ಲೇಖಕ: admin

ಸೋಮವಾರಪೇಟೆ ಆ.22 : ಸಣ್ಣ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡದಿದ್ದರೆ, ಹೋರಾಟ ರೂಪಿಸಲಾಗುವುದು ಎಂದು ರಾಜ್ಯ ರೈತಸಂಘ ಎಚ್ಚರಿಕೆ ನೀಡಿದೆ. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್, ಕಾಫಿ ಬೆಳೆಗಾರರ 10 ಎಚ್.ಪಿ.ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡುವುದನ್ನು ಸರ್ಕಾರ ತಕ್ಷಣವೇ ಕಾನೂನುಬದ್ಧಗೊಳಿಸಬೇಕು. ರೈತಸಂಘದಿಂದ ನಿರಂತರ ಪ್ರತಿಭಟನೆಯ ಹಿನ್ನೆಲೆ ಹಿಂದಿನ ಬಿಜೆಪಿ ಸರ್ಕಾರ ಕೆಲವು ಮಾನದಂಡಗಳನ್ನು ರೂಪಿಸಿ ಉಚಿತ ವಿದ್ಯುತ್ ನೀಡಲು ಮುಂದಾಗಿತ್ತು. ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಕಳೆದ ಅಧಿವೇಶನದಲ್ಲಿ ಉಚಿತ ವಿದ್ಯುತ್ ನೀಡುವ ಬಗ್ಗೆ ಚರ್ಚೆಯೇ ನಡೆಸಿಲ್ಲ ಎಂದು  ಬೇಸರ ವ್ಯಕ್ತಪಡಿಸಿದರು. ವಿರಾಜಪೇಟೆ ಶಾಸಕರ ಚುನಾವಣಾ ಪ್ರಣಾಳಿಕೆಯಲ್ಲೂ ಉಚಿತ ವಿದ್ಯುತ್ ನೀಡುವ ಭರವಸೆ ನೀಡಲಾಗಿತ್ತು. ಆದರೆ ಯಾವ ಶಾಸಕರು ಅಧಿವೇಶನದಲ್ಲಿ ಕಾಫಿ ಬೆಳೆಗಾರರ ಪರ ಮಾತನಾಡಿಲ್ಲ. ಅಕಾಲಿಕ ಮಳೆಯಿಂದ ಕಾಫಿ ಫಸಲು ಹಾನಿಯಾಗುತ್ತಿದ್ದು, ಕಾಫಿ ತೋಟಗಳು ರೋಗಪೀಡಿತವಾಗಿವೆ. ಬೆಳೆಗಾರರು ಸಾಲಗಾರರಾಗಿದ್ದಾರೆ. ನಿಗದಿತ ಸಮಯದಲ್ಲಿ ಹೂ ಮಳೆ ಬೀಳುತ್ತಿಲ್ಲ. ರಾಜ್ಯದಲ್ಲಿ ಎಲ್ಲಾ ಬೆಳೆಗಳಿಗೆ ನೀಡುವಂತೆ ಕಾಫಿಗೂ ಉಚಿತ ವಿದ್ಯುತ್…

Read More

ಸೋಮವಾರಪೇಟೆ ಆ.22 : ಕುಸೂಬೂರು ಗ್ರಾಮದ ಹಳ್ಳದಿಣ್ಣೆ ನಿವಾಸಿ ಪಜ್ಜೆಡ್ಕ ಮನೆ ಎಚ್.ಒ. ವಸಂತಕುಮಾರ್ (55) ಅನಾರೋಗ್ಯದಿಂದ ನಿಧನರಾದರು. ಮೃತರ ಅಂತ್ಯಕ್ರಿಯೆ ಸ್ವ ಗ್ರಾಮದಲ್ಲಿ ನೆರವೇರಿತು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.

Read More

ಸೋಮವಾರಪೇಟೆ ಆ.22 : ಐಗೂರು ವಿವಿದೋದ್ಧೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ 2022-23ನೇ ಸಾಲಿನಲ್ಲಿ 87.23 ಲಕ್ಷ ರೂ, ಲಾಭಗಳಿಸಿದ್ದು, ಸದಸ್ಯರಿಗೆ ಶೇ. 20 ಲಾಭಾಂಶ ನೀಡಲು ಮಹಾಸಭೆಯಲ್ಲಿ ತೀರ್ಮಾನಿಸಿದೆ. ಸಂಘದ ಸಭಾಂಗಣದಲ್ಲಿ ಅಧ್ಯಕ್ಷ ಡಿ.ಎಚ್.ವಿಶ್ವನಾಥರಾಜೇ ಅರಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಸಂಘದಲ್ಲಿ ಒಟ್ಟು 1641 ಹಾಲಿ ಸದಸ್ಯರಿದ್ದು ಇದ್ದು, ಸದಸ್ಯರ 2.14 ಕೋಟಿ ರೂ., ಪಾಲು ಬಂಡವಾಳವಿರುತ್ತದೆ. ಪ್ರಸಕ್ತ ಸಾಲಿನಲ್ಲಿ 130.88 ಕೋಟಿ ರೂ. ವಹಿವಾಟು ನಡೆಸಲಾಗಿದ್ದು, ಲಾಭ ಗಳಿಸಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವ್ಯವಹಾರ ಮಾಡುವ ಮೂಲಕ ಸದಸ್ಯರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು. ಸದಸ್ಯರಿಗೆ ಕೆ.ಸಿ.ಸಿ ಸಾಲ, ಸ್ವ ಸಹಾಯ ಗುಂಪು ಸಾಲ, ಜಾಮೀನು ಸಾಲ, ಆಭರಣ ಸಾಲ, ಗೊಬ್ಬರ ಸಾಲ ಒಟ್ಟು 25.49 ಕೋಟಿ ರೂ, ನೀಡಲಾಗಿದೆ. 11.73 ಕೋಟಿ ರೂ.ಗಳಷ್ಟು ಠೇವಣಿ ಇರುತ್ತದೆ. ಅಲ್ಲದೇ ಗೊಬ್ಬರ ವ್ಯಾಪಾರ ಹಾಗೂ ಮದು ್ದ ಗುಂಡು ವ್ಯಾಪಾರವನ್ನು…

Read More

ಸುಂಟಿಕೊಪ್ಪ, ಆ.22 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ ಮತ್ತು ಶ್ತೀ ಮುತ್ತಪ್ಪ ದೇವಾಲಯಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಿಸಲಾಯಿತು. ದೇವಾಲಯದ ಮುಖ್ಯ ಅರ್ಚಕ ಮಂಜುನಾಥ ಉಡುಪ ಮತ್ತು ಹಿರಿಯ ಅರ್ಚಕ ಹಾ.ಮಾ.ಗಣೇಶ ಶರ್ಮಾ  ನೇತೃತ್ವದಲ್ಲಿ ಕುಂಕುಮ, ಹಾಲು, ಎಳೆನೀರು ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ನಂತರ ನಾಗ ದೇವರುಗೆ ಹೂವಿನ ಅಲಂಕಾರ,  ಮಹಾಪೂಜೆ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು.

Read More

ಮಡಿಕೇರಿ ಆ.22 :  ಮಡಿಕೇರಿ ನಗರದಲ್ಲಿರುವ ಕೊಡಗು ವೈದ್ಯಕೀಯ ಕಾಲೇಜ್ ನ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕ, ನೆಲ್ಲಿಹುದಿಕೇರಿ ನಿವಾಸಿ ಸಿಜಿಲ್ (25) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಆರೋಪದಡಿ ಮಡಿಕೇರಿಯ ಮೂವರು ಯುವಕರ  ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವೈದ್ಯಕೀಯ ಕಾಲೇಜ್ ನ ಹಾಸ್ಟೆಲ್ ನಲ್ಲಿ ಭದ್ರತೆ ಲೋಪದ ಬಗ್ಗೆ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿ ಆಡಳಿತ ವ್ಯವಸ್ಥೆಯ ಗಮನ ಸೆಳೆದಿದ್ದರು. ಪುಂಡರು ಕಾಲೇಜು ಆವರಣಕ್ಕೆ ಬಂದು ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಕಾಲೇಜ್ ಗೆ ಸೂಕ್ತ ಭದ್ರತೆಯ ಗೇಟ್, ಸಿಸಿ ಕ್ಯಾಮರಾ ಮತ್ತು ವಿದ್ಯುತ್ ವ್ಯವಸ್ಥೆ ಇಲ್ಲವೆಂದು ಟೀಕಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತ್ವರಿತ ಕ್ರಮಕ್ಕೆ ಪೊಲೀಸರಿಗೆ ಮಾರ್ಗದರ್ಶನ ನೀಡಿದ್ದರು. ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು…

Read More

ಮಡಿಕೇರಿ ಆ.22 :  ಕೊಡವ ಸ್ಪೋರ್ಟ್ಸ್  ಅಸೋಸಿಯೇಷನ್ ವತಿಯಿಂದ  ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಲಾಯಿತು. ಕೊಡುವ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ  ಕುಟ್ಟಂಡ ಕುಟ್ಟಪ್ಪ  ಹಾಗೂ ಒಡಿಯಂಡ ಮಾಚಯ್ಯ, ಚಕ್ಕೆರ ಕಾರ್ಯಪ್ಪ, ಮುಕ್ಕಾಟಿರ ದೀಪಕ್ ಹಾಗೂ ಸಮಿತಿ ಸದಸ್ಯರು ಹಾಜರಾಗಿದ್ದರು.

Read More

ನಾಪೋಕ್ಲು ಆ.22 : ನಾಪೋಕ್ಲು – ಪಾರಾಣೆ ಮುಖ್ಯ ರಸ್ತೆಯ ಕೈಕಾಡು ಎಂಬಲ್ಲಿ ರಸ್ತೆಯ ಸಮೀಪದಲ್ಲಿರುವ ನಿವೃತ್ತ ಸೈನಿಕ ನಾಯಕಂಡ ಬೋಪಣ್ಣ ಎಂಬವರ ಮನೆಯ ಸಮೀಪದ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು, ಅಪಾಯ ತಂದೊಡ್ಡುವ ಮುನ್ನ ವಿದ್ಯುತ್ ಕಂಬವನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ. ಬಾಗಿರುವ ಕಂಬ ಮನೆಯ ಅಂಗಳಕ್ಕೆ ಮುರಿದು ಬೀಳುವ ಸ್ಥಿತಿಯಲ್ಲಿದ್ದು. ಈ ಬಗ್ಗೆ ವಿದ್ಯುತ್ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಇಲಾಖೆ ಸಿಬ್ಬಂದಿ ಸ್ಪಂದಿಸಿಲ್ಲ ಎಂದು ಬೋಪಣ್ಣ ಅಳಲು ತೋಡಿಕೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಆ.22 :  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ವತಿಯಿಂದ ಸಣ್ಣ ಕಥೆಗಳ ಗೌರಮ್ಮ ಕಥಾ ಸ್ಪರ್ಧೆಯು  ಆ.24 ರಂದು  10.30 ಗಂಟೆಗೆ ಮಡಿಕೇರಿಯ ಸರಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಥಾಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಕಥ ರಚನೆ ಮಾಡುವ ಕುರಿತು ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದು,  ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ನಡೆಸಲಿದ್ದಾರೆ. ಸಣ್ಣ ಕಥೆಗಳ ರಚನಾಕ್ರಮದ ಕುರಿತು ಜಿಲ್ಲೆಯ ಹಿರಿಯ ಸಾಹಿತಿ ಗಿರೀಶ್ ಕಿಗ್ಗಾಲು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾಭಿವೃಧ್ಧಿ ಸಮಿತಿ ಅಧ್ಯಕ್ಷ ಆರ್.ಪಿ. ಚಂದ್ರಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಪ್ರಭಾರ ಉಪಪ್ರಾಂಶುಪಾಲರು ಕೆ.ವಿ.ಶಶಿಕಲಾ, ನಿವೃತ್ತ ಉಪಪ್ರಾಂಶುಪಾಲರಾದ  ಪಿ.ಕೆ. ನಳಿನಿ ಭಾಗವಹಿಸಲಿದ್ದಾರೆ. ನಂತರ ಕೊಡಗಿನ ಪ್ರೌಡಶಾಲಾ ಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಕುರಿತು ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ…

Read More

ನಾಪೋಕ್ಲು ಆ.22 : ನಾಪೋಕ್ಲುವಿನ ವಿವಿಧೆಡೆ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಕಕ್ಕಬೆಯ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯ, ಕೂರುಳಿ ಸುಭಾಷ್ ನಗರ ಹಾಗೂ ಬಲ್ಲಮಾವಟಿಯ ಶ್ರೀ ಭಗವತಿ ದೇವಾಲಯಗಳಲ್ಲಿ ನಾಗರ ಪಂಚಮಿಯನ್ನು ಆಚರಿಸಲಾಯಿತು. ಪಾಡಿ ಶ್ರೀ ಇಗ್ಗುತಪ್ಪದೇವಾಲಯದಲ್ಲಿ ಅರ್ಚಕ ಜಗದೀಶ್ ಭಟ್ ದೇವಾಲಯದ ನಾಗನಕಟ್ಟೆಯಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಭಾಗವಹಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು. ಬಳಿಕ ದೇವಾಲಯದಲ್ಲಿ ವಿಶೇಷ ಮಹಾಪೂಜೆ ಅನ್ನದಾನ ನೆರವೇರಿತು. ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಅರ್ಚಕ ದೇವಿ ಪ್ರಸಾದ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ದೇವಾಲಯದಲ್ಲಿ ನಾಗನ ಕಲ್ಲಿಗೆ ಹಾಲು ,ಎಳೆ ನೀರು ಅಭಿಷೇಕ ಸೇರಿದಂತೆ ಹಣ್ಣು ಕಾಯಿ ಪೂಜೆಯನ್ನು ನೆರವೇರಿಸಿ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಿದರು. ಕೂರುಳಿ ಸುಭಾಷ್ ನಗರದಲ್ಲಿ ಶ್ರೀ ಭಗವತಿ ದೇವಾಲಯದ ಅರ್ಚಕ ಹರೀಶ್ ಭಟ್ ನಾಗನಕಟ್ಟೆಯಲ್ಲಿ ನಾಗನ ಕಲ್ಲಿಗೆ ಪಂಚಾಮೃತ ಅಭಿಷೇಕ ಮಂಗಳಾರತಿ ಮಹಾಪೂಜೆಯನ್ನು ನೆರವೇರಿಸಿದರು. ಈ…

Read More

ಮಡಿಕೇರಿ ಆ.21 : ನಗರದಂಚಿನಲ್ಲಿರುವ ಕೊಡಗು ವೈದ್ಯಕೀಯ ಕಾಲೇಜ್ ನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವೈದ್ಯಕೀಯ ಕಾಲೇಜು ಆವರಣದಲ್ಲಿ ಕಳೆದ ಹಲವು ತಿಂಗಳಿನಿಂದ ಪುಂಡರು ಓಡಾಡುತ್ತಿದ್ದಾರೆ. ವಿದ್ಯಾರ್ಥಿನಿಯರ ವಸತಿ ನಿಲಯದ ಬಳಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಕಾಲೇಜಿಗೆ ಕನಿಷ್ಟ ಭದ್ರತಾ ದೃಷ್ಟಿಯಿಂದ ಮುಖ್ಯ ದ್ವಾರವೂ ಇಲ್ಲ, ಸಿಸಿ ಕ್ಯಾಮರವೂ ಗುಣಮಟ್ಟದಲ್ಲಿಲ್ಲ, ಸೂಕ್ತ ರಕ್ಷಣೆೆಯೂ ಇಲ್ಲವೆಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ತೀವ್ರ ಆತಂಕ ವ್ಯಕ್ತಪಡಿಸಿದರು. ಪುಂಡರ ಹಾವಳಿಯ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ಸಲ್ಲಿಸಿ, ಸೂಕ್ತ ರಕ್ಷಣೆ ಒದಗಿಸುವಂತೆ ಮನವಿ ಮಾಡಲಾಗಿತ್ತು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ, ಪುಂಡರ ಹಾವಳಿ ಮುಂದುವರೆದಿದೆ. ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಸಿಸಿಟಿವಿ ಇದೆ. ಕ್ಯಾಂಪಸ್‌ನಲ್ಲಿ ಉರಿಯದ ಬೀದಿ ದೀಪಗಳಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ವೈದ್ಯಕೀಯ ಕಾಲೇಜಿನ ಸುಮಾರು ಆರು ನೂರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಕಾಲೇಜಿನ ಡೀನ್ ಕಾರ್ಯಪ್ಪ…

Read More