ಮಡಿಕೇರಿ ಜು.25 : ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಮಳೆಹಾನಿಗೆ ಸಂಬಂಧಿಸಿದಂತೆ ಶಾಸಕರು, ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯಿಂದ ವರದಿ ಪಡೆದುಕೊಂಡು ಸರ್ಕಾರ ಸೂಕ್ತ ಪರಿಹಾರವನ್ನು ಸೂಚಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಭರವಸೆ ನೀಡಿದ್ದಾರೆ. ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ನಾಳೆ (ಜು.26) ಮುಖ್ಯಮಂತ್ರಿಗಳು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ, ಜಿ.ಪಂ. ಸಿಇಓ, ಉಸ್ತುವಾರಿ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಳೆ, ಪ್ರವಾಹ ಹಾನಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಗುರುವಾರ ಸಚಿವ ಸಂಪುಟದ ಸಭೆಯೂ ನಡೆಯಲಿದೆ. ಜಿಲ್ಲೆಯ ಮಾಹಿತಿಯನ್ನು ಕಲೆ ಹಾಕಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಮಳೆಯಿಂದ ಉಂಟಾಗುವ ವಿಕೋಪಕ್ಕೆ ಶಾಶ್ವತ ಪರಿಹಾರದ ಬಗ್ಗೆಯೂ ತಜ್ಞರ ಸಮಿತಿ ಸೂಕ್ತ ಪರಿಹಾರೋಪಾಯದ ವರದಿ ನೀಡಲಿದೆ. ಈ ವರದಿಯಾನುಸಾರ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ. ಕುಶಾಲನಗರದ ಮಳೆಹಾನಿ ಪೀಡಿತ ಬಡಾವಣೆಗಳ ನಾಗರಿಕರು, ಜಿಲ್ಲೆಯ ಕಾಫಿ ಬೆಳೆಗಾರರು ಮಳೆಯಿಂದ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ…
ಲೇಖಕ: admin
ಮಡಿಕೇರಿ ಜು.25 : ನಾಪೋಕ್ಲು ವ್ಯಾಪ್ತಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದೆ. ಮೂರ್ನಾಡು ನಾಪೋಕ್ಲು, ಚೆರಿಯ ಪರಂಬು-ನಾಪೋಕ್ಲು, ಭಾಗಮಂಡಲ-ನಾಪೋಕ್ಲು ನಡುವಿನ ಸಂಪರ್ಕ ಕಡಿತಗೊಂಡಿದೆ. ಮಳೆ ಗಾಳಿಯಿಂದಾಗಿ ವಿವಿಧಡೆ ಮರಗಳು ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ನಿರಂತರ ಮಳೆ ಬಿರುಸಿನಿಂದ ಸುರಿಯುತ್ತಿದ್ದು, ಜೀವ ನದಿ ಕಾವೇರಿ ಪ್ರವಾಹ ತುಂಬಿ ಬಹುತೇಕ ಭಾಗಗಳಲ್ಲಿ ಹಳ್ಳ, ಕೊಳ್ಳಗಳು ಭರ್ತಿಯಾಗಿದೆ. ಕಾವೇರಿ ನದಿತೀರದ ಹಲವು ಗದ್ದೆಗಳು ಜಲಾವೃತವಾಗಿವೆ. ನಾಪೋಕ್ಲು- ಕೊಟ್ಟಮುಡಿ ಮಡಿಕೇರಿ ರಸ್ತೆಯಲ್ಲಿ ಕಾವೇರಿ ನದಿ ಪ್ರವಾಹ ಬಂದು ಸಂಚಾರ ಸ್ಥಗಿತಗೊಂಡಿದೆ. ಚೆರಿಯ ಪರಂಬು ಕಲ್ಲುಮೊಟ್ಟೆ ರಸ್ತೆಯಲ್ಲಿ ಪ್ರವಾಹದ ಮಟ್ಟ ಹೆಚ್ಚಳವಾಗಿ ಮನೆಗಳಿಗೆ ನೀರು ನುಗ್ಗುತ್ತಿದೆ.ಚೆರಿಯಪರಂಬು ಗ್ರಾಮದ ಅಲವು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಮಂಗಳವಾರವು ವರುಣನ ಆರ್ಭಟ ಮುಂದುವರೆದಿದ್ದು ಪ್ರವಾಹದ ಮಟ್ಟ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ.ಚೆರಿಯಪರಂಬು ಕಾವೇರಿ ನದಿ ದಂಡೆಯಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಸಚಿವರ ಭೇಟಿ ರದ್ದು :: …
ಮಡಿಕೇರಿ ಜು.25 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 19 ಪತ್ರಕರ್ತರು ಸೇರಿದ್ದಂತೆ ಒಟ್ಟು 50 ಜನ ರಕ್ತದಾನ ಮಾಡಿದರು. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹುಣಸೂರಿನ ಕಾವೇರಿ ಆಸ್ಪತ್ರೆ, ಕೊಡಗು ಹಿಂದೂ ಮಲಯಾಳಿ ಸಮಾಜ ಪಾಲಿಬೆಟ್ಟ ಉಪಸಮಿತಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರ, ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರ ಹಾಗೂ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ವಿವಿಧ ಸಂಘ- ಸಂಸ್ಥೆಗಳ ಸಹಯೋಗ ದೊಂದಿಗೆ ಪಾಲಿಬೆಟ್ಟದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಪಾಲಿಬೆಟ್ಟ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಅಜ್ಜಿನಿಕಂಡ ಶ್ಯಾಮ್‍ಚಂದ್ರ, ದಾನಗಳ ಪೈಕಿ ರಕ್ತದಾನಕ್ಕೆ ಪ್ರಾಮುಖ್ಯತೆ ಹೆಚ್ಚಿದೆ. ರಕ್ತದಾನ ಶಿಬಿರ ಆಯೋಜಿಸಲು…
ಮಡಿಕೇರಿ ಜು.25 : ಬೆಟ್ಟಗೇರಿಯ ಓಂ ಯುವಕ ಸಂಘದ ಕ್ರೀಡಾ ಸಮಿತಿ ವತಿಯಿಂದ ಜು.29 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ “ಹಿಂದು ಕಪ್” ನಡೆಯಲಿದೆ. ಅಂದು ಬೆಳಿಗ್ಗೆ 8.30ಕ್ಕೆ ಅರ್ವತ್ತೋಕ್ಲುವಿನ (ಅಪ್ಪಂಗಳ) ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ಕೆಸರುಗದ್ದೆ ಹಗ್ಗಜಗ್ಗಾಟ, ಕ್ರಿಕೆಟ್, ರಿಲೆ, ವಯೋಮಿತಿಯ ಓಟಗಳು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ತಿಳಿಸಿದ್ದಾರೆ.
ಬೆಂಗಳೂರು ಜು.25 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ, ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಅರ್ಜಿ ಸಲ್ಲಿಕೆಗಾಗಿ ಯಾರಾದರೂ ಹಣ ನೀಡುವಂತೆ ಒತ್ತಾಯಿಸಿದಲ್ಲಿ ಅಥವಾ ಹಣ ಪಡೆದ ಬಗ್ಗೆ ದೂರುಗಳು ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲು ಮಾಡಲಾಗುವುದು. ಮಧ್ಯವರ್ತಿಗಳ ಹಾವಳಿಯಿಲ್ಲದೆ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪಿಸಬೇಕು, ಸರ್ಕಾರದ ಯೋಜನೆಗಳ ಗರಿಷ್ಠ ಲಾಭ ಫಲಾನುಭವಿಗಳಿಗೆ ಸಿಗಬೇಕು ಎಂಬುದು ನಮ್ಮ ಆಶಯ ಎಂದರು.
ಮಡಿಕೇರಿ ಜು.25 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜು ಹಾಗೂ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಮಂಗಳವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದರು. ಭಾಗಮಂಡಲ, ಬೆಂಗೂರು, ಚೆರಂಬಾಣೆ ಮತ್ತಿತರ ಪ್ರದೇಶಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು. ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್‍ರಾಜಾ ಹಾಗೂ ಇತರ ಅಧಿಕಾರಿಗಳು ಇದ್ದರು.
ನಾಪೋಕ್ಲು ಜು.25 : ನಾಪೋಕ್ಲು ವ್ಯಾಪ್ತಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದ ಸಮೀಪದ ಬಲಮುರಿ ಹಾಗೂ ಕಕ್ಕಬ್ಬೆ ನಾಲಡಿ ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿ ನಷ್ಟ ಉಂಟಾಗಿದೆ. ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯ ನಾಲಡಿ ಗ್ರಾಮದ ನಿವಾಸಿ ಕೆ.ಎಸ್. ಪೂವಣ್ಣ ಎಂಬುವವರ ಮನೆಯ ಮೇಲ್ಚಾವಣಿಯ ಹೆಂಚು ಹಾಗೂ ಶೀಟ್ ಗಳು ಬಾರಿ ಗಾಳಿ ಮಳೆಗೆ ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ. ಅದರಂತೆ ಬಲಮುರಿ ಗ್ರಾಮದ ನಿವಾಸಿ ಈರ ಎಂಬುವವರ ಮನೆಯ ಮೇಲ್ಚಾವಣಿಯ ಶೀಟ್ ಗಳು ಗಾಳಿ ಮಳೆಗೆ ಹಾರಿ ಹೋಗಿದ್ದು, ನಷ್ಟಉಂಟಾಗಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ :ಝಕರಿಯ ನಾಪೋಕ್ಲು
ಕಡಂಗ ಜು.25 : ಸಿದ್ದಾಪುರ ವರಕ್ಕಲ್ ಸಮಸ್ತ ಭವನದಲ್ಲಿ ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಡೆದ ಮುಹರಂ ಸಂಗಮ ಹಾಗೂ ಹಿಜರಿಯ ಸಂದೇಶ ಕಾರ್ಯಕ್ರಮದಲ್ಲಿ ನೂತನ ಎಸ್ ವೈ ಎಸ್ ಆಮಿಲ ಕೊಡಗು ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಒಟ್ಟು 70 ಸದಸ್ಯರನ್ನು ಒಳಗೊಂಡ ಆಮಿಲ ಸಮಿತಿಗೆ 21 ಕಾರ್ಯನಿರ್ವಾಹಕ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಹಾರಿಸ್ , ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ , ಜಿಲ್ಲಾ ವೀಕ್ಷಕರಾಗಿ ಮುಹಮ್ಮದ್ ಹಾಜಿ, ಕೋಶಾಧಿಕಾರಿಯಾಗಿ ಫ್ಯಾಶನ್ ಅಬ್ದುಲ್ ರಹ್ಮಾನ್ , ಉಪಾಧ್ಯಕ್ಷರುಗಳಾಗಿ ಅಬ್ದುಲ್ ರಹ್ಮಾನ್ ಕೊಡ್ಲಿಪೇಟೆ, ಸಯ್ಯದ್ ಸಲಾಂ ತಂಙಳ್ , ಸಹ ಕಾರ್ಯದರ್ಶಿಗಳಾಗಿ ರಝಾಕ್ , ಹನೀಫ್ ನೇಮಕಗೊಂಡರು. ಸದಸ್ಯರುಗಳಾಗಿ ಎಂ.ಸಿ.ಅಶ್ರಫ್ ಮೌಲವಿ, ಹಾಫಿಳ್ ಹಾರಿಸ್ ಮುಸ್ಲಿಯಾರ್ , ಮುಹಮ್ಮದ್ ಅಝ್ಹರಿ, ಸುಲೈಮಾನ್ ಸಿದ್ದಾಪುರ, ರಶೀದ್ , ಶರೀಫ್ ಶನಿವಾರಸಂತೆ, ಮಸೂದ್ ಸಿದ್ದಾಪುರ, ಜಂಶೀದ್ ಕಲ್ಲುಬಾಣೆ, ಅಶ್ರಫ್ , ಇಬ್ರಾಹಿಂ , ಸ್ವಾದಿಕ್ , ಸಲಾಂ ಹಾಗೂ…
ಸೋಮವಾರಪೇಟೆ ಜು.25 : ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಸೋಮವಾರಪೇಟೆಯ ಸಾಕ್ಷಿ ಸಭಾಂಗಣದಲ್ಲಿ ನೂತನ ಸಾಲಿನ ಅಧ್ಯಕ್ಷೆ ಸಂಧ್ಯಾ ಕೃಷ್ಣಪ್ಪ ಹಾಗೂ ಕಾರ್ಯದರ್ಶಿ ತನ್ಮಯಿ ಪ್ರವೀಣ್, ನಿಕಟಪೂರ್ವ ಜಿಲ್ಲಾ ಪ್ರಾಂತಪಾಲಕರಾದ ಡಾ. ಸಾರಿಕ ಪ್ರಸಾದ್ ಪ್ರಮಾಣವಚನ ಬೋಧಿಸಿದರು. ಪ್ರಪಂಚದಲ್ಲಿ ಅತಿ ದೊಡ್ಡ ಮಹಿಳಾ ಸಂಘಟನೆಯಾಗಿ ಇನ್ನರ್ ವೀಲ್ ಗುರುತಿಸಿಕೊಂಡಿದ್ದು, ಸೇವೆ ಮಾಡುವ ಮನಸ್ಸು ಇರುವವರು ಎಲ್ಲರೂ ಇದರಲ್ಲಿ ಸದಸ್ಯತ್ವ ಪಡೆಯಲು ಅವಕಾಶ ಇದೆ ಎಂದರು. ಅಧ್ಯಕ್ಷೆ ಸಂಧ್ಯಾ ಕೃಷ್ಣಪ್ಪ ಮಾತನಾಡಿ, ಮಹಿಳೆಯರ ಸಂಘಟನೆ, ಸೇವಾ ಮನೋಭಾವ ಮತ್ತು ಅವರಲ್ಲಿನ ಪ್ರತಿಭೆ ಗುರುತಿಸಿ ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಕೆಲಸ ಇನ್ನರ್ ವೀಲ್ ಕ್ಲಬ್ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರಕ್ತದಾನ ಮತ್ತು ನೇತ್ರದಾನ ನೋಂದಣಿಯಂತಹ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ವೇದಿಕೆಯಲ್ಲಿ ಜಿಲ್ಲಾ ಸಂಪಾದಕಿ ಉಮಾ ಮಹೇಶ್, ಮಾಜಿ ಅಧ್ಯಕ್ಷೆ ಪ್ರೇಮ ಹೃಷಿಕೇಶ್ ಇದ್ದರು. ಇದೇ ಸಂದರ್ಭ ನೂತನ ಸಾಲಿನ ಆಡಳಿತ ಮಂಡಳಿಯ…
ಮಡಿಕೇರಿ ಜು.25 : ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ಯೋಗಖಾತ್ರಿ ಯೋಜನೆಯ ಫಲಾನುಭವಿಗಳಿಗೆ ಅರಣ್ಯ ಇಲಾಖೆಯ ವತಿಯಿಂದ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಈ ಸಂದರ್ಭ ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಗಣೇಶ್, ಸದಸ್ಯರಾದ ನವೀನ್ ಅಜ್ಜಳ್ಳಿ, ಸಿ.ಈ.ವೆಂಕಟೇಶ್ ಪಿಡಿಒ ಲಿಖಿತ ಇದ್ದರು.






