ಚಾಮರಾಜನಗರ ಸೆ.27 : ಕೋಣನಕೆರೆಯ ಸರ್ಕಾರಿ ಗಿರಿಜನ ಆಶ್ರಮ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನೀಡಿದರು. ಮಲೈ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರಕ್ಕೆ ತೆರಳುವ ಮಾರ್ಗದಲ್ಲಿ ಮಾರ್ಗ ಮಧ್ಯೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಊಟದ ಗುಣಮಟ್ಟ, ಗ್ರಂಥಾಲಯ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿದರು.
ಲೇಖಕ: admin
ಮಡಿಕೇರಿ ಸೆ.27 : ಕಾವೇರಿಯ ಉಗಮ ಸ್ಥಾನ ಕೊಡಗು ಜಿಲ್ಲೆಗೆ ವಾಣಿಜ್ಯ ಭೂಪರಿವರ್ತನೆ ಮತ್ತು ನಗರೀಕರಣ ಮಾರಕವಾಗಿದ್ದು, ನಿಯಮ ಬಾಹಿರ ಭೂಪರಿವರ್ತನೆಗಳ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಆದ್ದರಿಂದ ಕೊಡಗಿನಲ್ಲಿ ರಿಯಲ್ ಎಸ್ಟೇಟ್ ಗೆ ಹೂಡಿಕೆ ಮಾಡಿ ಕೈ ಸುಟ್ಟುಕೊಳ್ಳಬೇಡಿ ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಪ್ರಮುಖ ಹಾಗೂ ಕೊಡಗು ವನ್ಯಜೀವಿ ಸಂಘದ ಮಾಜಿ ಅಧ್ಯಕ್ಷ ಕರ್ನಲ್ ಸಿ.ಪಿ.ಮುತ್ತಣ್ಣ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಕಲಹದಲ್ಲಿ ತೊಡಗಿವೆ. ಆದರೆ ಕಾವೇರಿ ನದಿ ಹುಟ್ಟುವ ಕೊಡಗಿನ ಸ್ಥಿತಿಗತಿಯ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಹಾಲಿಗಾಗಿ ಕಿತ್ತಾಟ ನಡೆಯುತ್ತಿದೆ, ಆದರೆ ಹಾಲು ಕೊಡುವ ಹಸುವಿಗೆ ಏನಾಗಿದೆ ಎಂದು ಯಾರೂ ಚಿಂತಿಸುತ್ತಿಲ್ಲ. ವಾಣಿಜ್ಯ ಭೂಪರಿವರ್ತನೆ ಮತ್ತು ನಗರೀಕರಣದಿಂದ ಕಾವೇರಿ ಜಲಮೂಲಕ್ಕೆ ಅಪಾಯ ಎದುರಾಗಿದೆ. ತೋಟ, ಗದ್ದೆಗಳು ನಿಯಮ ಬಾಹಿರವಾಗಿ ಭೂಪರಿವರ್ತನೆಯಾಗುತ್ತಿವೆ. ಹೊರಗಿನವರು ಬಂದು ರೆಸಾರ್ಟ್, ಲೇಔಟ್ ಗಳನ್ನು ಮಾಡಿ ನಗರೀಕರಣಗೊಳಿಸುತ್ತಿದ್ದಾರೆ.…
ನಾಪೋಕ್ಲು ಸೆ.27 : ನಾಪೋಕ್ಲು ನಾಡು ಕೊಡವ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ 733 ಸದಸ್ಯರಿದ್ದು, ಪ್ರಸಕ್ತ ವರ್ಷ ಸಂಘವು ರೂ.3,95,131 ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಅಪ್ಪಾರಂಡ ಸುಧೀರ್ ಅಯ್ಯಪ್ಪ ಹೇಳಿದರು. ನಾಪೋಕ್ಲು ಕೊಡವ ಸಮಾಜದ ಅಪ್ಪಚ್ಚ ಕವಿ ಸಭಾಂಗಣದಲ್ಲಿ 2022-23ನೇ ಸಾಲಿನ ಸಹಕಾರಿಯ 5ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿ, ಸಂಘವು ಉತ್ತಮ ರೀತಿಯಲ್ಲಿ ಸಾಗುತ್ತಿದ್ದು, ಸಂಘದ ಏಳಿಗೆಗಾಗಿ ಸದಸ್ಯರು ಸಹಕರಿಸಬೇಕೆಂದರು. ಸಭೆಯಲ್ಲಿ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರಲಾಯಿತು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಮಂಡೀರ.ಎ. ರಾಜಪ್ಪ ಚoಗಪ್ಪ, ನಿರ್ದೇಶಕರಾದ ಮಾಳೆಯಂಡ ಎ.ಅಯ್ಯಪ್ಪ, ಬೊಳ್ಯಯಂಡ.ಪಿ.ಹರೀಶ್ ಕಾರ್ಯಪ್ಪ, ಮುಕ್ಕಾಟೀರ.ಎಮ್.ವಿನಯ, ಕನ್ನಂಬೀರ.ಸಿ.ತಿಮ್ಮಯ್ಯ, ಕುಂಡ್ಯೋಳ0ಡ.ಸಿ.ಪೂವಯ್ಯ, ಕಾಟುಮಣಿಯಂಡ ಎಮ್.ಉಮೇಶ್, ಚೋಕಿರ.ಎಸ್.ಚಿಣ್ಣಪ್ಪ, ಚೇನಂಡ.ಈ.ಗಿರೀಶ್ ಪೂಣಚ್ಚ , ಮೂವೇರ.ರೇಖಾ ಪ್ರಕಾಶ್, ಬಿದ್ದಂಡ ಉಷಾ ಪೂವಯ್ಯ, ಕೋಟೇರ ನೈಲಾ ಚಂಗಪ್ಪ, ಕುಲ್ಲೇಟ್ಟಿರ.ಜಿ.ಅಜಿತ್ ನಾಣಯ್ಯ, ಬಿದ್ದಾಟಂಡ.ಎ.ರಮೇಶ್ ಚಂಗಪ್ಪ ಹಾಗೂ ಮುಖ್ಯಕಾರ್ಯನಿರ್ವಹಕರಾದ ಎಸ್.ಪಿ.ದೇವಯ್ಯ, ಸಿಬ್ಬಂದಿ ಕೆ.ಜಿ.ಸರಸ್ವತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ವರದಿ : ದುಗ್ಗಳ…
ನಾಪೋಕ್ಲು ಸೆ.27 : ನಾಪೋಕ್ಲುವಿನ ಕೆಪಿಎಸ್ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಕ್ಕಬ್ಬೆ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಫಾಜಿಲಾ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಎತ್ತರ ಜಿಗಿತ ಸ್ಪರ್ಧೆಯಲ್ಲಿ ವಿ.ಎ. ಆಯುಷತ್ ತರ್ಫಿಯ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ಹಾಕಿ ಹಾಗೂ ಬಾಲಕಿಯರ ಹಾಕಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಶಾಲೆಯ ಪರವಾಗಿ ಅಭಿನಂದಿಸಲಾಯಿತು. ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ಪಿ.ಕುಟ್ಟಪ್ಪ, ನಿರ್ದೇಶಕ ಅಂಜಪರವಂಡ ಕುಶಾಲಪ್ಪ, ಮುಖ್ಯ ಶಿಕ್ಷಕ ಡಿ.ಅನಿಲ್ ರಾಜ್, ದೈಹಿಕ ತರಬೇತಿ ಶಿಕ್ಷಕ ಕೆ.ಡಿ.ಬೋಪಣ್ಣ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.27 : ಕಾಡಾನೆ ದಾಳಿಯಿಂದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಂಗ ಮರೂರು ಭದ್ರಕಾಳಿ ದೇವಾಲಯದ ಬಳಿ ನಡೆದಿದೆ. ಅಮ್ಮಂಡ ಸುಬ್ರಮಣಿ (75) ಎಂಬುವವರೆ ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆ ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ವಿರಾಜಪೇಟೆ ಹೊರವಲಯದ ಕಡಂಗ ಮರೂರು ಪ್ರತ್ಯಕ್ಷವಾಗಿರುವ ಕಾಡಾನೆಗಳನ್ನು ಕಾಡಿಗಟ್ಟಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಸೆ.27 : ಮದೆನಾಡು ಬಳಿಯ ಅಶ್ರಫ್ ಎಂಬವರ ಮನೆಯ ಒಳಗೆ ಸೇರಿಕೊಂಡಿದ್ದ ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.
ಚಾಮರಾಜನಗರ ಸೆ.27: ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವರಾದ ಕೆ.ವೆಂಕಟೇಶ್, ಎಚ್.ಸಿ.ಮಹಾದೇವಪ್ಪ ಜೊತೆಗೂಡಿ ಬಂದ ಸಿದ್ದರಾಮಯ್ಯ ಮಾದಪ್ಪನ ಬೆಟ್ಟದಲ್ಲಿ ಬೆಳ್ಳಿ ದಂಡ ಹಿಡಿದು ಬೆಳ್ಳಿ ರಥ ಸೇವೆ ನಡೆಸಿದರು.
ಮಡಿಕೇರಿ ಸೆ.27 : ನಿಗಧಿತ ಅವಧಿಯೊಳಗೆ ಹಳೆಯ ವಿದ್ಯುತ್ ಬಿಲ್ ನ್ನು ಪಾವತಿಸದಿದ್ದಲ್ಲಿ ಅಕ್ಟೋಬರ್ 1ರಿಂದ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ಚೆಸ್ಕಾಂ ಎಚ್ಚರಿಕೆ ನೀಡಿದೆ.
ಮಡಿಕೇರಿ ಸೆ.27 : ಭಾಗಮಂಡಲ ಗ್ರಾ.ಪಂ ವ್ಯಾಪ್ತಿಯ ತಲಕಾವೇರಿ ಭಾಗದಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಿಸುವ ಯೋಜನೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ವೆಂಕಟರಾಜ ಆದೇಶಿಸಿದ್ದಾರೆ. ಕೊಡಗು ಏಕೀಕರಣ ರಂಗದ ಪ್ರಮುಖ ಎ.ಎ.ಪೂವಯ್ಯ ಅವರು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ಕಾಮಗಾರಿ ನಡೆಸದಂತೆ ಸೂಚಿಸಿದ್ದಾರೆ. ಅಲ್ಲದೆ ಯೋಜನೆಗೆ ಸಂಬಂಧಿಸಿದಂತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಮಡಿಕೇರಿ ಸೆ.27 : ಭಾಗಮಂಡಲದ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಜರುಗಲಿರುವ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ 2023” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸೆ.28 ರಂದು ಬೆಳಗ್ಗೆ 10.30 ಗಂಟೆಗೆ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಸೇರಿದ “ಮುಡಿ ಕಟ್ಟಡ”ದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಆದ್ದರಿಂದ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ – 2023” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಆಗಮಿಸಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ತುಲಾ ಸಂಕ್ರಮಣ ಜಾತ್ರೆಯನ್ನು ಯಶಸ್ವಿಯಾಗಲು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಕೋರಿದ್ದಾರೆ.






