ಲೇಖಕ: admin

ಮಡಿಕೇರಿ ಆ.29 :  ರೋಟರಿ ಮಡಿಕೇರಿ ವುಡ್ಸ್ ನಿಂದ, ಮಾದಾಪುರದ ಶ್ರೀಮತಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ರಕ್ತದಾನ ಬೖಹತ್ ಶಿಬಿರ ಮತ್ತು ಶಾಲಾ ಮಕ್ಕಳಿಗಾಗಿ ರಕ್ತದ ಗುಂಪನ್ನು ಗುರುತಿಸುವ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಶಿಬಿ ಹರದೂರು ಗ್ರಾಮಪಂಚಾಯತ್ ಅಧ್ಯಕ್ಷೆ ಉಷಾ ಶಿಬಿರ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಕ್ತದ ಬೇಡಿಕೆ ಹೆಚ್ಚಾಗುತ್ತಿದ್ದು, ಈ ಸಂದರ್ಭದಲ್ಲಿ ಯುವಜನತೆ ಮುಂದೆ ಬಂದು ರಕ್ತದಾನ ಮಾಡುವುದರ ಮೂಲಕ ಮತ್ತೊಂದು ಜೀವಕ್ಕೆ ಸಹಾಯ ಸೇತುವಾಗಬೇಕು ಎಂದು ಕೋರಿದರು. ಕೊಡಗು ರೆಡ್ ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ ಮಾತನಾಡಿ, ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದದ್ದು ರಕ್ತದಾನವಾಗಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸವನ್ನು ಸಂಘ ಸಂಸ್ಥೆಗಳು ಮಾಡುವುದರೊಂದಿಗೆ ಜನಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು. ರಕ್ತದಾನ ಮತ್ತು ಅದರ ಅವಶ್ಯಕತೆಗಳ ಬಗ್ಗೆ ಮಾತನಾಡಿದ ಮಡಿಕೇರಿ ರಕ್ತನಿಧಿಯ ಅಧಿಕಾರಿ ಡಾ.ಕರುಂಬಯ್ಯ ಸಮಾಜದಲ್ಲಿ ರಕ್ತದಾನದ ಬಗೆಗಿನ ಜಾಗೃತಿ ಮೂಡಿಸುವಲ್ಲಿ ವಿದ್ಯಾರ್ಥಿಗಳ ಪಾತ್ರವೂ ಬಹಳ ಮುಖ್ಯ, ಆರೋಗ್ಯವಂತ ಮಹಿಳೆಯಾಗಿದ್ದರೆ ಪ್ರತೀ ನಾಲ್ಕು ತಿಂಗಳಿಗೊಮ್ಮೆ,…

Read More

ಮೈಸೂರು ಆ.29:  ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು  ಘೋಷಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಜರಿದ್ದರು.   

Read More

ಕಡಂಗ ಆ.29 : ಎಸ್‍ಎಸ್‍ಎಫ್ ಐವತ್ತನೇ ವಾರ್ಷಿಕೋತ್ಸವ “ಗೋಲ್ಡನ್ ಫಿಫ್ಟಿ” ಮಹಾ ಸಮ್ಮೇಳನ ಸೆ.10 ರಂದು ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಐತಿಹಾಸಿಕವಾಗಿ ನಡೆಯಲಿದ್ದು, ಅದರ ಪ್ರಚಾರಾರ್ಥ ಕೊಡಗು ಜಿಲ್ಲೆಯ ಪ್ರತಿಷ್ಠಿತ ಸಮನ್ವಯ ವಿದ್ಯಾ ಸಂಸ್ಥೆ ಅನ್ವಾರುಲ್ ಹುದಾದಲ್ಲಿ ಉಚಿತ ಯುನಾನಿ ವೈದ್ಯಕೀಯ ಶಿಬಿರ ಹಾಗೂ ಸುನ್ನತ್ ಹಿಜಾಮ ನಡೆಯಿತು. ಡಾ. ಸುಹೈಲ್ ಹಾಗೂ ತಂಡ ವೈದ್ಯಕೀಯ ತಪಾಸಣೆ ನಡೆಯಿತು. ಸುಮಾರು 200 ಕ್ಕಿಂತಲೂ ಹೆಚ್ಚು ಮಂದಿ ಶಿಬಿರವನ್ನು ಸದುಪಯೋಗ ಪಡಿಸಿಕೊಂಡರು. ರಾಷ್ಟ್ರೀಯ ಕಾರ್ಯದರ್ಶಿ ಯಾಕೂಬ್ ಮಾಸ್ಟರ್, ಜುನೈದ್ ಅನ್ವಾರಿ, ಸತ್ತಾರ್ ರಝ್ವಿ, ವಿರಾಜಪೇಟೆ ಸೆಕ್ಟರ್ ನಾಯಕರಾದ ತನ್ವೀರ್ ಅನ್ವಾರಿ, ಇಲ್ಯಾಸ್ ಅನ್ವಾರಿ, ತ್ವಾಹಿರ್ ಅನ್ವಾರಿ, ಜಂಶೀರ್ ಅನ್ವಾರಿ ಹಾಜರಿದ್ದರು. ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಆ.29 :  ಕೇರಳೀಯರ ಪವಿತ್ರ ಹಬ್ಬವಾದ ಓಣಂ ಹಬ್ಬವನ್ನು ಮಲೆಯಾಳಿ ಬಾಂಧವರು  ತಾಲ್ಲೂಕಿನಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮನೆಯ ಹಾಗೂ ಮಳಿಗೆಗಳ ಮುಂಭಾಗ ವಿವಿಧ ಹೂವುಗಳಿಂದ ರಂಗೋಲಿ ‘ಪೂಕೊಳಂ’ ರಚಿಸಿ ಸಂಭ್ರಮಿಸಿದರು.  

Read More

ಮಡಿಕೇರಿ ಆ.29 : ಚೀನಾದ ಹ್ಯಾಂಗ್‍ಝೌನಲ್ಲಿ ಸೆ.23 ರಿಂದ ನಡೆಯಲಿರುವ ಏಷ್ಯನ್‍ಗೇಮ್ಸ್‍ನ ಭಾರತ ಬಾಕ್ಸಿಂಗ್ ತಂಡದ ಪುರುಷ ಹಾಗೂ ಮಹಿಳಾ ಸ್ಪರ್ಧಿಗಳನ್ನು ಒಳಗೊಂಡ ತಂಡಕ್ಕೆ ಮುಖ್ಯ ಕೋಚ್ ಆಗಿ ಕೊಡಗಿನ ಚೇನಂಡ ಸಿ.ಕುಟ್ಟಪ್ಪ (ವಿಶು) ಅವರನ್ನು ನೇಮಕ ಮಾಡಲಾಗಿದೆ. ಕೊಡಗಿನ ಆರು ಕ್ರೀಡಾಪಟುಗಳಾದ ಅಶ್ವಿನಿ ಪೊನ್ನಪ್ಪ, ಜೋಶ್ನಾ ಚಿಣ್ಣಪ್ಪ, ರೋಹನ್ ಬೋಪಣ್ಣ, ಅಪ್ಪಚಂಗಡ ಬೆಳ್ಯಪ್ಪ, ಕೇಳಪಂಡ ಗಣಪತಿ, ತೀತರಮಾಡ ಸಿಂಚಲ್ ಕಾವೇರಮ್ಮ ಹಾಗೂ ಇವರೊಂದಿಗೆ ಕುಟ್ಟಪ್ಪ ಅವರೂ ಸೇರಿ ಕೊಡಗಿನಿಂದ ಒಟ್ಟು ಏಳು ಮಂದಿ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಆ.29 : ಅಮ್ಮತ್ತಿಯ ನೇತಾಜಿ ಶಾಲೆಯಲ್ಲಿ ನಡೆದ ಅಮ್ಮತ್ತಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿದ್ದಾರೆ. ಪ್ರಾಥಮಿಕ ಬಾಲಕರ ಹಾಗೂ ಬಾಲಕಿಯರ ವಿಭಾಗದ ಖೊಖೋ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದ ಬಾಲಕರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಶಾಲೆಯ ದೈಹಿಕ ಶಿಕ್ಷಕಿ ಎಂ.ಪಿ.ಮೋನಿಕಾ ಕಾವೇರಿ ಹಾಗೂ ಬಿ.ವಿ.ಲಾವಣ್ಯ ಅವರಲ್ಲಿ ತರಬೇತಿ ಪಡೆದಿದ್ದು, ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ,ಶಾಲಾ ಸಂಯೋಜಕರು, ಶಿಕ್ಷಕ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

Read More

 ಸುತ್ತೂರು ಆ.29 :  ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಸುತ್ತೂರು ಮಠದಲ್ಲಿ ಆಯೋಜಿಸಿದ್ದ ಪರಮಪೂಜ್ಯ ಜಗದ್ಗುರು ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 108 ನೇ ಜಯಂತಿ ಮಹೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿದರು. ಸುತ್ತೂರು ಕ್ಷೇತ್ರ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಮತ್ತು ಆದಿಚುಂಚನಗಿರಿ ಮಹಾಸಂಸ್ಥಾಮ ಮಠದ ಜಗದ್ಗುರು ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ  ವಹಿಸಿದ್ದರು.  

Read More

ಮಡಿಕೇರಿ ಆ.29 :   ಕರ್ನಾಟಕ ಸರ್ಕಾರ- ಕೊಡಗು ವಿಶ್ವವಿದ್ಯಾನಿಲಯದ  ಸ್ನಾತಕೋತ್ತರ ಪದವಿಗಳಿಗೆ  2023-24ರ  ಪ್ರವೇಶಾತಿ ಪ್ರಾರಂಭ ಪ್ರಾರಂಭವಾಗಿದ್ದು,  ವಿವಿಧ ಕೋರ್ಸ್‍ಗಳು ಲಭ್ಯವಿದೆ. ಕೊಡಗು ವಿವಿ, ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ಲಭ್ಯವಿರುವ ಕೋರ್ಸ್‌ಗಳು :  ಎಂ.ಎಸ್ಸಿ:  ಜೀವರಸಾಯನಶಾಸ್ತ್ರ, ಸೂಕ್ಷ್ಮಾಣು ಜೀವವಿಜ್ಞಾನ, ಯೋಗ ವಿಜ್ಞಾನ, ರಸಾಯನಶಾಸ್ತ್ರ, ಗಣಕ ವಿಜ್ಞಾನ, ಸಸ್ಯಶಾಸ್ತ್ರ, ಪರಿಸರ ವಿಜ್ಞಾನ ಎಂ ಕಾಂ ಮತ್ತು ಎಂಎಸ್‌ಡಬ್ಲ್ಯೂ ಎಂ.ಎ : ಕನ್ನಡ, ಕೊಡವ, ರಾಜ್ಯಶಾಸ್ತ್ರ, ಇತಿಹಾಸ, ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್: ಯೋಗ ವಿಜ್ಞಾನ ಮತ್ತು ಕೊಡವ ಅಧ್ಯಯನ FMKMC ಕಾಲೇಜು, ಮಡಿಕೇರಿಯಲ್ಲಿ ಲಭ್ಯವಿರುವ ಕೋರ್ಸ್‌ಗಳು: ಎಂಎಸ್ಸಿ: ಭೌತಶಾಸ್ತ್ರ ಎಂ.ಕಾಂ ಮತ್ತು ಎಂಬಿಎ (TTM) ಎಂ.ಎ: ಕೊಡವ, ಅರ್ಥಶಾಸ್ತ್ರ ಹಾಗೂ ಇಂಗ್ಲೀಷ್ ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್: ಯೋಗ ವಿಜ್ಞಾನ ಮತ್ತು ಕೊಡವ ಅಧ್ಯಯನ ಜ್ಞಾನಕಾವೇರಿ ಕ್ಯಾಂಪಸ್ ನಲ್ಲಿರುವ ಸೌಲಭ್ಯಗಳು: Wi-Fi ಮತ್ತು ಇಂಟರ್ನೆಟ್,   ಉತ್ತಮ ಗುಣಮಟ್ಟದ ಪ್ರಯೋಗಾಲಯ,  ಮಹಿಳೆಯರ ಮತ್ತು ಪುರುಷರಿಗಾಗಿ ಪ್ರತ್ಯೇಕ…

Read More

ಮೈಸೂರು ಆ.29  : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಹಾಜರಿದ್ದರು.

Read More

ಮಡಿಕೇರಿ ಆ.28 : ಸರ್ಕಾರ ಪ್ರಕಟಿಸಿದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಡಿ ರಾಜ್ಯದ್ಯಂತ ಸರ್ಕಾರಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯನ್ನು ಜೂ.11 ರಂದು ಜಾರಿಗೆ ತರಲಾಯಿತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವುದಕ್ಕೆ ಅವಕಾಶ ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಆ.27 ರವರೆಗೆ 11,10,983 ಮಂದಿ ಮಹಿಳೆಯರು ಬಸ್‍ನಲ್ಲಿ ಪ್ರಯಾಣ ಬೆಳೆಸಿದ್ದು, 4,10,54,728 ರೂ. ವೆಚ್ಚ ಭರಿಸಲಾಗಿದೆ ಎಂದು ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಾದ ಗೀತಾ ಅವರು ಮಾಹಿತಿ ನೀಡಿದ್ದಾರೆ. ಉಚಿತ ಬಸ್ ಪ್ರಯಾಣ ಯೋಜನೆಯು ಸಾಮಾಜಿಕ ಸಮಾನತೆಗಾಗಿ ಯಾವುದೇ ತಾರತಮ್ಯವಿಲ್ಲದೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಕಾರಿಯಾಗಿದೆ. ಸಮಾಜ ಏಳಿಗೆ ಕಾಣಬೇಕಾದರೆ ಪುರುಷ ಹಾಗೂ ಮಹಿಳೆಯರ ಪಾಲ್ಗೊಳ್ಳುವಿಕೆ ಅತಿ ಮುಖ್ಯ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಉದ್ಯೋಗಸ್ಥ ಮಹಿಳೆಯರ ಸಂಖ್ಯೆ ಕಡಿಮೆಯಾಗಿದ್ದು, ಶಕ್ತಿ…

Read More