ಸೋಮವಾರಪೇಟೆ ಫೆ.18 NEWS DESK : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂದಾಜು 1 ಕೋಟಿ ರೂ.ಗಳ ವೆಚ್ಚದ ಸುಸಜ್ಜಿತ ಒಳಾಂಗಣ ಬಾಸ್ಕೆಟ್‍ಬಾಲ್ ಕೋರ್ಟ್ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಬಾಸ್ಕೆಟ್‍ಬಾಲ್ ಆಟಗಾರರ ಬಹುದಿನದ ಕನಸ್ಸನ್ನು ನನಸ್ಸು ಮಾಡುವ ಉದ್ದೇಶದಿಂದ ಕ್ರಮ ಅನುದಾನ ಕಲ್ಪಿಸಲಾಗುವುದು. ಇಲ್ಲಿಯವರೆಗೆ ಆಟಗಾರರೇ ಸ್ವಂತ ಖರ್ಚಿನಲ್ಲಿ ಕೋರ್ಟ್ ಮಾಡಿಕೊಂಡಿದ್ದರು. ಜಿಲ್ಲೆಯಲ್ಲಿ ಮಳೆ ಜಾಸ್ತಿಯಿರುವುದರಿಂದ ಒಳಾಂಗಣ ಕ್ರೀಡಾಂಗಣ ಮಾಡಲೇಬೇಕಿದೆ. ಮೊದಲ ಹಂತದಲ್ಲಿ ಸಿಂಥೆಟಿಕ್ ಕೋರ್ಟ್ ಮತ್ತು ವಿದ್ಯುತ್ ದೀಪ ಅಳವಡಿಸಲಾಗುತ್ತದೆ. ನಂತರ ಅವಶ್ಯಕವಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ವಿಶೇಷವಾಗಿ ಯುವಕರರು ಬಾಸ್ಕೆಟ್‍ಬಾಲ್ ಕ್ರೀಡೆಯತ್ತ ಒಲುವು ಮೂಡಿಸಬೇಕು. ಕೊಡಗಿನ ಜನರಿಗೂ ಕ್ರೀಡೆಗೂ ಅವಿನಾಭಾವ ಸಂಬಂಧವಿದೆ. ಹಾಕಿ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್, ಬ್ಯಾಡ್ಮಿಂಟನ್, ಬಾಸ್ಕೆಟ್‍ಬಾಲ್ ಇನ್ನಿತರ ಆಟಗಳನ್ನು ಆಡಿ ಕಲಿತವರಿದ್ದಾರೆ. ಅಂತಹ ಕ್ರೀಡಾಪಟುಗಳಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂಬುದೇ ನಮ್ಮ ಆಶಯವೂ ಆಗಿದೆ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯತ್ತ ಒಲವು ಮೂಡಿಸಿಕೊಳ್ಳಬೇಕು.…
ಲೇಖಕ: admin
ಸೋಮವಾರಪೇಟೆ ಫೆ.18 NEWS DESK : ನೇರುಗಳಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿತ್ಲುಮಕ್ಕಿ ಗ್ರಾಮದಲ್ಲಿ ಕಳೆದ 9 ವರ್ಷಗಳಿಂದ ಮುಚ್ಚಿರುವ ಕಲ್ಲುಕೋರೆಯನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೋರೆಯ ಅಕ್ಕಪಕ್ಕದಲ್ಲೇ ಅನೇಕ ಮನೆಗಳು ಇರುವುದಲ್ಲದೆ, ಪುಟ್ಟ ಮಕ್ಕಳು ಪ್ರತಿದಿನ ಅದೇ ರಸ್ತೆಯ ಮೂಲಕ ಶಾಲೆಗೆ ಸಂಚರಿಸುತ್ತಿದ್ದಾರೆ. ಕೆಲ ವಯೋವೃದ್ಧರು ಒಬ್ಬರೇ ವಾಸವಾಗಿದ್ದು, ಕಲ್ಲು ಕೋರೆಯ ಪುನರಾರಂಭದಿಂದ ಅವರ ಸುರಕ್ಷತೆ ಅಪಾಯಕ್ಕೆ ಒಳಗಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಮದ ಸಮೀಪದಲ್ಲೇ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಹಿಂದೆ ನಡೆಯುತ್ತಿದ್ದ ಕಲ್ಲುಕೋರೆ ಬ್ಲಾಸ್ಟ್‍ನಲ್ಲಿ ಶಾಲಾ ಕಟ್ಟಡಗಳಲ್ಲೇ ಬಿರುಕುಗಳು ಕಂಡುಬಂದಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಕಲ್ಲುಕೋರೆ ಪ್ರಾರಂಭವಾದರೆ, ಭಾರೀ ವಾಹನಗಳ ಸಂಚಾರದಿಂದ ರಸ್ತೆ ಪರಿಸ್ಥಿತಿಯೂ ಹದಗೆಡಲಿದೆ. ಅನೇಕ ಕಡೆ ಗುಂಡಿಗಳು ಉಂಟಾಗಿ ಮಳೆಗಾಲದಲ್ಲಿ ಕೆಸರಿನ ಹೊಂಡಗಳಾಗಿ ಮಾರ್ಪಡುತ್ತವೆ. ಧೂಳು ಹಾಗೂ ಶಬ್ದ ಮಾಲಿನ್ಯ ಹೆಚ್ಚಾಗಿ ಮಕ್ಕಳು, ವೃದ್ಧರ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ…
ಮಡಿಕೇರಿ ಫೆ.18 NEWS DESK : ಆಸಹಾಯಕರು ಹಾಗೂ ಮುಖ್ಯವಾಹಿನಿಯಿಂದ ದೂರವಿರುವ ನಾಗರಿಕರಿಗೆ ಕಾನೂನಿನ ಮಾಹಿತಿ ನೀಡುವುದು ಅರೆಕಾಲಿಕ ಕಾನೂನು ಸ್ವಯಂಸೇವಕರ ಕರ್ತವ್ಯವಾಗಿದೆ ಎಂದು ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಔಟಲಾ ಇಂಡಿಯಾ ಸಂಸ್ಥೆ ಹಾಗೂ ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಾಲ್ಕು ದಿನಗಳ ಕಾಲ ಏರ್ಪಡಿಸಲಾಗಿರುವ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾನೂನು ಸೇವಾ ಪ್ರಾಧಿಕಾರದ ಜೊತೆ ಸೇರಿ ನೊಂದವರಿಗೆ ಕಾನೂನಿನ ಮಾಹಿತಿ ನೀಡುವುದು ಅರೆಕಾಲಿಕ ಕಾನೂನು ಸ್ವಯಂ ಸೇವಕರ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಅವರು ಸಲಹೆ ಮಾಡಿದರು. ನಿಸರ್ಗದತ್ತ ಹಾಗೂ ಮನುಷ್ಯ ಮಾಡಿದ…
ನವದೆಹಲಿ: ಭಾರತ್ ಮಂಟಪಂನಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026’ ರಲ್ಲಿ ಚೀನಾದ ರೋಬೋಟ್ ಅನ್ನು ತನ್ನದೇ ಸ್ವಂತ ಆವಿಷ್ಕಾರ ಎಂದು ಬಿಂಬಿಸಲು ಹೋಗಿ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ (Galgotias University) ವಿವಾದದ ಸುಳಿಗೆ ಸಿಲುಕಿದೆ. ಜಾಗತಿಕ ವೇದಿಕೆಯಲ್ಲಿ ದೇಶಕ್ಕೆ ಮುಜುಗರ ಉಂಟುಮಾಡಿದ ಹಿನ್ನೆಲೆಯಲ್ಲಿ, ಸರ್ಕಾರವು ವಿಶ್ವವಿದ್ಯಾಲಯದ ಮಳಿಗೆಯನ್ನು (Stall) ತಕ್ಷಣವೇ ತೆರವುಗೊಳಿಸಲು ಕಟ್ಟುನಿಟ್ಟಿನ ಆದೇಶ ನೀಡಿದೆ. ವಿವಾದದ ಮೂಲ: ‘ಒರಿಯನ್’ ವರ್ಸಸ್ ‘Unitree Go2’ ವಿಶ್ವವಿದ್ಯಾಲಯವು ತನ್ನ ಮಳಿಗೆಯಲ್ಲಿ ಪ್ರದರ್ಶಿಸಿದ್ದ ನಾಲ್ಕು ಕಾಲುಗಳ ರೋಬೋಟಿಕ್ ನಾಯಿಗೆ ‘ಒರಿಯನ್’ (Orion) ಎಂದು ಹೆಸರಿಟ್ಟಿತ್ತು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿಶ್ವವಿದ್ಯಾಲಯದ ಪ್ರತಿನಿಧಿ ಪ್ರೊಫೆಸರ್ ನೇಹಾ ಸಿಂಗ್, “ಇದನ್ನು ನಮ್ಮ ವಿಶ್ವವಿದ್ಯಾಲಯದ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಅಭಿವೃದ್ಧಿಪಡಿಸಲಾಗಿದೆ” ಎಂದು ಹೇಳಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ತಂತ್ರಜ್ಞಾನ ಆಸಕ್ತರು ಇದು ಚೀನಾದ ‘ಯುನಿಟ್ರೀ ರೊಬೊಟಿಕ್ಸ್’ ಕಂಪನಿಯ ‘Unitree Go2’ ಮಾದರಿಯ ರೋಬೋಟ್ ಎಂದು ಪುರಾವೆ ಸಮೇತ ಬಹಿರಂಗಪಡಿಸಿದರು. ಸುಮಾರು 2 ರಿಂದ 3 ಲಕ್ಷ…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿಹಿಸುದ್ದಿ ನೀಡಿದೆ. ದೇಶಾದ್ಯಂತ ಇರುವ ತನ್ನ 18 ವಿವಿಧ ಕಚೇರಿಗಳಲ್ಲಿ ಖಾಲಿ ಇರುವ 650 ಸಹಾಯಕ (Assistant) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಪದವೀಧರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ: ಫೆಬ್ರವರಿ 16, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 8, 2026 ಪೂರ್ವಭಾವಿ ಪರೀಕ್ಷೆ (Preliminary Exam): ಏಪ್ರಿಲ್ 11, 2026 (ತಾತ್ಕಾಲಿಕ) ಮುಖ್ಯ ಪರೀಕ್ಷೆ (Main Exam): ಜೂನ್ 7, 2026 (ತಾತ್ಕಾಲಿಕ) ಅರ್ಹತಾ ಮಾನದಂಡಗಳು ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಕನಿಷ್ಠ ಶೇ. 50 ರಷ್ಟು ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು. ಇದರೊಂದಿಗೆ ಕಂಪ್ಯೂಟರ್ ವರ್ಡ್ ಪ್ರೊಸೆಸಿಂಗ್ ಜ್ಞಾನ ಮತ್ತು ಸ್ಥಳೀಯ ಭಾಷೆಯ ಪರಿಣತಿ ಅತ್ಯಗತ್ಯ. ವಯೋಮಿತಿ: ಫೆಬ್ರವರಿ 1, 2026 ಕ್ಕೆ ಅನ್ವಯವಾಗುವಂತೆ 20…
ಮಡಿಕೇರಿ NEWS DESK ಫೆ.18 : ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ಫೆ.21ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರಿನಲ್ಲಿ “ಕೊಡವ ಸತ್ಯಾಗ್ರಹ” ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬೆಳಿಗ್ಗೆ 10.30 ಕ್ಕೆ ಶಾಂತಿಯುತವಾಗಿ ಸತ್ಯಾಗ್ರಹ ನಡೆಸಿ ಪ್ರಖ್ಯಾತ ಭಾಷಾ ತಜ್ಞ ಪಂಡಿತ್ ಡಾ. ಸೀತಕಾಂತ್ ಮಹಾಪಾತ್ರ ಆಯೋಗದ ವರದಿಯ ಶಿಫಾರಸ್ಸಿನಂತೆ ಕೊಡವ ತಕ್ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಈಗಾಗಲೇ ಪರಿಗಣಿಸಲ್ಪಟ್ಟ ಕೊಂಕಣಿ ಮತ್ತು ಪರಿಗಣನೆಯ ಹಂತದಲ್ಲಿರುವ ತುಳು ಪ್ರಸ್ತಾವನೆಯಂತೆಯೇ, ಸಂವಿಧಾನದ 345 ನೇ ವಿಧಿಯಡಿ ಕೊಡವ ತಕ್ ಅನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಗುರುತಿಸಬೇಕು. ಕೊಡವರ ಕುರಿತಾದ ನೈಜ ಚರಿತ್ರೆಯನ್ನು ತಿರುಚಿ ಸುಳ್ಳು ಚರಿತ್ರೆಯನ್ನು ಸೃಷ್ಟಿಸಿದವರ ವಿರುದ್ಧ ಕ್ರಮ ಜರುಗಿಸಬೇಕು. ಕೊಡವ ಜನಾಂಗೀಯ ಗುರುತು, ಕೊಡವ ಜಾನಪದ ಹಿನ್ನೆಲೆ, ಭಾಷಾಲೋಕ ಹಾಗೂ ಆದಿಮಸಂಜಾತ ಏಕ-ಜನಾಂಗೀಯ…
ಕಲ್ಯಾಣಿ: ರಣಜಿ ಟ್ರೋಫಿ ಕ್ರಿಕೆಟ್ ಇತಿಹಾಸದಲ್ಲಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಮೊಹಮ್ಮದ್ ಶಮಿ ಅವರಂತಹ ಘಟಾನುಘಟಿ ಬೌಲರ್ ಮತ್ತು ಅಭಿಮನ್ಯು ಈಶ್ವರನ್ ಅವರಂತಹ ಬ್ಯಾಟರ್‌ಗಳಿದ್ದ ಬಲಿಷ್ಠ ಬಂಗಾಳ ತಂಡವನ್ನು 6 ವಿಕೆಟ್‌ಗಳಿಂದ ಪರಾಭವಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ತಂಡ ಮೊದಲ ಬಾರಿಗೆ ರಣಜಿ ಫೈನಲ್ ತಲುಪಿ ಇತಿಹಾಸ ನಿರ್ಮಿಸಿದೆ. ಪಂದ್ಯದ ಗತಿಯನ್ನೇ ಬದಲಿಸಿದ ಅಖಿಬ್ ನಬಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಬಂಗಾಳ ತಂಡ, ಸುದೀಪ್ ಕುಮಾರ್ ಘರಮಿ (146) ಅವರ ಅಮೋಘ ಶತಕದ ನೆರವಿನಿಂದ 328 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಜಮ್ಮು ಕಾಶ್ಮೀರ ಮೊದಲ ಇನ್ನಿಂಗ್ಸ್‌ನಲ್ಲಿ 302 ರನ್ ಗಳಿಸಿ 26 ರನ್‌ಗಳ ಹಿನ್ನಡೆ ಅನುಭವಿಸಿತು. ಬಂಗಾಳದ ಪರ ವೇಗಿ ಮೊಹಮ್ಮದ್ ಶಮಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿ 90 ರನ್ ನೀಡಿ 8 ವಿಕೆಟ್ ಕಬಳಿಸಿ ಸಂಚಲನ ಮೂಡಿಸಿದರು. ಆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಕಣಿವೆ ರಾಜ್ಯದ ಬೌಲರ್‌ಗಳು ಕೆರಳಿದ…
ಬೆಂಗಳೂರು: ವೇತನ ಪರಿಷ್ಕರಣೆ ಹಾಗೂ ಬಾಕಿ ಹಣ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ನೌಕರರು ಗುರುವಾರ, ಫೆಬ್ರವರಿ 19 ರಂದು ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ. ಹೋರಾಟದ ಹಿನ್ನೆಲೆ ಜನವರಿ 29 ರಂದು ನಿಗದಿಯಾಗಿದ್ದ ಈ ಪ್ರತಿಭಟನೆಯನ್ನು ಮುಖಂಡ ಅನಂತ ಸುಬ್ಬರಾವ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಅಧಿಕೃತವಾಗಿ ಹೋರಾಟಕ್ಕೆ ಇಳಿದಿದೆ. ಗುರುವಾರ ಬೆಳಗ್ಗೆ ಸಾವಿರಾರು ನೌಕರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ (Freedom Park) ಜಮಾಯಿಸಿ ಬೃಹತ್ ಮೆರವಣಿಗೆ ನಡೆಸಲಿದ್ದಾರೆ. ನೌಕರರ ಪ್ರಮುಖ ಬೇಡಿಕೆಗಳು: ವೇತನ ಹಿಂಬಾಕಿ: 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ವೇತನ ಪರಿಷ್ಕರಣೆ: 2024ರ ಜನವರಿ 1ರಿಂದ…
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ತೀವ್ರವಾಗಿರುವ ಬಿಸಿಲಿನ ತಾಪದಿಂದ ಕಂಗಾಲಾಗಿರುವ ಜನರಿಗೆ ಹವಾಮಾನ ಇಲಾಖೆಯು ಸಿಹಿಸುದ್ದಿ ನೀಡಿದೆ. ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ, ಮುಂದಿನ 2-3 ದಿನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದೆ. ವಾಯುಭಾರ ಕುಸಿತದ ಪ್ರಭಾವ ಫೆಬ್ರವರಿ 18, 2026 ರ ಹವಾಮಾನ ವರದಿಯಂತೆ, ಸಮಭಾಜಕ ಹಿಂದೂ ಮಹಾಸಾಗರ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ವಾಯುಭಾರ ಕುಸಿತದ ಪ್ರದೇಶವು ಮುಂದುವರಿದಿದೆ. ಈ ವ್ಯವಸ್ಥೆಯು ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದತ್ತ ಚಲಿಸುವ ಸಾಧ್ಯತೆಯಿದೆ. ಇದರ ನೇರ ಪರಿಣಾಮವಾಗಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಮೋಡಗಳು ಆವರಿಸಲಿವೆ. ಪ್ರಾದೇಶಿಕ ಹವಾಮಾನ ಮುನ್ಸೂಚನೆ ದಕ್ಷಿಣ ಕನ್ನಡ: ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಒಣ ಹವೆ ಮುಂದುವರಿಯಲಿದೆ. ಮಲೆನಾಡು: ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ…
ಮಡಿಕೇರಿ NEWS DESK ಫೆ.18 : ಭಾಷೆ ಯಾವುದೇ ಇರಲಿ, ಕೃತಿ ರಚನೆಕಾರರು ತಪ್ಪುಗಳು ನುಸುಳದಂತೆ ಎಚ್ಚರ ವಹಿಸಬೇಕು ಮತ್ತು ಭಾಷಾ ಪರಿಣಿತರಿಂದ ಪುಸ್ತಕದ ಕುರಿತು ಮೊದಲು ಅಭಿಪ್ರಾಯ ಸಂಗ್ರಹಿಸಬೇಕು ಎಂದು ಹಿರಿಯ ಸಾಹಿತಿ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಾಚರಣಿಯಂಡ ಅಪ್ಪಣ್ಣ ಅವರು ಕಿವಿಮಾತು ಹೇಳಿದ್ದಾರೆ. ಕೊಡವ ಮಕ್ಕಡ ಕೂಟದ 13ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಪತ್ರಿಕಾ ಭವನದಲ್ಲಿ 124 ಮತ್ತು 125ನೇ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೂಕೋಂಡ ಪುಷ್ಪ ದಮಯಂತಿ ಪೂಣಚ್ಚ ಅವರು ರಚಿಸಿರುವ 4ನೇ ಪುಸ್ತಕ ‘ನೆನಪಿನ ಅಲೆ’ ಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಬಾಚರಣಿಯಂಡ ಅಪ್ಪಣ್ಣ ಅವರು ಇತ್ತೀಚಿನ ದಿನಗಳಲ್ಲಿ ಪತ್ರಿಕೆ ಹಾಗೂ ಪುಸ್ತಕಗಳಲ್ಲಿ ಹೆಚ್ಚು ತಪ್ಪುಗಳು ನುಸುಳುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿದರು. ಬರಹಗಾರರು ತಾವು ಬರೆದ ಪುಸ್ತಕದಲ್ಲಿನ ತಪ್ಪುಗಳನ್ನು ಪರಿಶೀಲಿಸಲು ತಮಗೆ ವಿಶ್ವಾಸ ಇರುವವರಿಗೆ ಮೊದಲು ಓದಲು ನೀಡಬೇಕು. ತಪ್ಪುಗಳನ್ನು ಸರಿಪಡಿಸಿದ ನಂತರವೇ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಓದುಗರಿಗೆ…






