ಲೇಖಕ: admin

ಮಡಿಕೇರಿ ಆ.29 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಡಗು ಇವರ ವತಿಯಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮ ಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮ ಶಕ್ತಿ (ವಿಶೇಷ ಮಹಿಳಾ ಯೋಜನೆ), ಸಮುದಾಯ ಆಧಾರಿತ ತರಬೇತಿ ಯೋಜನೆಯ ಸಾಲ ಹಾಗೂ ಸಹಾಯಧನವನ್ನು ನೀಡಲಾಗುತ್ತದೆ. ಅರಿವು ಯೋಜನೆಯಲ್ಲಿ ವೃತ್ತಿಪರ ಶಿಕ್ಷಣ ಅಂದರೆ ಎಂಬಿಬಿಎಸ್, ಎಂಡಿ, ಎಂಎಸ್, ಬಿಇ, ಬಿಟೆಕ್, ಎಂಇ, ಎಂಟೆಕ್, ಬಿಡಿಎಸ್, ಎಂಡಿಎಸ್, ಬಿ.ಆಯುಷ್, ಎಂ.ಆಯುಷ್, ಎಂಬಿಎ, ಎಂಸಿಎ, ಎಲ್‍ಎಲ್‍ಬಿ, ಬಿಆರ್ಚ್, ಎಂ.ಆರ್ಚ್ ಕೋರ್ಸ್ ಮಾಡಬಯಸುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ಆಯ್ಕೆಯಾಗಿರುವಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅವರು ವ್ಯಾಸಾಂಗ ಪೂರ್ಣಗೊಳಿಸುವವರೆಗೆ…

Read More

ಮಡಿಕೇರಿ ಆ.29 : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯುಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್, 31 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು https://navodaya.gov.in  ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಲನ್ನು ಅಪ್‍ಲೋಡ್ ಮಾಡಬಹುದು. ಅಲ್ಲದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಎರಡು ದಿನ ಈಗಾಗಲೇ ಸಲ್ಲಿಸಿದ ಅರ್ಜಿಯಲ್ಲಿ ಏನಾದರೂ ಅಂದರೆ ಅಭ್ಯರ್ಥಿಯ ಲಿಂಗ, ಜಾತಿ, ಪರೀಕ್ಷಾ ಮಾಧ್ಯಮ ಹಾಗೂ ಇತರ ಅಂಶಗಳಲ್ಲಿ ತಿದ್ದುಪಡಿ ಮಾಡಬೇಕಿದ್ದಲ್ಲಿ ಅವಕಾಶ ನೀಡಲಾಗಿದ್ದು, ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಮಡಿಕೇರಿ ಆ.29 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ ಯು.ಜಿ.ಸಿ. ಅನುಮೋದಿತ (ಯುಜಿ) ಕೋರ್ಸ್‍ಗಳಾದ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿ.ಲಿಬ್, ಐಎಸ್‍ಸಿ, ಬಿಎಸ್‍ಸಿ, (ಎಚ್‍ಒಎನ್‍ಎಸ್), ಇನ್‍ಫಾರ್ಮಮೇಷನ್ ಟೆಕ್ನಾಲಜಿ, ಬಿಎಸ್‍ಡಬ್ಲ್ಯು(ಎಎಸ್ಸಿ ಕಾಂಬಿನೇಷನ್(ಪಿಸಿಎಂ, ಪಿಎಂಸಿ, ಬಿಸಿಬಿಜೆಡ್, ಸಿಬಿಜೆಡ್, ಬಿಸಿಬಿಎಂಐ, ಸಿಬಿಎಂಐ, ಬಿಸಿಎಂಐಎಫ್‍ಎಸ್, ಸಿಜೆಡ್‍ಇ, ಬಿಸಿಜೆಡ್‍ಇ, ಸಿಬಿಇ, ಸಿಎಂಇ, ಬಿಜೆಡ್‍ಇ, ಬಿಬಿಇ, ಬಿಎಂಇ, ಪಿಷಿಕ್ಸ್, ಕೆಮೆಸ್ಟ್ರಿ, ಮೆಥಾಮೆಟಿಕ್ಸ್, ಕಂಪ್ಯೂಟರ್ ಸೈನ್ಸ್, ಬಯೋಕೆಮಸ್ಟ್ರಿ, ಬಟಾಣಿ, ಜಿಯೋಲಜಿ, ಮೈಕ್ರೋ ಬಯೋಲಜಿ, ಫುಡ್ ಸೈನ್ಸ್, ಎನ್ವಾರ್ನ್‍ಮೆಂಟಲ್ ಸೈನ್ಸ್). ಪಿಜಿ ಕೋರ್ಸ್‍ಗಳಾದ ಎಂ.ಎ, ಎಂಕಾಂ, ಎಂಬಿಎ, ಎಂಎಸ್ಸಿ, ಎಂಲಿಬ್,ಐಎಸ್ಸಿ, ಎಂಸಿಎ, ಎಂಎಸ್‍ಡಬ್ಲ್ಯು ಪಿಜಿ ಸರ್ಟಿಫಿಕೇಟ್ ಪ್ರೋಗ್ರಾಂ (1 ವರ್ಷ), ಡಿಪ್ಲೊಮಾ ಪ್ರೋಗ್ರಾ(1 ವರ್ಷ), ಸರ್ಟಿಫಿಕೇಟ್ ಪ್ರೋಗ್ರಾಂ(6 ತಿಂಗಳು), ಈ ಎಲ್ಲಾ ಶೈಕ್ಷಣಿಕ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ನ್ಯಾಕ್‍ನಿಂದ ಎ+ ಮಾನ್ಯತೆ ಪಡೆದಿದೆ. ಗ್ರಾಮೀಣ ಭಾಗ, ಬಡ ಕುಟುಂಬಗಳ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮುಕ್ತ ವಿಶ್ವವಿದ್ಯಾನಿಲಯ ಕಾರ್ಯನಿರ್ವಹಿಸುತ್ತಿದೆ. ಮಡಿಕೇರಿ ಪ್ರಾದೇಶಿಕ…

Read More

ಬೆಂಗಳೂರು ಆ.28 : *ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸತತ 7 ಗಂಟೆಗಳ ಕಾಲ ನಡೆದ ಮೈಸೂರು ಕೆಡಿಪಿ ಸಭೆಯ ದ್ವಿತೀಯಾರ್ಧ* *ಸುಳ್ಳು ಸುದ್ದಿಗಳಿಗೆ ಬ್ರೇಕ್* : ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರು, ಶಾಂತಿ ಕದಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ ಜೈಲಿಗೆ ತಳ್ಳಿ ಎಂದು ಮುಖ್ಯಮಂತ್ರಿ ಸ್ಪಷ್ಟ ಸೂಚನೆ ನೀಡಿದರು. ಡ್ರಗ್ಸ್ ವಿಚಾರದಲ್ಲಿ ಮೈಸೂರು ವಲಯದಲ್ಲಿ ಝೀರೋ ಟಾಲರೆನ್ಸ್ ಇರಬೇಕು. ಮೈಸೂರು ಸಾಂಸ್ಕೃತಿಕ ನಗರಿ. ಇಲ್ಲಿ ಡ್ರಗ್ಸ್ ಮೇನಿಯಾ, ಮಾಫಿಯಾಗೆ ಅವಕಾಶ ಇರಬಾರದು. ಗೃಹ ಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮದ ವೇಳೆ ಸಾರ್ವಜನಿಕರಿಗೆ ಟ್ರಾಫಿಕ್ ಕಿರಿಕಿರಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. *ಆದಿವಾಸಿಗಳಿಗೆ 4 ತಿಂಗಳಿoದ ಆಹಾರ ನೀಡುತ್ತಿಲ್ಲ ಎನ್ನುವ ವರದಿಗೆ ಸಂಬಂಧಪಟ್ಟಂತೆ ಗರಂ ಆದ ಮುಖ್ಯಮಂತ್ರಿಗಳು ನಿಮಗೆ ಆರು ತಿಂಗಳು ಸಂಬಳ ನಿಲ್ಲಿಸಿದರೆ ಏನಾಗುತ್ತದೆ ಎನ್ನುವ ಪ್ರಜ್ಞೆ ಇದೆಯೇ…

Read More

ಬೆಂಗಳೂರು ಆ.28 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇಂದು ಸಂಜೆ ಮಾನಸ ಗಂಗೋತ್ರಿಯ ಆಯ್ದ ವಿದ್ಯಾರ್ಥಿ ಸಮೂಹದ ಜತೆ ಸಂವಾದ ನಡೆಸಿದರು. 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಈ ವೇಳೆ ಉಪಸ್ಥಿತರಿದ್ದರು.

Read More

ಮಡಿಕೇರಿ ಆ.28 : ಆಟೋ ಚಾಲಕರ ಹಾದಿ ತಪ್ಪಿಸುವ ಪ್ರಯತ್ನದಲ್ಲಿ ತೊಡಗಿರುವ ಬೆರಳೆಣಿಕೆಯಷ್ಟು ಮಂದಿ ಆಟೋ ಮಾಲೀಕ, ಚಾಲಕರ ಸಂಘಕ್ಕೆ ಕಾನೂನಿನ ಪಾಠ ಮಾಡುವ ಅಗತ್ಯವಿಲ್ಲವೆಂದು ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್.ಮೇದಪ್ಪ ತಿರುಗೇಟು ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಘದ ಸದಸ್ಯತ್ವ ಹೊಂದಬೇಕು ಎನ್ನುವ ಅರಿವು ಎಲ್ಲಾ ಚಾಲಕರಿಗಿದೆ. ಆದರೆ ಕೆಲವು ಚಾಲಕರು ಗುಂಪುಗಾರಿಕೆ ಮಾಡಿಕೊಂಡು ಸಂಘವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸುಮಾರು ಒಂದು ಸಾವಿರ ಆಟೋ ಚಾಲಕರ ಪೈಕಿ ಬೆರಳೆಣಿಕೆಯ ಆಟೋ ಚಾಲಕರು ಸಂಘದ ಜನಪರ ಕಾಳಜಿಯನ್ನು ವಿರೋಧಿಸುತ್ತಿದ್ದಾರೆ. ಚಾಲಕರ ಹಾಗೂ ಸಾರ್ವಜನಿಕರ ಹಿತ ಕಾಯಲು ಸಂಘ ತೆಗೆದುಕೊಂಡ ನಿರ್ಧಾರಗಳನ್ನು ಸಹಿಸಲಾಗದೆ ವಿನಾಕಾರಣ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅಕ್ರಮ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸಂಘ ಇಲಾಖೆಗಳ ಸಹಕಾರದೊಂದಿಗೆ ಕೆಲವು ಕಟ್ಟುನಿಟ್ಟಿನ ನಿರ್ಧಾರಗಳನ್ನು ಕೈಗೊಂಡಿದೆ. ಅತ್ಯAತ ದಕ್ಷತೆಯಿಂದ ಆಟೋ ಚಾಲನೆ ಮಾಡಿ ಜೀವನ ಸಾಗಿಸುತ್ತಿರುವ ಚಾಲಕರಿಗೆ ಇದುವೇ ವೃತ್ತಿಯಾಗಿದೆ. ವೃತ್ತಿ ಜೀವನಕ್ಕೆ ದ್ರೋಹ ಬಗೆದು ರಾಜಕೀಯ…

Read More

ಸೋಮವಾರಪೇಟೆ ಆ.28 : ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ರೈತನ ಕುಟಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರು 15 ಲಕ್ಷ ರೂ.ಗಳ ಪರಿಹಾರದ ಚೆಕ್‌ನ್ನು ವಿತರಿಸಿದರು. ಸೋಮವಾರ ಸಂಜೆ ಶಾಸಕ ಡಾ.ಮಂತರ್‌ಗೌಡ ಅವರೊಂದಿಗೆ ಆಡಿನಾಡೂರು ಗ್ರಾಮಕ್ಕೆ ತೆರಳಿದ ಸಚಿವರು, ಮೃತ ಈರಪ್ಪ ಅವರ ಪತ್ನಿ ಹೇಮಾವತಿ ಅವರಿಗೆ ಸಾಂತ್ವಾನ ಹೇಳಿದರು. ಘಟನೆ ನಡೆಯಬಾರದಿತ್ತು. ನಿಮ್ಮ ನೋವು ಅರ್ಥವಾಗುತ್ತದೆ. ಹೋದ ಜೀವವನ್ನು ತಂದು ಕೊಡಲು ಸಾಧ್ಯವಿಲ್ಲ. ದೈರ್ಯ ತೆಗೆದುಕೊಳ್ಳಿ, ಮೊಮ್ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಸಮಾಧಾನ ಪಡಿಸಿದರು. ಕಾಡಾನೆಗಳು ನಿರಂತರವಾಗಿ ಹಾವಳಿ ಮಾಡುತ್ತಿವೆ. ಸಂಜೆ ಸಮಯದಲ್ಲಿ ಕೃಷಿ ಭೂಮಿಯಲ್ಲಿ ಇರುತ್ತವೆ. ಕೃಷಿ ಹಾನಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಆಡಿನಾಡೂರು ಗ್ರಾಮದಲ್ಲೇ ಮೂವರು ರೈತರು ಕಾಡಾನೆ ದಾಳಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡರು. ಮನುಷ್ಯ ಮೇಲೆ ದಾಳಿ ಮಾಡುವ ಕಾಡಾನೆಗಳನ್ನು ಗುರುತಿಸಿ, ಹಿಡಿದು ಸ್ಥಳಾಂತರ ಮಾಡಲು ಕೂಡಲೆ ಕ್ರಮಕೈಗೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ…

Read More

ಮಡಿಕೇರಿ ಆ.28 : ಎ.ಕೆ.ಸುಬ್ಬಯ್ಯ, ಪೊನ್ನಮ್ಮ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡಗಿನ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಎ.ಕೆ.ಸುಬ್ಬಯ್ಯ, ಪೊನ್ನಮ್ಮ ಅವರ ಪುತ್ರ, ವಿರಾಜಪೇಟೆ  ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ವಿದ್ಯಾರ್ಥಿ ವೇತನ ವಿತರಿಸಿದರು.

Read More

ಮಡಿಕೇರಿ ಆ.28 : ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯ ಪ್ರಾಂಶುಪಾಲರಾದ ಮೇರಿ ಫಾತಿಮಾ ಅವರಿಗೆ ಬೆಂಗಳೂರಿನ ಕರ್ನಾಟಕ ಪ್ರತಿಭಾ ಅಕಾಡೆಮಿ ನೀಡುವ “ಬೆಸ್ಟ್ ಪ್ರಿನ್ಸಿಪಾಲ್” ಪ್ರಶಸ್ತಿ ಲಭಿಸಿದೆ. ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೆ.2 ರಂದು ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೇರಿ ಫಾತಿಮಾ ಅವರು ಆದರ್ಶ ಶಿಕ್ಷಕಿಯರಾಗಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅಪಾರವಾದ ಸೇವೆಯನ್ನು ಪರಿಗಣಿಸಲಾಗಿದೆ. ಪ್ರತಿಭಾ ಪರೀಕ್ಷೆಗಳನ್ನು ಅತ್ಯುತ್ತಮವಾಗಿ ಸಂಘಟಿಸುವ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿ, ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಇವರ ವಿಶಿಷ್ಟ ಸಾಧನೆಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸಿ ಗೌರವಿಸಲಾಗುತ್ತಿದೆ.

Read More

ಮಡಿಕೇರಿ ಆ.28 : ನಗರದ ಹೃದಯ ಭಾಗದಲ್ಲಿರುವ ವೀರ ಸೇನಾನಿಗಳ ಪ್ರತಿಮೆಗಳಿಗೆ ಹಾನಿಯಾಗದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ನಗರಸಭೆ ಕೈಗೊಳ್ಳಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವೀರಯೋಧ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದ ಬೆನ್ನಲ್ಲೇ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆ ಇರುವ ವೃತ್ತಕ್ಕೂ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದೆ. ಇದೆಲ್ಲವೂ ಉದ್ದೇಶಪೂರ್ವಕ ಕೃತ್ಯಗಳು ಎನ್ನುವ ಸಂಶಯ ಮೂಡುತ್ತಿದೆ ಎಂದು ಆರೋಪಿಸಿದ್ದಾರೆ. ದೇಶದ ರಕ್ಷಣೆಗಾಗಿ ಇಡೀ ಜೀವನವನ್ನೇ ಮುಡುಪಾಗಿಟ್ಟ ಯೋಧರ ಪ್ರತಿಮೆಗಳನ್ನಷ್ಟೇ ಸ್ಥಾಪಿಸಲು ವೀರ ಪರಂಪರೆಯ ಕೊಡವರು ಅಪೇಕ್ಷೆ ಪಡುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಮೆಗಳನ್ನು ಹಾನಿಗೊಳಿಸುವ ಮೂಲಕ ಕೊಡವರ ಭಾವನೆಗಳಿಗೆ ದಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ. ನಗರದಲ್ಲಿ ಫೀ.ಮಾ.ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಮೇಜರ್ ಮಂಗೇರಿರ ಮುತ್ತಣ್ಣ ಹಾಗೂ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಗಳಿವೆ. ನಾಲ್ವರ ಪ್ರತಿಮೆಗಳನ್ನು ವೀರರ ಪರಮ ತ್ಯಾಗಕ್ಕಾಗಿ ಸ್ಥಾಪಿಸಲಾಗಿದೆ. ಇವುಗಳಲ್ಲಿ ಈಗಾಗಲೇ…

Read More