ಮಡಿಕೇರಿ ಆ.28 : ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯ ಪ್ರಾಂಶುಪಾಲರಾದ ಮೇರಿ ಫಾತಿಮಾ ಅವರಿಗೆ ಬೆಂಗಳೂರಿನ ಕರ್ನಾಟಕ ಪ್ರತಿಭಾ ಅಕಾಡೆಮಿ ನೀಡುವ “ಬೆಸ್ಟ್ ಪ್ರಿನ್ಸಿಪಾಲ್” ಪ್ರಶಸ್ತಿ ಲಭಿಸಿದೆ. ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೆ.2 ರಂದು ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೇರಿ ಫಾತಿಮಾ ಅವರು ಆದರ್ಶ ಶಿಕ್ಷಕಿಯರಾಗಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅಪಾರವಾದ ಸೇವೆಯನ್ನು ಪರಿಗಣಿಸಲಾಗಿದೆ. ಪ್ರತಿಭಾ ಪರೀಕ್ಷೆಗಳನ್ನು ಅತ್ಯುತ್ತಮವಾಗಿ ಸಂಘಟಿಸುವ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿ, ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಇವರ ವಿಶಿಷ್ಟ ಸಾಧನೆಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸಿ ಗೌರವಿಸಲಾಗುತ್ತಿದೆ.
ಲೇಖಕ: admin
ಮಡಿಕೇರಿ ಆ.28 : ನಗರದ ಹೃದಯ ಭಾಗದಲ್ಲಿರುವ ವೀರ ಸೇನಾನಿಗಳ ಪ್ರತಿಮೆಗಳಿಗೆ ಹಾನಿಯಾಗದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ನಗರಸಭೆ ಕೈಗೊಳ್ಳಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವೀರಯೋಧ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದ ಬೆನ್ನಲ್ಲೇ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆ ಇರುವ ವೃತ್ತಕ್ಕೂ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದೆ. ಇದೆಲ್ಲವೂ ಉದ್ದೇಶಪೂರ್ವಕ ಕೃತ್ಯಗಳು ಎನ್ನುವ ಸಂಶಯ ಮೂಡುತ್ತಿದೆ ಎಂದು ಆರೋಪಿಸಿದ್ದಾರೆ. ದೇಶದ ರಕ್ಷಣೆಗಾಗಿ ಇಡೀ ಜೀವನವನ್ನೇ ಮುಡುಪಾಗಿಟ್ಟ ಯೋಧರ ಪ್ರತಿಮೆಗಳನ್ನಷ್ಟೇ ಸ್ಥಾಪಿಸಲು ವೀರ ಪರಂಪರೆಯ ಕೊಡವರು ಅಪೇಕ್ಷೆ ಪಡುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಮೆಗಳನ್ನು ಹಾನಿಗೊಳಿಸುವ ಮೂಲಕ ಕೊಡವರ ಭಾವನೆಗಳಿಗೆ ದಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ. ನಗರದಲ್ಲಿ ಫೀ.ಮಾ.ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಮೇಜರ್ ಮಂಗೇರಿರ ಮುತ್ತಣ್ಣ ಹಾಗೂ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಗಳಿವೆ. ನಾಲ್ವರ ಪ್ರತಿಮೆಗಳನ್ನು ವೀರರ ಪರಮ ತ್ಯಾಗಕ್ಕಾಗಿ ಸ್ಥಾಪಿಸಲಾಗಿದೆ. ಇವುಗಳಲ್ಲಿ ಈಗಾಗಲೇ…
ಮಡಿಕೇರಿ ಆ.28 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಪರವಾಗಿ ನಡೆಯುತ್ತಿರುವ ಕಾನೂನು ಹೋರಾಟದ ಕುರಿತು ಖ್ಯಾತ ಅರ್ಥಶಾಸ್ತçಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವ ನ್ಯಾಷನಲ್ ಕೌನ್ಸಿಲ್ ನ ಅಧ್ಯಕ್ಷ ಎನ್.ಯು.ನಾಚಪ್ಪ ಅವರೊಂದಿಗೆ ಸಮಾಲೋಚಿಸಿದರು. ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಇತ್ತೀಚೆಗೆ ಭೇಟಿಯಾದ ಇಬ್ಬರು ಸಿಎನ್‌ಸಿ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಬಗ್ಗೆ ಚರ್ಚಿಸಿದರು. ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಬೇಡಿಕೆ ನ್ಯಾಯಾಂಗದ ಮೂಲಕ ಈಡೇರಲಿದೆ ಎಂದು ಸಿಎನ್‌ಸಿ ಪರವಾಗಿ ಕಾನೂನು ಹೋರಾಟ ನಡೆಸುತ್ತಿರುವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು ಎಂದು ನಾಚಪ್ಪ ಹೇಳಿದ್ದಾರೆ. ಇತ್ತೀಚೆಗೆ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತ್ತು.
ಮಡಿಕೇರಿ ಆ.28 : ಇದೇ ಆ.30 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ‘ಗೃಹಲಕ್ಷ್ಮಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಮುಂದಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಅಗತ್ಯ ಸಿದ್ಧತೆ ಸಂಬಂಧ ಮಾಹಿತಿ ಪಡೆದು ಸಚಿವರು ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯಡಿ ಪ್ರತೀ ಕುಟುಂಬದ ಯಜಮಾನಿ ಮಹಿಳೆಗೆ 2 ಸಾವಿರ ರೂ. ವನ್ನು ನೇರ ನಗದು ಮೂಲಕ ತಲುಪಿಸುವ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಇದೊಂದು ರಾಜ್ಯ ಮಟ್ಟದ ಸರ್ಕಾರಿ ಕಾರ್ಯಕ್ರಮವಾಗಿದ್ದು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಈ ಐದು ಜಿಲ್ಲೆಯ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು. ಸ್ತ್ರೀ ಸ್ವಾವಲಂಬನೆಯತ್ತ ಒಂದು ದಿಟ್ಟ ಹೆಜ್ಜೆ ‘ಗೃಹಲಕ್ಷ್ಮಿ’ ಪ್ರತಿ ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ‘ಯೋಜನೆ ಜಾರಿಯು ಇದೇ ಆಗಸ್ಟ್, 30 ರಂದು ಮೈಸೂರಿನಲ್ಲಿ ಚಾಲನೆಗೊಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ…
ಮಡಿಕೇರಿ ಆ.28 : ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ಸಲುವಾಗಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಆ.30 ರಂದು ಈ ಸೌಲಭ್ಯ ವಿತರಣೆಯನ್ನು ಫಲಾನುಭವಿಯ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಜಾರಿಗೊಳಿಸುವ ಕಾರ್ಯಕ್ರಮ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲೆ ಮಾತ್ರವಲ್ಲದೆ ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ಫಲಾನುಭವಿಗಳು ಕೂಡಾ ಸಮಾವೇಶಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಅರ್ಹ ಫಲಾನುಭವಿಗಳ ಅನುಕೂಲಕ್ಕಾಗಿ ನಿಗಮದಿಂದ ಸುಮಾರು 103 ಬಸ್ಸುಗಳನ್ನು ಒಪ್ಪಂದದ ಮೇರೆಗೆ ಕಾರ್ಯಾಚರಣೆ ಮಾಡಲು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರಿಂದ ಕೋರಿಕೆ ಬಂದಿದೆ. ಅದರಂತೆ ನಿಗಮದ ಬಸ್ಸುಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ ಆಗಸ್ಟ್, 30 ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುತ್ತೂರು, ಸುಳ್ಯ, ಬೆಳ್ತಂಗಡಿ,…
ಮಡಿಕೇರಿ ಆ.28 : ಜಿಲ್ಲೆಯಲ್ಲಿ ಯಾವ ಗ್ರಾಮಗಳಲ್ಲಿಯೂ ಸಹ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸುವಂತೆ ತಾ.ಪಂ.ಇಒಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚಿಸಿದ್ದಾರೆ. ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು ಎಂದರು. ತಾ.ಪಂ.ಇಒಗಳಾದ ಶೇಖರ್, ಜಯಣ್ಣ, ಅಪ್ಪಣ್ಣ ಅವರು ಕುಡಿಯುವ ನೀರು ಸಂಬಂಧಿಸಿದಂತೆ ಮಾಹಿತಿ ನೀಡಿದರು. ಗ್ರಾಮೀಣ ಜನರಿಗೆ ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಇತ್ತೀಚೆಗೆ ಕಂದಾಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ 94ಸಿ ಮತ್ತು 94ಸಿಸಿ ಅರ್ಜಿಗಳ ವಿಲೇವಾರಿ ಸಂಬಂಧ ತ್ವರಿತ ವಿಲೇವಾರಿ ಮಾಡಲು ಸೂಚಿಸಿದರು. ಅದರಂತೆ ವಿಲೇವಾರಿ ಮಾಡಲಾಗಿದೆಯೇ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರು 94ಸಿ ಮತ್ತು 94 ಸಿಸಿ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್ ಪೊನ್ನಂಪೇಟೆಯಲ್ಲಿ ಶೇ.60ರಷ್ಟು…
ಮಡಿಕೇರಿ ಆ.28 : ಕರಗ ಹಾಗೂ ದಶಮಂಟಪ ಸಂಚರಿಸುವ ರಸ್ತೆಗಳ ಗುಂಡಿ ಮುಚ್ಚಿಸಿ, ಕಾಡು ಕಡಿದು ಶುಚಿಗೊಳಿಸುವಂತೆ ಮಡಿಕೇರಿ ದಸರಾ ದಶ ಮಂಟಪ ಸಮಿತಿ ಒತ್ತಾಯಿಸಿದೆ. ದಸರ ಸಮಿತಿ ಅಧ್ಯಕ್ಷ ಹೆಚ್.ಮಂಜುನಾಥ್ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಅವರಿಗೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು, ರಸ್ತೆ ಕಾರ್ಯ ಹಾಗೂ ಶುಚಿತ್ವಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಈ ಬಾರಿಯ ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಹತ್ತು ಮಂಟಪಗಳು ಸಂಚರಿಸುವ ರಸ್ತೆಗಳ ಗುಂಡಿ ಮುಚ್ಚಿಸುವುದು ಹಾಗೂ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವವು ಸಂಚಿರಿಸುವ ರಸ್ತೆಗಳ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡ ಗಂಟಿಗಳನ್ನು ಕಡಿದು ಶುಚಿಗೊಳಿಸುವಂತೆ ಒತ್ತಾಯಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಆರ್.ಜಗದೀಶ್, ಪ್ರಮುಖರಾದ ಮಹೇಶ್ ಜೈನಿ, ಅರುಣ್ ಶೆಟ್ಟಿ, ಮನು ಮಂಜುನಾಥ್, ನವೀನ್ ಪೂಜಾರಿ ಸೇರಿದಂತೆ ಮತ್ತಿರರು ಹಾಜರಿದ್ದರು.
ಮಡಿಕೇರಿ ಆ.28 : ಮಡಿಕೇರಿ ದಸರಾ ಸಮಿತಿಯ 2023 ನೇ ಸಾಲಿನ ಕಾರ್ಯಾಧ್ಯಕ್ಷರಾಗಿ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರಕಾಶ್ ಆಚಾರ್ಯ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಆಕಾಂಕ್ಷಿಗಳು ಇದ್ದ ಕಾರಣ ಇಂದು ನಗರದ ಖಾಸಗಿ ಹೊಟೇಲ್ ಸಂಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಪ್ರಕಾಶ್ ಆಚಾರ್ಯ 9 ಮತಗಳನ್ನು ಗಳಿಸಿದರೆ, ಪ್ರತಿಸ್ಪರ್ಧಿ ಪತ್ರಕರ್ತ ಅನಿಲ್ ಹೆಚ್.ಟಿ ಅವರು 5 ಮತಗಳನ್ನು ಪಡೆದರು. ಹತ್ತು ಮಂಟಪ ಸಮಿತಿಯ ತಲಾ ಓರ್ವ ಪದಾಧಿಕಾರಿ ಹಾಗೂ 4 ಕರಗ ಸಮಿತಿಯ ಓರ್ವ ಪದಾಧಿಕಾರಿಗಳು ಸೇರಿ ಒಟ್ಟು 14 ಮಂದಿ ಮತದಾನ ಮಾಡಿದರು. ಕಾರ್ಯಾಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ, ಉಪಾಧ್ಯಕ್ಷರಾಗಿ ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಬಿ.ಎಂ.ರಾಜೇಶ್, ಸಹ ಕಾರ್ಯದರ್ಶಿಯಾಗಿ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಜಗದೀಶ್ ಆಯ್ಕೆಯಾದರು.
ಸೋಮವಾರಪೇಟೆ ಆ.28 : ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಬಾಲಕಿಯ ವಿಭಾಗದ ವಾಲಿಬಾಲ್‍ನಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಶಾಲೆ ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಮಡಿಕೇರಿ ಆ.28 : ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಾಳೆಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯನ್ನು ವಿಜಯಲಕ್ಷ್ಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಉದ್ಘಾಟಸಿ ಮಾತನಾಡಿದರು. ಹಿಂದೆ ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರಿಗೆ ಮಾತ್ರ ಹೆಚ್ಚು ಮನ್ನಣೆ ಮತ್ತು ಜನಪ್ರಿಯತೆ ಸಿಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಫ್ರೋ ಕಬ್ಬಡಿ, ಖೋ.ಖೋ, ವಾಲಿಬಾಲ್, ಹಾಕಿ ಪಂದ್ಯಾವಳಿಗಳು ಹೆಚ್ಚು ಜನಪ್ರಿಯತೆ ಪಡೆದುಕೊಳ್ಳುತಿದ್ದು, ವಿದ್ಯಾರ್ಥಿಗಳು ಈ ಕ್ರೀಡೆಗಳತ್ತ ಗಮನ ಹರಿಸಿ ಭವಿಷ್ಯ ರೂಪಿಸಿಕೊಳ್ಳಲು ಕರೆ ನೀಡಿದರಲ್ಲದೆ. ಜಿಲ್ಲಾ ಮತ್ತು ರಾಜ್ಯ ಹಂತದ ಪಂದ್ಯದಲ್ಲಿಯೂ ನಮ್ಮ ತಾಲೂಕು ತಂಡಗಳೇ ವಿಜಯಿಯಾಗಿ ಬರಲಿಯೆಂದು ಶುಭಹಾರೈಸಿದರು . ನಂತರ ಆರು ವಲಯಗಳ ಬಾಲಕ…






