ಮಡಿಕೇರಿ ಅ.7 : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಘೋಷಿಸಿದ್ದ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೋಳಿಸಬೇಕೆಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಜನಾಗ್ರಹ ಚಳುವಳಿ ನಡೆಸಿತು. ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ನೇತೃತ್ವದಲ್ಲಿ ನಗರದ ಕಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ಘೋಷಣೆಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಅಸಂಘಟಿತ ಕಾರ್ಮಿಕರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15,000 ರೂ.ಗಳು, ಸಹಾಯಕಿಯರಿಗೆ 10,000 ರೂ.ಗಳ ಗೌರವ ಧನ ಹೆಚ್ಚಿಸುವ ಕುರಿತು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 8 ಸಾವಿರ ರೂ.ಗಳು, ಅಕ್ಷರ ದಾಸೋಹ ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ 6,000ರೂ.ಗಳ ಗೌರವ ಧನ ಹೆಚ್ಚಿಸುವ ಕುರಿತು ಚುನಾವಣಾ ಸಂದರ್ಭದಲ್ಲಿ ಭರವಸೆಯನ್ನು ಈಡೇರಿಸುವಂತೆ ಆಗ್ರಹಿಸಿದರು. ಕೊಡಗಿನ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರಿಗೆ ಹಾಗೂ ದಲಿತರಿಗೆ ನಿವೇಶನ ಹಂಚಬೇಕು, ಮಾನವ ಹಾಗೂ ಕಾಡು…
ಲೇಖಕ: admin
ಮಡಿಕೇರಿ ಅ.7 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 5 ಹಂತಗಳ ಪಾದಯಾತ್ರೆಯಲ್ಲಿ 3ನೇ ಹಂತದ ಪಾದಯಾತ್ರೆ ಗೋಣಿಕೊಪ್ಪಲಿನಿಂದ ಆರಂಭಗೊಂಡಿತು. ಪಟ್ಟಣದ ಶ್ರೀ ಉಮಾಮಹೇಶ್ವರಿ ದೇವಾಲಯದ ಬಳಿಯಿಂದ ಸಾಗಿದ ಪಾದಯಾತ್ರೆಯಲ್ಲಿ “ಕೊಡವ ಲ್ಯಾಂಡ್” ಪರ ಘೋಷಣೆಗಳು ಮೊಳಗಿದವು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿದ ಪ್ರಮುಖರು ಪ್ರಮುಖ ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಿದರು. ನಂತರ ಮಾಯಮುಡಿಯ ಕಂಗಳತ್ತನಾಡ್ ಮತ್ತು ಬಾಳೆಲೆಯ ಅರ್ಕೇರಿನಾಡ್ ಗೆ ಪಾದಯಾತ್ರೆ ಸಾಗಿತು. ಕೊಡವ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ನಾಚಪ್ಪ ಅವರು ಬೇಡಿಕೆ ಈಡೇರುವವರೆಗೆ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಹೋರಾಟ ನಿಲ್ಲದು ಎಂದು ಘೋಷಿಸಿದರು. ಕೊಡವರ ಪರವಾಗಿ ಸಿಎನ್‍ಸಿ ಸಂಘಟನೆ ಕಳೆದ ಅನೇಕ ವರ್ಷಗಳಿಂದ ಶಾಂತಿಯುತ ಹೋರಾಟವನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. ಕೊಡವ ಲ್ಯಾಂಡ್ ಗಾಗಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಕೊಡವರು ಅಧಿಕ…
ಮಡಿಕೇರಿ ಅ.7 : ಕನ್ನಡದ ಮೂಲ ನೆಲೆಯಾಗಿರುವ ಕರ್ನಾಟಕದಲ್ಲಿ ಕನ್ನಡ ಪುಸ್ತಕಗಳು ಬೇಡಿಕೆ ಹೆಚ್ಚುವುದರ ಜೊತೆಗೆ ಓದುಗರ ಸಂಖ್ಯೆಯೂ ಅಧಿಕವಾಗಬೇಕು ಎಂದು ಬೆಂಗಳೂರು ವೀರಲೋಕ ಪ್ರಕಾಶನದ ಅಧ್ಯಕ್ಷರಾದ ವೀರಕ ಪುತ್ರ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ವೀರಲೋಕ ಪ್ರಕಾಶನ, ಕರ್ನಾಟಕ ಜಾನಪದ ಪರಿಷತ್ ಕೊಡಗು ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ದೇಸಿ ಜಗಲಿ ಕಥಾ ಕಮ್ಮಟವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಏಳು ಕೋಟಿ ಕನ್ನಡಿಗರಿದ್ದಾರೆ, ಆದರೆ ಐವತ್ತು ಕನ್ನಡ ಪುಸ್ತಕಗಳನ್ನು ಕೊಂಡು ಓದುವಂತಾಗಬೇಕು ಕನ್ನಡ ಸಾಹಿತ್ಯ ಹಾಗೂ ಸಾಹಿತಿಗಳಿಗೆ ಸೂಕ್ತ ಪ್ರೋತ್ಸಾಹ ದೊರೆಯಬೇಕು ಎಂದರು. ವೀರಲೋಕ ಪ್ರಕಾಶನ ಕನ್ನಡ ಬರಹಗಾರರ ಪುಸ್ತಕಗಳನ್ನು ಹೊರತರಲು ಮುಂದಾಗುವುದರೊಂದಿಗೆ ಪುಸ್ತಕಗಳಿಗೆ ಸೂಕ್ತ ಮಾರುಕಟ್ಟೆ ದೊರೆಯುವಂತೆ ಮಾಡಲು ತೊಡಗಿಸಿಕೊಳ್ಳಲಾಗಿದ್ದು, ಕನ್ನಡ ಬರಹಗಾರರನ್ನೂ ಮೇಲೆತ್ತುವ ಪ್ರಯತ್ನಕ್ಕೆ ಮುಂದಾಗಲಾಗಿದೆ ಎಂದು ಶ್ರೀನಿವಾಸ್ ಅವರು ತಿಳಿಸಿದರು. ಈ ದಿಸೆಯಲ್ಲಿ…
ಮಡಿಕೇರಿ ಅ.7 : ಕ್ರೀಡಾಪಟುಗಳು ಸ್ಪರ್ಧಾ ಹಾಗೂ ಕ್ರೀಡಾ ಮನೋಭಾವದಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎ.ಸೌಮ್ಯ ಪೊನ್ನಪ್ಪ ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕೊಡಗಿನ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಹೋಗುವ ಮೂಲಕ ತಮ್ಮ ಜಿಲ್ಲೆಯ ಕೀರ್ತಿ ಎತ್ತಿಹಿಡಿಯಬೇಕು ಎಂದರು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಸ್ಪೂರ್ತಿದಾಯಕವಾಗಿ ಲವಲವಿಕೆಯಿಂದ ಪಾಲ್ಗೊಂಡಿರುವುದು ತುಂಬ ಸಂತೋಷ ತಂದಿದೆ. ವಿದ್ಯಾರ್ಥಿಗಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪೆÇ್ರೀತ್ಸಾಹಿಸಿ, ಪ್ರೇರೆಪಿಸಿದ ದೈಹಿಕ ಶಿಕ್ಷಣ ಶಿಕ್ಷಕರಿಗೂ, ಕ್ರೀಡಾಪಟುಗಳಿಗೂ ಕ್ರೀಡಾಕೂಟ ಆಯೋಜಕರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಮಡಿಕೇರಿ ತಾಲ್ಲೂಕು ಕ್ಷೇತ್ರ…
ಮಡಿಕೇರಿ ಅ.7 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅ.9 ರಿಂದ ಅ.14 ರವರೆಗೆ ಮೂರನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರದನುಷ್ 5.0 ಲಸಿಕಾ ಕಾರ್ಯಕ್ರಮ ನಡೆಯಲಿದೆ. ಇದರ ಪ್ರಯುಕ್ತ ಲಸಿಕೆಗೆ ಅರ್ಹ ಗರ್ಭಿಣಿಯರಿಗೆ, 2 ವರ್ಷದೊಳಗಿನ ಅರ್ಹ ಮಕ್ಕಳಿಗೆ ಹಾಗೂ ಲಸಿಕೆ ವಂಚಿತ ಗರ್ಭಿಣಿಯರು ಮತ್ತು ಲಸಿಕೆ ವಂಚಿತ 2-5 ವರ್ಷದೊಳಗಿನ ಮಕ್ಕಳಿಗೆ ಎಲ್ಲಾ ಅಂಗನವಾಡಿಗಳು, ಉಪ ಕೇಂದ್ರಗಳು, ಪ್ರಾ.ಆ.ಕೇಂದ್ರಗಳಲ್ಲಿ ಹಾಗೂ ಸಮುದಾಯ ಮಟ್ಟದಲ್ಲಿ ಲಸಿಕಾ ಶಿಬಿರ ಆಯೋಜಿಸಿ ಅರ್ಹ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಕ್ಷೇತ್ರ ಮಟ್ಟದ ಲಸಿಕಾ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂಧಿಗಳು ಭಾಗವಹಿಸುವರು. ಪರಿಣಾಮಕಾರಿ ಮಿಷನ್ ಇಂದ್ರದನುಷ್ 5.0 ಕಾರ್ಯಕ್ರಮವು ನಾಯಿಕೆಮ್ಮು, ದಡಾರ-ರುಬೆಲ್ಲಾ, ಪೋಲಿಯೋ, ಗಂಟಲು ಮಾರಿ, ನ್ಯುಮೋನಿಯಾ, ಅತಿಸಾರ ಭೇದಿ, ಹೈಪಟೈಟಿಸ್-ಬಿ, ಧನುರ್ವಾಯು ಮತ್ತು ಕ್ಷಯರೋಗಗಳನ್ನು ಲಸಿಕೆಯಿಂದ ಮಾತ್ರವೇ ತಡೆಯಬಹುದಾಗಿದ್ದು, ಈ ಕಾರಣಕ್ಕಾಗಿ ಅಲ್ಲದೇ 2 ವರ್ಷದ ವಯಸ್ಸಿನ ಮಕ್ಕಳು ಮತ್ತು…
ಮಡಿಕೇರಿ ಅ.7 : ಎಮ್ಮೆಮಾಡಿನಲ್ಲಿ ಬಹಿರಂಗವಾಗಿ ಕಲಹ ಉಂಟು ಮಾಡಿದ ನಾಲ್ವರನ್ನು ಮೊಹಲ್ಲಾದ ಮಾರ್ಗದರ್ಶನಂತೆ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆಯೇ ಹೊರತು ಸಾಮಾಜಿಕ ಬಹಿಷ್ಕಾರ ಮಾಡಿಲ್ಲವೆಂದು ಎಮ್ಮೆಮಾಡು ಜಮಾಅತ್ ಸ್ಪಷ್ಟಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ, ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧೀನದಲ್ಲಿ ಮೂರು ದಿನಗಳ ಕಾಲ ನಡೆದ ಈದ್ ಮಿಲಾದ್ ಕಾರ್ಯಕ್ರಮದ ಜಾಥಾದಲ್ಲಿ ಮತ್ತು ವಿದ್ಯಾರ್ಥಿಗಳ ಕಲಾ ಪ್ರದರ್ಶನದಲ್ಲಿ ಉಸ್ತಾದರನ್ನು ಹಾಗೂ ಆಡಳಿತ ಮಂಡಳಿಯವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ ಕಾರಣಕ್ಕಾಗಿ ಶಿಸ್ತು ಪಾಲನೆಯ ಮಾರ್ಗದರ್ಶನದಂತೆ ನಾಲ್ವರ ವಿರುದ್ಧ ತಾತ್ಕಾಲಿಕ ಅಮಾನತು ಕ್ರಮ ಕೈಗೊಳ್ಳಲಾಗಿದೆ. ಇದು ಈ ಆಡಳಿತ ಮಂಡಳಿಯ ಹೊಸ ನಿರ್ಧಾರವಲ್ಲ, ಎಲ್ಲಾ ಜಮಾಅತ್ ನಂತೆ ಎಮ್ಮೆಮಾಡು ಜಮಾಅತ್ ಕೂಡ ಕ್ರಮ ಕೈಗೊಂಡಿದೆ. ಜಮಾಅತ್ ನ ನಿರ್ಧಾರದಂತೆ ನಾಲ್ವರು ಕ್ಷಮೆಯಾಚಿಸಿದಲ್ಲಿ ಅಮಾನತು ಕ್ರಮವನ್ನು ಕೈ ಬಿಡುವುದಾಗಿ ತಿಳಿಸಿದರು. ಜಮಾಅತ್ ಮತ್ತು ಆಡಳಿತ ಮಂಡಳಿಯ ನಿರ್ಧಾರದ ಕುರಿತು ತಪ್ಪು ಹೇಳಿಕೆಗಳನ್ನು ನೀಡುವುದು ಸರಿಯಾದ ಕ್ರಮವಲ್ಲವೆಂದು ಅಸಮಾಧಾನ…
ಮಡಿಕೇರಿ ಅ.7 : ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ಅನುದಾನ ಬಿಡುಗಡೆಯ ಕುರಿತು ಗೊಂದಲಗಳು ಮುಂದುವರೆದಿದ್ದು, ನೈಜಾಂಶ ಏನು ಎಂಬುವುದನ್ನು ಸರ್ಕಾರ ಕೊಡಗಿನ ಜನತೆಯ ಮುಂದೆ ಬಹಿರಂಗ ಪಡಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಹಾಗೂ ಪ್ರಮುಖರಾದ ಸಿ.ಎಸ್.ರವೀಂದ್ರ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಜನರನ್ನು ಗೊಂದಲದಲ್ಲಿ ಸಿಲುಕಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಹವಣಿಸುತ್ತಿವೆ ಎಂದು ಟೀಕಿಸಿದ್ದಾರೆ. ವಿರಾಜಪೇಟೆಯ ಕಾರ್ಯಕ್ರಮವೊಂದರಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಈ ಹಿಂದಿನ ಬಿಜೆಪಿ ಸರ್ಕಾರ ನಿಗಮ ಸ್ಥಾಪಿಸಿ 10 ಕೋಟಿ ರೂ. ಅನುದಾನ ನೀಡಿದೆ ಎಂದು ಹೇಳಿದ್ದಾರೆ. ಆದರೆ ಇದೇ ವೇದಿಕೆಯಲ್ಲಿ ಕಾಂಗ್ರೆಸ್ ಶಾಸಕರು ನಿಗಮಕ್ಕೆ ಯಾವುದೇ ಹಣ ಬಿಡುಗಡೆಯಾಗಿಲ್ಲವೆಂದು ತಿರುಗೇಟು ನೀಡಿದ್ದಾರೆ. ಈ ಬೆಳವಣಿಗೆಗಳನ್ನು ಗಮನಿಸಿದರೆ ಕೊಡವ ಅಭಿವೃದ್ಧಿ ನಿಗಮ ಅಸ್ತಿತ್ವದಲ್ಲಿದೆಯೇ ಎನ್ನುವ ಸಂಶಯ ಮೂಡುತ್ತದೆ. ಅಲ್ಲದೆ ಅನುದಾನ ಬಿಡುಗಡೆಯಾಗಿದ್ದರೆ ಹಣ ಎಲ್ಲಿಗೆ ಹೋಯಿತು, ಅಧ್ಯಕ್ಷರ ನೇಮಕವಾಗಿದೆಯೇ…
ಮಡಿಕೇರಿ, ಅ.7 : ಪರಿಸರ ಸಮತೋಲನ ಕಾಪಾಡಲು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಬಹಳ ಅಗತ್ಯವಾಗಿದ್ದು, ಜೀವ ಸಂಕುಲ ವ್ಯವಸ್ಥೆಯಲ್ಲಿ ವನ್ಯಜೀವಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ನಗರದ ಪೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಕಾಲೇಜಿನ ಎನ್.ಸಿ.ಸಿ.,ಘಟಕದ ಸಂಯುಕ್ತಾಶ್ರಯದಲ್ಲಿ “ವನ್ಯಜೀವಿಗಳ ಸಂರಕ್ಷಣೆಗಾಗಿ ಪಾಲುಗಾರಿಕೆ” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ : 2023 ದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊoದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು. ವನ್ಯಜೀವಿಗಳು ಮತ್ತು ಮಾನವನ ನಡುವೆ ಉಂಟಾಗುತ್ತಿರುವ ಸಂಘರ್ಷವನನ್ನು ತಡೆಯುವ ಮೂಲಕ…
ಮಡಿಕೇರಿ ಅ.7 : ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್ ನ ಕೊಡಗು ಶಾಖೆ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ಕುರಿತು ಅ.9 ರಂದು ಮಡಿಕೇರಿಯಲ್ಲಿ ಶಿಕ್ಷಣ ತಜ್ಞರ ವಿಶೇಷ ಸಭೆ ನಡೆಯಲಿದೆ ಎಂದು ಸಂಸ್ಥೆಯ ಕೊಡಗು ಜಿಲ್ಲಾ ಸಂಚಾಲಕ ಜಯಪ್ರಕಾಶ್ ಎಸ್.ತಂಟೆಪಾಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಗಂಟೆಗೆ ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಪೊನ್ನಂಪೇಟೆ ಸಾಯಿಶಂಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಕೊಡಗು ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘದ ಅಧ್ಯಕ್ಷ ಕೋಳೆರ ಝರು ಗಣಪತಿ ವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಮಾಜಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಪಿ.ಸುಬ್ರಮಣ್ಯ ಯಡಿಪಡಿತ್ತಾಯ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಾಲಿ ಹಾಗೂ ಮಾಜಿ ಶಾಸಕರು, ವಿಶ್ರಾಂತ ಕುಲಪತಿಗಳು, ಹಾಲಿ, ಮಾಜಿ ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್ ಸದಸ್ಯರು, ಶಿಕ್ಷಣ ತಜ್ಞರು, ಪ್ರಾಂಶುಪಾಲರು, ಉಪನ್ಯಾಸಕರು,…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಹಾಗೂ 4 ಎಸಿ ಅತ್ಯಾಧುನಿಕ ಸ್ಲೀಪರ್ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಬೆಳಗ್ಗೆ 10ಗಂಟೆಗೆ ಸಂಸ್ಥೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಸ್ ಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಈ ಸಂದರ್ಭ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಮುನಿಯಪ್ಪ, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ಹಾಗೂ ಸಾರಿಗೆ ಅಧಿಕಾರಿಗಳು ಹಾಜರಿದ್ದರು.






