ಲೇಖಕ: admin

ಪುತ್ತೂರು ಅ.7 : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳು ಶೇ.100 ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 51 ವಿದ್ಯಾರ್ಥಿಗಳು ಹಾಜರಾಗಿದ್ದು 48 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅರ್ಹ ವಿದ್ಯಾರ್ಥಿಗಳು ಈಗಾಗಲೇ ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದಾರೆ. 2021 ರಲ್ಲಿ ಪ್ರಾರಂಭವಾದ ಎಂಸಿಎ ವಿಭಾಗದ ಪ್ರಥಮ ತಂಡದ ಈ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ನಿರ್ದೇಶಕರು, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ.

Read More

ಮಡಿಕೇರಿ ಅ.7 : ಮಡಿಕೇರಿಯಲ್ಲಿ ಅ.8 ರಂದು ಶಾಪಿಂಗ್ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 6.30ರ ವರಗೆ ನಡೆಯಲಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಮಡಿಕೇರಿ ಕೊಡವ ಸಮಾಜದ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಮತ್ತು ನಟ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಉಚಿತ ಕಣ್ಣಿನ ತಪಾಸಣೆ, ಈಗಾಗಲೇ ನೊಂದಾಯಿಸಿಕೊಂಡ ಎಲ್ಲಾ ವಯೋಮಿತಿಯವರಿಗೆ ಫ್ರಿ ಸೈಲ್ ನೃತ್ಯ ಸ್ಪರ್ಧೆ ಹಾಗೂ ಮಕ್ಕಳಿಗೆ ಮ್ಯಾಜಿಕ್ ಶೋ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಉತ್ಸವದ ಆಯೋಜಕರಾದ ಯಮುನಾ ಅಯ್ಯಪ್ಪ ಹಾಗೂ ಅಂಜು ಸುಬ್ರಮಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read More

ಮಡಿಕೇರಿ ಅ.7 : ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2023ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಸಂಯುಕ್ತಾಶ್ರಯದಲ್ಲಿ ಅ.15 ರಿಂದ 23 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2023”ನ್ನು ಓವಲ್‍ಗ್ರೌಂಡ್ ಹಳೆಯ ಡಿ.ಸಿ.ಆಫೀಸ್ ಪಕ್ಕ, ಮೈಸೂರು ಇಲ್ಲಿ ಏರ್ಪಡಿಸಲಾಗುವುದು. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅಕ್ಟೋಬರ್, 12 ರೊಳಗೆ…

Read More

ಮಡಿಕೇರಿ ಅ.7 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅ.11 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಅ.13 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಯನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ನಾಪೋಕ್ಲು ಅ.6 : ಪ್ರತಿಭಾ ಕಾರಂಜಿಯಲ್ಲಿ ಕುಂಜಿಲ ಆಕ್ಸ್ಫರ್ಡ್ ಶಾಲೆ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ. ಕಕ್ಕಬೆ ಕೇಂದ್ರ ವಿದ್ಯಾ ಸಂಸ್ಥೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಕುಂಜಿಲ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. 1 ರಿಂದ 4 ನೇ ತರಗತಿ ವಿಭಾಗದ ಸ್ಪರ್ಧೆಗಳಲ್ಲಿ ರಿಲಾ ಫಾತಿಮಾ (ಅಭಿನಯ ಗೀತೆ) ದ್ವಿತೀಯ, ಜಕೀಯ (ಧಾರ್ಮಿಕ ಪಠಣ) ದ್ವಿತೀಯ, ರನ ಫಾತಿಮಾ(ಕಥೆ ಹೇಳುವುದು) ದ್ವಿತೀಯ ಹಾಗೂ ಮಿನ್ಹ ಕದೀಜಾ (ಛದ್ಮ ವೇಷ) ದ್ವಿತೀಯ ಸ್ಥಾನ ಪಡೆದುಕೊಂಡು ಪ್ರಶಂಸೆಗೆ ಭಾಜನಾರಾದರು. 5 ರಿಂದ 7ನೇ ತರಗತಿ ವಿಭಾಗದಲ್ಲಿ ಅಫ್ನಾ (ಲಘುಸಂಗೀತ, ಭಕ್ತಿಗೀತೆ) ಪ್ರಥಮ, ರಿಂಶಾ ಫಾತಿಮಾ (ಇಂಗ್ಲಿಷ್ ಕಂಠಪಾಠ , ಅರೇಬಿಕ್ ಧಾರ್ಮಿಕ ಪಠಣ) ಪ್ರಥಮ, ಜಝಾ ಫಾತಿಮಾ (ಕಥೆ ಹೇಳುವುದು) ಪ್ರಥಮ, ನಿಧಾ (ಹಿಂದಿ ಕಂಠಪಾಠ) ಪ್ರಥಮ ಸ್ಥಾನವನ್ನು ಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಫರ್ಹಾನ್(ಮಿಮಿಕ್ರಿ)ದ್ವಿತೀಯ, ರಿಂಶಾ ಫಾತಿಮಾ (ಸಂಸ್ಕೃತ…

Read More

ವಿರಾಜಪೇಟೆ  ಅ.7 : ಶ್ರೀ ಕೃಷ್ಣನ ಉಪದೇಶಾಮೃತವಾದ ಭಗವದ್ಗೀತೆ ಸರ್ವಕಾಲಿಕ ಸತ್ಯ. ಸನಾತನ ಧರ್ಮದಲ್ಲಿ ಭಗವದ್ಗೀತೆಯನ್ನು ಪವಿತ್ರ ಗ್ರಂಥವೆಂದು ಪರಿಗಣಿಸಲಾಗಿದೆ ಎಂದು ಹಿರಿಯ ಸಾಹಿತಿ ಕಿಗ್ಗಾಲು ಗಿರೀಶ್ ಅಭಿಪ್ರಾಯಪಟ್ಟರು. ಕಾವೇರಿ ಗಣೇಶೊತ್ಸವ ಸಮಿತಿ ಮೂರ್ನಾಡು ರಸ್ತೆ ಹಾಗೂ ವಿರಾಜಪೇಟೆ ಮಹಿಳಾ ಲೇಖಕಿಯರ ಬಳಗದ ವತಿಯಿಂದ ಗಣೇಶೋತ್ಸವ ಸಮಿತಿ ವೇದಿಕೆಯಲ್ಲಿ ನಡೆದ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀಕೃಷ್ಣನು ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಗೀತೆಯನ್ನು ಉಪದೇಶಿಸಿದನೆಂಬ ನಂಬಿಕೆಯಿದೆ. ಮತ್ತು ಈ ಮೂಲಕ ಅವರು ಜೀವನದ ಸಾರವನ್ನು ಜನರಿಗೆ ವಿವರಿಸಲು ಪ್ರಯತ್ನಿಸಿದರು. ಯಾವಾಗ ಅರ್ಜುನನು ಕೌರವರ ವಿರುದ್ಧ ಹೋರಾಡಲು ಬಯಸಲಿಲ್ಲವೋ ಆಗ ಶ್ರೀಕೃಷ್ಣನು ನೀನು ನಿರ್ಭಯವಾಗಿ ಹೋರಾಡು ಎಂದು ಹೇಳಿದನೆಂದು ಈ ಗೀತೆಯಲ್ಲಿ ಹೇಳಲಾಗಿದೆ. ಕೊಂದರೆ ಸ್ವರ್ಗ ಸಿಗುತ್ತದೆ, ಗೆದ್ದರೆ ಭೂಮಿಯನ್ನು ಆಳುವಿರಿ. ಹಾಗಾಗಿ ಯಾವುದೇ ಕೆಲಸದಲ್ಲಿ ಯಶಸ್ಸು ಸಿಗಬೇಕಾದರೆ ಮನಸ್ಸಿನಿಂದ ಭಯವನ್ನು ತೊಲಗಿಸಬೇಕು ಎಂದು ಹೇಳುತ್ತಾನೆ. ಗೀತೆಯ ಕೆಲವು ಶ್ಲೋಕಗಳನ್ನು ಅನುಸರಿಸಿದರೆ, ಜೀವನದಲ್ಲಿ ಅಪಾರ ಯಶಸ್ಸನ್ನು ಸಾಧಿಸಬಹುದು.…

Read More

ಮಡಿಕೇರಿ ಅ.7 : ಸಂಗೀತ ಮತ್ತು ನೃತ್ಯ ಎಂಥವರನ್ನೂ ಸೆಳೆಯಬಲ್ಲ ಮಾಂತ್ರಿಕ ಶಕ್ತಿಯನ್ನು ಹೊಂದಿದೆ ಎಂದು ಸ್ವರಾರ್ಣವ ಸಂಗೀತ ಶಾಲೆಯ ವಿದ್ವಾನ್ ದಿಲಿಕುಮಾರ್ ಅಭಿಪ್ರಾಯಪಟ್ಟರು. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬಾಲಾಂಜನೇಯ ದೇವಾಸ್ಥಾನದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಛಧ್ಮ ವೇಷ ಹಾಗೂ ಸಾಂಸ್ಕೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳಿಗೆ ಬಾಲ್ಯದ ಅಭಿರುಚಿಯನ್ನು ಗುರುತಿಸಿ ಅವರ ಪ್ರತಿಭೆಯ ಮಾರ್ಗದಲ್ಲಿ ನಡೆಯಲು ಪ್ರೇರೇಪಿಸಬೇಕು. ಬದುಕನ್ನು ಯಾಂತ್ರಿಕರಿಸ ಬಾರದು ಎಂದ ಅವರು, ಸಂಗೀತ, ಸದಭಿರುಚಿ ಸಾಹಿತ್ಯದ ಅಭ್ಯಾಸದಿಂದ ಉತ್ತಮ ಸಂಸ್ಕಾರ ನಿರ್ಮಾಣ ಸಾಧ್ಯ. ನಮ್ಮ ನಾಡಿನಲ್ಲಿ ಶ್ರೇಷ್ಠ ಸಾಂಸ್ಕೃತಿಕ ಪರಂಪರೆಯನ್ನು ಕಾಣುತ್ತೇವೆ. ಸಂಗೀತ ಮತ್ತು ನೃತ್ಯ ಶಾಲೆ, ಶ್ರೇಷ್ಠ ಸಂಸ್ಕೃತಿ ಮತ್ತು ಸಂಪ್ರದಾಯದ ಸಂಕೇತವಾಗಿದೆ ಎಂದರು. ಸಾಹಿತಿಗಳಾದ ಪುಷ್ಪಲತಾ ಶಿವಪ್ಪ ಮಾತನಾಡಿ, ವಿದ್ಯಾರ್ಥಿಗಳು ರಾಮಾಯಣ ಮಹಾಭಾರತದಂತಹ ಕಾವ್ಯಗಳನ್ನು ಹೆಚ್ಚು ಹೆಚ್ಚಾಗಿ ಓದಿ ಅದರಲ್ಲಿರುವ ತತ್ವಸಾರವನ್ನು ತಿಳಿದು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಈ ಜಗತ್ತಿನಲ್ಲಿ ದುಷ್ಟ ಶಕ್ತಿಗಳು…

Read More

ಮಡಿಕೇರಿ ಅ.6 : ಕೊಡಗಿನ ಗಡಿ ಗ್ರಾಮ ಕರಿಕೆಯಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ತೋಟಗಳಿಗೆ ಹಾನಿಯಾಗಿದ್ದು, 80 ಕ್ಕೂ ಅಧಿಕ ಅಡಿಕೆ, 28 ಕ್ಕೂ ಹೆಚ್ಚು ತೆಂಗು ಮತ್ತು ಸುಮಾರು 50 ಬಾಳೆ ಗಿಡಗಳನ್ನು ನಾಶ ಪಡಿಸಿದೆ. ಕರಿಕೆಯ ಎಳ್ಳುಕೊಚ್ಚಿ ಗ್ರಾಮದ ರಾಘವ ಹೊಸಮನೆ, ದುಶ್ಯಂತ ಹೊಸಮನೆ ಹಾಗೂ ಚೆತ್ತುಕಾಯದ ಹೆಚ್.ಎಂ.ನಂಜುಂಡ ಅವರ ತೋಟಗಳಲ್ಲಿ ಅಪಾರ ನಷ್ಟ ಉಂಟಾಗಿದೆ. ಪ್ರತಿವರ್ಷ ಈ ಅವಧಿಯಲ್ಲಿ ಗಡಿ ರಾಜ್ಯ ಕೇರಳ ಭಾಗದಿಂದ ಕಾಡಾನೆಗಳ ಹಿಂಡು ಬಂದು ದಾಂಧಲೆ ನಡೆಸುತ್ತವೆ ಎಂದು ಸ್ಥಳೀಯ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ ಗಡಿ ಗ್ರಾಮದ ಬಗ್ಗೆ ಕಾಳಜಿ ವಹಿಸಿ ಕಾಡಾನೆ ಉಪಟಳ ತಡೆಗೆ ಸೋಲಾರ್ ಬೇಲಿ ನಿರ್ಮಾಣ ಮತ್ತು ತಡೆಗೋಡೆ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಬೆಳೆ ನಷ್ಟಕ್ಕೆ ತಕ್ಷಣ ಪರಿಹಾರ ವಿತರಿಸಬೇಕೆಂದು ತೋಟದ ಮಾಲೀಕರುಗಳು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಅ.6 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 3ನೇ ಹಂತದ ಪಾದಯಾತ್ರೆ ಅ.7 ರಂದು ಗೋಣಿಕೊಪ್ಪದಿಂದ ಆರಂಭಗೊಳ್ಳಲಿದೆ ಎಂದು ಸಿಎನ್ ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪ ಪಟ್ಟಣದ ಶ್ರೀಉಮಾ ಮಹೇಶ್ವರಿ ದೇವಾಲಯದ ಬಳಿಯಿಂದ ಪಾದಯಾತ್ರೆ ಸಾಗಲಿದೆ. ಕಂಗಳತ್ತನಾಡ್ (ಗೊಣಿಕೊಪ್ಪ-ಮಾಯಮುಡಿ), ಮಧ್ಯಾಹ್ನ 3 ಗಂಟೆಗೆ ಪೊನ್ನಂಪೇಟೆ ತಾಲ್ಲೂಕಿನ ಅರ್ಕೇರಿನಾಡ್ (ಬಾಳೆಲೆ), ಅ.8 ರಂದು ಬೆಳಗ್ಗೆ 10 ಗಂಟೆಗೆ ಕಿರ್ನಾಲ್‍ನಾಡ್ (ಕಿರ್ಗೂರ್-ಬೆಸಗೂರ್), 3 ಗಂಟೆಗೆ ಪತ್ತ್ ಕಟ್‍ನಾಡ್ ಬೆಕ್ಕೆಸೆಡ್ಲೂರ್-ಕಾನೂರ್ ನಲ್ಲಿ ಪಾದಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ ಅ.6 : ಅಖಿಲ ಕರ್ನಾಟಕ ಅರುಂಧತಿಯಾರ್ ಆದಿದ್ರಾವಿಡ ಪೌರಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಕೃಷ್ಣ ಅವರನ್ನು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಥವಾ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಅರುಂದತಿಯಾರ್ ಸಂಘಟನೆ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಪಳನಿಪ್ರಕಾಶ್ ಮಾತನಾಡಿ, ಆರ್.ಕೃಷ್ಣ ಅವರು ಪೌರಕಾರ್ಮಿಕ ಸಫಾಯಿ ಕರ್ಮಚಾರಿಗಳಿಗೆ ಪ್ರತ್ಯೇಕವಾಗಿ ಶೇ.3ರಷ್ಟು ಒಳ ಮೀಸಲಾತಿಗಾಗಿ ಹೋರಾಟ ಮಾಡಿದ ಏಕೈಕ ನಾಯಕರಾಗಿದ್ದಾರೆ. ಸಮುದಾಯದ ಪರವಾಗಿ ಕಳೆದ 25 ವರ್ಷಗಳಿಂದಲೂ ಹೋರಾಟ ನಡೆಸುತ್ತಾ ಬಂದಿದ್ದಾರೆ. ಅವರ ಪ್ರಯತ್ನದಿಂದಾಗಿ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕಿದೆ ಎಂದರು. 1996ರಲ್ಲಿ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ಪುರಸಭೆಗೆ ಅಧ್ಯಕ್ಷರು ಹಾಗೂ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಅನುಭವನ ಹೊಂದಿದ್ದಾರೆ. ಇವರು ಆರು ಜಿಲ್ಲೆಗಳಲ್ಲಿ ಸಮುದಾಯದ ಸಮಸ್ಯೆಗಳಿಗೆ ಹೋರಾಟ ಮಾಡುತ್ತಿದ್ದು, ಇವರಿಗೆ ರಾಜ್ಯ ಸರ್ಕಾರ ಉನ್ನತ ಹುದ್ದೆ ನೀಡಬೇಕೆಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ…

Read More