ಮಡಿಕೇರಿ ಅ.5 : ಕೊಡಗು ಜಿಲ್ಲಾ ಕಾಂಗ್ರೆಸ್ ಸೇವಾದಳದ ನಾಪೋಕ್ಲು ಬ್ಲಾಕ್ ಅಧ್ಯಕ್ಷರಾಗಿ ಪಿಯುಸ್ ಪೆರೆರ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆ ಮೇರೆಗೆ ಪಿಯುಸ್ ಪೆರೆರ ಅವರನ್ನು ನೇಮಕ ಮಾಡಲಾಗಿದ್ದು, ಕೆಪಿಸಿಸಿಯ ಮಾರ್ಗದರ್ಶನದಲ್ಲಿ ರಾಜ್ಯದ ನಾಯಕರು ಮತ್ತು ಜಿಲ್ಲಾಧ್ಯಕ್ಷರ ಸಹಕಾರದೊಂದಿಗೆ ಕಾಂಗ್ರೆಸ್ ಸೇವಾದಳದ ಸಂಘಟನೆ ಮತ್ತು ಪಕ್ಷದ ಬಲವರ್ಧನೆ ಮಾಡಲು ಕಾರ್ಯೋನ್ಮುಖರಾಗಬೇಕೆಂದು ಸೇವದಳದ ರಾಜ್ಯ ಸಂಘಟಕ ಎಂ.ರಾಮಚಂದ್ರ ತಿಳಿಸಿದ್ದಾರೆ.
ಲೇಖಕ: admin
ನಾಪೋಕ್ಲು ಅ.5 : ಕಕ್ಕಬೆ – ಕುಂಜಿಲ ಗ್ರಾ.ಪಂ ಯ ಮರಂದೋಡು ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಗ್ರಾಮದಲ್ಲಿ ಸಂಜೆ ಕತ್ತಲಾಗುತ್ತಿದ್ದಂತೆ ಮುಖ್ಯ ರಸ್ತೆ, ದಾರಿಗಳಲ್ಲಿ ತಿರುಗಾಡುವ ಕಾಡಾನೆಗಳಿಂದಗಿ ಗ್ರಾಮಸ್ಥರು ಮನೆಯಿಂದ ಹೊರಬರಲು ಜೀವ ಭಯ ಎದುರಾಗಿದೆ. ಕೂಲಿ ಕಾರ್ಮಿಕರು ತೋಟದ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಆತಂಕದಲ್ಲೇ ಶಾಲೆ, ಕಾಲೇಜು ಗೆ ತೆರಳುವಂತಾಗಿದೆ. ಗ್ರಾಮದ ರೈತ ಅನ್ನಾಡಿಯಂಡ ಚಂಗಪ್ಪ ಅವರ ಗದ್ದೆ, ಚೋಯಮಾಡಂಡ ಪೂಣಚ್ಚ ಅವರ ಗದ್ದೆಯಲ್ಲಿ ಅಡ್ಡಾಡಿರುವ ಮೂರು ನಾಲ್ಕು ಕಾಡಾನೆಗಳು ಸುಮಾರು ಒಂದು ಏಕ್ರೆ ಭತ್ತದ ಪೈರುಗಳನ್ನು ತಿಂದು,ತುಳಿದು ನಾಶಪಡಿಸಿವೆ. ಈ ವ್ಯಾಪ್ತಿಯಲ್ಲಿ ಸುಮಾರು 10ಕ್ಕಿಂತ ಹೆಚ್ಚು ಆನೆಗಳು ಬೀಡುಬಿಟ್ಟಿದ್ದು, ಅರಣ್ಯ ಅಧಿಕಾರಿಗಳಿಗೆ ಕಾಡಾನೆಗಳನ್ನು ಕಾಡಿಗಟ್ಟುವಂತೆ ಮನವಿ ಸಲ್ಲಿಸಿದರೂ ನಿರ್ಲಕ್ಷ ವಹಿಸುತ್ತಿದ್ದಾರೆ. ರೈತರಿಗೆ ಸಂಕಷ್ಟ ಎದುರಾಗಿದೆ ಎಂದು ಮರಂದೋಡ ಗ್ರಾ.ಪಂ ಸದಸ್ಯ ಚೋಯಮಾಡಂಡ ಹರೀಶ್ ಬೇಸರ ಪಡಿಸಿದ್ದಾರೆ. ಕಾಡಾನೆ ಮತ್ತು ಮಾನವ ಸಂಘರ್ಷ ತಪ್ಪಿಸಲು ವ್ಯವಸ್ಥಿತ ಹೋರಾಟ ನಡೆಸಬೇಕಾಗಿದೆ…
ಮಡಿಕೇರಿ ಅ.5 : ಮಾಜಿ ಸೈನಿಕರಿಗೆ ನ್ಯಾಯಬದ್ಧವಾಗಿ ದೊರಕಬೇಕಾದ ಹಕ್ಕುಗಳನ್ನು ಪಡೆಯುವ ನಿಟ್ಟಿನಲ್ಲಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸುವ ಸಲುವಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ಆಹ್ವಾನದ ಮೇರೆಗೆ ಜಿಲ್ಲೆಯ ಎಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯು ಮಡಿಕೇರಿಯ ಕಾವೇರಿ ಹಾಲ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲೆಯ ಎಲ್ಲಾ ಮಾಜಿ ಸೈನಿಕರ ಸಂಘಗಳನ್ನು ಒಗ್ಗೂಡಿಸಿ, ಮಾಜಿ ಸೈನಿಕರ ಸಂಘಗಳ ಒಕ್ಕೂಟವನ್ನು ರಚಿಸುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಮಾಜಿ ಸೈನಿಕರು ಮತ್ತು ಅವರ ಅವಲಂಬಿತ ಕುಟುಂಬಗಳಿಗೆ ಆಗುತ್ತಿರುವ ಅನ್ಯಾಯವನ್ನು ಪರಿಹರಿಸಲು ಸಂಬಂಧಿಸಿದವರಿಗೆ ಒಂದು ತಿಂಗಳ ಕಾಲಾವಕಾಶ ನೀಡುವುದು. ಮುಂದಿನ ಒಂದು ತಿಂಗಳ ಒಳಗೆ ಬೇಡಿಕೆ ಈಡೇರದಿದ್ದಲ್ಲಿ ತಮ್ಮ ನ್ಯಾಯಯುತ ಹಕ್ಕುಗಳನ್ನು ಪಡೆಯಲು ಒಕ್ಕೂಟದ ಮೂಲಕ ಮುಂದಿನ ದಿನಗಳಲ್ಲಿ ಧರಣಿ ಸತ್ಯಾಗ್ರಹ ಪ್ರತಿಭಟನೆಯನ್ನು ಹಮ್ಮಿಕೊಳ್ಳುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕೆ ಜಿಲ್ಲೆಯ ಎಲ್ಲಾ ಮಾಜಿ ಸೈನಿಕರ ಸಂಘಗಳು ಸಹಮತ ವ್ಯಕ್ತಪಡಿಸಿದವು. ಈ ಸಂದರ್ಭ ಮಾತನಾಡಿದ ಅಖಿಲ ಕರ್ನಾಟಕ…
ಸುಂಟಿಕೊಪ್ಪ ಅ.5 : ಗಾಂಧಿಜಯಂತಿಯ ಅಂಗವಾಗಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಬಡಾವಣೆಯ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಸ್ವಚ್ಛತಾ ಕಾರ್ಯ ಹಾಗೂ ಬಡಾವಣೆಯ ನಿವಾಸಿಗಳಿಗೆ ಕ್ರೀಡಾಕೂಟ ನಡೆಯಿತು. ಶ್ರೀ ವಿನಾಯಕ ಮಿತ್ರ ಮಂಡಳಿಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯ, ಪುಟಾಣಿ ಮಕ್ಕಳು, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಗ್ರಾಮೀಣ ಕ್ರೀಡೆಗಳನ್ನು ನಡೆಸಲಾಯಿತು. ಅಂಗನವಾಡಿ ಮಕ್ಕಳಿಗೆ ಕಾಳು ಹೆಕ್ಕುವುದು, ಕಪ್ಪೆ ಓಟ ಹಾಗೂ ಬಕೆಟಿಗೆ ಬಾಲ್, 1ನೇ ತರಗತಿ ಯಿಂದ 3ನೇ ತರಗತಿ ವರೆಗಿನ ಮಕ್ಕಳಿಗೆ ಬಕೆಟಿ ಗೆ ಬಾಲ್ ಹಾಕುವುದು, ಮತ್ತು ನೀರು ತುಂಬಿಸುವ ಕ್ರೀಡಾಕೂಟ, 4ನೇ ತರಗತಿ ಯಿಂದ 7ನೇ ತರಗತಿ ಮಕ್ಕಳಿಗೆ ಪಾಸಿಂಗ್ ಬಾಲ್ ಮತ್ತು ನೀರು ತುಂಬಿಸುವ ಆಟ, 8ನೇ ತರಗತಿ ಯಿಂದ 10ನೇ ತರಗತಿ ಮಕ್ಳಳಿಗೆ ಗೋಣಿಚೀಲ ಓಟ ಮತ್ತು ಪಾಸಿಂಗ್ ಬಾಲ್, ಪಿಯುಸಿ ಯಿಂದ ಡಿಗ್ರಿ ಮಕ್ಕಳಿಗೆ ಸುಪ್ರ್ರೈಸ್, ಮಹಿಳೆಯರಿಗೆ ಇಟ್ಟಿಗೆ ಹಿಡಿತ, ಹಿರಿಯ ಮಹಿಳೆಯರಿಗೆ ಸೂಜಿಗೆ ಧಾರ ಹಾಕುವ ಸ್ಪರ್ಧೆ, ಪುರುಷರಿಗೆ…
ಮಡಿಕೇರಿ ಅ.4 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಆಯುಷ್ಮಾನ್ ಭವ ಕಾರ್ಯಕ್ರಮದ ಪ್ರಯುಕ್ತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶನಿವಾರ ಸಂತೆ ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯ್ತಿ ಸಂಯುಕ್ತ ಆಶ್ರಯದಲ್ಲಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಶಿಬಿರದಲ್ಲಿ ಸಾಮಾನ್ಯ ವೈದಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು, ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಆಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆ ನೀಡಿದರು. ಸುಮಾರು 500 ಕ್ಕೂ ಹೆಚ್ಚು ಹೊರ ರೋಗಿಗಳ ಭೇಟಿ ನೀಡಿದ್ದರು. 21 ಯುಡಿಐಡಿ ಕಾರ್ಡ್‍ಗಳು, 54 ಜನರು ಆರೋಗ್ಯ ಕಾರ್ಡ್‍ಗಳನ್ನು ಶಿಬಿರದಲ್ಲಿ…
ಮಡಿಕೇರಿ ಅ.4 : ಧರ್ಮಸ್ಥಳ ವ್ಯಾಪ್ತಿಯಲ್ಲಿ ಹನ್ನೊಂದು ವರ್ಷಗಳ ಹಿಂದೆ ನಡೆದ `ಸೌಜನ್ಯ’ ಹತ್ಯಾ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ವಾಯ್ಸ್ ಆಫ್ ಯೂತ್ ಯೂನಿಯನ್ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಯೂನಿಯನ್‍ನ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ, ಸೌಜನ್ಯ ಹತ್ಯಾ ಪ್ರಕರಣದ ಮರು ತನಿಖೆ ನಡೆಸಿ, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಯೂನಿಯನ್ ಅಧ್ಯಕ್ಷ ಕೆ.ಆರ್.ದಿನೇಶ್ ಮಾತನಾಡಿ, ಸೌಜನ್ಯಳನ್ನು ಅತ್ಯಾಚಾರಗೈದು ಹತ್ಯೆ ಮಾಡಿರುವ ಪ್ರಕರಣಕ್ಕೆ 11 ವರ್ಷಗಳಾದರೂ ಸೂಕ್ತ ನ್ಯಾಯ ದೊರಕದೆ ಇರುವುದು ಮತ್ತು ಅಪರಾಧಿಗಳಿಗೆ ಶಿಕ್ಷೆ ಆಗದೇ ಇರುವುದು ಖಂಡನೀಯ ಎಂದರು. ಈ ಸಂಬಂಧ ಸಂತೋಷ್ ಎಂಬಾತನನ್ನು ಬಂಧಿಸಲಾಗಿತ್ತಾದರು, ಸಿಬಿಐ ನ್ಯಾಯಾಲಯ ಆತನನ್ನು ನಿರ್ದೋಷಿಯೆಂದು ಬಿಡುಗಡೆ ಮಾಡಿದೆ. ಈ ನಿಟ್ಟಿನಲ್ಲಿ ಪ್ರಕರಣದ ನೈಜ ಆರೋಪಿಗಳನ್ನು ಕಂಡು ಹಿಡಿಯಲು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಯೂನಿಯನ್ ಕಾರ್ಯದರ್ಶಿ ಆರ್.ಎಂ.ದರ್ಶಿನಿ ಮಾತನಾಡಿ, ಅಮಾಯಕ…
ಮಡಿಕೇರಿ ಅ.4 : ಮಡಿಕೇರಿ ದಸರಾ ಉತ್ಸವಕ್ಕೆ ಸರ್ಕಾರದಿಂದ ಬರುವ ಅನುದಾನಲದಲ್ಲಿ ದಶಮಂಟಪಗಳಿಗೆ ಅನ್ಯಾಯವಾಗದಂತೆ ಉತ್ತಮ ಅನುದಾನ ನೀಡಲು ಕ್ರಮ ಕೈಗೊಳ್ಳುವುದಾಗಿ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು. ನಗರದ ರಾಜ್‍ದರ್ಶನ್ ಸಭಾಂಗದಣಲ್ಲಿ ನಡೆದ ದಶಮಂಟಪ ಸಮಿತಿ ಸಭೆಯಲ್ಲಿ ದಶಮಂಟಪ ಸಮಿತಿಗಳ ವಿವಿಧ ಬೇಡಿಕೆಯ ಮನವಿ ಪತ್ರವನ್ನು ಸ್ವೀಕರಿಸಿ ಬಳಿಕ ಅವರು, ಮಾತನಾಡಿದರು. ದಶಮಂಟಪಗಳು ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿದ್ದು, ಅವುಗಳಿಗೆ ಪ್ರಾಮುಖ್ಯತೆ ನೀಡಬೇಕಾಗಿರುವುದು ನಮ್ಮ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಬಾರಿ ಬಾಕಿ ಇರುವ ಅನುದಾನದೊಂದಿಗೆ ಈ ಬಾರಿಯೂ ಉತ್ತಮ ಅನುದಾನವನ್ನು ದಶಮಂಟಪಗಳಿಗೆ ನೀಡುವ ನಿಟ್ಟಿನಲ್ಲಿ ಅತ್ಯ ಕ್ರಮ ಕೈಗೊಳ್ಳುವುದಾಗಿ ಮಂತರ್ ಗೌಡ ಆಶ್ವಾಸನೆ ನೀಡಿದರು. ಹಾಲಿ ಜನಪ್ರತಿನಿಧಿಗಳು ಹಾಗೂ ಮಾಜಿ ಜನಪ್ರತಿನಿಧಿಗಳೆಲ್ಲರನ್ನು ಉತ್ಸವಕ್ಕೆ ಆಹ್ವಾನಿಸುವ ಕೆಲಸವಾಗಬೇಕೆಂದು ದಸರಾ ಸಮಿತಿಗೆ ಸೂಚಿಸಿದ ಶಾಸಕರು, ನಗರದ ರಸ್ತೆ ಕಾರ್ಯವನ್ನು ಕಡ್ಡಾಯವಾಗಿ ದಸರಾ ಉತ್ಸವಕ್ಕೂ ಮುನ್ನ ನಿರ್ವಹಿಸುವಂತೆ ನಗರಸಭಾಧ್ಯಕ್ಷರಿಗೆ ನಿರ್ದೇಶ ನೀಡಿದರು. ದಸರಾ ಹಿನ್ನೆಲೆ ವಿವಿಧ ಇಲಾಖೆಗಳಿಂದ ಆಗಬೇಕಾಗಿರುವ ಪೂರ್ವ ತಯಾರಿ…
ಮಡಿಕೇರಿ ಅ.4 : ಸತ್ಯ, ಅಸ್ತಿತ್ವ, ಸಮರ್ಪಣೆ”ಎಂಬ ದ್ಯೇಯದಡಿಯಲ್ಲಿ ಅ.11 ರಂದು ಎಸ್‍ಕೆಎಸ್‍ಎಸ್‍ಎಫ್ ಕೊಡಗು ಜಿಲ್ಲಾ ಸಮ್ಮೇಳನ ಹಾಗೂ ಬೃಹತ್ ಮೀಲಾದ್ ಸಮಾವೇಶ ಮತ್ತು ನೂರೇ ಅಜ್ಮೀರ್ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಲಿದೆ ಎಂದು ಎಸ್‍ಕೆಎಸ್‍ಎಸ್‍ಎಫ್ ಕೊಡಗು ಅಧ್ಯಕ್ಷ ಎಂ.ತಮೀಖ್ ದಾರಿಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4 ಗಂಟೆಗೆ ಮೀಲಾದ್ ಸಂದೇಶ ಮೆರವಣಿಗೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ನಂತರ ಕುಶಾಲನಗರದ ಎಸ್ ಎಲ್ ಎನ್ ಮೈದಾನದಲ್ಲಿ ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಪಾಣಕ್ಕಾಡ್ ಸೈಯ್ಯಿದ್ ಮುನವ್ವರಲಿ ಶಿಹಾಬ್ ತಂಙಳ್ ಸಮ್ಮೇಖವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಎಸ್‍ಕೆಎಸ್‍ಎಸ್‍ಎಫ್ ಕೊಡಗು ಸಮಿತಿ ಉಪಾಧ್ಯಕ್ಷ ಸತ್ತಾರ್ ಪಂದಲ್ಲೂರ್ ‘ಸತ್ಯ, ಅಸ್ತಿತ್ವ, ಸಮರ್ಪಣೆ ಎಂಬ ವಿಷಯವನ್ನಾಧರಿಸಿ ದಿಕ್ಸೂಚಿ ಭಾಷಣ ಮಾಡಲಿದ್ದು, ಮುಖ್ಯ ಅಥಿತಿಗಳಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಸೇರಿದಂತೆ ಮತ್ತಿತರ ಗಣ್ಯ…
ಮಡಿಕೇರಿ ಸೆ.4 : ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಾಳತ್ತಮನೆ, ಮೇಕೇರಿ, ಬಿಳಿಗೇರಿ ಅರ್ವತ್ತೋಕ್ಲು ಮೂಲಕ ಬೆಟ್ಟಗೇರಿ ಗೆ ಸಂಪರ್ಕಿಸುವ ರಸ್ತೆಯನ್ನು ಆಧುನೀಕರಿಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ನಿರ್ದೇಶನ ನೀಡಿದ್ದಾರೆ. ಇಂದು ವಿಧಾನಸೌಧ ದಲ್ಲಿರುವ ಎ.ಎಸ್.ಪೊನ್ನಣ್ಣ ಅವರ ಕಚೇರಿಯಲ್ಲಿ ಶಾಸಕರನ್ನು ಭೇಟಿ ಮಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಹಾಗೂ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಮಡಿಕೇರಿಯಿಂದ ನಾಪೋಕ್ಲುವಿಗೆ ಪರ್ಯಾಯ ರಸ್ತೆಯ ಉದ್ದೇಶದಿಂದ ನಿರ್ಮಾಣಗೊಂಡ ಅರವತ್ತರ ದಶಕದ ಈ ರಸ್ತೆ ಕಡೆ ಗಣನೆಗೆ ಒಳಪಟ್ಟು ಗ್ರಾಮದ ಅನೇಕರು ಮಕ್ಕಳ ವಿಧ್ಯಾಭ್ಯಾಸದ ಸಲುವಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗಿರುವುದನ್ನು ವಿವರಿಸಿದರು. ಅಲ್ಲದೆ ಸುಮಾರು ಐದು ಗ್ರಾಮಗಳಿಗೆ ಸೇರಿದ ನೂರಾರು ವಿಧ್ಯಾರ್ಥಿಗಳು, ಸಾರ್ವಜನಿಕರು ಪ್ರತಿನಿತ್ಯ ಈ ರಸ್ತೆಯಲ್ಲಿ ಸಂಚಾರ ಮಾಡಲು ಹರಸಾಹಸ ಪಡುತ್ತಿರುವ ಬಗ್ಗೆ ಮಾಹಿತಿ ನೀಡಿದರು. ತಾವು ಕೋವಿಡ್…
ನಾಪೋಕ್ಲು ಅ.4 : ನಾಪೋಕ್ಲು ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಕೇಟೋಳಿರ ಹರೀಶ್ ಪೂವಯ್ಯ, ಉಪಾಧ್ಯಕ್ಷರಾಗಿ ಕುಂಡ್ಯೂಳಂಡ ಕವಿತಾ ಮುತ್ತಣ್ಣ ಆಯ್ಕೆಯಾಗಿದ್ದಾರೆ. ನಾಪೋಕ್ಲುವಿನಲ್ಲಿ ಇಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಬಿಜೆಪಿ ಬೆಂಬಲಿತ 13 ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಕಕ್ಕಬೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಕಾರ್ಯನಿರ್ವಹಿಸಿದ್ದಾರೆ. ವರದಿ : ದುಗ್ಗಳ ಸದಾನಂದ






