತರಲು ಸಹಕಾರಿಯಾಗಿವೆ. ಪರಸ್ಪರ ಭಾಂದವ್ಯ ಬೆಳೆಸಿ…

Read More

ಮಡಿಕೇರಿ, ಅ.9: ಕೊಡಗು ಜಿಲ್ಲಾ ಸರಕಾರಿ ವಕೀಲರ ತೆರವಾದ ಸ್ಥಾನಕ್ಕೆ ಮಡಿಕೇರಿ ವಕೀಲರಾದ ಎನ್. ಶ್ರೀಧರನ್ ನಾಯರ್ ಅವರನ್ನು ಕರ್ನಾಟಕ ಸರಕಾರ ಕಾನೂನು ಇಲಾಖೆಯು ಮುಂದಿನ ಆದೇಶದವರೆಗೆ ನೇಮಿಸಿದೆ. ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದಿನ ಸರಕಾರದ ಅವಧಿಯಲ್ಲಿಯೂ ಕೊಡಗು ಜಿಲ್ಲಾ ಸರಕಾರಿ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೊಡಗು ಜಿಲ್ಲಾ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Read More

ಮಡಿಕೇರಿ ಅ.9 :  ವಿರಾಜಪೇಟೆ ಕ್ಷೇತ್ರದ ಎಲ್ಲರನ್ನೂ ಒಳಗೊಂಡಂತೆ ಸಮಾನತೆಯ ಆಧಾರದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಗೆ ಬದ್ದನಾಗಿದ್ದೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ  ಎ.ಎಸ್.ಪೊನ್ನಣ್ಣ  ಭರವಸೆ ನೀಡಿದರು. ಬೇತ್ರಿಯಲ್ಲಿ ನಡೆದ ಈದ್ ಮಿಲಾದ್ ಹಬ್ಬದ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಬಹಳಷ್ಟು ನಿರೀಕ್ಷೆ ಮತ್ತು ಭರವಸೆಗಳನಿಟ್ಟು ತಮ್ಮನ್ನು ಶಾಸಕನಾಗಿ ಆಯ್ಕೆ ಮಾಡಿದ ಜನತೆಯ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕಟಿಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಕರ್ತವ್ಯದಿಂದ ವಿಮುಖನಾಗಲಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆ ಹರಿಸುವಂತೆ ಮನವಿ ಮಾಡಿದರು. ಸದ್ಯದಲ್ಲಿಯೇ ಸಮಸ್ಯೆಯನ್ನು ಬಗೆ ಹರಿಸುವ ಎ.ಎಸ್.ಪೊನ್ನಣ್ಣ  ಭರವಸೆಯನ್ನು  ನೀಡಿದರು.

Read More

ಮಡಿಕೇರಿ ಅ.18 : ಶಾಲಾ ಬಸ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಗೋಣಿಕೊಪ್ಪ ಸಮೀಪದ ಅತ್ತೂರು ಗ್ರಾಮದಲ್ಲಿ ನಡೆದಿದೆ. ಗೋಣಿಕೊಪ್ಪಲಿನ ಖಾಸಗಿ ಶಾಲೆಯ ಸೇರಿದ ಬಸ್ ನಲ್ಲಿ ನಸುಕಿನ ಜಾವ 3 ಗಂಟೆ ಸುಮಾರಿಗೆ ಬೆಂಕಿಕಾಣಿಸಿಕೊಂಡಿದ್ದು, ಬೀಯರ್ ಬಾಟಲಿಗೆ ಪೆಟ್ರೋಲ್ ತುಂಬಿಸಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ನಾಲೆಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಗೋಣಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಅ.8 : ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಮಂಡಳಿ ಮತ್ತು ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪಂದ್ಯಾವಳಿಯಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಟಿ.ಪಿ.ಭವ್ಯ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಇವರು ಸಿದ್ದಾಪುರ ಸಮಿಪದ ಇಂಜಿಳಗೆರೆ ನಿವಾಸಿ ಟಿ.ಎ.ಪ್ರಕಾಶ್ ಹಾಗೂ ಟಿ.ಪಿ.ದಿವ್ಯ ದಂಪತಿಗಳ ಪುತ್ರಿಯಾಗಿದ್ದಾರೆ. ಭವ್ಯ ಅಮ್ಮತ್ತಿಯ ಝೆನ್ ಶಿಟೋರಿಯೋ ಕರಾಟೆ ಫೆಡರೇಶನ್ ನ ತರಬೇತುದಾರರಾದ ಪ್ರಸನ್ನ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Read More

ಮಡಿಕೇರಿ ಅ.8 : ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ನಡೆದ ಶಾಪಿಂಗ್ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದು, ಅವರನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು. ಮಹಿಳೆಯರಿಗೆ ಹಾಗೂ ಮನೆಗೆ ಅಗತ್ಯವಾದ ವಸ್ತುಗಳನ್ನು ಗ್ರಾಹಕರಿಗೆ ನೆರವಾಗಿ ತಲುಪಿಸುವ ನಿಟ್ಟಿನಲ್ಲಿ ಶಾಪಿಂಗ್ ಉತ್ಸವವನ್ನು ಆಯೋಜಿಸಿದ್ದು, ವಿವಿಧ ಪರಿಕಾರಗಳನ್ನು ಮಾರಾಟ ಮಾಡುವುದರ ಜೊತೆಗೆ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವುದರೊಂದಿಗೆ ಜನರಿಗೆ ಉತ್ತಮ ವಾತಾವರಣವನ್ನು ಸೃಷ್ಟಿ ಮಾಡುವ ಸಲುವಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗಿದೆ. ಗ್ರಾಹಕರು ಸ್ಥಳೀಯ ಮಹಿಳೆಯರಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವರ ಆರ್ಥಿಕ ಸಬಲೀಕರಣವನ್ನು ಪುನರ್‍ಚೇತನ ಗೊಳಿಸಲು ಮುಂದಾಗಬೇಕೆಂದು ಕರೆ ನೀಡಿದರು. ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಮಾತನಾಡಿ, ಮಹಿಳೆಯರು ಸ್ವಾವಲಂಭಿ ಜೀವನವನ್ನು ನಡೆಸಲು ಇಂತಹ ಮೇಳಗಳು ಸಹಕಾರಿಯಾಗಿದ್ದು, ಇಂತಹ ಕಾರ್ಯಕ್ರಮಗಳಿಂದ ಮಹಿಳೆಯರಿಗೆ ಉತ್ತಮ ಅವಕಾಶ ದೊರೆತಂತಾಗುತ್ತದೆ…

Read More

ಮಡಿಕೇರಿ ಅ.8 : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ಆಯೋಜಿಸಿದ ಶೌರ್ಯ ಜಾಗರಣಾ ರಥಯಾತ್ರೆಗೆ ಕೊಡಗಿನ ಗಡಿ ಸಂಪಾಜೆಯಲ್ಲಿ ಭವ್ಯ ಸ್ವಾಗತ ಕೋರಿದರು. ಮಡಿಕೇರಿಯಿಂದ ಆಗಮಿಸಿದ ರಥಯಾತ್ರೆಯನ್ನು ಕೊಯನಾಡು ಶ್ರೀ ಮಹಾಗಣಪತಿ ಗುಡಿಯ ಬಳಿ ಸಂಪಾಜೆ, ಚೆಂಬು ಗ್ರಾಮದ ಹಿಂದೂ ಭಾಂದವರ ಉಪಸ್ಥಿತಿಯಲ್ಲಿ ಅರ್ಚಕರಿಂದ ಆರತಿ ಬೆಳಗಿ ಸ್ವಾಗತಿಸಲಾಯಿತು. ಬಳಿಕ ಸಂಪಾಜೆ ಪೆಟ್ರೋಲ್ ಬಂಕ್ ವರೆಗೆ ನೂರಾರು ವಾಹನಗಳ ಜಾಥಾದೊಂದಿಗೆ ಕರೆತರಲಾಯಿತು. ನೆರೆದಿದ್ದ ಹಿಂದೂ ಸಮಾಜದ ಮುಖಂಡರು, ಮಾತೆಯರು, ಹಿಂದೂ ಪರಿವಾರದ ಕಾರ್ಯಕರ್ತರಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಹಿಂದೂ ನಾಯಕ ಅನಂತ್ ಊರುಬೈಲು ರಥಯಾತ್ರೆಯ ಉದ್ದೇಶ, ಮಹತ್ವದ ಬಗ್ಗೆ ಮಾತನಾಡಿ ಹಿಂದೂ ಸಮಾಜದ ಒಗ್ಗಟ್ಟಿನ ಅನಿವಾರ್ಯತೆ ಬಗ್ಗೆ ವಿವರಿಸಿದರು. ಸಂಪಾಜೆ ಗೇಟಿನ ತನಕ ಕೇರಳದ ಚಂಡೆನಾದ, ಜಯಘೋಷದೊಂದಿಗೆ ಪಾದಯಾತ್ರೆಯ ಮೂಲಕ ಆಗಮಿಸಿ, ಪಟಾಕಿ ಸಿಡಿಸಿ, ದ.ಕ.ಜಿಲ್ಲೆಗೆ ರಥವನ್ನು ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಕೊಡಗು ವಿಹಿಂಪ ಅದ್ಯಕ್ಷ ಕೃಷ್ಣಮೂರ್ತಿ, ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಮಾಜಿ…

Read More

ಮಡಿಕೇರಿ ಅ.8 : ನಿರ್ಗತಿಕರಿಗಾಗಿ ” ಜೀವನದಾರಿ” ಆಶ್ರಮ ನಡೆಸುತ್ತಿದ್ದ ನಗರದ ರಾಣಿಪೇಟೆ ನಿವಾಸಿ ರಮೇಶ್ ಇಂದು ಬೆಳಿಗ್ಗೆ ನಿಧನರಾದರು. ಕೆಲವು ದಿನಗಳ ಹಿಂದೆ ತಮ್ಮ ಮನೆಯಲ್ಲಿ ಅಡುಗೆ ಅನಿಲ. ಸೋರಿಕೆಯಿಂದ ಉಂಟಾದ ಬೆಂಕಿ ಅವಘಾಡದಲ್ಲಿ ಗಾಯಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ನಸುಕಿನ ವೇಳೆ 3.30 ಗಂಟೆಗೆ ನಿಧನರಾದರು. ಇವರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಿರ್ಗತಿಕರಿಗರ ಜೀವನಧಾರಿಯಾಗಿದ್ದ ರಮೇಶ್ : ರಸ್ತೆ ಬದಿಯಲ್ಲಿ ಮಲಗುತ್ತಿದ್ದ ನಿರ್ಗತಿಕರಿಗಾಗಿ ವಿಕಾಸ್ ಜನಸೇವಾ ಟ್ರಸ್ಟ್ ಆರಂಭಿಸಿ “ಜೀವನದಾರಿ” ಆಶ್ರಯವನ್ನು ಸುಂಟಿಕೊಪ್ಪದ ಏಳನೇ ಹೊಸಕೋಟೆ ಬಳಿಯ ತೊಂಡೂರಿನಲ್ಲಿ ಆರಂಭಿಸಿದ್ದರು. ಸದ್ಯ 30ಕ್ಕೂ ಅಧಿಕಮಂದಿ ವೃದ್ಧರು ಇದ್ದಾರೆ.

Read More

ಮಡಿಕೇರಿ ಅ.8 : ಕರವೇ ಜಿಲ್ಲಾಧ್ಯಕ್ಷ ಕುಶಾಲನಗರದ ವೆಂಕಟೇಶ್ ಪೂಜಾರಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟೇಶ್ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Read More

ಮಡಿಕೇರಿ ಅ.8 :  ಕುಶಾಲನಗರದ ಶ್ರೀ ಮಂಜುನಾಥ ಮೆಡಿಕಲ್ಸ್ ನ ಮಾಲಿಕ  ವಿದ್ಯಾಧರ್  ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘ ದ ಅಧ್ಯಕ್ಷ ಎ.ಕೆ.ಜೀವನ್ ಹಾಗೂ ಪದಾಧಿಕಾರಿಗಳು ವಿದ್ಯಾಧರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Read More