ಮಡಿಕೇರಿ ಅ.5 : ಕಾವೇರಿ ಚಂಗ್ರಾಂದಿಯ ತೀರ್ಥೋದ್ಭವ ಸಂದರ್ಭ ಭಾಗಮಂಡಲದಿಂದ ತಲಕಾವೇರಿಗೆ ಪಾದಯಾತ್ರೆ ಮೂಲಕ ಬರುವವರಿಗೆ ಪೊನ್ನಂಪೇಟೆಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಅಖಿಲ ಕೊಡವ ಸಮಾಜ ಯೂತ್ ವಿಂಗ್ ಹಾಗೂ ಕೊಡವ ರೈಡರ್ಸ್ ಕ್ಲಬ್ ತಿಳಿಸಿದ್ದಾರೆ. ಈ ಕುರಿತು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅಖಿಲ ಕೊಡವ ಸಮಾಜ ಯೂತ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಹಾಗೂ ಕೊಡವ ರೈಡರ್ಸ್ ಕ್ಲಬ್ ಅಧ್ಯಕ್ಷ ಅಜ್ಜಿಕುಟ್ಟೀರ ಪೃಥ್ವಿ ಸುಬ್ಬಯ್ಯ ಅ.10ರ ಒಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕಾಗಿದ್ದು, ಅ.17ರ ತೀರ್ಥೋದ್ಭವದ ಸಂದರ್ಭದಲ್ಲಿ ಕಾಲ್ನಡಿಗೆಯಲ್ಲಿ ಪಾಲ್ಗೊಳ್ಳುವವರಿಗೆ ಪೊನ್ನಂಪೇಟೆಯಿಂದ ಭಾಗಮಂಡಲದವರೆಗೆ ಉಚಿತ ಬಸ್ಸಿನ ವ್ಯವಸ್ಥೆ ಏರ್ಪಡಿಸಲಾಗಿದೆ. ಕೊಡವ ಸಮುದಾಯದ ಮಂದಿ ನಮ್ಮ ಕುಲಮಾತೆಯಾದ ಕಾವೇರಿ ಮಾತೆಯನ್ನು ಬರಮಾಡಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಿದೆ ಎಂದು ಅವರು ಕೇಳಿಕೊಂಡಿದ್ದಾರೆ. ಪ್ರತಿವರ್ಷ ಕೊಡವ ಯುವಕ ಯುವತಿಯರನ್ನು ಮಾತ್ರವಲ್ಲ ಅವರ ಪೋಷಕರನ್ನು ಸೇರಿದಂತೆ ಭಾಗಮಂಡಲದಿಂದ ತಲಕಾವೇರಿಗೆ ನಡೆಯಲು ಆಸಕ್ತಿ ಇರುವವರನ್ನು ಉಚಿತವಾಗಿ ಕರೆದುಕೊಂಡು ಹೋಗುತ್ತಿದ್ದು, ತಲಕಾವೇರಿಯಲ್ಲಿ ಕರೆದುಕೊಂಡು ಹೋಗಿ ಬರುವವರೆಗೂ…
ಲೇಖಕ: admin
ಮಡಿಕೇರಿ ಅ. 5 : ಕೊಡಗು ವಿದ್ಯಾಲಯದ ಶಾಲೆಯ 9ನೇ ತರಗತಿ ವಿದ್ಯಾಥಿ೯ ಗೋಲ್ಡನ್ ಸಾರ್ಜೆಂಟ್ ಜಿ.ಎಸ್.ಸುಹಿತ್ ನ್ನು ಸನ್ಮಾನಿಸಲಾಯಿತು. ಸೆ.19 ರಿಂದ 30ರ ವರೆಗೆ ದೆಹಲಿಯಲ್ಲಿ ನಡೆದ ಅಖಿಲ ಭಾರತ ತಳ ಸೈನಿಕ ಶಿಬಿರದ, ಶೂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನವನ್ನು ಗಳಿಸಿರುತ್ತಾನೆ. ಈ ಶಿಬಿರದ ಆಯ್ಕೆಯ ಮೊದಲು 3 ತಿಂಗಳ ತರಬೇತಿ ಆಯ್ಕೆಯ ಪ್ರಕ್ರಿಯೆಯಲ್ಲಿ ಭಾಗವಹಿಸಿ ಕರ್ನಾಟಕ ಮತ್ತು ಗೋವ ಡೈರೆಕ್ಟರೇಟ್ ನಲ್ಲಿ ಪ್ರಥಮ ಸ್ಥಾನ ಪಡೆದು ದೆಹಲಿಯಲ್ಲಿ ನಡೆದ ಅಖಿಲ ಭಾರತ ತಳ ಸೈನಿಕ ಶಿಬಿರಕ್ಕೆ ಸುಹಿತ್ ಆಯ್ಕೆಯಾಗಿದ್ದ. ಕೊಡಗು ವಿದ್ಯಾಲಯದ ಎನ್. ಸಿ. ಸಿ. ಅಧಿಕಾರಿ ಮೇಜರ್ ದಾಮೋದರ್ ರ ಅವರ ತರಬೇತಿಯಿಂದ ಈ ಸಾಧನೆಯನ್ನು ಮಾಡಿರುವುದಾಗಿ 19 ನೇ ಕನಾ೯ಟಕ ಎನ್ ಸಿಸಿ ಬೆಟಾಲಿಯನ್ ಕೆಡೆಟ್ ಸುಹಿತ್ ಹೇಳಿದ್ದಾರೆ. ಎನ್ ಸಿಸಿಯಲ್ಲಿ ಸಾಧನೆ ಮಾಡಿದ ಹೆಮ್ಮೆಯ ವಿದ್ಯಾರ್ಥಿಯನ್ನು ಕೊಡಗು ವಿದ್ಯಾಲಯದ ವತಿಯಿಂದ ಬ್ಯಾಂಡ್ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಪೋಷಕರಾದ ಸುರೇಂದ್ರ, ಗೀತಾ ಸುರೇಂದ್ರರ ಸಮ್ಮುಖದಲ್ಲಿ…
ಗೋಣಿಕೊಪ್ಪ ಅ.5 : ಶ್ರೀ ಕಾವೇರಿ ದಸರಾ ಸಮಿತಿ 45ನೇ ವರ್ಷದ ದಸರಾ ಜನೋತ್ಸವದ ಆಂಗವಾಗಿ ಅ.22ರಂದು (ಭಾನುವಾರ) ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ರಾಜ್ಯ ಮಟ್ಟದ ‘ದಸರಾ ಬಹುಭಾಷಾ ಕವಿಗೋಷ್ಠಿ’ಯನ್ನು ಕಾವೇರಿ ಕಲಾ ವೇದಿಕೆಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಕವನಗಳನ್ನು ಆಹ್ವಾನಿಸಲಾಗಿದೆ ಎಂದು ಕವಿಗೋಷ್ಟಿ ಸಮಿತಿ ಸಂಚಾಲಕ ಜಗದೀಶ್ ಜೋಡುಬೀಟಿ ತಿಳಿಸಿದ್ದಾರೆ. ಯಾವುದೇ ವಯೋಮಾನದವರು ಯಾವುದೇ ವಸ್ತು-ವಿಷಯ ಕುರಿತು ರಚಿಸಿದ ಸ್ವ-ರಚಿತ ಕವಿತೆಗಳು, ಗಜಲ್, ಚುಟುಕುಗಳು, ಕನ್ನಡ, ಅರೆಭಾಷೆ, ಕೊಡವ, ಎರವ, ತುಳು, ಹಿಂದಿ, ಇಂಗ್ಲೀಷ್, ತೆಲುಗು, ತಮಿಳು, ಮಲಯಾಳಿ ಮತ್ತು ಇನ್ನಿತರ ಭಾಷೆಗಳಲ್ಲಿ ರಚಿಸಿದ ಮತ್ತು ಇದುವರೆಗೆ ಎಲ್ಲಿಯೂ ಪ್ರಕಟವಾಗದ ಕವಿತೆಗಳನ್ನು ಕಳುಹಿಸಿಕೊಡಬಹುದಾಗಿದೆ. ಆಯ್ಕೆಯಾದ ಕವಿತೆಗಳನ್ನು ಕವಿಗಳಿಗೆ 22ರಂದು ನಡೆಯುವ ಕವಿಗೋಷ್ಠಿಯಲ್ಲಿ ವಾಚಿಸಲು ಅವಕಾಶವಿರಲಿದೆ. ಕವಿತೆಗಳನ್ನು ಅ.14ರೊಳಗೆ ತಲುಪುವಂತೆ ಜಗದೀಶ್ ಜೋಡುಬೀಟಿ, ಸಂಚಾಲಕ, ಕವಿಗೋಷ್ಠಿ ಸಮಿತಿ, ಶ್ರೀ ಉಮಾಮಹೇಶ್ವರಿ ಬಡಾವಣೆ , ಒಂದನೇ ವಿಭಾಗ, ಮೂರನೇ ಕ್ರಾಸ್ –571213, ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ…
ಮಡಿಕೇರಿ ಅ.5 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಕುರಿತು ಕೊಡವ ಜನಜಾಗೃತಿ ಮೂಡಿಸುತ್ತಾ ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 5 ಹಂತಗಳ ಪಾದಯಾತ್ರೆಯಲ್ಲಿ 3ನೇ ಹಂತದ ಪಾದಯಾತ್ರೆ ಅ.7 ರಿಂದ ಆರಂಭಗೊಳ್ಳಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅ.7 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲಿನಲ್ಲಿ ಪಾದಯಾತ್ರೆ, ಕಂಗಳತ್ತನಾಡ್ (ಗೊಣಿಕೊಪ್ಪ-ಮಾಯಮುಡಿ) 3.00 ಗಂಟೆಗೆ ಅರ್ಕೇರಿನಾಡ್ (ಬಾಳೆಲೆ) (ಪೊನ್ನಂಪೇಟೆ ತಾಲೂಕು), ಅ.8 ರಂದು ಬೆಳಗ್ಗೆ 10 ಗಂಟೆಗೆ ಕಿರ್ನಾಲ್‍ನಾಡ್ (ಕಿರ್ಗೂರ್-ಬೆಸಗೂರ್), 3 ಗಂಟೆಗೆ ಪತ್ತ್ ಕಟ್‍ನಾಡ್ (ಬೆಕ್ಕೆಸೆಡ್ಲೂರ್-ಕಾನೂರ್) (ಪೊನ್ನಂಪೇಟೆ ತಾಲೂಕು), ಅ.9 ರಂದು ಬೆಳಗ್ಗೆ 10 ಗಂಟೆಗೆ ತೊಡನಾಡ್ (ಕುಮಟೂರ್-ಶ್ರೀಮಂಗಲ), 2:30 ಗಂಟೆಗೆ, ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು), ಅ.10 ರಂದು ಬೆಳಗ್ಗೆ 10 ಗಂಟೆಗೆ ಮರೆನಾಡ್, ಪಾಕೇರಿನಾಡ್, ಐವತ್ನಾಡ್, ಪೊನಾಡ್ ಈ ನಾಲ್ಕು ನಾಡು ಮಂದ್‍ಗಳಲ್ಲಿ ಸಭೆ (ಬಾಡಗರ ಕೇರಿ-ತೆರಾಲ್-ಬಿರುನಾಣಿ) (ಪೊನ್ನಂಪೇಟೆ ತಾಲ್ಲೂಕು), ಅ.11 ರಂದು ಬೆಳಗ್ಗೆ…
ಸೋಮವಾರಪೇಟೆ ಅ.5 : ಕೊಡಗು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸೋಮವಾರಪೇಟೆ ಓಎಲ್‍ವಿ ಪ್ರೌಢಶಾಲೆ ವಿದ್ಯಾರ್ಥಿನಿ ಅಪೂರ್ವ ಕಿರಣ್ ಪ್ರಥಮ ಸ್ಥಾನ ಪಡೆದು, ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಇವರು ಸೋಮವಾರಪೇಟೆ ಕಿರಣ್ ಮತ್ತು ರೇಶ್ಮಾ ದಂಪತಿಗಳ ಪುತ್ರಿಯಾಗಿದ್ದು, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದಾರೆ.
ವಿರಾಜಪೇಟೆ ಅ.5 : ಕ್ರೀಡಾಪಟುಗಳಲ್ಲಿ ಶಿಸ್ತು ಮುಖ್ಯ ಎಂದು ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಹಾಗೂ ಪ್ರಗತಿ ಶಾಲೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ, ಕಾಲೇಜು ಜೀವನ ಅತೀ ಮುಖ್ಯವಾಗಿದೆ. ಆಟಗಾರರು ಶಿಸ್ತನ್ನು ಕಾಪಾಡುವುದರ ಮೂಲಕ ಆರೋಗ್ಯಕರ ಜೀವನ ನಡೆಸುವಂತಾಗಬೇಕು. ಆಟದಲ್ಲಿ ಗೆಲ್ಲುವುದಕ್ಕಿಂತ ಪಾಲ್ಗೊಳ್ಳುವಿಕೆ ಅತೀ ಮುಖ್ಯ ಎಂದು ಹೇಳಿದರು. ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಯಲ್ಲಿ ಕ್ರೀಡೆಯು ಅತೀ ಮುಖ್ಯವಾಗಿದೆ. ವಿದ್ಯಾರ್ಥಿಗಳು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು. ಮಾತ್ರವಲ್ಲದೆ ಕ್ರೀಡಾಕೂಟಗಳು ಸಾಮರಸ್ಯವನ್ನು ಬೆಳೆಸುತ್ತವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಾಕರ್ ಮಾತನಾಡಿ, ಸಂಸ್ಥೆಯ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಇದೀಗ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿರುವುದು ಮಹತ್ವದ್ದಾಗಿದೆ. ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ…
ಮಡಿಕೇರಿ ಅ.5 : ಕ್ಲುಲ್ಲಕ ಕಾರಣಕ್ಕಾಗಿ ಗ್ರಾಮದ ನಾಲ್ವರಿಗೆ ಎಮ್ಮೆಮಾಡು ಜಮಾಅತ್ ನಿಂದ ಸಾಮಾಜಿಕ ಬಹಿಷ್ಕಾರ ಮಾಡಲಾಗಿದೆ ಎಂದು ಆರೋಪಿಸಿರುವ ಎಮ್ಮೆಮಾಡು ಗ್ರಾ.ಪಂ ಸದಸ್ಯ ಸಿ.ಎ.ಇಸ್ಮಾಯಿಲ್, ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈದ್‍ಮಿಲಾದ್ ಸಂದರ್ಭ ಕಲಹ ನಡೆದಿದೆ ಎಂಬ ಕ್ಷುಲ್ಲಕ ಕಾರಣ ನೀಡಿ ಗ್ರಾಮದ ನಾಲ್ವರಿಗೆ ಯಾವುದೇ ನೋಟಿಸ್ ನೀಡದೆ ಜಮಾಅತ್‍ಗೆ ಒಳಪಡುವ ಯಾವುದೇ ಖಾಸಗಿ ಮತ್ತು ಸಾಮೂಹಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು, ಅವರ ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಸಬಾರದೆಂಬ ಹೇಳಿಕೆಯನ್ನು ಜಮಾಅತ್ ನ ಆಡಳಿತ ಮಂಡಳಿ ನೋಟಿಸ್ ಬೋರ್ಡ್‍ನಲ್ಲಿ ಪ್ರದರ್ಶನ ಮಾಡಿದೆ. ಇದು ಕಾನೂನು ಬಾಹಿರ ನಡೆಯಾಗಿದ್ದು, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಜಮಾಅತ್‍ನ ಲೆಕ್ಕ ಪರಿಶೋಧನೆಗೆ ನೇಮಕ ಮಾಡಿರುವವರನ್ನು ಸಹ ಸಾಮಾಜಿಕ ಬಹಿಷ್ಕಾರ ಹಾಕಿರುವುದು ಆಡಳಿತ ಮಂಡಳಿಯ ವೈಫಲ್ಯವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಆರೋಪಿಸಿದರು. ಕಾನೂನು ವ್ಯವಸ್ಥೆ ಇರುವಾಗ ಕಾನೂನು ಕ್ರಮ ಕೈಗೊಳ್ಳದೆ…
ಮಡಿಕೇರಿ ಅ.5 : ಪ್ರಸಕ್ತ (2023-24) ಸಾಲಿನಲ್ಲಿ ಮಡಿಕೇರಿ ತಾಲ್ಲೂಕಿನ ವಿವಿಧ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಇಲಾಖೆಯ ಅಧಿಕೃತ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in ರಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ 2.50 ಲಕ್ಷ), ವಿದ್ಯಾರ್ಥಿಯ ಆಧಾರ್ ಕಾರ್ಡ್ (ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್‍ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು) ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು. ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ). ವಿದ್ಯಾರ್ಥಿಯ ಹಿಂದಿನ ವರ್ಷದ ಮಾರ್ಕ್ ಕಾರ್ಡ್ ಪ್ರತಿ. ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ. ಅಧ್ಯಯನ/ ಬೋನಾಪೈಡ್ ಪ್ರಮಾಣ ಪತ್ರ ಪ್ರಸಕ್ತ ಕೋರ್ಸಿನ ಶುಲ್ಕ ರಶೀದಿ ಪ್ರತಿ ಹಾಗೂ ತಂದೆ/ ತಾಯಿ/ ಪೋಷಕರ ಆಧಾರ್ ಕಾರ್ಡ್ ಪ್ರತಿ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಪೆÇನ್ನಂಪೇಟೆ…
ಮಡಿಕೇರಿ ಅ.5 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟವು ಅ.7 ರಂದು ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.
ಕೂಡಿಗೆ / ಕುಶಾಲನಗರ, ಅ.5 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರು ಮತ್ತು ಬಾಲಕಿಯರಿಗೆ ಅ.8 ರಂದು ಮೈಸೂರು ವಿಭಾಗದ ಹಾಕಿ ಪಂದ್ಯಾವಳಿ ಹಾಗೂ ಅ.9 ರಂದು ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯನ್ನು ಕೂಡಿಗೆಯ ಸರ್ಕಾರಿ ಕ್ರೀಡಾಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. ಅ.8 ರಂದು ಬೆಳಿಗ್ಗೆ 10 ಗಂಟೆಗೆ ಒಂದು ದಿನ ಮೈಸೂರು ವಿಭಾಗದ ಹಾಕಿ ಪಂದ್ಯಾವಳಿ ಪ್ರಾರಂಭವಾಗಲಿದೆ. ಅ.9 ಮತ್ತು 10 ರಂದು ಎರಡು ದಿನಗಳ ಕಾಲ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರು ಮತ್ತು ಬಾಲಕಿಯರಿಗೆ ರಾಜ್ಯಮಟ್ಟದ ಹಾಕಿ ಟೂರ್ನಿ ನಡೆಯಲಿದೆ ಎಂದು ಹಾಕಿ ಟೂರ್ನಿಯ ಸಂಚಾಲಕ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್ ತಿಳಿಸಿದ್ದಾರೆ. ಅ.9 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ ಆರಂಭವಾಗಲಿರುವ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎನ್.ಬೋಸರಾಜು ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು,…






