ಲೇಖಕ: admin

ಮಡಿಕೇರಿ ಸೆ.27 : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ (ಡಿ.ಎಸ್.ಇ.ಆರ್.ಟಿ) ವತಿಯಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗೆ ಪೋತ್ಸಾಹ ನೀಡುವ ಸಲುವಾಗಿ ಪ್ರೌಢಶಾಲಾ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಡಿ.17 ರಂದು ಎನ್‍ಎಮ್‍ಎಮ್‍ಎಸ್ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯನ್ನು ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾಗುವುದು. ಪರೀಕ್ಷಾ ನೋಂದಣಿಗೆ ನಿಗದಿ ಪಡಿಸಿದ್ದ ಸೆ.30 ರ ದಿನಾಂಕವನ್ನು ಅ.4 ರ ವರೆಗೆ ವಿಸ್ತರಿಸಲಾಗಿದೆ. ಈ ಪರೀಕ್ಷೆಗೆ ತಮ್ಮ ಶಾಲಾ ಮಕ್ಕಳನ್ನು ಆನ್‍ಲೈನ್ ಮೂಲಕ ಅ.4 ರೊಳಗಾಗಿ ನೋಂದಾಯಿಸಲು ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಕ್ರಮ ವಹಿಸಬೇಕು ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಪ್ರಾಂಶುಪಾಲರೂ ಆದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ) ಎಂ.ಚಂದ್ರಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪರೀಕ್ಷೆ ನೋಂದಣಿಗೆ ಈಗಾಗಲೇ ಶಿಕ್ಷಣ ಇಲಾಖೆಯು ನೀಡಿರುವ ಲಿಂಕ್ ಬಳಸಿ ಹೆಚ್ಚಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೋಂದಾಯಿಸಬೇಕು…

Read More

ಮಡಿಕೇರಿ ಸೆ.27 : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರ ರೂ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದಿನಾಂಕ: 07-10-2023 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಸಂಪರ್ಕಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ www.dom.karnataka.gov.in ಅನ್ನು ಸಂಪರ್ಕಿಸಬಹುದು. ಕಚೇರಿ ದೂರವಾಣಿ ಸಂಖ್ಯೆ: 08272-225528/220214 ಹಾಗೂ ಇಲಾಖಾ ವೆಬ್‍ಸೈಟ್ www.dom.karnataka.gov.in ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ  ತಿಳಿಸಿದ್ದಾರೆ.

Read More

ಮಡಿಕೇರಿ ಸೆ.27 : ಒಂದರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‍ಎಸ್‍ಪಿ) ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎನ್‍ಎಸ್‍ಪಿ ಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಎಸ್‍ಎಸ್‍ಪಿ ಪೋರ್ಟಲ್ https://ssp.prematric.karnataka.gov.in ಅಡಿಯಲ್ಲಿ ಅರ್ಜಿ ಸಲ್ಲಿಸುವುದು (ಪ್ರೆಶ್)ನಲ್ಲಿ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214, ಮಾಹಿತಿ ಕೇಂದ್ರ, ಸೋಮವಾರಪೇಟೆ 8548068519, ಮಾಹಿತಿ ಕೇಂದ್ರ, ಪೊನ್ನಂಪೇಟೆ 9900731037 ಮತ್ತು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್‍ಎಸ್‍ಪಿ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://dom.karnataka.gov.in/kodagu/public ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು…

Read More

ಮಡಿಕೇರಿ ಸೆ.26 :  ಲೋಕಾನುಗ್ರಹಿ ಪುಣ್ಯ ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ಅವರ 1498 ನೇಯ ಜನ್ಮ ದಿನವನ್ನು ವಿಶ್ವದಾದ್ಯಂತ ಸೆ.28 ರಂದು ಆಚರಿಸಲಾಗುತ್ತದೆ. ಇದರ ಅಂಗವಾಗಿ ಮಡಿಕೇರಿಯ ಎಂ.ಎಂ.ಮಸೀದಿಯಲ್ಲಿ ಸೆ.27 ರಂದು ಸಂಜೆ 7 ಗಂಟೆಗೆ  ಮೌಲಿದ್ ಪಾರಾಯಣ ಹಾಗೂ ಪ್ರವಚನ ನಡೆಯಲಿದೆ. ಅಲ್ಲದೆ ಸೆ.28 ರಂದು ಬೆಳಿಗ್ಗೆ 8.30 ಕ್ಕೆ ಮಡಿಕೇರಿಯ ಸಂಯುಕ್ತ ಜಮಾ‌ಅತ್ ವತಿಯಿಂದ ಬ್ರಹತ್ ಮೀಲಾದ್ ಜಾಥಾ ವನ್ನು ಹಮ್ಮಿಕೊಳ್ಳಲಾಗಿದೆ. ಮೆರವಣಿಗೆಯು ಗದ್ದಿಗೆಯ ರಾತೀಬ್ ಕೊಟಡಿಯಿಂದ ಹೊರಟು ನಗರದ ಕಾವೇರಿ ಹಾಲ್ ನಲ್ಲಿ ಕೊನೆಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಮಡಿಕೇರಿ ಸೆ.26 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ ಮಡಿಕೇರಿಯಲ್ಲಿ ಆಯುಷ್ಮಾನ್ ದಿವಸ 5ನೇ ವರ್ಷದ ಸಂಭ್ರಮಾಚರಣೆ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ ಅವರು ಮಾತನಾಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ ಮಡಿಕೇರಿಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡುತ್ತಾ ಆಸ್ಪತ್ರೆಗೆ ಬರುವ ಶೇಕಡ 90 ರಷ್ಟು ರೋಗಿಗಳನ್ನು ಈ ಯೋಜನೆಯೊಳಗೆ ಒಳಪಡಿಸಲು ಪ್ರಯತ್ನಿಸಲಾಗುತಿದ್ದು, ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬರುವಾಗ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಕಾರ್ಡ್, ಆಧಾರ್ ಕಾರ್ಡ್, ತಂದಲ್ಲಿ ಯೋಜನೆಯನ್ನು ಶೇ.100 ರಷ್ಟು ಒದಗಿಸಲು ಸಾದ್ಯವಾಗಲಿದ್ದು ಎಂದು ತಿಳಿಸಿದರು ಈಗಾಗಲೇ ರೋಗಿಗಳನ್ನು ರೆಪರಲ್ ಮಾಡುವುದು ಕಡಿಮೆಯಾಗಿದ್ದು ಸಂಸ್ಥೆಯಲ್ಲಿಯೇ ಅತ್ಯಾದುನಿಕ ಉಪಕರಣ ಸೇರಿದಂತೆ ಹೆಚ್ಚಿನ ಸರ್ಜರಿ ಹಾಗೂ ಚಿಕಿತ್ಸೆಗಳು ದೊರೆಯುತ್ತಿದ್ದು ಎಲ್ಲಾ ಸಾರ್ವಜನಿಕರು ಯೋಜನೆಯ ಪ್ರಯೋಜನೆವನ್ನು ಪಡೆದುಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು. ವ್ಯೆದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್ ಗೋಪಾಲ್ ಅವರು…

Read More

ಮಡಿಕೇರಿ ಸೆ.26 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 20ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಸೆ.24 ರಂದು ಸಂಜೆಯಿಂದ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಸೆ.25 ರಂದು ಮುಂಜಾನೆಯಿಂದ ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಸಂಜೆ ವಾರ್ಷಿಕೋತ್ಸವ ಪ್ರಯುಕ್ತ ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿತರಿಸಲಾಯಿತು. ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ ಜರುಗಿತು. ನಂತರ ತೀರ್ಥಪ್ರಸಾದ ವಿನಿಯೋಗ ಹಾಗೂ ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿತ್ತು.

Read More

ಮಡಿಕೇರಿ ಸೆ.26 : ಭಾಗಮಂಡಲ ಗ್ರಾ.ಪಂ ವ್ಯಾಪ್ತಿಯ ತಲಕಾವೇರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಗ್ಲಾಸ್ ಬ್ರಿಡ್ಜ್ ನಿರ್ಮಿಸುವ ಯೋಜನೆಯನ್ನು ರೂಪಿಸಿರುವುದಕ್ಕೆ ಕೊಡಗು ಏಕೀಕರಣ ರಂಗ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಿಸಲು ನೀಡಿರುವ ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಜಿಲ್ಲಾಧಿಕಾರಿ ವೆಂಕಟರಾಜ ಅವರಿಗೆ ಏಕೀಕರಣ ರಂಗದ ಪ್ರಮುಖ ಎ.ಎ.ಪೂವಯ್ಯ ಮತ್ತಿತರರು ಮನವಿ ಸಲ್ಲಿಸಿದರು. ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಭಾಗಮಂಡಲ-ತಲಕಾವೇರಿ ನಡುವೆ ಎರಡು ಗ್ಲಾಸ್ ಬ್ರಿಡ್ಜ್ ನಿರ್ಮಿಸಲು ಉದ್ಯಮಿಗಳಿಗೆ ಅನುಮತಿ ನೀಡಲಾಗಿದೆ. 2020ರ ಆಗಸ್ಟ್ ತಿಂಗಳಿನಲ್ಲಿ ತಲಕಾವೇರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಐವರ ಜೀವಹಾನಿಯಾಗಿದೆ. ಈ ಬಗ್ಗೆ ಜಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ ನಡೆಸಿದ ಅಧ್ಯಯನದಲ್ಲಿ ಈ ಭೂಕುಸಿತಕ್ಕೆ ತಲಕಾವೇರಿಯ ಪರ್ವತ ಸಾಲುಗಳಲ್ಲಿ ಬೃಹತ್ ಯಂತ್ರಗಳನ್ನು ಬಳಸಿ ನಡೆಸಿದ ಭೂ ಅಭಿವೃದ್ಧಿ ಕಾಮಗಾರಿಯೇ ಕಾರಣ ಎಂಬುದು ದೃಢ ಪಟ್ಟಿದೆ. ತಲಕಾವೇರಿ ಜಿಲ್ಲೆಯ ಜನರ ಶ್ರದ್ಧಾಭಕ್ತಿಯ ಕ್ಷೇತ್ರವಾಗಿದೆ. ಈ ಕ್ಷೇತ್ರವನ್ನು ಪ್ರವಾಸಿ ಕೇಂದ್ರವಾಗಿ ಪ್ರಚಾರ…

Read More

ಮಡಿಕೇರಿ ಸೆ.26 : ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾಗಿ ಮುಂಡಂಡ ಸಿ.ನಾಣಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಕುಲ್ಲೇಟೀರ ಅಜಿತ್ ನಾಣಯ್ಯ ಅವರು ಕೂಡ ಆಕಾಂಕ್ಷಿಯಾಗಿದ್ದರು. ಆದರೆ ಯಾವುದೇ ಕಾರಣಕ್ಕು ಚುನಾವಣೆಗೆ ಅವಕಾಶ ನೀಡದೆ ಒಮ್ಮತದಿಂದ ಆಯ್ಕೆ ಪ್ರಕ್ರಿಯೆ ನಡೆಯಬೇಕೆಂದು ಹಿರಿಯರಿಂದ ಸಲಹೆ ಬಂದ ಹಿನ್ನೆಲೆ ಅಜಿತ್ ನಾಣಯ್ಯ ಅವರು ಸ್ಪರ್ಧೆಯಿಂದ ಹಿಂದೆ ಸರಿದರು. ಕಾರ್ಯದರ್ಶಿ ಸ್ಥಾನಕ್ಕೆ ಮೂವರು ಆಕಾಂಕ್ಷಿಗಳಿದ್ದರಾದರೂ ಹೊಂದಾಣಿಕೆ ಸೂತ್ರದ ಮೂಲಕ ಮುಕ್ಕಾಟಿರ ಎಂ.ವಿನಯ್ ಅವರು ಅವಿರೋಧವಾಗಿ ಆಯ್ಕೆಯಾದರು. ಆದರೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಅಜಿತ್ ನಾಣಯ್ಯ ಅವರಿಗೆ ಕಾರ್ಯದರ್ಶಿ ಸ್ಥಾನ ಬಿಟ್ಟುಕೊಡುವ ಮೂಲಕ ವಿನಯ್ ಸೌಹಾರ್ದತೆಯನ್ನು ಮೆರೆದರು. ಒಟ್ಟು 21 ಸ್ಥಾನಗಳಲ್ಲಿ 14 ಮಂದಿ ಅವಿರೋಧವಾಗಿ ಆಯ್ಕೆಯಾದರು, ಏಳು ಸ್ಥಾನಗಳಿಗೆ ಚುನಾವಣೆ ನಡೆಯಿತು. ಮುಂದೆ ನಡೆಯುವ ಆಡಳಿತ ಮಂಡಳಿಯ ಕಾರ್ಯಕಾರಿಣಿ ಸಭೆಯಲ್ಲಿ ಅಜಿತ್ ನಾಣಯ್ಯ ಅವರನ್ನು ಕಾರ್ಯದರ್ಶಿಯನ್ನಾಗಿ ಹಾಗೂ ವಿನಯ್ ಅವರನ್ನು ನಿರ್ದೇಶಕರನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಲು ಚುನಾವಣಾ ಪ್ರಕ್ರಿಯೆಯ ಸಭೆಯು ನಿರ್ಧರಿಸಿತು.

Read More

ಸುಂಟಿಕೊಪ್ಪ ಸೆ.26: ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ 59ನೇ ವರ್ಷದ ಗೌರಿ ಗಣೇಶೋತ್ಸವ ಪ್ರಯುಕ್ತ ಮಕ್ಕಳಿಗೆ ಛದ್ಮವೇಷ, ಭಕ್ತಿಗೀತೆ, ಭಾವಗೀತೆ, ಆಟೋಟ ಸ್ಪರ್ಧೆ ಹಾಗೂ ವಿವಿಧ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಂಜನಾಥಯ್ಯ ಮಿನಾಕ್ಷಮ ಕಲ್ಯಾಣ ಮಂಟಪದಲ್ಲಿ ನಡೆದ ಸ್ಪರ್ಧೆಯಲ್ಲಿ ಮಕ್ಕಳು ಛದ್ಮವೇಷಗಳನ್ನು ಧರಿಸಿ ಗಮನ ಸೆಳೆದರು. ಅಲ್ಲದೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿದರು. ಸಂಜೆ ಶ್ರೀ ರಾಮಮಂದಿರದಲ್ಲಿ ರಂಗಪೂಜೆ ನಡೆಯಿತು. ತಾ.27 ರಂದು ಸಂಜೆ 3 ಗಂಟೆಗೆ ರಾಮಮಂದಿರದಿಂದ ಗಣೇಶ ಮೂರ್ತಿಯನ್ನ ವಿದ್ಯುತ್ ದೀಪಾಲಂಕೃತ ವಾಹನದಲ್ಲಿ ವಾದ್ಯಗೋಷ್ಠಿಯೊಂದಿಗೆ ಮುಖ್ಯ ಬೀದಿಯಲ್ಲಿ ಮೆರವಣಿಗೆ ಮೂಲಕ ತೆರಳಿ ಉಲ್ಲಾಸ್ ಮತ್ತು ಕರುಂಬಯ್ಯ ಕುಟುಂಬಸ್ಥರ ಕೆರೆಯಲ್ಲಿ ವಿಸರ್ಜಿಲಾಗುವುದು.

Read More

ಮಡಿಕೇರಿ ಸೆ.26 : ಕರ್ನಾಟಕ ರಾಜ್ಯ ಎಸ್‍ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಸೆ.28 ರಂದು ಕುಶಾಲನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ಜಯಂತೋತ್ಸವವನ್ನು ಆಚರಿಸಲಾಗುವುದೆಂದು ಸಮಿತಿಯ ಅಧ್ಯಕ್ಷ ಎಂ.ಎಸ್.ಮಹೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರದ ಎಪಿಸಿಎಂ ಸಭಾಂಗಣದ ಜೈ ಭೀಮ್ ಸ್ಮರಣ ವೇದಿಕೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಕೊಡಗು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪುಷ್ಪಾರ್ಚನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಚಾಮರಾಜನಗರದ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಶ್ರಿ ಬಂತೇಜಿ ಬೋಧಿದತ್ತತೇರಾ ದಿವ್ಯ ಸಾನಿಧ್ಯ ವಹಿಸಲಿದ್ದು, ಪ್ರಧಾನ ಭಾಷಣಕಾರರಾಗಿ ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ್ ಪಾಲ್ಗೊಳ್ಳಲಿದ್ದಾರೆ. ಸಭಾ ಗೌರವಾಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಎಸ್‍ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ…

Read More