ಸಿದ್ದಾಪುರ ಆ.5 : ಹೊಸ್ಕೆರಿ ಗ್ರಾ.ಪಂ ನೂತನ ಕಟ್ಟಡ ನಿರ್ಮಾಣಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಎಂಎಲ್ಸಿ ಸುಜಾ ಕುಶಾಲಪ್ಪ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಎನ್ ಆರ್ ಐ ಜಿ ಯೋಜನೆಯ ಅಂದಾಜು 20 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದ್ದು, ಗ್ರಾಮಸ್ಥರು ಸರ್ಕಾರದ ಸೌಲಭ್ಯಗಳೊಂದಿಗೆ ಪಂಚಾಯತಿಯ ಯೋಜನೆಗಳನ್ನ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ಗ್ರಾ.ಪಂ ಅಧ್ಯಕ್ಷ ಪ್ರಭು ಶೇಖರ್ ಮಾತನಾಡಿ, ಅತ್ತಿಮಂಗಲ ಅರೇಕಾಡು, ಹೊಸಕೇರಿ, ಮರಗೋಡು ಮಾರ್ಗದ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಣದೆ ವಾಹನ ಸವಾರರಿಗೆ ಸಾರ್ವಜನಿಕರಿಗೆ ಹಲವು ಸಮಸ್ಯೆಗಳು ಎದುರಾಗುತ್ತಿದ್ದು, ರಸ್ತೆ ಅಭಿವೃದ್ಧಿ ಮಾಡಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ, ಪ್ರಮುಖರಾದ ಯೂಸುಫ್,ಇಸ್ಮಾಯಿಲ್,ಸದ ಡೆನ್ನಿಸ್,ಚಂದನ್, ಪಂಚಾಯಿತಿಯ ಸದಸ್ಯರುಗಳು ಗ್ರಾಮಸ್ಥರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಆ.5 : ವಿರಾಜಪೇಟೆಯ ಶಾಸಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ಅಲಂಕರಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಗುಂಡಿಕೆರೆ ಮುಸ್ಲಿಂ ಜಮಾಹತ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಜಮಾಹತ್ ಅದ್ಯಕ್ಷ ಕೆ.ಯು.ಮುಹಮ್ಮದ್ ಹಾಜಿ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸಿನ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಅದ್ಯಕ್ಷ ಅನಿಫ್ ಚೋಕಂಡಳ್ಳಿ , ಶಾಪೀ ಮಸೀದಿ ಗುಂಡಿಕೆರೆ ಉಪಾದ್ಯಕ್ಷ ಎಂ.ವೈ.ಆಲಿ, ಮಾಜಿ ಅಧ್ಯಕ್ಷ ಅಬ್ಬಾಸ್, ಕಾರ್ಯದರ್ಶಿ ಸಿ.ಪಿ.ಆಲಿ, ಪ್ರದಾನ ಕಾರ್ಯದರ್ಶಿ ಇಸ್ಮಾಯಿಲ್ ಹಾಜಿ, ಆಡಳಿತ ಮಂಡಳಿ ಸದಸ್ಯ ಅಲೀ ಮುಸ್ಲಿಯಾರ್, ತಕ್ಕಮುಖ್ಯಸ್ಥರಾದ ಶಾದುಲಿ ಎಂಪಿ.ಹಸೈನಾರ್ ಬೇಟೋಳಿ ಗ್ರಾ.ಪಂ ಸದಸ್ಯ ರಝಾಕ್ ಮತ್ತಿತರರು ಹಾಜರಿದ್ದರು. ಕಾರ್ಯದರ್ಶಿ ಆಲಿ ಸ್ವಾಗತಿಸಿದರು. ಕೆದಮುಳ್ಳೂರು ಗ್ರಾ.ಪಂ ಸದಸ್ಯ ಎಂ.ಎಂ.ಇಸ್ಮಾಯಿಲ್ ಕಾರ್ಯಕ್ರಮ ನಿರೂಪಿಸಿ, ಸರ್ವರನ್ನು ವಂದಿಸಿದರು. ವರದಿ : ನೌಫಲ್ ಕಡಂಗ
ಸೋಮವಾರಪೇಟೆ ಆ.5 : ಹಾಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರ ಹಿಂಬಡ್ತಿ ನೀಡಿದೆ ಎಂದು ಆರೋಪಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಭಾರತ ಸೇವಾದಳದ ಕಾರ್ಯಾಗಾರವನ್ನು ಬಹಿಷ್ಕರಿಸುವ ಮೂಲಕ ಪ್ರತಿಭಟನೆ ನಡೆಸಿದರು. 1 ರಿಂದ 7ನೇ ತರಗತಿಯವರೆಗೆ ಬೋಧಿಸಲು ನೇಮಕಗೊಂಡ ಶಿಕ್ಷಕರನ್ನು ಈಗ 1 ರಿಂದ 5ನೇ ತರಗತಿಯವರೆಗೆ ಮಾತ್ರ ಬೋಧಿಸಲು ನಿಗಧಿಗೊಳಿಸಿ ಶಿಕ್ಷಕರಿಗೆ ಹಿಂಬಡ್ತಿ ನೀಡಲಾಗಿದೆ. ಮಕ್ಕಳಿಗೆ ಪಾಠ ಮಾಡುವುದು ನಮ್ಮ ಕೆಲಸ, ಬೇರೆ ಕೆಲಸಗಳನ್ನು ಶಿಕ್ಷಕರು ಮಾಡುವುದಿಲ್ಲ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಹೇಳಿದರು. 1 ರಿಂದ 7ನೇ ತರಗತಿಗೆ ನೇಮಕವಾದ ಯಾವುದೇ ಶಿಕ್ಷಕರು ಈಗ ಹಿರಿಯ ಪ್ರಾಥಮಿಕ ಶಾಲೆಗಳಿಗೆ ವರ್ಗಾವಣೆ ಅಸಾಧ್ಯವಾಗಿದೆ. ಹುದ್ದೆಗಳು ತನ್ನಿಂದ ತಾನೇ ಜಿಪಿಟಿ ಹುದ್ದೆಗಳಾಗಿ ಪರಿವರ್ತನೆಯಾಗಿವೆ. ಪಿಎಸ್‌ಟಿ ಶಿಕ್ಷಕರಿಗೆ ವರ್ಗಾವಣೆಗೆ ಸ್ಥಳಾವಕಾಶ ಸಿಗದಂತೆ ಯಾಗಿದೆ. ಪ್ರಾಥಮಿಕ ಹಂತದಲ್ಲಿ ದೈಹಿಕ ಶಿಕ್ಷಣವನ್ನು ಒಂದು ವಿಷಯವಾಗಿ ಸೇರಿಸಿ ಪಠ್ಯ ನೀಡಿದ್ದು, ಬಹುತೇಕ ಶಾಲೆಯಲ್ಲಿ ದೈಹಿಕ ಶಿಕ್ಷಕರಿಲ್ಲ. ಆ ಶಿಕ್ಷಕರೆ ಮಾಡುತ್ತಿದ್ದಾರೆ.…
ಸಿದ್ದಾಪುರ ಆ.5 : ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಪ್ರಾಥಮಿಕ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಹೆರಿಗೆ ಪ್ರಮಾಣ ಹೆಚ್ಚಾಗಿದ್ದರೂ ಸಹ ತಾಯಿ ಮಗುವಿಗೆ ಎದೆ ಹಾಲು ಕುಡಿಸುವ ಪ್ರಮಾಣ ಕಡಿಮೆ ಆಗಿದೆ. ಮಗುವಿಗೆ 6 ತಿಂಗಳವರೆಗೆ ಕೇವಲ ಎದೆ ಹಾಲನ್ನು ಮಾತ್ರ ಉಣಿಸಬೇಕು. ಇದರಿಂದ ಶಿಶುಗಳಿಗೆ ಬರುವಂತಹ ಸೋಂಕು ರೋಗಗಳನ್ನು ತಡೆಗಟ್ಟಿ, ಶಿಶು ಮರಣಗಳನ್ನು ತಪ್ಪಿಸಬಹುದು ಎಂದರು. ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ನ ಕೊಡಗು ಶಾಖೆಯ ಕುಸುಮ ಮಾತನಾಡಿ, ಮಗು ಜನಿಸಿದ ಒಂದು ಗಂಟೆಯೊಳಗೆ ಸ್ತನ್ಯಪಾನ ಪ್ರಾರಂಭಿಸಬೇಕು. ಇದು ಮಗುವಿಗೆ ಮೊದಲಯ ಲಸಿಕೆ ಎದೆ ಹಾಲು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಸ್ತನ್ಯಪಾನದಿಂದ ಶಿಶು ಮರಣವನ್ನು ತಗ್ಗಿಸಬಹುದು ಎಂದು ಮಾಹಿತಿ ನೀಡಿದರು.
ಸೋಮವಾರಪೇಟೆ ಆ.5 : ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಹೊಣೆ ಶಿಕ್ಷಕರ ಮೇಲಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಹೇಮಂತ್ ಹೇಳಿದರು. ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣದಲ್ಲಿ ಭಾರತ ಸೇವಾದಳದ ಕೊಡಗು ಜಿಲ್ಲಾ ಘಟಕದಿಂದ ನಡೆದ ತಾಲ್ಲೂಕು ಮಟ್ಟದ ಶಿಕ್ಷಕ ಮತ್ತು ಶಿಕ್ಷಕಿಯರಿಗೆ ಒಂದು ದಿನ ಮಿಲಾಫ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಆಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು. ಸೇವಾದಳದಲ್ಲಿ ಪ್ರತಿಫಲಾಫೇಕ್ಷೆಯಿಲ್ಲದೆ ಶಿಕ್ಷಕರು ಕೆಲಸ ಮಾಡಬೇಕು. ರಾಷ್ಟ್ರಪಿತ ಮಹಾತ್ಮಗಾಂಧಿಯವರ ತತ್ವ ಮತ್ತು ಕಾರ್ಯಕ್ರಮಗಳ ತಳಹದಿಯ ಮೇಲೆ ಯುವಕರನ್ನು ಸಂಘಟಿಸಲು ರಾಷ್ಟ್ರೀಯ ಸೇವೆಗಾಗಿ ತರಬೇತಿಯನ್ನು ನೀಡಲಾಗುತ್ತಿದೆ. ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು, ಅವರಲ್ಲಿ ಸಂಯಮ, ಶಿಸ್ತು, ಧೈರ್ಯ. ತ್ಯಾಗ, ಸರಳತೆ, ಸೇವೆ, ತಾಳ್ಮೆ, ಸಹಕಾರ ಮತ್ತು ಸೇವಾ ಮನೋಭಾವ ಮೂಡಿಸುವುದು ಸೇವಾದಳದ ಪ್ರಮುಖ ಯೋಜನೆಯಾಗಿದೆ ಎಂದರು. ಕಾರ್ಯಗಾರದ ಅಧ್ಯಕ್ಷತೆಯನ್ನು ಜಿಲ್ಲಾ ಸಮಿತಿ ಅಧ್ಯಕ್ಷ ಕರುಂಬಯ್ಯ ವಹಿಸಿದ್ದರು. ಅವರು ಮಾತನಾಡಿ, ಕಳೆದ ಹಲವು ವರ್ಷಗಳಿಂದ ತಾಲ್ಲೂಕಿನ ಹೆಚ್ಚಿನ ಶಾಲೆಗಳಲ್ಲಿ ಸೇವಾದಳದ ಚಟುವಟಿಕೆಗಳು ನಡೆಯುತ್ತಿದ್ದವು.…
ಸೋಮವಾರಪೇಟೆ ಆ.5 : ಸೋಮವಾರಪೇಟೆ ತಾಲ್ಲೂಕಿನ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಟಿ 18ರ ಸಂಭ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು. ಔಷಧೀಯ ಗುಣಗಳುಳ್ಳ ಮಧುಬನ ಸೊಪ್ಪಿನ ಪಾಯಸವನ್ನು ಸೇವಿಸಿದರು. ಕೊಡಗಿನಲ್ಲಿ ಆಟಿ ಹಬ್ಬದ ವಿಶೇಷತೆಯ ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿರಾಜಪೇಟೆ ಆ.4 : ವಿರಾಜಪೇಟೆ ತಾಲ್ಲೂಕಿನ ಮಗ್ಗುಲ ಗ್ರಾಮದ ಕುಪ್ಪಚ್ಚಿರ ದಿ॥ ಭೀಮಯ್ಯ ಮತ್ತು ಕವಿತ ಭೀಮಯ್ಯರವರ ಪುತ್ರ ಕುಪ್ಪಚ್ಚಿರ ಭರತ್ ಅವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 57ನೇ ಘಟಿಕೋತ್ಸವದಲ್ಲಿ ಎಂ.ಎಸ್ಸಿ.(ಕೃಷಿ) ಪದವಿಯೊಂದಿಗೆ ಮೂರು ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಕೃಷಿ ವಿಶ್ವವಿದ್ಯಾನಿಲಯದ ರೇಷ್ಮೆಕೃಷಿ ಸ್ನಾತಕೋತ್ತರ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿ, “Bio-management of root-knot nematode in mulberry ( _Morus alba_ L.) and its impact on silkworm rearing” ಎಂಬ ವಿಷಯದ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ರಚಿಸಿರುವುದಕ್ಕೆ ಭರತ್ ಅವರಿಗೆ ಕರ್ನಾಟಕದ ರಾಜ್ಯಪಾಲರು ಹಾಗು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು ಪ್ರಶಸ್ತಿ ಪತ್ರ ಮತ್ತು ಮೂರು ಸ್ವರ್ಣ ಪದಕಗಳನ್ನು ಪ್ರದಾನ ಮಾಡಿದರು. ಈ ಸಂದರ್ಭ ಡಾ. ಹಿಮಾಂಶು ಪಾಠಕ್, ಮಹಾನಿರ್ದೇಶಕರು – ಭಾರತೀಯ ಕೃಷಿ ಅನುಸಂಧಾನ ಪರಿಷತ್ತು, ನವದೆಹಲಿ; ಶ್ರೀ. ಎನ್. ಚೆಲ್ಲುವರಾಯಸ್ವಾಮಿ, ಕರ್ನಾಟಕ ಸರ್ಕಾರದ ಮಾನ್ಯ ಕೃಷಿ ಸಚಿವರು;…
ಮಡಿಕೇರಿ ಆ.4 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ಆಕ್ಷೇಪಾರ್ಹ ಹೇಳಿಕೆ ಖಂಡನೀಯವೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಸತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಬಗ್ಗೆ ಆರಗ ಜ್ಞಾನೇಂದ್ರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೀಗ ವಿಷಾದ ವ್ಯಕ್ತಪಡಿಸುವ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಕೇವಲ ವಿಷಾದ ವ್ಯಕ್ತಪಡಿಸಿದರೆ ಹಿರಿಯ ದಲಿತ ನಾಯಕನಿಗೆ ಆದ ನೋವು ಸರಿ ಹೋಗಲು ಸಾಧ್ಯವಿಲ್ಲ, ತಾವು ಮಾಡಿದ ತಪ್ಪಿಗೆ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಆರಗ ಜ್ಞಾನೇಂದ್ರ ಅವರ ಹೇಳಿಕೆ ಬಿಜೆಪಿಗೆ ದಲಿತರ ಬಗ್ಗೆ ಎಷ್ಟು ಗೌರವವಿದೆ ಎನ್ನುವುದನ್ನು ಸಾಬೀತು ಪಡಿಸಿದೆ. ದಲಿತ ನಾಯಕರ ಬೆಳವಣಿಗೆಯನ್ನು ಸಹಿಸಲಾಗದ ಬಿಜೆಪಿ ಮಂದಿ ಈ ರೀತಿಯ ಕೀಳು ಮಟ್ಟದ ಭಾಷೆಗಳನ್ನು ಬಳಸಿ ನೋವುಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ನಾಡಿನ ಜನ ಸಹಿಸುವುದಿಲ್ಲ ಎಂದು…
ಸುಂಟಿಕೊಪ್ಪ ಆ.4 : ಕೊಡಗು ಜಿಲ್ಲಾ ಶಿಕ್ಷಣ ಪೌಂಡೇಶನ್ ವತಿಯಿಂದ ಗರಗಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಆರೋಗ್ಯ ಅರಿವು’ ಕಾರ್ಯಕ್ರಮ ನಡೆಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರೋಗ್ಯ ಕಾರ್ಯಕರ್ತೆ ಗ್ರೀಷ್ಮ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯು ಸಂಪೂರ್ಣವಾಗಿ ಆರೋಗ್ಯವಂತರಾಗಿ ಇರಬೇಕಾದರೆ, ವೈಯಕ್ತಿಕ ಸ್ವಚ್ಚತೆಯನ್ನು ಕಾಯ್ದುಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ. ನಾವು ನಿತ್ಯ ಜೀವನದಲ್ಲಿ ಸ್ವಚ್ಚತೆಗೆ ಆಧ್ಯತೆ ನೀಡುವುದರಿಂದ ಹೆಚ್ಚು ದಿನಗಳಕಾಲ ಉತ್ತಮ ಆರೋಗ್ಯವಂತರಾಗಿ ಜೀವಿಸಲು ಸಾಧ್ಯವಾಗಲಿದೆ ಎಂದರು. ವೈಯಕ್ತಿಕ ಮುನ್ನಚ್ಚರಿಕ ಕ್ರಮಗಳ ಬಗ್ಗೆ ಕಿವಿಮಾತು ಹೇಳಿದರು. ಸಿಆರ್‍ಪಿ ಬಿಪಿನ್ ಮಾತನಾಡಿ, ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬೇಕಾದರೆ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಅತ್ಯವಶ್ಯಕವಾಗಿದೆ. ಆದುದ್ದರಿಂದ ದೈನಂದಿನ ಆಹಾರ ಸೇವನೆಯಲ್ಲಿ ಪೌಷ್ಠಿಕ ಆಹಾರವನ್ನೇ ಸೇವೆನೆ ಮಾಡುವುದ್ದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಬಹುದೆಂದರು. ಸಮಾರಂಭದ ವೇದಿಕೆಯಲ್ಲಿ ಸಿಎಚ್‍ಓ ರಫೀನಾ, ಪ್ರೇರಣಾ, ಕಾರ್ಯಕ್ರಮ ಜಿಲ್ಲಾ ಸಂಯೋಜಕ ಶಿವಕುಮಾರ್, ಮಾದಾಪುರ ಕ್ಲಸ್ಟರ್ ಸಿಆರ್‍ಪಿ ಬಿಪಿನ್, ಆಶಾ ಕಾರ್ಯಕರ್ತೆ ಚಿತ್ರ, ಪ್ರೇಮ ಮತ್ತಿತರರು ಇದ್ದರು. ಸಮಾರಂಭದ ಮೊದಲಿಗೆ ಶಾಲಾ…
ಮಡಿಕೇರಿ ಆ.4 : ಜಿಲ್ಲೆಯಲ್ಲಿ ನಿರಂತರವಾಗಿ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ತಕ್ಷಣ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಆಮ್ ಆದ್ಮಿ ಪಕ್ಷ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಪಕ್ಷದ ಜಿಲ್ಲಾಧ್ಯಕ್ಷರು ಭೋಜಣ್ಣ ಸೋಮಯ್ಯ ಅವರ ನೇತೃತ್ವದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರು ದಿಲೀಪ್ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ವಿದ್ಯುತ್ ಅಡಚಣೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಗಮನ ಸೆಳೆದರು. ಮುಂಗಾರು ಆರಂಭಕ್ಕೂ ಮೊದಲೇ ಸೆಸ್ಕ್ ಇಲಾಖೆಯವರು ವಿದ್ಯುತ್ ರಸ್ತೆಬದಿಗಳಲ್ಲಿ ಮತ್ತು ತೋಟಗಳಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳಿಗೆ ಹೊಂದಿಕೊಂಡಿರುವ ಮರಗಳನ್ನು ತೆರವು ಗೊಳಿಸಬೇಕು, ಅದರಂತೆ ಹಳೆಯ ಕಂಬಗಳನ್ನು ಬದಲಿಸಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಪೂರ್ವ ಸಿದ್ಧತೆಗಳನ್ನು ನಡೆಸಬೇಕಾಗಿತ್ತು. ಆದರೆ ನಾಪೋಕ್ಲು ವಿಭಾಗದಲ್ಲಿ ಇದರಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದೆರುವುದರಿಂದ ಸಣ್ಣ ಮಳೆಗೆ ವಿದ್ಯುತ್ ಕಡಿತಗೊಂಡು ಜನರು ವಿದ್ಯುತ್ ಸಮಸ್ಯೆಯನ್ನು ಎದುರಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಹುತೇಕ ಎಲ್ಲಾ ಕಡೆ ವಿದ್ಯುತ್ ಸಮಸ್ಯೆಯಿಂದ ಜನ ಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಈ ಸಮಸ್ಯೆ ಮುಂಗಾರು ಪ್ರವೇಶಕ್ಕೂ…






