ಲೇಖಕ: admin

ಕುಶಾಲನಗರ ಸೆ.28 : ದಾರುಲ್ ಮದ್ರಸ ಹಾಗೂ ಹಿಲಾಲ್ ಮಸೀದಿ ಆಡಳಿತ ಮಂಡಳಿ  ಸಂಯುಕ್ತಾಶ್ರಯದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ 1498ನೇ ಜನ್ಮ ದಿನದ ಪ್ರಯುಕ್ತ “ರಹ್ಮತೇ ರಬೀಅ್ ಈದ್ ಮಿಲಾದ್” ಕಾರ್ಯಕ್ರಮವು ಕುಶಾಲನಗರದ ಶಾದಿ ಮಹಲ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿಲಾಲ್ ಮಸೀದಿಯ ಖತೀಬರಾದ ನಾಸರ್ ಫೈಜ಼ಿ, ವಿಶ್ವ ಪ್ರವಾದಿ ಮಹಮ್ಮದ್ ಪೈಗಂಬರ್ ಅವರು 1400 ವರ್ಷಗಳ ಹಿಂದೆ ಶಾಂತಿ, ಸಹೋದರತೆ ಸಂದೇಶವನ್ನು ಸಾರಿದವರಾಗಿದ್ದಾರೆ. ವರ್ಣಬೇಧ ನೀತಿ ಹಾಗೂ ಇನ್ನಿತರ ಕೆಟ್ಟ ಪದ್ಧತಿ  ಜಾರಿಯಲ್ಲಿದ್ದ ಕಾಲಗಟ್ಟದಲ್ಲಿ ಶಾಂತಿಯನ್ನು ಪಸರಿಸಿದ, ಪ್ರವಾದಿಯವರ ಜೀವನ ಸಂದೇಶಗಳನ್ನು ಅರಿತು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಡಿವೈಎಸ್ಪಿ ಗಂಗಾಧರಪ್ಪ ಮಾತನಾಡಿ, ಪ್ರತಿಯೊಂದು‌ ಧರ್ಮವೂ ಶಾಂತಿಯನ್ನು ಸಾರುತ್ತದೆ. ಕುಶಾಲನಗರದಲ್ಲಿ ಪ್ರತಿಯೊಂದು ಧರ್ಮದವರು ಪರಸ್ಪರ ಸಹೋದರರಂತೆ ಜೀವಿಸುತ್ತಿದ್ದಾರೆ. ಹೊಸಕೋಟೆಯಲ್ಲಿ ನಡೆದ ಗಣೇಶ ಚತುರ್ಥಿಗೆ ಮುಸ್ಲಿಂ ಸಹೋದರರು ತಂಪು ಪಾನೀಯಗಳನ್ನು ವಿತರಿಸಿದರು. ಕೂಡಿಗೆಯಲ್ಲಿ ನಡೆದ ಈದ್ ಮಿಲಾದ್ ಗೆ ಹಿಂದೂ ಸಹೋದರರು ತಂಪು ಪಾನೀಯಗಳನ್ನು ನೀಡಿ ಸಹೋದರತೆಯ…

Read More

ಮಡಿಕೇರಿ ಸೆ.28 : ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಮೂರು ಆಟೋಗಳು ಹಾನಿಗೊಳಗಾಗಿರುವ ಘಟನೆ ಗುರುವಾರ ಬೆಳಗ್ಗೆ ಹುಣುಸೂರು ಪಟ್ಟಣದ ಶಬೀರ್ ನಗರದಲ್ಲಿ ನಡೆದಿದೆ. ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಮರದ ಬೇರು ಸಡಿಲಗೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಎಂದಿನಂತೆ ಆಟೋ ಚಾಲಕರು ಆಟೋ ನಿಲ್ದಾಣದಲ್ಲಿ ಆಟೋ ನಿಲ್ಲಿಸಿದ್ದರು. ಈ ಸಂದರ್ಭ ಬೇರು ಸಹಿತ ಮರ ಉರುಳಿ ಬಿದ್ದಿದೆ, ಆದರೆ ಅದೃಷ್ಟವಶಾತ್ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮರ ತೆರವಿಗೆ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

Read More

ಮಡಿಕೇರಿ ಸೆ.28 : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಿಸರ್ಚ್ ಮೆಥಾಡಲಜಿ, ರಿಸರ್ಚ್ ಪಬ್ಲಿಕೇಷನ್ಸ್ ಮತ್ತು ಎಥಿಕ್ಸ್ ಎಂಬ ವಿಷಯದ ಮೇಲೆ 2023 ರ ಅ.3 ರಿಂದ 7 ರ ವರೆಗೆ ಕಾರ್ಯಾಗಾರವು ಅಕಾಡೆಮಿ ಕಚೇರಿಯಲ್ಲಿ (ಪ್ರೊ,.ಯು.ಆರ್.ರಾವ್ ವಿಜ್ಞಾನ ಭವನ, ಮೇ, ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097) ನಡೆಯಲಿದೆ. ಈ ಕಾರ್ಯಾಗಾರದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ವಿಜ್ಞಾನಿಗಳು ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಾಗಾರವು ಸ್ನಾತಕೋತ್ತರ ವಿದ್ಯಾರ್ಥಿಗಳು/ ಅಧ್ಯಾಪಕರು ಹಾಗೂ ಯುವ ಸಂಶೋಧಕರಿಗೆ ಉಪಯುಕ್ತವಾಗಲಿದೆ. ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ್ಯಂತ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದು. ಭಾಗವಹಿಸಲಿಚ್ಚಿಸುವವರು ಸೆ.30 ರೊಳಗೆ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‍ಸೈಟ್ http://www.kstacademy.in ಅಥವಾ ವೈಜ್ಞಾನಿಕಾಧಿಕಾರಿಯಾದ ವಿ.ಕೆ.ಶ್ರೀನಿವಾಸು ದೂ. 9620767819 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ…

Read More

ಇಂಫಾಲ ಸೆ.28 : ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾದ ಹಿನ್ನೆಲೆ ಆಕ್ರೋಶಗೊಂಡ ಪ್ರತಿಭಟನಾಕಾರರು ಈಶಾನ್ಯ ರಾಜ್ಯ ಮಣಿಪುರದ ಇಂಫಾಲ್ ಪಶ್ಚಿಮದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ. ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದು, ರಾಜಧಾನಿ ಇಂಫಾಲದಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಗುರುವಾರ ಮುಂಜಾನೆ ಇಂಫಾಲ್ ಪಶ್ಚಿಮದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದ್ದು, ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.  ಮೈತೇಯಿ ಸಮುದಾಯಕ್ಕೆ ಸೇರಿದ 17 ವರ್ಷದ ಬಾಲಕಿ ಮತ್ತು 20 ವರ್ಷದ ಯುವಕನ ಮೃತದೇಹಗಳ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Read More

ಮಡಿಕೇರಿ ಸೆ.28 :  ಚೆಟ್ಟಳ್ಳಿ ಸಮೀಪದ ಕಂಡಕರೆಯ ಮಸ್ಜಿದ್ ತಖ್ವಾ ಮುಸ್ಲಿಮ್ ಜಮಾಹತ್ ಕಮಿಟಿ ವತಿಯಿಂದ ಪ್ರವಾದಿ ಮೊಹಮ್ಮದ್ ‌ಪೈಗಂಬರ್ ಅವರ ಜನ್ಮದಿನವನ್ನು ಕಂಡಕರೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಮೌಲಿದ್ ಪಾರಾಯಣದೊಂದಿಗೆ ಈದ್ ಮಿಲಾದ್ ಕಾರ್ಯಕ್ರಮ ಆರಂಭಗೊಂಡಿತ್ತು. ಧ್ವಜಾರೋಹಣವನ್ನು ಮಹಲ್ ಅಧ್ಯಕ್ಷರಾದ ಪಿ.ಹೆಚ್ ಗಫೂರ್ ನೇರವೇರಿಸಿದರು. ಮಹಲ್ ‌ಖತೀಬರಾದ ಮುಸ್ತಫಾ ಸಖಾಫಿ ಪ್ರಾರ್ಥನೆ ನೆರವೇರಿಸಿದರು. ನಂತರ ಕಂಡಕರೆಯಿಂದ ಕಾಫಿಬೋರ್ಡ್ ವರೆಗೆ‌ ಈದ್ ಮಿಲಾದ್ ಸಂದೇಶ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಭಾಷಣ ಮಾಡಿ ಸಂದೇಶ ನೀಡಿದ, ಮಹಲ್ ಖತೀಬರಾದ ಮುಸ್ತಫಾ ಸಖಾಫಿ, ಆಧುನಿಕ ಯುಗದ ಭರಾಟೆಯಲ್ಲಿ ಮುಳುಗುತ್ತಿರುವ ಇಂದಿನ ‌ಯುವ ಸಮೂಹ, ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜೀವನಚರಿತ್ರೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಯುವ ಸಮೂಹದ ಯಾವುದೇ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದೆ ಶಿಸ್ತಿನಿಂದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಇಡೀ ವಿಶ್ವಕ್ಕೆ ಸಾರಿರುವ ಸಂದೇಶಗಳನ್ನು ಮೈಗೂಡಿಸಿಕೊಂಡು ನಡೆಯಬೇಕಾಗಿದೆ. ಸಾವಿರದ ನಾಲ್ಕು ನೂರು ವರ್ಷಗಳ ಹಿಂದೆ, ಪ್ರವಾದಿ ಪೈಗಂಬರ್ ಅವರು ನೀಡಿರುವ…

Read More

ಕಡಂಗ, ಸೆ 28 :  ಬದ್ರಿಯ ಜುಮಾ ಮಸೀದಿ ಹಾಗೂ ತಾಜುಲ್ ಉಲಮಾ ಮದರಸ ವತಿಯಿಂದ  ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಯಿತು. ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬ್ದುರಹ್ಮಾನ್ ಅರಫಾ ಧ್ವಜಾರೋಹಣ ನೆರವೆರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಜುಮಾ ಮಸೀದಿಯಿಂದ ಪಟ್ಟಣದಲ್ಲಿ  ಮಿಲಾದ್ ಸಂದೇಶ ಜಾಥಾ ನಡೆಯಿತು.  ವಿದ್ಯಾರ್ಥಿಗಳಿಂದ ಧಫ್, ಸ್ಕೌಟ್, ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಜಮಹತ್ ಖತೀಬ್ ಇಸ್ಮಾಯಿಲ್ ಲತೀಫಿ ಪ್ರಾರ್ಥನೆ  ನೆರವೇರಿಸಿದರು. ಈ ಸಂದರ್ಭ  ಮದರಸ ಮುಖ್ಯೋಪಾಧ್ಯಾಯ ಸಿಯಬುದ್ದಿನ್ ಜೌಹರಿ, ಜಮಾಅತ್ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತಿತ್ತರರು  ಹಾಜರಿದ್ದರು.  ವರದಿ :  ನೌಫಲ್  

Read More

ನವದೆಹಲಿ ಸೆ.28 : ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 116 ನೇ ಜನ್ಮದಿನವನ್ನು ದೇಶದೆಲ್ಲೆಡೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದರು. ನ್ಯಾಯ ಮತ್ತು ಸ್ವಾತಂತ್ರ್ಯಕ್ಕಾಗಿ ಭಗತ್ ಸಿಂಗ್  ಅವರು ಹೋರಾಡಿದರು.  ಭಗತ್ ಸಿಂಗ್ ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತಿದ್ದೇವೆ. ಅವರ ತ್ಯಾಗ ಸ್ಫೂರ್ತಿ ನೀಡುತ್ತಲೇ ಇದೆ. ಅವರು ಭಾರತದ ನಿರಂತರ ಹೋರಾಟದ ಸಂಕೇತವಾಗಿದ್ದಾರೆ” ಎಂದು ಪ್ರಧಾನಿ ಹೇಳಿದರು.

Read More

ಮಡಿಕೇರಿ ಸೆ.28 :  ಶಿಕ್ಷಕರಾದವರು ತಮ್ಮ ವೃತ್ತಿಧರ್ಮಕ್ಕೆ ನ್ಯಾಯಸಲ್ಲಿಸಿದಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯವೆಂದು ಕೂಡಿಗೆ ಕ್ರೀಡಾ ಶಾಲಾ ನಿವೃತ್ತ ಪ್ರಾಂಶುಪಾಲರಾದ ಕುಂತಿ ಬೋಪಯ್ಯ ಹೇಳಿದರು. ನಗರದ ರೋಟರಿ ಸಭಾಂಗಣದಲ್ಲಿ ಮಡಿಕೇರಿ ರೋಟರಿ ವುಡ್ಸ್‍ನಿಂದ ಆಯೋಜಿತ ಕಾರ್ಯಕ್ರಮದಲ್ಲಿ ಐವರು ಸಾಧಕ ಶಿಕ್ಷಕರಿಗೆ ‘ನೇಷನ್ ಬಿಲ್ಡರ್ಸ್’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿ, ಶಿಕ್ಷಕ ವೃತ್ತಿ ಬಹಳ ಖುಷಿ ಕೊಡುವಂತದ್ದು. ಮಕ್ಕಳೊಡನೆ ಮಕ್ಕಳಾಗಲು ಶಿಕ್ಷಕ ವೃತ್ತಿಯಿಂದ ಮಾತ್ರ ಸಾಧ್ಯವೆಂದು ತಿಳಿಸಿದರು. ರೋಟರಿ ಅಸಿಸ್ಟೆಂಟ್ ಗವರ್ನರ್ ದೇವಣಿರ ತಿಲಕ್ ಪೊನ್ನಪ್ಪ ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾದದ್ದು. ಸಾವಿರಾರು ಉತ್ತಮ ನಾಗರಿಕರನ್ನು ಸೃಷ್ಟಿಸುವ ಕೆಲಸ ಬಹಳ ಅಪೂರ್ವವಾದದ್ದು. ಇಂತಹ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವ ಮೂಲಕ ರೋಟರಿ ಮಡಿಕೇರಿ ವುಡ್ಸ್ ಉತ್ತಮವಾಗಿ ಮುಂದೆ ಸಾಗುತ್ತಿದೆ ಎಂದು ನುಡಿದರು. ರೋಟರಿ ಝೋನಲ್ ಲೆಫ್ಟಿನೆಂಟ್ ಸಂಪತ್ ಕುಮಾರ್ ಮಾತನಾಡಿ, ರೋಟರಿ ವುಡ್ಸ್ ಸಂಸ್ಥೆಯಿಂದ ಇಂತಹ ಕಾರ್ಯಕ್ರಮಗಳು ಮತ್ತಷ್ಟು ಮೂಡಿ ಬರಲಿ ಎಂದು ಆಶಿಸಿದರು. ಪ್ರಶಸ್ತಿಗೆ ಭಾಜನರಾದ ಶಿಕ್ಷಕರು : …

Read More

ಬೆಂಗಳೂರು ಸೆ.28 : ಖ್ಯಾತ ಕೃಷಿ ವಿಜ್ಞಾನಿ, ಹಸಿರು ಕ್ರಾಂತಿಯ ಹರಿಕಾರರಾದ ಎಂ.ಎಸ್ ಸ್ವಾಮಿನಾಥನ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಸುಸ್ಥಿರ ಕೃಷಿ ಉತ್ಪನ್ನಗಳ ಉತ್ಪಾದಕತೆಗೆ ಸ್ವಾಮಿನಾಥನ್ ಅವರು ನೀಡಿದ ಕೊಡುಗೆಗಳ ಫಲವಾಗಿ ಭಾರತವು ಕೃಷಿ ಉತ್ಪಾದಕತೆಯಲ್ಲಿ ಸ್ವಾವಲಂಬನೆ ಸಾಧಿಸಿ, ಜಾಗತಿಕ ಮನ್ನಣೆ ಗಳಿಸಲು ಸಾಧ್ಯವಾಯಿತು. ವಿಶ್ವಸಂಸ್ಥೆಯಿಂದ “ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ” ಎಂದು ಕರೆಯಲ್ಪಟ್ಟ ಹಿರಿಯ ಸಸ್ಯ ತಳಿಶಾಸ್ತ್ರಜ್ಞ ಸ್ವಾಮಿನಾಥನ್ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಬಂಧು ಮಿತ್ರರಿಗೆ ನೋವು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. (ಮುಖ್ಯಮುಂತ್ರಿ ಸಿದ್ದರಾಮಯ್ಯ)

Read More

ಕುಶಾಲನಗರ ಸೆ.27 : ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ‌ ದಿನದ ಪ್ರಮುಕ್ತ ನಡೆಸಲಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಕುಶಾಲನಗರ ಹಾಗೂ ಕೂಡಿಗೆಯಲ್ಲಿ ಬೃಹತ್ ಮಿಲಾದ್ ಸಂದೇಶ ಜಾಥ ನಡೆಯಿತು. ಕುಶಾಲನಗರದ ದಾರುಲ್ ಉಲೂಂ‌ ಮದ್ರಸ ಹಾಗೂ ಹಿಲಾಲ್ ಮಸೀದಿ ಆಡಳಿತ ಮಂಡಳಿ ವತಿಯಿಂದ ಕುಶಾಲನಗರದ ಮುಖ್ಯ ರಸ್ತೆ ಹಾಗೂ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಾಯಿತು.  ಕುಶಾಲನಗರದ ಶಾದಿ ಮಹಲ್ ನಿಂದ ಪ್ರಾರಂಭಗೊಂಡ ಜಾಥ, ಮುಖ್ಯ ರಸ್ತೆ ಮೂಲಕ ಪಟ್ಟಣದ ಕಾರ್ಯಪ್ಪ ವೃತ್ತಕ್ಕೆ ತಲುಪಿತು. ಕಾರ್ಯಪ್ಪ ವೃತ್ತದಲ್ಲಿ ಪುಟಾಣಿ‌ ಮಕ್ಕಳನ್ನು ಒಳಗೊಂಡಂತೆ ದಾರುಲ್ ಉಲೂಂ ಮದ್ರಸದ ವಿದ್ಯಾರ್ಥಿಗಳಿಂದ ದಫ್ ಪ್ರದರ್ಶನ ನೀಡಲಾಯಿತು. ವಿದ್ಯಾರ್ಥಿಗಳು ಆಕರ್ಷಕ ಸಮವಸ್ತ್ರಗಳನ್ನು ಧರಿಸಿ ಗಮನ ಸೆಳೆದರು. ನಂತರ ದಂಡಿನಪೇಟೆ ಮೂಲಕ ಸಾಗಿದ ಮೆರವಣಿಗೆ, ಅಯ್ಯಪ್ಪ‌ಸ್ವಾಮಿ‌ ದೇವಾಲಯ ರಸ್ತೆ ಮೂಲಕ ಆಗಮಿಸಿ ಶಾಧಿ ಮಹಲ್ ನತ್ತ ಸಾಗಿತು. ಮೆರವಣಿಗೆಯಲ್ಲಿ ಪ್ರವಾದಿಯವರ ಶಾಂತಿ, ಸಾಹೋದರ್ಯತೆಯ ಸಂದೇಶಗಳನ್ನು ಸಾರಿ ಸಮಾಜಕ್ಕೆ ಶಾಂತಿ, ಸಹೋದರತೆಯ ಸಂದೇಶವನ್ನು ನೀಡಿದರು. ಕೂಡಿಗೆಯ ಮೊಹಿಯದ್ದೀನ್ ಜುಮಾ…

Read More