ಮಡಿಕೇರಿ ಮೇ 4 NEWS DESK : ಹರಕೆಯ ಹಣವನ್ನು ಕಳೆದುಕೊಂಡ ವ್ಯಕ್ತಿಯೊಬ್ಬರಿಗೆ 500 ರೂ. ಮುಖಬೆಲೆಯ ಒಂದು ಬಂಡಲ್ ಹಣವನ್ನು ಕಾರ್ಮಿಕರೊಬ್ಬರು ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಹರಕೆ ರೂಪದಲ್ಲಿ 500 ರೂ. ಮುಖಬೆಲೆಯ ಒಂದು ಬಂಡಲ್ ಹಣವನ್ನು ಪಾಲಿಬೆಟ್ಟ ದರ್ಗಾಕ್ಕೆ ಒಪ್ಪಿಸಲೆಂದು ಹುಂಡಿ ಗ್ರಾಮದ ನಿವಾಸಿ ಸಿ.ಎಂ.ನಿಯಾಸ್(46) ಎಂಬುವವರು ತೆರಳುತ್ತಿದ್ದಾಗ ಮಾರ್ಗದ ಮಧ್ಯೆ ಹಣದ ಬಂಡಲ್ ಬಿದ್ದು ಹೋಗಿತ್ತು. ಗೋಣಿಕೊಪ್ಪ ಮಾರ್ಗವಾಗಿ ಕುಶಾಲನಗರ ಕಡೆಗೆ ಹೋಗುತ್ತಿದ್ದ ಕುಶಾಲನಗರದ ನಿವಾಸಿ ಕೂಲಿ ಕಾರ್ಮಿಕ ಎಂ.ಷಂಶುದ್ದೀನ್ ಎಂಬುವವರಿಗೆ 500 ರೂ. ಮುಖ ಬೆಲೆಯ ಹಣದ ಬಂಡಲ್ ಬಿದ್ದು ಸಿಕ್ಕಿತ್ತು. ಈ ವಿಚಾರವನ್ನು ಅವರು ತಮ್ಮ ಸ್ನೇಹಿತ ಸಿದ್ದಾಪುರ ಆಟೋ ಚಾಲಕರ ಸಂಘದ ಕಾರ್ಯದರ್ಶಿ ಗಿರೀಶ್ ಅವರಿಗೆ ತಿಳಿಸಿ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ಆಗುವಂತೆ ನೋಡಿಕೊಂಡಿದ್ದರು. ಕೊಡಗು ಜಿಲ್ಲಾ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವ್ಯಾಟ್ಸ್ ಅಪ್ ಗ್ರೂಪ್ ನಲ್ಲೂ ಮಾಹಿತಿ ಒದಗಿಸಿದ್ದರು. ಸೂಕ್ತ ದಾಖಲಾತಿ ನೀಡಿದರೆ ಕುಶಾಲನಗರ ಪೊಲೀಸ್…
ಲೇಖಕ: admin
ಗೋಣಿಕೊಪ್ಪ ಮೇ 15 NEWS DESK : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‍ನ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣದಲ್ಲಿ ನಡೆದ ಉಪಚುನಾವಣೆಯಲ್ಲಿ ಸಮರ್ಥ ಶ್ಯಾಮನೂರು ಗೆಲುವಿನ ಫಲಿತಾಂಶ ಬಂದ ಹಿನ್ನೆಲೆ ಗೋಣಿಕೊಪ್ಪ ನಗರ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ಆಚರಿಸಲಾಯಿತು. ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ನಗರ ಕಾಂಗ್ರೆಸ್‍ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ನೇತೃತ್ವದಲ್ಲಿ ನಗರದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಘೋಷಣೆಗಳನ್ನು ಹಾಕುವ ಮೂಲಕ ಸಂಭ್ರಮವನ್ನು ಸವಿದರು. ಕಾಂಗ್ರೆಸಿನ ಪಿ.ಕೆ.ಪ್ರವೀಣ್ ಮತ್ತು ಕೆಡಿಸಿಸಿ ಸದಸ್ಯ ಸಮ್ಮದ್‍ಕಾಂಗ್ರೆಸ್ ಪಕ್ಷದ ಗೆಲುವಿನ ಹಾದಿಯ ಬಗ್ಗೆ ಮಾತನಾಡಿದರು. ಕಾಂಗ್ರೆಸಿನ ಹಿರಿಯ ಮುಖಂಡ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುಳ ಎಂ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಸದಸ್ಯ ಖಾಲೀದ್, ಯುವಕಾಂಗ್ರೆಸ್ ಉಪಾಧ್ಯಕ್ಷ ಅಂಕಿತ್, ಪ್ರಮುಖರಾದ ರಾಜಶೇಖರ್, ನಾರಾಯಣ ಸ್ವಾಮಿ ನಾಯ್ಡು, ಧನಲಕ್ಷ್ಮಿ, ಇದ್ದರು.
ಸೋಮವಾರಪೇಟೆ ಮೇ 4 NEWS DESK : ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸೋಮವಾರವೂ ಮುಂದುವರಿದಿದೆ. ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬೂರು ಸರ್ಕಾರಿ ಜಾಗದಲ್ಲಿ ನಿವೇಶನ ರಹಿತ ಕುಟುಂಬಗಳಿಗೆ ಜಾಗ ಒದಗಿಸುವಂತೆ ಒತ್ತಾಯಿಸಿ, ಧರಣಿ ನಡೆಸುತ್ತಿದ್ದಾರೆ. ಅಲ್ಲಲ್ಲಿ ಶೆಡ್‍ಗಳನ್ನು ನಿರ್ಮಿಸಿಕೊಂಡಿದ್ದಾರೆ. ಧರಣಿ ನಡೆಯುತ್ತಿರುವ ಪೈಸಾರಿ ಜಾಗವನ್ನು ಧರಣಿ ನಿರತರು ಕಂಡು ಹಿಡಿದಿದ್ದು, ಆ ಜಾಗದ ಆರ್‍ಟಿಸಿಯನ್ನು ತೆಗೆದು, ಆ ಜಾಗದಲ್ಲಿ ನಿವೇಶನ ರಹಿತ ಕಾರ್ಮಿಕರಿಗೆ ನಿವೇಶನ ನೀಡುವಂತೆ ಜಿಲ್ಲಾಧಿಕಾರಿ, ಕಂದಾಯ ಸಚಿವರನ್ನು ಒತ್ತಾಯಿಸಿದ್ದಾರೆ. ಈ ಪೈಸಾರಿ ಜಾಗವನ್ನು ಅನೇಕರು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿದ್ದಾರೆ. ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ಹಂಚುವಂತೆ ಸಂಬಂಧಪಟ್ಟವರಿಗೆ ಮನವಿ ಪತ್ರ ನೀಡಲಾಗುವುದು ಎಂದು ಕಾರ್ಮಿಕ ಸಂಘಟನೆ ಅಧ್ಯಕ್ಷ ಕೆ.ಮೊಣ್ಣಪ್ಪ ಹೇಳಿದರು. ಸುತ್ತಮುತ್ತಲಿನ ಗ್ರಾಮಗಳ ಸುಮಾರು 290 ಕ್ಕೂ ಹೆಚ್ಚು ಕಾರ್ಮಿಕರು ಧರಣಿಯಲ್ಲಿ…
ಮಡಿಕೇರಿ NEWS DESK ಮೇ 3 : ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಜಂಬೂರು ಗ್ರಾಮದ ಎಫ್ಎಂಸಿ ಲೇ ಔಟ್ ನ ಶ್ರೀ ಮುತ್ತಪ್ಪನ್ ಸೇವಾ ಸಮಿತಿ ವತಿಯಿಂದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ) ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಸಂಜೆ ಮುತ್ತಪ್ಪ ದೇವರ ಮಲೆ ಇಳಿಸಲಾಯಿತು. ನಂತರ ಮುತ್ತಪ್ಪ ದೇವರ ವೆಳ್ಳಾಟಂ (ಕೋಲ) ಹಾಗೂ ರಾತ್ರಿ ಅನ್ನದಾನ ನಡೆಯಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಸಮಿತಿಯ ಅಧ್ಯಕ್ಷ ಎನ್.ಸಿ.ಸುದರ್ಶನ್ ಹಾಗೂ ಸಮಿತಿ ಸದಸ್ಯರು ಹಾಜರಿದ್ದರು.
ಮಡಿಕೇರಿ ಮೇ 3 NEWS DESK : ವಿರಾಜಪೇಟೆ ವ್ಯಾಪ್ತಿಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ತೋಟಗಳಿಗೆ ನುಗ್ಗಿರುವ ಕಾಡಾನೆಗಳು ಅಡಿಕೆ ಗಿಡಗಳನ್ನು ನಾಶ ಪಡಿಸಿರುವ ಘಟನೆ ನಡೆದಿದೆ. ಗ್ರಾಮದ ಬೆಳೆಗಾರ ಚಂದ್ರಶೇಖರ್ ಎಂಬುವವರ ತೋಟಕ್ಕೆ ಶನಿವಾರ ರಾತ್ರಿ ಹತ್ತಕ್ಕೂ ಹೆಚ್ಚಿನ ಕಾಡಾನೆಗಳು ನುಗ್ಗಿ ದಾಂಧಲೆ ನಡೆಸಿವೆ. 50 ಕ್ಕೂ ಅಧಿಕ ಅಡಿಕೆ ಗಿಡಗಳನ್ನು ನಾಶಪಡಿಸಿದ್ದು, ಅಪಾರ ನಷ್ಟ ಉಂಟಾಗಿದೆ. ಕಳೆದ ಐದಾರು ವರ್ಷಗಳಿಂದ ಈ ಭಾಗದಲ್ಲಿ ಕಾಡಾನೆಗಳು ನಿರಂತರವಾಗಿ ತೋಟಗಳಿಗೆ ಲಗ್ಗೆ ಇಟ್ಟು ಬೆಳೆ ನಾಶ ಪಡಿಸುತ್ತಿವೆ. ಕಳೆದ ವರ್ಷವೂ ಕಾಡಾನೆ ದಾಳಿಯಿಂದ ಬೆಳೆ ನಷ್ಟವಾಗಿದ್ದು, ಪರಿಹಾರಕ್ಕೆ ಅರ್ಜಿ ಸಲ್ಲಿಸಿ ಇಲ್ಲಿಯವರೆಗೆ ಯಾವುದೇ ಪರಿಹಾರ ದೊರೆತ್ತಿಲ್ಲ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟಬೇಕು ಮತ್ತು ಬೆಳೆಹಾನಿ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕುಶಾಲನಗರ ಮೇ 3 NEWS DESK : ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಶರಣ ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ಆಹ್ವಾನ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಶ್ರೀಗಳು, ಜಿಲ್ಲೆಯಲ್ಲಿ ನಡೆಯುತ್ತಿರುವ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿದುದು ಶ್ರೀಮಠಕ್ಕೆ ದೊರೆತ ಗೌರವವಾಗಿದೆ. ಶೈಕ್ಷಣಿಕ ಹಾಗೂ ವಾಣಿಜ್ಯ ಕೇಂದ್ರವಾದ ಕುಶಾಲನಗರದಲ್ಲಿ ನಡೆಯುತ್ತಿರುವ ಸಮ್ಮೇಳನ ಸರ್ವರ ಸಹಭಾಗಿತ್ವದ ಕಾರ್ಯಕ್ರಮವಾಗಿ ರೂಪುಗೊಳ್ಳಬೇಕಿದೆ. ಜಿಲ್ಲೆಯೂ ಸೇರಿದಂತೆ ಕುಶಾಲನಗರದ ಗಡಿ ಪ್ರದೇಶಗಳ ಕಲಾಸಕ್ತರು, ಸಾಹಿತ್ಯಾಸಕ್ತರು, ಹಾಗೂ ಶರಣರ ತತ್ವಗಳ ಚಿಂತಕರಿಗೆ ಈ ಸಮ್ಮೇಳನದ ಪ್ರಯೋಜನಗಳು ದೊರಕುವಂತಾಗಬೇಕಿದೆ. ಹನ್ನೆರಡನೇ ಶತಮಾನದ ವಚನಕಾರರು ಸಮ ಸಮಾಜದ ಪರಿಕಲ್ಪನೆಯಿಂದ ಸಾರಿದ ಸಂದೇಶಗಳು ಜನಮಾನಸಕ್ಕೆ ತಲುಪುವಂತಾಗಬೇಕು. ಯಾವುದೇ ವಿವಾದಗಳಿಗೆ ಎಡೆಮಾಡಿಕೊಡದೇ ಸರ್ವರ ಸಹಭಾಗಿತ್ವದ ಸಮ್ಮೇಳನವಾಗಬೇಕೆಂದು ಶಾಂತಮಲ್ಲಿಕಾರ್ಜುನ ಶ್ರೀಗಳು ಆಶಿಸಿದರು. ಈ ಸಂದರ್ಭ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ…
ವಿರಾಜಪೇಟೆ ಮೇ 3 NEWS DESK : ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಅರ್ಥಶಾಸ್ತ್ರ ವಿಭಾಗದ ಪ್ರಾದ್ಯಾಪಕರಾದ ಬೆನೆಡಿಕ್ಟ್ ಆರ್ ಸಲ್ಡಾನ ಅವರು ಸೇವೆಯಿಂದ ವಯೋ ನಿವೃತ್ತರಾಗಿದ್ದು, ಅವರನ್ನು ಕಾವೇರಿ ಕಾಲೇಜು ವಿರಾಜಪೇಟೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಗೋಣಿಕೊಪ್ಪಲು ಕಾವೇರಿ ಕಾಲೇಜು ಹಾಗೂ ವಿರಾಜಪೇಟೆ ಕಾವೇರಿ ಕಾಲೇಜುಗಳಲ್ಲಿ ಅರ್ಥಶಾಸ್ತ್ರ ಪ್ರಾದ್ಯಾಪಕರಾಗಿ ಹಾಗೂ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾಗಿಯು ಸೇವೆಯನ್ನು ಸಲ್ಲಿಸಿದ್ದಾರೆ. ಸುದೀರ್ಘವಾದ 30 ವರ್ಷಗಳ ಪ್ರಾದ್ಯಾಪಕ ಸೇವೆಯ ಜೊತೆಯಲ್ಲಿ ಮಂಗಳೂರು ಹಾಗೂ ಕೊಡಗು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಬಿ.ಓ.ಇ ಆಗಿಯು ಸೇವೆಯನ್ನು ಸಲ್ಲಿಸಿರುತ್ತಾರೆ. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಕೆ.ಜಿ.ವೀಣಾ ನಿವೃತ್ತರಾದ ಬೆನೆಡಿಕ್ಟ್ ಆರ್ ಸಲ್ಡಾನ ರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ಉಪಾಧ್ಯಕ್ಷರಾದ ಕೆ.ಎಂ.ಬೆಳ್ಳಿಯಪ್ಪ ಕಾವೇರಿ ಪಿ ಯು ಕಾಲೇಜಿನ ಪ್ರಾಂಶುಪಾಲೆ ಎಂ.ಕೆ.ಪದ್ಮ, ಐ ಕ್ಯೂ ಎ ಸಿ ಸಂಯೋಜಕ…
ಮಡಿಕೇರಿ ಮೇ 3 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲೆಯಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ವಹಿಸಿಕೊಂಡರು. ಬೆನೆಡಿಕ್ಟ್ ಆರ್ ಸಲ್ಡಾನರ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಗೆ ಆಡಳಿತ ಮಂಡಳಿ ಆದೇಶದ ಮೇರೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ವೀಣಾ ಅವರು ಈ ಹಿಂದೆ ಆಂಗ್ಲ ವಿಭಾಗದ ಉಪನ್ಯಾಸಕರಾಗಿ ಮುಖ್ಯಸ್ಥರಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಓ.ಎಸ್ ಹಾಗೂ ಕೊಡಗು ವಿಶ್ವವಿದ್ಯಾಲಯದ ಬಿ.ಓ.ಇ ಆಗಿ ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ ಕಾವೇರಿ ಕಾಲೇಜಿನ ಐ.ಕ್ಯೂ.ಎ.ಸಿ. ಸಂಯೋಜಕರಾಗಿ ಐದು ವರ್ಷ ಸೇವೆ ಸಲ್ಲಿಸಿದ್ದಾರೆ. ಕೊಡವ ಭಾಷೆಯ ಕವಿತೆಗಳನ್ನು ಆಂಗ್ಲ ಭಾಷೆಗೆ ಭಾಷಾಂತರವನ್ನು ಮಾಡಿದ್ದಾರೆ. ಇವರು ವಿರಾಜಪೇಟೆ ಸಮೀಪದ ನಾಂಗಾಲ ಗ್ರಾಮದ ವಕೀಲರಾದ ಕುಪ್ಪಂಡ ರವೀಂದ್ರ ಅವರ ಪತ್ನಿ.
ಮಡಿಕೇರಿ ಮೇ 3 NEWS DESK : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಆ ದಿಸೆಯಲ್ಲಿ ಗ್ರಾ.ಪಂ ಗಳಿಗೆ ಸರ್ಕಾರ ಹೆಚ್ಚಿನ ಅಧಿಕಾರ ನೀಡಿದ್ದು, ಅದನ್ನು ನಿಯಮಾನುಸಾರ ಬಳಸುವಂತಾಗಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆಯ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ ಅವರು ತಿಳಿಸಿದ್ದಾರೆ. ತಾಲ್ಲೂಕಿನ ಹೊದ್ದೂರು ಗ್ರಾ.ಪಂ ಸಭಾಂಗಣದಲ್ಲಿ 2026-27 ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ತಯಾರಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಗ್ರಾ.ಪಂ ಅಭಿವೃದ್ಧಿಗೆ ಕಾನೂನಿನ ಅಧಿಕಾರ ಚಲಾಯಿಸಬೇಕು. ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು ಎಂದು ಅವರು ನುಡಿದರು. ಪಂಚಾಯತ್ ರಾಜ್ ವ್ಯವಸ್ಥೆ ಬಲಿಷ್ಠವಾಗಿರಬೇಕು. ಆ ಮೂಲಕ ಗ್ರಾಮಗಳ ಅಭಿವೃದ್ಧಿ ಆಗಬೇಕು ಎಂದು ಡಿ.ಆರ್.ಪಾಟೀಲ ಅವರು ಹೇಳಿದರು. ಜನರ ಪ್ರತಿನಿಧಿಗಳು ಜನರೇ ಆಗಿದ್ದಾರೆ. ಆದ್ದರಿಂದ ಸ್ಥಳೀಯವಾಗಿಯೇ ಶಾಲೆ, ಆಸ್ಪತ್ರೆ, ಅಂಗನವಾಡಿ ಮತ್ತಿತರ ಅಗತ್ಯ ಹುದ್ದೆಗಳ ನೇಮಕವೂ ಆಗಬೇಕು ಎಂದು ಸಲಹೆ ಮಾಡಿದರು. ಕಾನೂನಿನ ಅಧಿಕಾರ ಹಸ್ತಾಂತರ ಆಗಬೇಕು. ಗ್ರಾಮ ಸಭೆಯ ನಿರ್ಣಯವೇ ಅಂತಿಮ ಆಗಬೇಕು.…
ಮಡಿಕೇರಿ ಮೇ 3 NEWS DESK : ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಮೇ 5 ರಂದು ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ. 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 29 ಮತ್ತು 30 ರಂದು ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ನಡೆಯಲಿದೆ. ಆ ಸಮ್ಮೇಳನದ ಲಾಂಛನವನ್ನು ಕೂಡ ಈ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ಸಂಸ್ಥಾಪನಾ ದಿನದ ಕುರಿತು ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಬಿ ಬಿ ಶಿವಪ್ಪ ಉಪನ್ಯಾಸ ನೀಡಲಿದ್ದಾರೆ ಸಮ್ಮೇಳನದ ಲಾಂಛನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಬಿಡುಗಡೆಗೊಳಿಸಲಿದ್ದಾರೆ. ಸಂಸ್ಥಾಪನಾ ದಿನದ ಅಂಗವಾಗಿ ಕನ್ನಡ ನಾಡು ನುಡಿ ಗಾಗಿ ಸೇವೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾ ಅಧ್ಯಕ್ಷರಾದ…






