ಲೇಖಕ: admin

ಮಡಿಕೇರಿ ಜು.25 :  ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಹೇಳಿದರು. ಕೊಂಡಂಗೇರಿ ವಲಯ ಕಾಂಗ್ರೆಸ್ ವತಿಯಿಂದ ಶಾದಿಮಲ್ ನಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿರಾಜಪೇಟೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಮೊದಲ ಗುರಿ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಯನ್ನು ಎಲ್ಲರೂ ಬಳಸಿ, ಸರ್ಕಾರದ ಯೋಜನೆಯ ಲಾಭವನ್ನು ಪಡೆಯಿರಿ. ಎಲ್ಲರೂ ಸಾಮಾಜಿಕ ಭದ್ರತೆ ಹಾಗೂ ಸೌಹಾರ್ದತೆಯಿಂದ ಪರಸ್ಪರ ಅನ್ಯೋನ್ಯತೆಯಿಂದ ಬದುಕಬೇಕು. ಕೊಂಡಂಗೇರಿ ಗ್ರಾಮಕ್ಕೆ ಬೇಕಾದ ಎಲ್ಲಾ ಮ‌ೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಭರವಸೆ ‌ನೀಡಿದರು. ಪ್ರಾಸ್ತಾವಿಕ ಮಾತಾನಡಿದ ಹಾಲುಗುಂದ ಗ್ರಾ.ಪಂ  ಸದಸ್ಯ ಅಬ್ದುರಹಮಾನ್ (ಅಂದಾಯಿ) ವಿರಾಜಪೇಟೆ ಕ್ಷೇತ್ರದಲ್ಲಿ 20 ವರ್ಷಗಳ ಬಳಿಕ‌‌ ಕಾಂಗ್ರೆಸ್ ಪಕ್ಷದ ಶಾಸಕರು ಗೆಲುವು ಸಾಧಿಸಲು ಕೊಂಡಂಗೇರಿ ಗ್ರಾಮದ ಜನತೆ ದೊಡ್ಡ ಕೊಡುಗೆ ನೀಡಿದ್ದಾರೆ. ಪ್ರತೀ ಬಾರಿಯ…

Read More

ಮಡಿಕೇರಿ ಜು.25 : ಕರಿಕೆ ಎಳ್ಳುಕೊಚ್ಚಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಹೊಸಮನೆ ಬಿ.ಚಂಗಪ್ಪ, ಕರಿಕೆ ಗ್ರಾಮದ ಹಲವು ದಿನಗಳ ಬೇಡಿಕೆಗಳಾದ ಮೊಬೈಟ್ ಟವರ್, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಸರಕಾರಿ ಬಸ್ ವ್ಯವಸ್ಥೆ, ಕಾಂಞಂಗಾಡ್-ಪಾಣತ್ತೂರು-ಕರಿಕೆ-ಮಡಿಕೇರಿ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮೊಬೈಲ್ ಟವರ್ ನಿರ್ಮಿಸಲು ಪಚ್ಚೆಪಿಲಾವುನಲ್ಲಿ ಸ್ಥಳ ಅಂತಿಮಗೊಳಿಸಲಾಗಿದ್ದು, ತಕ್ಷಣವೇ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. ಅಲ್ಲದೆ, ಈ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಭಾಗಮಂಡಲ-ಕರಿಕೆ-ಸುಳ್ಯಕ್ಕೆ ಸರಕಾರಿ ಬಸ್ಸನ್ನು ಒದಗಿಸಲು ಅಧಿಕಾರಿಗಳಿಗೆ ಸೂಚಿಸದರು. ಅಂತರ್‍ರಾಜ್ಯ ರಸ್ತೆಗೆ ಈಗಾಗಲೇ ಸರ್ವೆ ಕಾರ್ಯ ಮುಗಿದಿದ್ದು, ಕೇಂದ್ರದಿಂದ ನೀಲಿನಕಾಶೆ ಸಿದ್ದಗೊಂಡಿದೆ ಎಂದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕರಿಕೆ ಪ್ರೌಢಶಾಲೆಯಲ್ಲಿ ನಡೆಯುವ ಶಿಕ್ಷಕರ ವರ್ಗಾವಣೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು. ಸಭೆಯಲ್ಲಿ ಮಡಿಕೇರಿ…

Read More

ಮಡಿಕೇರಿ ಜು.25 :  ಭಾಗಮಂಡಲ ಹೋಬಳಿ ಬೇಂಗೂರು ಚೇರಂಬಾಣೆ ವ್ಯಾಪ್ತಿಯ ದೋಣಿ ಕಡ್ ಎಂಬಲ್ಲಿ  ಮಳೆಯಿಂದಾಗಿ ರಸ್ತೆಯು ಜಲಾವೃತವಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಫೈಬರ್ ದೋಣಿಯನ್ನು ವ್ಯವಸ್ಥೆ ಕಲ್ಪಿಸಲಾಗಿದೆ. ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ನಿರ್ದೇಶನದಂತೆ ಅಗ್ನಿಶಾಮಕ ಠಾಣಾಧಿಕಾರಿ ಜಿಲ್ಲಾ ಅಗ್ನಿಶಾಮಕ ಘಟಕದ  ಸಹಕಾರದೊಂದಿಗೆ ಫೈಬರ್ ದೋಣಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು‌ ಕಂದಾಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ ಜು.25 :  ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ, ಗಾಳಿಯಿಂದಾಗಿ ವಿವಿಧೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಕುಶಾಲನಗರ  ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡುವಿನಲ್ಲಿ   ಮನೆ, ರಸ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ.  

Read More

ಅರಂತೋಡು ಜು.25 : ಜಾತ್ಯತೀತ ತತ್ವ ಭಾಷೆ ಸಂಸ್ಕೃತಿಯಲ್ಲಿ ವೈವಿದ್ಯತೆ, ಆ ವೈವಿದ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಿ ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶ ನೀಡುವ ಮೂಲಕ ನಮ್ಮ ಭಾಷೆ, ಸಂಸ್ಕೃತಿಯ ವೈವಿಧ್ಯತೆಯನ್ನು ಪೋಷಿಸಬೇಕು ಎಂದು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವ ಅಹಮ್ಮದ್ ದೇವರ ಕೋವಿಲ್ ಹೇಳಿದ್ದಾರೆ. ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನದ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ತೆಕ್ಕಿಲ್ ಮೊಹಮ್ಮದ್ ಹಾಜಿ ಅವರ 50ನೇ  ಪುಣ್ಯಸ್ಮರಣೆ ಕಾರ್ಯಕ್ರಮ ಮತ್ತು ಶೈಕ್ಷಣಿಕ  ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತೆಕ್ಕಿಲ್ ಮೊಹಮ್ಮದ್ ಹಾಜಿ ಅವರು ಅಗಲಿ 50 ವರ್ಷಗಳು ಸಂದರು ಅವರನ್ನು ಎಲ್ಲರು ನೆನಪಿಸಿ ಗೌರವಿಸುವುದು ಅವರಿಗೆ ಈ ಸಮಾಜ ನೀಡುವ ಗೌರವಕ್ಕೆ ಸಾಕ್ಷಿಯಾಗಿದೆ. ಅವರ ಪರಂಪರೆಯನ್ನು ಟಿ.ಎಂ ಶಹೀದ್ ನೇತೃತ್ವದಲ್ಲಿ ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಜಾತಿ, ಧರ್ಮ,  ಭೇದವಿಲ್ಲದೆ ಶಿಕ್ಷಣ ಆರೋಗ್ಯ ಸಾಮಾಜಿಕ ಸೇವೆ…

Read More

ಮಡಿಕೇರಿ ಜು.25 :  ವಿರಾಜಪೇಟೆ ತಾಲ್ಲೂಕಿನ ತೋರ ಗ್ರಾಮಕ್ಕೆ   ಕಂದಾಯ ಮತ್ತು ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದರು. ಹೆಚ್ಚಿನ ಮಳೆಯಿಂದ   ಸಂಭವಿಸಬಹುದಾದ ಅನಾಹುತ ತಡೆಯುವ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸುವವಂತೆ ಸೂಚಿಸಿದರು.

Read More

ಮಡಿಕೇರಿ ಜು.25 :  ಸೋಮವಾರಪೇಟೆಯ  ಬೇಳೂರು ಗ್ರಾ.ಪಂ ವ್ಯಾಪ್ತಿಯ ಬಳಗುಂದ ಗ್ರಾಮದ  ಅಶ್ವಿನಿ ಮತ್ತು ರಾಜು, ಸುರೇಶ್ ಹಾಗೂ ಗಂಗು ಹರೀಶ್ ಅವರ  ಮನೆಗೆ ಮಳೆಯಿಂದ ಹಾನಿಯಾಗಿದ್ದು, ತಹಶೀಲ್ದಾರ್ ಎಸ್.ಎನ್ ನರಗುಂದ , ಪಿಡಿಒ, ಕಂದಾಯ ಪರಿವೀಕ್ಷಕರೊಂದಿಗೆ ಸ್ಥಳ ಪರಿಶೀಲಿಸಿದರು.

Read More

ಮಡಿಕೇರಿ ಜು.25 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2853.05 ಅಡಿಗಳು. ಕಳೆದ ವರ್ಷ ಇದೇ ದಿನ 2856.38 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 43.60 ಮಿ.ಮೀ., ಕಳೆದ ವರ್ಷ ಇದೇ ದಿನ 5.40 ಮಿ.ಮೀ. ಇಂದಿನ ನೀರಿನ ಒಳಹರಿವು 19343 ಕ್ಯುಸೆಕ್, ಕಳೆದ ವರ್ಷ ಇದೇ ದಿನ 4137 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 21166 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 2800 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.

Read More

ಮಡಿಕೇರಿ ಜು.25 :  ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 104.36 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.04 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1414.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1873.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 133.38 ಮಿ.ಮೀ. ಕಳೆದ ವರ್ಷ ಇದೇ ದಿನ 6.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2056.75 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2624.51 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 91.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.83 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1069.21 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1484.20 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 88.07 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3 ಮಿ.ಮೀ.…

Read More

ಮಡಿಕೇರಿ ಜು.25 :  ಜಿಲ್ಲಾ ಉಸ್ತುವಾರಿ ಸಚಿವ  ಬೋಸರಾಜು ಅವರು ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಹಾರಂಗಿ ಜಲಾಶಯ ವೀಕ್ಷಕಣೆಗೂ ಮೊದಲು ಕುಶಾಲನಗರದ ಸಾಯಿ‌ ಮತ್ತು ಕುವೆಂಪು ಬಡಾವಣೆಗೆ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭ  ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಇತರರು ಇದ್ದರು.

Read More