ಮೂರ್ನಾಡು ಸೆ.28 : ಇಲ್ಲಿನ ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ 15ನೇ ವರ್ಷದ ಓಣಂ ಹಬ್ಬಾಚರಣೆಯು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಹಬ್ಬಾಚರಣೆಯ ಸಮಾರಂಭವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಮ್ಮ ತಮ್ಮ ಮನೆಯಲ್ಲಿಯೆ ಓಣಂ ಹಬ್ಬವನ್ನು ಆಚರಿಸಿಕೊಂಡರೂ, ಸಮಾಜ ಬಾಂಧವರೆಲ್ಲರೂ ಕೂಡಿ ಸಂಘದ ಮುಖಾಂತರ ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುವುದು ಸಮಾಜದ ಒಗ್ಗಟ್ಟನ್ನು ಎತ್ತಿಹಿಡಿಯುತ್ತದೆಯಲ್ಲದೆ, ತಮ್ಮ ಸಮಾಜದ ಆಚಾರ-ವಿಚಾರ, ಸಂಸ್ಕೃತಿಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ಹೇಳಿದರು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ಹಿಂದೂಗಳಾದ ನಾವು ತಮ್ಮ ಸಂಸ್ಕೃತಿಗಳನ್ನು ಚಾಚೂ ತಪ್ಪದೆ ಪಾಲಿಸಿದಾಗ ಮಾತ್ರ ಹಿಂದೂ ಸಮಾಜ ಗಟ್ಟಿಗೊಳ್ಳುತ್ತದೆ. ಹೀಗೆ ತಮ್ಮ ಆಚಾರ-ವಿಚಾರ ಪಾಲನೆಗಳಿಂದ ಸಮಾಜ ಒಳಿತು ಕಂಡುಕೊಂಡಾಗ ದೇಶವು ಸಹ ಅಭಿವೃದ್ಧಿ…
ಲೇಖಕ: admin
ಮಡಿಕೇರಿ ಫೆ.28 : ಈದ್ ಮಿಲಾದ್ ಅಂಗವಾಗಿ ಮಡಿಕೇರಿಯ ಬದ್ರಿಯಾ ಜಮಾಅತ್ ಆಶ್ರಯದಲ್ಲಿ ನಗರದಲ್ಲಿ ಬೃಹತ್ ಮಿಲಾದ್ ರ‍್ಯಾಲಿ ನಡೆಯಿತು. ನಗರದ ಗದ್ದುಗೆ ಬಳಿಯಿಂದ ಆರಂಭಗೊಂಡ ಜಾಥಾ ಕಾವೇರಿ ಹಾಲ್ ನಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಾಗವಹಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಸಂದೇಶ ಸಾರಿದರು.
ಮಡಿಕೇರಿ ಸೆ.28 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸೆ.29 ರಂದು ಸಂಜೆ 4 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಮಡಿಕೇರಿ ಸೆ.28 : ಭಾಗಮಂಡಲದ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಜರುಗಲಿರುವ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ 2023” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಸೇರಿದ ‘ಮುಡಿ ಕಟ್ಟಡ’ದಲ್ಲಿ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ, ಪಾರಂಪರಿಕ ಆಚರಣೆಗಳಿಗೆ ಚ್ಯುತಿ ಬಾರದಂತೆ ಕಾವೇರಿ ಜಾತ್ರೆ ನಡೆಯಬೇಕೆಂದು ಸೂಚನೆ ನೀಡಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಜಿಲ್ಲಾಧಿಕಾರಿ ವೆಂಕಟರಾಜ, ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾಗರೀಕರು ಹಾಜರಿದ್ದರು.
ಕುಶಾಲನಗರ, ಸೆ.28 : ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್.ಇ.ಆರ್.ಟಿ.) ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ ಸೆ.27 ರಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿ ಗಮನ ಸೆಳೆದರು. ವಿಜ್ಞಾನ ನಾಟಕ ಸ್ಪರ್ಧೆ ಉದ್ಘಾಟಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರೂ ಆದ ಡಯಟ್ ನ ಪ್ರಾಂಶುಪಾಲ ಎಂ.ಚಂದ್ರಕಾಂತ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದೆ. ಲೋಕ ಶಿಕ್ಷ ಣದ ಸಂದೇಶವನ್ನು ಸಮಾಜಕ್ಕೆ ರವಾನಿಸುವ ಪ್ರಭಾವಿ ಮಾಧ್ಯಮವಾಗಿ ನಾಟಕಕಲೆ ಮಹತ್ವ ಪಡೆದುಕೊಂಡಿದೆ ಎಂದರು. ಕಲೆ ಮತ್ತು ವಿಜ್ಞಾನದ…
ಮಡಿಕೇರಿ ಸೆ.28 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಡಾ.ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ, ದತ್ತಿ ಉಪನ್ಯಾಸ ಮತ್ತು ಕಥಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಸೆ.30 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್, ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಚಾರ್ಯರಾದ ಮೇಜರ್ ಬಿ.ರಾಘವ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಇತರರು ಪಾಲ್ಗೊಳ್ಳಲಿದ್ದಾರೆ. 80 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು, ಸಾಹಿತಿಗಳಾದ ಡಾ.ನಾ.ಡಿಸೋಜ ಅವರ ಸಾಹಿತ್ಯ ಕುರಿತು ಫೀ.ಮಾ.ಕೆ.ಎಂ.ಕಾರ್ಯಪ್ಪ…
ಮಡಿಕೇರಿ ಸೆ.28 : ಗೋಣಿಕೊಪ್ಪಲು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಸೆಪ್ಟೆಂಬರ್, 30 ರಂದು ಬೆಳಗ್ಗೆ 10.30 ಗಂಟೆಯಿಂದ 11.30 ಗಂಟೆವರೆಗೆ ಗೋಣಿಕೊಪ್ಪಲು ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಸೆ.30 ರಂದು ಮಧ್ಯಾಹ್ನ 3.30 ಗಂಟೆಯಿಂದ 4.30 ಗಂಟೆವರೆಗೆ ವಿರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಗೋಣಿಕೊಪ್ಪಲು ಮತ್ತು ವಿರಾಜಪೇಟೆ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಸೆ.27 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಆರಂಭಿಸಿರುವ ಪಾದಯಾತ್ರೆಯ 2ನೇ ಹಂತ “ಕುರುಳಿ ಅಂಬಲ” ಮಂದ್ ನಿಂದ ಇಂದು ಆರಂಭಗೊಂಡಿತು. ಮಡಿಕೇರಿ ತಾಲ್ಲೂಕು “ಕುರುಳಿ ಅಂಬಲ” ಮಂದ್, ನೆಲ್ಲಿಯಪುದಿಕೇರಿ ನಾಡ್ ಕಟ್ಟೆಮಾಡ್ ಮತ್ತು ಅರೆಕಾಡ್ ಮಂದ್ ನಲ್ಲಿ ಪಾದಯಾತ್ರೆ ಹಾಗೂ ಕೊಡವ ಜಾಗೃತಿ ಸಭೆ ನಡೆಯಿತು. ನೆರೆದಿದ್ದವರನ್ನುದ್ದೇಶಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಬೇಡಿಕೆ ಈಡೇರುವವರೆಗೆ ಸಿಎನ್‌ಸಿ ಯ ಹೋರಾಟ ಮುಂದುವರೆಯಲಿದೆ, ಸರ್ವ ಕೊಡವರು ಹೋರಾಟದೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ದೇಶದ ಸಂವಿಧಾನದಡಿ ಸೂಕ್ಷ್ಮ ಬುಡಕಟ್ಟು ಜನಾಂಗವಾಗಿರುವ ಕೊಡವರು ತಮ್ಮ ಹಕ್ಕುಗಳನ್ನು ಪಡೆಯಲು ಸ್ವತಂತ್ರರು, ಆದರೆ ಪ್ರತಿಯೊಬ್ಬರು ಜಾಗೃತರಾಗಬೇಕು ಎಂದರು. ಭೌಗೋಳಿಕ-ರಾಜಕೀಯ ಸ್ವಾಯತ್ತತೆಯು ಯುಎನ್/ವಿಶ್ವ ರಾಷ್ಟ್ರ ಸಂಸ್ಥೆ ಚಾರ್ಟರ್‌ನಲ್ಲಿ ಪ್ರತಿಪಾದಿಸಲ್ಪಟ್ಟ ನಿರ್ದಿಷ್ಟ ಪ್ರದೇಶದ ಪ್ರಾಚೀನ ಸೂಕ್ಷ್ಮ ರೇಸ್ ಅನ್ನು ರಕ್ಷಿಸಲು, ಉತ್ತೇಜಿಸಲು ಮತ್ತು ಪುನರುಜ್ಜೀವನಗೊಳಿಸಲು…
ಮಡಿಕೇರಿ ಸೆ.27 : ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ. ಸಮುದಾಯ ಆರೋಗ್ಯ ಕೇಂದ್ರ ಕುಟ್ಟ, ಗ್ರಾಮ ಪಂಚಾಯ್ತಿ ಸಂಯುಕ್ತ ಆಶ್ರಯದಲ್ಲಿ ಕುಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು , ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು. ಈ ಶಿಬಿರದಲ್ಲಿ ಸುಮಾರು 280 ಕ್ಕಿಂತ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು. ಈ ಕಾರ್ಯಕ್ರಮವನ್ನು ಕುಟ್ಟ ಗ್ರಾ.ಪಂ. ಅಧ್ಯಕ್ಷರಾದ ಹೇಮಾ ಅವರು ಉದ್ಘಾಟಿಸಿದರು. ಕುಟ್ಟ ಗ್ರಾ.ಪಂ.ಉಪಾಧ್ಯಕ್ಷರಾದ ಕೀರ್ತಿ ಮಾತನಾಡಿ ಜಿಲ್ಲೆಯ ಗಡಿಭಾಗದಲ್ಲಿ ಸುಸಜ್ಜಿತವಾದ ಆಸ್ಪತ್ರೆ ಕಟ್ಟಡವಿದ್ದರೂ ತೀವ್ರ ವ್ಯೆದ್ಯರ ಕೊರತೆಯಿದ್ದು ತಜ್ಞ ವ್ಯೆದ್ಯರಿಂದ ಈ ರೀತಿಯ ಹೆಚ್ಚಿನ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಬುಡಕಟ್ಟು…
ಮಡಿಕೇರಿ ಸೆ.27 : ಮೀನುಗಾರಿಕೆ ಇಲಾಖೆ ವತಿಯಿಂದ ನಗರದ ಎಫ್‍ಎಮ್‍ಸಿ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಗೆ ಒಂದು ದಿನದ ಕ್ಷೇತ್ರಕಾರ್ಯ ಭೇಟಿ ಕಾರ್ಯಕ್ರಮ ನಡೆಯಿತು. ಗುಹ್ಯದಲ್ಲಿರುವ ಅಕ್ವಾ ವೆಂಚರ್ ಮತ್ಸ್ಯ ಸೇವಾ ಕೇಂದ್ರದಲ್ಲಿ ಒಂದು ದಿನದ ತರಬೇತಿ ನಡೆಯಿತು. ಫಾರಂನ ಮಾಲೀಕ ಶ್ಯಾಮ್ ಅಯ್ಯಪ್ಪ ಅವರು ತಾವು ಕೈಗೊಂಡಿರುವ ಅಕ್ವಾಫೋನಿಕ್ ಮಾದರಿಯಲ್ಲಿ ಮೇಲೆ ಟೊಮೆಟೊ, ಸೌತೆಕಾಯಿ, ಕುಂಬಳಕಾಯಿ, ಮೂಲಂಗಿ ಮುಂತಾದ ತರಕಾರಿ, ಪಾಲಕ್, ಲೆಟ್ಯುಸ್, ಜುಕಣಿ ಮುಂತಾದ ಹಸಿರು ಸೊಪ್ಪು ಮತ್ತು ಸ್ಟ್ರಾಬೆರಿ ಹಣ್ಣಿನ ಬೆಳೆಗಳು, ಹಾಗೆಯೇ ಮೀನು ಮರಿ ಪಾಲನೆ ನೀರನ್ನು ಶುದ್ಧೀಕರಿಸುವ ವಿಧಾನದ ಮೂಲಕ ಕೈಗೊಳ್ಳುವುದನ್ನು ವಿವರಿಸಿದರು. ಸ್ಥಳೀಯ ಮಟ್ಟದಲ್ಲಿ ಮಾರ್ಕೆಟಿಂಗ್ ಕಂಡುಕೊಳ್ಳುವ ವಿಧಾನ ಗಿಡಗಳನ್ನು ಬೆಳೆಸುವಾಗ ಕೊಕೊಪಿಟ್, ಕ್ಲೇ ಬಾಲ್ಸ್ ಮುಂತಾದ ವಸ್ತುಗಳ ಬಳಕೆಯ ಪ್ರಮಾಣವನ್ನು ಪ್ರಾಯೋಗಿಕವಾಗಿ ತೋರಿಸಲಾಯಿತು. ಪಾಲನೆಯಲ್ಲಿರುವ ಸ್ಪಾನ್, ಫ್ರೈ ಮೀನುಗಳ ಪೋಷಣೆಯ ವಿಧಾನದ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಬಯೋಫ್ಲಾಕ್ ಟೆಕ್ನಾಲಜಿ ಬಳಸಿ ತಿಲಾಪಿಯ ಮೀನು ಮತ್ತು ಅಲಂಕಾರಿಕ ಮೀನುಗಳಾದ ಕೋಯಿ, ಗೋಲ್ಡ್ ಫಿಶ್…






