ಸುಂಟಿಕೊಪ್ಪ ಅ.3 : ಮಾದಾಪುರ ಗ್ರಾಮ ಪಂಚಾಯಿತಿಗೆ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ವಿಕಾಸಸೌಧದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರು ಮಾದಾಪುರ ಗ್ರಾ.ಪಂ ಅಧ್ಯಕ್ಷ ಮನುಬಿದ್ದಪ್ಪ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸುಮೇಶ್ ಭಾವೆ ಸ್ವೀಕರಿಸಿದರು. ಗ್ರಾಮ ಪಂಚಾಯಿತಿಯ ಅತ್ಯುತ್ತಮ ಕಾರ್ಯನಿರ್ವಹಣೆ ಕಸ ವಿಲೇವಾರಿ ಅಭಿವೃದ್ಧಿ ಕಾರ್ಯದಲ್ಲಿ ತೋರಿದ ಕಾರ್ಯಕ್ಷಮತೆ, ಪಾರದರ್ಶಕ ಆಡಳಿತ, ಸ್ವಚ್ಚತೆಗೆ ಆದ್ಯತೆ ಸೇರಿದಂತೆ ಉತ್ತಮ ಆಡಳಿತ ನಡೆಸಿದ ರಾಜ್ಯದ 233 ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ಸರಕಾರ ಗಾಂಧಿ ಗ್ರಾಮ ಪ್ರಶಸ್ತಿ ನೀಡಿದ್ದು, ಅದರಲ್ಲಿ ಕೊಡಗಿನ ಮಾದಾಪುರ, ಗುಡ್ಡೆಹೊಸೂರು, ಗಾಳಿಬೀಡು, ಹಾತೂರು ಹಾಗೂ ಕಣ್ಣಂಗಾಲ ಗ್ರಾ.ಪಂ ಪ್ರಶಸ್ತಿಗೆ ಭಾಜನವಾಗಿದೆ. 5 ಲಕ್ಷ ರೂ ನಗದು ಬಹುಮಾನ ಹಾಗೂ ಪ್ರಶಸ್ತಿಯನ್ನು ವಿತರಿಸಲಾಯಿತು.
ಲೇಖಕ: admin
ಮಡಿಕೇರಿ ಅ.3 : ಭಾಗಮಂಡಲ ಗಜಾನನ ಯುವಕ ಸಂಘದ ಗಣೇಶ ಹಬ್ಬದ ಬಳಿಕ 2023-24ನೇ ಸಾಲಿನ ಗಜಾನನ ಯುವಕ ಸಂಘಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ಭಾಗಮಂಡಲ ಶಾಲಾ ಮೈದಾನದಲ್ಲಿ ನಡೆದ ಸಭೆಯಲ್ಲಿ ಸಂಘದ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಗೌರೀಶ್ ರೈ ಹಾಗೂ ಉಪಾಧ್ಯಕ್ಷರಾಗಿ ಪ್ರಜ್ವಲ್ (ಮುನ್ನ) ಹಾಗೂ ಕಾರ್ಯದರ್ಶಿಯಾಗಿ ಬಿ.ಕೆ.ಮಂಜು ಮೂರನೇ ಬಾರಿಗೆ ನೇಮಕಗೊಂಡರು. ನಿರ್ದೇಶಕರಾಗಿ ಕೀರ್ತನ್ (ಮುದ್ದು), ಆದೇಶ್ (ಅದಿ), ಮನೋಜ್ ಮನು, ಜೆ.ಪಿ. ಜಯಪ್ರಕಾಶ್, ಕಿಶೋರ್, ಬಿ.ಆರ್. ಮಂಜು, ಜಸ್ವಂತ್ (ದೊರೆ), ಜಿತೇಶ್ (ಜಿತ್ತು), ಬಿ.ಬಿ.ಹರ್ಷಿತ್ , ದೇಶಿಕ್, ಅಭಿಜಿತ್, ಸಚಿನ್, ಕೀರ್ತನ್, ಲತೇಶ್ , ರಾಜೇಶ್ ನೇಮಕಗೊಂಡರು.
ಸಿದ್ದಾಪುರ ಅ.3 : ಅಮ್ಮತ್ತಿ ಕಾರ್ಮಾಡು ಶ್ರೀ ಗಜಾನನ ಗೆಳೆಯರ ಬಳಗದ ವತಿಯಿಂದ ಪ್ರಥಮ ವರ್ಷದ ಗೌರಿ ಗಣೇಶ ವಿಸರ್ಜನೋತ್ಸವ ಶ್ರದ್ಧಾಭಕ್ತಿಯಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಗೌರಿ ಗಣೇಶ ವಿಸರ್ಜನೆ ಸಂದರ್ಭ ಮುಂಜಾನೆಯಿಂದಲೇ ಗಣಪತಿ ಹೋಮ, ಪೂಜಾ ಕೈಂಕರ್ಯಗಳು ನಡೆಯಿತು. ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ವಿಸರ್ಜನೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ನಂತರ ಅಲಂಕೃತ ಮಂಟಪದಲ್ಲಿ ಗೌರಿ ಗಣೇಶ ಮೂರ್ತಿಯನ್ನು ಕುಳ್ಳಿರಿಸಿ ವಾದ್ಯ ಮೇಳಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಸಿ ಮದ್ರೀರ ಗಣೇಶ್ ಅವರ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ನಾಪೋಕ್ಲು ಅ.3 : ಗ್ರಾಮಗಳ ಪರಿಸರ ಸ್ವಚ್ಛವಾದಾಗ ಮಾತ್ರ ಎಲ್ಲರೂ ಆರೋಗ್ಯವಂತರಾಗಲು ಸಾಧ್ಯ ಎಂದು ಸ್ಥಳಿಯ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು. ಕಲ್ಲುಮೊಟ್ಟೆ ಗ್ರಾಮ ಪಂಚಾಯಿತಿ ವತಿಯಿಂದ ಸಮುದಾಯ ಭವನದಲ್ಲಿ ಆಯೋಜಿಸಿದ ಸ್ವಚ್ಚ ಭಾರತ್ ಅಭಿಯಾನ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಎಲ್ಲರೂ ಒಗ್ಗಟ್ಟಾಗಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವುದರ ಮೂಲಕ ಸ್ವಚ್ಛ ಭಾರತ್ ಅಭಿಯಾನಕ್ಕೆ ಸಹರಿಸುವಂತೆ ಮನವಿ ಮಾಡಿದರು. ಅಭಿವೃದ್ಧಿ ಅಧಿಕಾರಿ ಚೋoದಕ್ಕಿ ಮಾತನಾಡಿ, ಗ್ರಾಮಸ್ಥರು ತಮ್ಮ ವ್ಯಾಪ್ತಿಯಲ್ಲಿ ಸಮಸ್ಯೆ ಬಂದಾಗ ಗ್ರಾಮ ಸಭೆಗೆ ಅಥವಾ ಪಂಚಾಯಿತಿ ಗಮನಕ್ಕೆ ತರುವಂತೆ ತಿಳಿಸಿದರು. ಗ್ರಾ.ಪಂ ಉಪಾಧ್ಯಕ್ಷ ಹೇಮಾ ಅರುಣ್, ಸದಸ್ಯ ಕುಲ್ಲೇಟಿರ ಅರುಣ್ ಬೇಬ, ಶಿವಚಳಿಯಂಡ ಜಗದೀಶ್ ಮಾತನಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸ್ವಚ್ಚತಾ ಪ್ರತಿಜ್ಞಾ ವಿಧಿ ಮಾಡಲಾಯಿತು. ಶೌರ್ಯ ತಂಡ ಬಾಳೆಯಡ ದಿವ್ಯಾ,ಅಂಗನವಾಡಿ, ಆಶಾ, ಆರೋಗ್ಯ ಕಾರ್ಯಕರ್ತೆಯರು, ಸಾರ್ವಜನಿಕರು ಹಾಜರಿದ್ದರು. ಆಶಾಲತಾ ಸ್ವಾಗತಿಸಿದರು. ಪಿಡಿಒ ಚೋoದಕ್ಕಿ ವಂದಿಸಿದರು. ಈ ಸಂದರ್ಭ ಸಮುದಾಯ ಭವನ ದ…
ನಾಪೋಕ್ಲು ಅ.3 : ಇಂದಿನ ಮಕ್ಕಳೇ ಮುಂದಿನ ಸಂಪತ್ತು ಆಗಿದ್ದು, ಮಕ್ಕಳು ತಮ್ಮ ಕಾಲ ಮೇಲೆ ನಿಂತು ಸ್ವಾವಲಂಬನೆಯ ಬದುಕು ಸಾಗಿಸಬೇಕು ಎಂಬ ಉದ್ದೇಶದಿಂದ ಹರ್ ಮಂದಿರ್ ಶಾಲೆಯನ್ನು ಸ್ಥಾಪಿಸಲಾಗಿದೆ ಎಂದು ಶಾಲೆಯ ಪ್ರಾಂಶುಪಾಲ ರಾಘವೇಂದ್ರ ಹೇಳಿದರು. ಕಾಟಕೇರಿಯ ಹರ್ ಮಂದಿರ್ ಶಾಲಾ ವತಿಯಿಂದ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಅಂಗವಾಗಿ ನಾಪೋಕ್ಲು ಮಹಿಳಾ ಸಮಾಜದಲ್ಲಿ ಸಾರ್ವಜನಿಕರಿಗಾಗಿ ಏರ್ಪಡಿಸಲಾಗಿದ್ದ ತಕಲಿ ಮತ್ತು ಚರಕ ದಿಂದ ನೂಲು ತೆಗೆಯುವ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹರ್ ಮಂದಿರ್ ಶಾಲೆಯು ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಿದೆ. 19 ವಿದ್ಯಾರ್ಥಿಗಳಿಂದ ಪ್ರಾರಂಭವಾದ ಶಾಲೆಯಲ್ಲಿ ಇಂದು 130 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 10 ಲಕ್ಷ ಕುಟುಂಬದವರಿಗೆ ಸಮುದಾಯ ಸಬಲೀಕರಣ ಮಾಡಬೇಕು ಎಂಬ ಉದ್ದೇಶವನ್ನು ಶಾಲೆ ಹೊಂದಿದೆ. ವಿದ್ಯಾರ್ಥಿಗಳು ಉಚಿತ ಶಿಕ್ಷಣ ಪಡೆಯುವುದರೊಂದಿಗೆ ಸಂತ ಹಾಗೂ ಸೈನಿಕ ಗುಣಗಳನ್ನು ಬೆಳಸಿಕೊಂಡು ಅತ್ಯುತ್ತಮ ನಾಯಕರಾಗಿ ಬೆಳೆಯಬೇಕು ಎಂದರು. ಗಾಂಧೀಜಿಯವರು ಬ್ರಿಟಿಷರನ್ನು ಅವಲಂಬಿಸುವುದು ಬೇಡ ಎನ್ನುವ ಉದ್ದೇಶದಿಂದ ಸ್ವದೇಶಿ ಚಳುವಳಿಯನ್ನು…
ಮಡಿಕೇರಿ ಅ.3 : ಕರ್ನಾಟಕ ರಾಜ್ಯ ಸರ್ಕಾರಿ ಎಸ್‍ಸಿ, ಎಸ್‍ಟಿ ನೌಕರರ ಸಮನ್ವಯ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಕುಶಾಲನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಎಪಿಸಿಎಂ ಸಭಾಂಗಣದ ಜೈ ಭೀಮ್ ಸ್ಮರಣೆ ವೇದಿಕೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು, ದೇಶಕ್ಕೆ ವಿಶ್ವ ಶೇಷ್ಠ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಮಹಾ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರು ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ ಎಂದು ತಿಳಿಸಿದರು. ನೌಕರರ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ಮಾತನಾಡಿ, ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ ಸೇರಿ ಹಲವು ಕ್ಷೇತ್ರಗಳಿಗೆ ಡಾ.ಅಂಬೇಡ್ಕರ್ ಅವರು ನೀಡಿದ ಕೊಡುಗೆ ಅಪಾರ ಎಂದರು. ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ ಮಾತನಾಡಿ, ಅಸ್ಪೃಶ್ಯತೆ ಮತ್ತು ಅಸಮಾನತೆ ಅಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಲು ನಿರಂತರ ಹೋರಾಟ ಮಾಡಿದ ಅಂಬೇಡ್ಕರ್ ಅವರು ದೇಶ ಕಂಡ ಮಹಾರತ್ನ ಎಂದು…
ಮಡಿಕೇರಿ ಅ.3 : ದೇವರಕೊಲ್ಲಿ ಬದ್ರಿಯಾ ಮಸ್ಜಿದ್ ಮತ್ತು ನೂರುಲ್ ಇಸ್ಲಾಂ ಸಮಿತಿ ಆಶ್ರಯದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ ಜನ್ಮ ದಿನದ ಅಂಗವಾಗಿ ಇಸ್ಕ್ ಹಾಗೂ ಮಕ್ಕಳ ಪ್ರತಿಭೋತ್ಸವ ಕಾರ್ಯಕ್ರಮ ನಡೆಯಿತು. ಮಸೀದಿ ಅಧ್ಯಕ್ಷ ಕೆ.ಸಿ.ಹಂಸ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಇಮಾಮಾರಾದ ಜಲೀಲ್ ಸಖಾಫಿ ದುಆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಹನೀಫ್ ಚೊಕ್ಕಂಡಳ್ಳಿ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮದೆ ಗ್ರಾ.ಪಂ ಸದಸ್ಯ ಸೈದಲವಿ ಪಾಲ್ಗೊಂಡು ಶುಭಹಾರೈಸಿದರು. ಮಗ್ರಿಬ್ ನಮಾಜಿನ ನಂತರ ಉಮ್ಮರ್ ಸಖಾಫಿ ಕೊಂಡಂಗೇರಿ, ಮುದರಿಸ್ ಸಿರಾಜುಲ್ ಹುದಾ ಕುಟ್ಯಾಡಿ ಹುಬ್ಬುರಸೂಲ್ ಪ್ರಭಾಷಣ ಹಾಗೂ ದುಆ ನೆರವೇರಿಸಿದರು. ಕೊನೆಯಲ್ಲಿ ಅಬ್ಬಾಸ್ ಹಾಜಿ ಉಚ್ಚಿಲ, ಜಾಬಿರ್ ನಿಜಾಮಿ (save the dreams) ಮತ್ತು ಹಲವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ದೇವರಕೊಲ್ಲಿ ಬದ್ರಿಯಾ ಮಸ್ಜಿದ್ ಕಾರ್ಯದರ್ಶಿ ಮುಸ್ತಫಾ, ಮಾಜಿಅಧ್ಯಕ್ಷ ಸಿ.ಎ.ಅಶ್ರಫ್, ಮಾಜಿ ಕಾರ್ಯದರ್ಶಿ ಈ.ಕೆ. ನಾಸಿರ್, ನೂರುಲ್ ಇಸ್ಲಾಂ ಅಧ್ಯಕ್ಷ ಟಿ.ಬಿ.ಸಮೀರ್, ನೂರುಲ್ ಇಸ್ಲಾಂ ಕಾರ್ಯದರ್ಶಿ…
ಶನಿವಾರಸಂತೆ ಅ.3 : ಮಠ ಮಾನ್ಯಗಳಿಂದ ಸಮಾಜದಲ್ಲಿ ಸಮಾನತೆ ಸಾಧಿಸಬಹುದು. ಇಲ್ಲಿ ಎಲ್ಲಾ ಜಾತಿ ಜನಾಂಗದವರು ಭಕ್ತರಾಗಿ ಆಗಮಿಸುವುದರಿಂದ ಮೇಲು- ಕೀಳು ಭಾವನೆ ಬರುವುದಿಲ್ಲ. ವಿದ್ಯೆ, ದಾಸೋಹ ಸೇವೆಗಳಲ್ಲೂ ಮಠಗಳ ಸೇವೆ ಅವಿಸ್ಮರಣೀಯ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕಣವಾಡಿ ಹೇಳಿದರು. ಅಂಕನಹಳ್ಳಿ ತಪೋವನ ಕ್ಷೇತ್ರ ಮನೆಹಳ್ಳಿ ಮಠದಲ್ಲಿ ಶ್ರೀ ವೀರಭದ್ರೇಶ್ವರ ವರ್ಧಂತಿ ಮಹೋತ್ಸವ, ಗಣಪತಿ ವಿಸರ್ಜನೆ, ಶ್ರೀ ಗುರುಸಿದ್ದವೀರೇಶ್ವರ ತಿಂಗಳ ಮಹಾಮಂಗಳಾರತಿ, ಜ್ಞಾನದಾರೆ ಕಾರ್ಯಕ್ರಮದ ಸಮಾರೋಪ ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮನೆಹಳ್ಳಿ ಮಠಾಧ್ಯಕ್ಷ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ದೇವರೆಂದರೆ ಸತ್ಯ, ಸತ್ಯವೆಂದರೆ ನುಡಿದಂತೆ ನಡೆಯುವುದು ನಡೆದಂತೆ ನುಡಿಯುವುದು ಬಸವಣ್ಣನವರು ಜಗತ್ತಿಗೆ ಹಾಕಿಕೊಟ್ಟ ಜೀವನದ ದಾರಿದೀಪ್ತಿ, ಇವುಗಳೆಲ್ಲವನ್ನು ಆಚರಣೆಯಲ್ಲಿ ತಂದಾಗ ಮಾತ್ರ ಪ್ರತಿಫಲ ಸಿಗುತ್ತದೆ ಎಂದರು. ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಮಾತನಾಡಿ, ವೀರಭದ್ರ ಸ್ವಾಮಿ ಸಾಕ್ಷಾತ್ ಶಿವನೇ ತೊಂದರೆ ಯಲ್ಲಿದ್ದಾಗ ರಕ್ಷಣೆಗೆ ಅವತರಿಸಿದ ದೈವ ಪುರುಷ, ದುಷ್ಟರ…
ಮಡಿಕೇರಿ ಅ.3 : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಅ.4 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
ಮಡಿಕೇರಿ ಅ.2 : ಮಡಿಕೇರಿ ನಗರದ ಕಲಾವಿದ ಸಂದೀಪ್ ಕುಮಾರ್ ಆರ್. ಅವರು ರಚಿಸಿದ 9 ಅಡಿ ಎತ್ತರದ ಸುಂದರವಾದ ಮಹಾತ್ಮಗಾಂಧಿ ಪ್ರತಿಮೆಯನ್ನು ಗಾಳಿಬೀಡು ನವೋದಯ ವಿದ್ಯಾಸಂಸ್ಥೆಯ ಆವರಣದಲ್ಲಿ ಅನಾವರಣಗೊಳಿಸಲಾಯಿತು. ಗಾಂಧಿ ಜಯಂತಿಯ ದಿನವಾದ ಇಂದು ಪ್ರತಿಮೆಯನ್ನು ಅನಾವರಣಗೊಳಿಸಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕಲಾವಿದ ಸಂದೀಪ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಶಾಲಾ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.






