ಲೇಖಕ: admin

ಮಡಿಕೇರಿ ಅ.6 : ರೋಟರಿ ಮಡಿಕೇರಿ 3181ರ ವತಿಯಿಂದ “ಜಗತ್ತಿನಲ್ಲಿ ಭರವಸೆಯನ್ನು ಮೂಡಿಸುವುದು” ದ್ಯೇಯ ವಾಕ್ಯದೊಂದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಜಿಲ್ಲಾ ರಾಜ್ಯಪಾಲ ರೋಟರಿಯನ್ ಹೆಚ್.ಆರ್.ಕೇಶವ ತಿಳಿಸಿದ್ದಾರೆ. ಮಡಿಕೇರಿ ರೋಟರಿ ಸಂಸ್ಥೆಗೆ ಅಧಿಕೃತ ಭೇಟಿ ನೀಡಿ, ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಟರಿ ಸಂಸ್ಥೆ ಪ್ರಪಂಚದಲ್ಲೇ ಅತ್ಯಂತ ದೊಡ್ಡ ಸರ್ಕಾರೇತರ ಸಂಸ್ಥೆಯಾಗಿದ್ದು, 12 ಲಕ್ಷ ಸದಸ್ಯತ್ವವನ್ನ ಹೊಂದಿದೆ. 1905 ರಲ್ಲಿ ಪ್ರಾರಂಭವಾದ ಸಂಸ್ಥೆ ತಮ್ಮ ಸ್ನೇಹಿತರಿಂದ ಆಮಂತ್ರಣ ಪಡೆದು ಸದಸ್ಯತ್ವವನ್ನು ಪಡೆದುಕೊಳ್ಳುತ್ತಿದೆ ಎಂದು ಮಾಹಿತಿ ನೀಡಿದರು. ಸೇವೆಯನ್ನು ಗುರಿಯಾಗಿಸಿಕೊಂಡು ನಡೆದು ಬಂದಿರುವ ರೋಟರಿ ಸಂಸ್ಥೆ, ಪ್ರತಿಯೊಂದು ಕ್ಲಬ್‍ಗಳು ಮಾಡಿರುವ ಕೆಲಸವನ್ನು ಅವಲೋಕನ ಮಾಡುತ್ತಿದೆ. ಪೊಲಿಯೋ ನಿರ್ಮೂಲನೆಗೆ ಪಣತೊಟ್ಟಿದ್ದು, ರೋಟರಿ ಇಂಡಿಯಾ ಸಾಕ್ಷರತಾ ಮಿಷನ್ ಎಂಬ ದ್ಯೇಯ ವಾಕ್ಯದೊಂದಿಗೆ ಕಾರ್ಯನಿರ್ವಹಿಸಿದೆ ಎಂದರು. ಮಡಿಕೇರಿ ರೋಟರಿ ಸಂಸ್ಥೆಯ ಅಧ್ಯಕ್ಷೆ ಗೀತಾ ಗಿರೀಶ್ ಮಾತನಾಡಿ, ಮಡಿಕೇರಿ ರೋಟರಿ ಸಂಸ್ಥೆ ಅಂಗನವಾಡಿಯನ್ನು ಪುನರುಜ್ಜಿವನ ಗೊಳಿಸಬೇಕು ಎಂಬ ನಿಟ್ಟಿನಲ್ಲಿ ನಗರದ ಏಳು ಅಂಗನವಾಡಿಗಳಿಗೆ ಮೂಲಭೂತ ಸೌಲಭ್ಯಗಳನ್ನು…

Read More

ಮಡಿಕೇರಿ ಅ.6 : ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮಡಿಕೇರಿ ರೋಟರಿ ಸಂಸ್ಥೆಯ ವತಿಯಿಂದ ಸುಮಾರು ಒಂದುವರೆ ಲಕ್ಷ ಮೌಲ್ಯದ ಬೆಂಚ್ ಗಳನ್ನು ನಗರದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ವಿತರಿಸಲಾಯಿತು. ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಅವರು ಬೆಂಚ್‍ಗಳನ್ನು ವಿತರಿಸಿ ಮಾತನಾಡಿ ವಿದ್ಯಾರ್ಥಿ ಜೀವನ ಬಹಳ ಅಮೂಲ್ಯ. ವಿದ್ಯಾರ್ಥಿಗಳು ಯಾವುದೇ ಸೌಲಭ್ಯಗಳಿಂದ ವಂಚಿತರಾಗಬಾರದು. ವಿದ್ಯಾಭ್ಯಾಸ ಎನ್ನುವುದು ನಮ್ಮ ಮುಖದ ಕನ್ನಡಿಯಂತೆ. ಇಂದಿನ ಸಮಾಜದಲ್ಲಿ ಜೀವಿಸಬೇಕಾದರೆ ವಿದ್ಯಾಭ್ಯಾಸ ಅತಿ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಪಠ್ಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗುವುದು ಬಹಳ ಮುಖ್ಯ ಎಂದು ಕರೆ ನೀಡಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಮಾತನಾಡಿ, ಹಲವಾರು ವರ್ಷಗಳಿಂದ ರೋಟರಿ ಸಂಸ್ಥೆಯವರು ಹಾಗೂ ಡಾ.ಪಾಟ್ಕರ್ ಅವರು ವಿದ್ಯಾರ್ಥಿಗಳಿಗೆ ಅನೇಕ ನೆರವಿನ ಕಾರ್ಯ ನೀಡುತ್ತ ಬಂದಿದ್ದು, ಇನ್ನು ಮುಂದೆಯೂ ಇದೇ ರೀತಿ ವಿದ್ಯಾರ್ಥಿಗಳ ಬದುಕಿನಲ್ಲಿ ರೋಟರಿ ಸಂಸ್ಥೆಯು ಬೆಳಕಾಗಿ ಬರಬೇಕು. ಹಾಗೆಯೇ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.…

Read More

ಮಡಿಕೇರಿ ಅ.6 : 2023 ನೇ ಸಾಲಿನ ಮಡಿಕೇರಿ ದಸರಾ ಸ್ವಾಗತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಗರದ ದಸರಾ ಸಮಿತಿ ಕಚೇರಿಯಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾಗಿ ಎ.ಜಿ.ರಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ಯಕ್ಷಿತ್ ಅಪ್ಪಯ್ಯ ಕೊತ್ತೋಳಿ, ಖಜಾಂಚಿಯಾಗಿ ಆರ್.ಪಿ.ಚಂದ್ರಶೇಖರ್ ಸಹ ಕಾರ್ಯದರ್ಶಿಯಾಗಿ ಹಬೀಬ್ ಅಹಮ್ಮದ್ ಹಾಗೂ ಗೌರವ ಸಲಹೆಗಾರರಾಗಿ ಶೇಕ್ ಅಹಮ್ಮದ್ ಆಯ್ಕೆಯಾದರು.

Read More

ಮಡಿಕೇರಿ ಅ.6 : ಬಜರಂಗದಳದ ಶೌರ್ಯ ಜಾಗರಣ ರಥಯಾತ್ರೆ ಕೊಡಗಿನ ವಿವಿಧೆಡೆ ಭವ್ಯ ಸ್ವಾಗತ ಕೋರಿದರು. ಮಡಿಕೇರಿಗೆ ಆಗಮಿಸಿದ ರಥಯಾತ್ರೆಯಾತ್ರೆಯೂ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಕೇರಳದ ಚಂಡೆ ವಾದ್ಯಗಳೊಂದಿಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಆಗಮಿಸಿದ ಶೌರ್ಯ ಜಾಗರಣಾ ರಥಕ್ಕೆ ಮಾಜೀ ಶಾಸಕ ಕೆ.ಜಿ. ಬೋಪಯ್ಯ ಅವರು ತೆಂಗಿನ ಕಾಯಿ ಒಡೆದು, ಪುಷ್ಪರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ವಾದ್ಯಗೋಷ್ಟಿಯ ಸಹಿತ ಮೆರವಣಿಯೆ ಮೂಲಕ ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ಸಾಗಲಾಯಿತು. ಈ ಸಂದರ್ಭ ವೇದ ಮಂತ್ರಘೋಷಗಳ ಸಹಿತ ರಥಕ್ಕೆ ಪೂಜೆ ಸಲ್ಲಿಸಲಾಯಿತು. ಬಳಿಕ ಸಂಪಾಜೆ ಮಾರ್ಗವಾಗಿ ಪುತ್ತೂರು ಕಡೆಗೆ ರಥವನ್ನು ಬೀಳ್ಕೊಡಲಾಯಿತು. ಇದಕ್ಕೂ ಮುನ್ನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆಗೆ ಗಣ್ಯರು ಸಹಿತ ಸಂಘಟನೆಗಳ ಪ್ರಮುಖರು ಪುಷ್ಪಾರ್ಚನೆ ನಡೆಸಿ ಗೌರವ ಸಮರ್ಪಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೃಷ್ಣ ಮೂರ್ತಿ, ವಿಶ್ವ ಹಿಂದೂ ಪರಿಷತ್ ಶ್ರೀ ಕೃಷ್ಣ ಜನ್ಮಾಷ್ಟಮಿ…

Read More

ಮಡಿಕೇರಿ ಅ.6 : ವಿವಿಧ ಇಲಾಖೆಗಳ ಅಧಿಕಾರಿಗಳು ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಮಿತಿಗಳೊಂದಿಗೆ ಕೈಜೋಡಿಸುವ ಮೂಲಕ ಅತ್ಯಂತ ವ್ಯವಸ್ಥಿತವಾಗಿ ಯಶಸ್ವಿ ದಸರಾ ಆಚರಣೆಗೆ ಸಹಕಾರ ನೀಡುವಂತೆ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಯ ಭದ್ರತೆಯನ್ನು ಪಿ.ಡಬ್ಲ್ಯೂ.ಡಿ ಇಲಾಖೆ ಅಧಿಕಾರಿಗಳು ಗಮನಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಸೂಚಿಸಿದರು. ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ಕೂಡ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸೂಕ್ತ ಸಿದ್ದತೆ ಮಾಡಬೇಕೆಂದು ಅವರು ಸೂಚಿಸಿದರು. ಕಾರ್ಯಕ್ರಮ ವ್ಯಾಪ್ತಿಯ 100-200 ಮೀಟರ್ ವ್ಯಾಪ್ತಿಯಲ್ಲಿ ಅಗ್ನಿಶಾಮಕ ದಳವನ್ನು ನಿಯೋಜಿಸುವಂತೆ ಅವರು ಸಲಹೆ ನೀಡಿದರು. ದಸರಾ ದಿನಗಳಲ್ಲಿ ನಿರಂತರ ವಿದ್ಯುತ್ ಪೂರೈಸಲು ಸೆಸ್ಕ್ ಇಲಾಖೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ವೇದಿಕೆಯಲ್ಲಿ ಅಲಂಕಾರಿಕ ಹೂ ಕುಂಡ ವ್ಯವಸ್ಥೆಗೆ ತೋಟಗಾರಿಕಾ…

Read More

ಮಡಿಕೇರಿ ಅ.6 : ನೆಲ್ಯಹುದಿಕೇರಿಯ ಅಭ್ಯತ್ ಮಂಗಲ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನವಾಗಿ ಅಧ್ಯಕ್ಷರಾಗಿ ವಿ.ಕೆ.ಲೋಕೇಶ್ ಹಾಗೂ ಉಪಾಧ್ಯಕ್ಷರಾಗಿ ತೋಟಂಬೈಲು ಪ್ರಸನ್ನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಕುಶಾಲನಗರ ಕಂದಾಯ ಇಲಾಖೆ ಅಧಿಕಾರಿ ಚೇತನ್ ಕಾರ್ಯಪ್ಪ ಕಾರ್ಯನಿರ್ವಹಿಸಿದರು.

Read More

ಮಡಿಕೇರಿ ಅ.6 : ಕೊಡಗು ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅ.10 ರಿಂದ 25 ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಈ ಹಿಂದೆ ಅ.9 ರಿಂದ 24 ರವರೆಗೆ ರಜೆ ನೀಡಲಾಗಿತ್ತು. ಆದರೆ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಮೆರಗು ಅ.24 ರ ರಾತ್ರಿಯೂ ನಡೆಯುವುದರಿಂದ ವಿದ್ಯಾರ್ಥಿಗಳಿಗೆ ಅಡಚಣೆಯಾಗಬಾರದು ಎನ್ನುವ ಕಾರಣಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಲಹೆಯಂತೆ ಶಿಕ್ಷಣ ಇಲಾಖೆ ಈ ಮಾರ್ಪಾಡು ಮಾಡಿ ಆದೇಶಿಸಿದೆ.

Read More

ನಾಪೋಕ್ಲು ಅ.6 : ಹೊದ್ದೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಕಾವೇರಿ ನದಿ ಮಲೀನ ವಾಗುತ್ತಿದ್ದು, ಕಾವೇರಿ ನದಿ ಹಾಗೂ ಪರಿಸರವನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಗ್ರಾ.ಪಂ ಮುಂದಾಗಿದೆ ಎಂದು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಕೊಟ್ಟಮುಡಿ ಹೇಳಿದರು. ಹೊದ್ದೂರು ಗ್ರಾ.ಪಂ ಮುಂದಾಳತ್ವದಲ್ಲಿ ಧರ್ಮಸ್ಥಳ ಹಾಗೂ ಸಂಜೀವಿನಿ ಒಕ್ಕೂಟ, ವಿವಿಧ ಸಂಘಗಳ ಸಹಾಯ ಯೋಗದೊಂದಿಗೆ ಹಮ್ಮಿಕೊಳ್ಳಲಾದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹೊದ್ದೂರು ಗ್ರಾಮದ ರಸ್ತೆಯಂಚಿನಲ್ಲಿ ಹರಿಯುವ ಕಾವೇರಿ ನದಿ ಮಲಿನವಾಗುತ್ತಿದ್ದು, ಪ್ರವಾಸಿಗರು,ಜನರು ಕಸ ತ್ಯಾಜ್ಯಗಳನ್ನು ಕಾವೇರಿ ನದಿ ತಟದಲ್ಲಿ ಸುರಿಯುತ್ತಿದ್ದಾರೆ. ಈ ಹಿಂದೆ ಕಾವೇರಿ ಹೊಳೆ, ರಸ್ತೆಯ ಎರಡು ಬದಿ ಸುಂದರವಾಗಿ ಕಾಣುತ್ತಿತ್ತು. ಆದರೆ ತ್ಯಾಜ್ಯಗಳು ತುಂಬಿ ಮಲೀನವಾಗಿದೆ. ಇಂತಹ ನದಿಯ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು. ರಾಜ್ಯದಲ್ಲಿ ಕಾವೇರಿ ನದಿ ನೀರನ್ನು ಸಹಸ್ರಾರು ಮಂದಿ ಕುಡಿಯುತ್ತಿದ್ದು, ಜನರು ಕಸ ತ್ಯಾಜ್ಯವನ್ನು ಎಸೆಯುವುದರಿಂದ ನೀರು ಮಲೀನವಾಗುತ್ತಿದೆ. ಇದೀಗ ಕಾವೇರಿ ಸಂಕ್ರಮಣ, ದಸರಾ ಹಬ್ಬಗಳಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದರಿಂದ…

Read More

ಮಡಿಕೇರಿ ಅ.6 : ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳು ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿವೆ, ಎಲ್ಲಿ ನೋಡಿದರೂ ಕಾಂಗ್ರೆಸ್ ಕಾರ್ಯಕರ್ತರೇ ಕಾಣಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಭಯದ ವಾತಾವರಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಸುಬ್ರಮಣ್ಯ ಉಪಾಧ್ಯಾಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಮೇಲೆ ಸರ್ಕಾರಿ ಕಚೇರಿಗಳು ಕಾಂಗ್ರೆಸ್ ಮಯವಾಗಿವೆ. ಇತ್ತೀಚೆಗೆ ಸಂಪಾಜೆಯಲ್ಲಿ ನಡೆದ ಕಾಂಗ್ರೆಸ್ ಸಭೆಗೆ ತಹಶೀಲ್ದಾರ್ ರನ್ನು ಕರೆಸಿ ಕುಂದುಕೊರತೆ ಸಭೆ ಎಂದು ಪ್ರತಿಬಿಂಬಿಸಲಾಗಿದೆ. ತಾಲ್ಲೂಕು ಪಂಚಾಯಿತಿ ಕಚೇರಿ ಸಿಬ್ಬಂದಿಗೆ ದೂರವಾಣಿ ಮಾಡಿದಾಗ ಕಾಂಗ್ರೆಸ್ ಅಧ್ಯಕ್ಷರ ಕೈಗೆ ಫೋನ್ ಕೊಟ್ಟ ಪ್ರಸಂಗವೂ ನಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಅರ್ಜಿದಾರರ ಬದಲು ಕಾಂಗ್ರೆಸ್ ಕಾರ್ಯಕರ್ತರೇ ತುಂಬಿರುತ್ತಾರೆ ಎಂದು ಟೀಕಿಸಿದರು. ಹಿಂದಿನ ಶಾಸಕರುಗಳು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಎಲ್ಲಿಯೂ ಹೇಳಿಕೊಳ್ಳುತ್ತಿರಲಿಲ್ಲ. ಆದರೆ ಈಗಿನ ಶಾಸಕರುಗಳು ತಾವು ಮಾಡಿದ ಪ್ರತಿಯೊಂದು ಕೆಲಸಕ್ಕೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ತಾವು ಮಾಡಿದ ಕೆಲಸ ಜನಪರವಾಗಿರಬೇಕೆ ಹೊರತು ಪ್ರಚಾರದ…

Read More

ನಾಪೋಕ್ಲು ಅ.6 : ಆರು ತಿಂಗಳ ನಂತರ ಮೂರು ವರ್ಷದವರೆಗಿನ ಮಕ್ಕಳ ತಾಯಂದಿರು ಉದ್ಯೋಗಕ್ಕಾಗಿ ಬಂದಾಗ ಈ ಮಕ್ಕಳ ರಕ್ಷಣೆ ಮತ್ತು ಪಾಲನೆ ಮಾಡುವ ಉದ್ದೇಶದಿಂದ ಕೂಸಿನ ಮನೆ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಸಿಆರ್ ಪಿ ಮಂಜುಳಾ ಚಿತ್ರಾಪುರ ಹೇಳಿದರು. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೊಡಗು ಜಿಲ್ಲಾ ಪಂಚಾಯಿತಿ ಗ್ರಾಮ ಪಂಚಾಯಿತಿ ಗಳ ಸಹಯೋಗದೊಂದಿಗೆ ಸ್ಥಳೀಯ ಕೆಪಿಎಸ್ ಪ್ರಾರ್ಥಮಿಕ ಶಾಲಾ ಆವರಣದಲ್ಲಿ” ಕೂಸಿನ ಮನೆ ‘ ಶಿಶುವಿಹಾರ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಕೆಪಿಎಸ್ ಶಾಲೆ ಉಪಾಧ್ಯಕ್ಷ ಹ್ಯಾರಿಸ್ ಮಾತನಾಡಿ, ಶುಭಹಾರೈಸಿದರು. ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಲ್ಲೇಟಿರ ಹೇಮಾ ಅರುಣ್, ಪಂಚಾಯಿತಿ ಸದಸ್ಯರು ಮಹಮ್ಮದ್ ಖುರೇಶಿ, ಕಂಗಂಡ ಶಶಿ ಮಂದಣ್ಣ, , ಮುಖ್ಯ ಶಿಕ್ಷಕಿ ಚಂದ್ರಕಲಾ ,ಶಿಕ್ಷಕರು ,ಅಂಗನವಾಡಿ, ಆಶಾ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಹಾಗೂ ಪೋಷಕರು ಹಾಜರಿದ್ದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಚೋ0ದಕ್ಕಿ…

Read More