ಲೇಖಕ: admin

ಮಡಿಕೇರಿ ಜು.24 :  ಮಡಿಕೇರಿ ತಾಲೂಕು ಮೇಘತ್ತಾಳು ಗ್ರಾಮದ ಐ.ಜಿ ಕಾರ್ಯಪ್ಪ ಅವರು ನಿರ್ಮಿಸಿರುವ ಕೆರೆಯು ಒಡೆದು ಸಿ.ಸಿ.ಸೋಮಯ್ಯ ಅವರ ಕಾಫಿ ತೋಟ,  ರಸ್ತೆಗೆ  ಹಾನಿಯಾಗಿದೆ. ಅಲ್ಲದೆ  ಕಾಫಿ ಒಣ ಹಾಕಲು ನಿರ್ಮಿಸಿರುವ ಕಣದ ಮೇಲೆ ಮಣ್ಣು ತುಂಬಿದೆ. ಈ ಹಿನ್ನೆಲೆ ಜೆಸಿಬಿಯಿಂದ ತೋಡಿನಲ್ಲಿ ಬಂದಿರುವ ದೊಡ್ಡ ದೊಡ್ಡ ಮರದ ದಿಮ್ಮಿಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲಾಗಿದೆ.

Read More

ಮಡಿಕೇರಿ ಜು.24 :  ಸಂಪಾಜೆ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯನಾಡು ಸಮೀಪದ ಕಿಂಡಿ ಅಣೆಕಟ್ಟಿನ ಸೇತುವೆ ಬಳಿ ನೀರಿನ ಹರಿವು ಹೆಚ್ಚಾಗಿದೆ.  ಕಿಂಡಿ ಅಣೆಕಟ್ಟಿನಲ್ಲಿ‌ ಮಳೆಯ ನೀರು ಸರಾಗವಾಗಿ‌ ಹರಿಯುತ್ತಿದೆ.

Read More

ಮಡಿಕೇರಿ ಜು.24 :  ಮಡಿಕೇರಿ ನಗರದ ವಿವಿಧ ಬಡಾವಣೆಗಳಲ್ಲಿ  ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ  ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಹಾಗೂ  ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಭೇಟಿ ನೀಡಿ ಪರಿಶೀಲಿಸಿದರು. ನಂತರ ಪೀಲ್ಟ್ರ್ ಹೌಸ್ ನಲ್ಲಿ ಎರಡು ಮೋಟಾರ್ , ಕೂಟುಹೋಳೆಯಲ್ಲಿ ಟಿಸಿ ಹಾಳಾಗಿದ್ದನ್ನು ಮನಗಂಡ ಸದಸ್ಯರು ಖುದ್ದು ಸ್ಥಳಕ್ಕೆ ಧಾವಿಸಿ ನೀರಿನ ಸಮಸ್ಯೆಯನ್ನು  ಸರಿಪಡಿಸಿದರು. ಈ ಸಂದರ್ಭ ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯೆ ಸಭೀತಾ ಸೇರಿದಂತೆ ನಗರಸಭಾ ಸದಸ್ಯರು ಹಾಜರಿದ್ದರು.

Read More

ಮಡಿಕೇರಿ ಜು.24 : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕುಶಾಲನಗರ ಸಮೀಪದ ಕಣಿವೆ ತೂಗು ಸೇತುವೆ ಬಳಿ ಜೀವನದಿ ಕಾವೇರಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಈ ದೃಶ್ಯ ನೋಡಲು ನಯನ ಮನೋಹರವಾಗಿದೆ. ಆದರೆ ಕ್ಷಣದಿಂದ ಕ್ಷಣಕ್ಕೆ ನೀರು ಏರಿಕೆಯಾಗುತ್ತಲೇ ಇರುವುದರಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

Read More

ಮಡಿಕೇರಿ ಜು. 24 : ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ಜು.26 ರಂದು ಕಾಗಿ೯ಲ್ ವಿಜಯ ದಿನಾಚರಣೆ ಆಯೋಜಿಸಲಾಗಿದೆ. ಜು.23 ರಂದು  ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ನ ಅಮರ್ ಜವಾನ್ ಸ್ಮಾರಕದಲ್ಲಿ ಕಾಗಿ೯ಲ್ ವಿಜಯ ದಿನಾಚರಣೆಯೊಂದಿಗೆ ಕಾಗಿ೯ಲ್ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ.  ಇದೇ ಸಂದಭ೯ ವಾಯುಸೇನೆಯ ನಿವೖತ್ತ ಅಧಿಕಾರಿ ಕಿಗ್ಗಾಲು ಗಿರೀಶ್ ಅವರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುತ್ತದೆ. ಜಿಲ್ಲಾಧಿಕಾರಿ ವೆಂಕಟ ರಾಜ, ರೋಟರಿ ಸಹಾಯಕ ಗವನ೯ರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್, ರೋಟರಿ ವುಡ್ಸ್ ಕಾಯ೯ದಶಿ೯ ಹರೀಶ್ ಕಿಗ್ಗಾಲು ಪಾಲ್ಗೊಳ್ಳಲಿದ್ದಾರೆ ಎಂದು ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜು.24 :  ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2853.77 ಅಡಿಗಳು. ಕಳೆದ ವರ್ಷ ಇದೇ ದಿನ 2856.05 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 62.40 ಮಿ.ಮೀ., ಕಳೆದ ವರ್ಷ ಇದೇ ದಿನ 5.20 ಮಿ.ಮೀ. ಇಂದಿನ ನೀರಿನ ಒಳಹರಿವು 17972 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2766 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 23937 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 2800 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.

Read More

ಮಡಿಕೇರಿ ಜು.24 : ಕೊಡಗು ಜಿಲ್ಲೆಯಲ್ಲಿ ಸೋಮವಾರವೂ ಮಳೆಯ ತೀವ್ರತೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 5 ಇಂಚಿಗೂ ಅಧಿಕ ಮಳೆಯಾಗಿದೆ.  ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 118.77 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 14.02 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1310.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1869.78 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 173.43 ಮಿ.ಮೀ. ಕಳೆದ ವರ್ಷ ಇದೇ ದಿನ 26.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1923.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2618.21 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 76.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 977.58 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1481.37 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ…

Read More

ಮಡಿಕೇರಿ ಜು.24 :  ಸೋಮವಾರಪೇಟೆ ಹೋಬಳಿ ಜಂಬೂರು ಗ್ರಾಮದ ನಿವಾಸಿ  ವತ್ಸಲ ಹಾಗೂ ಸಂತೋಷ್ ಅವರ ವಾಸದ ಮನೆಯು ಭಾರಿ ಮಳೆಗಾಳಿಯಿಂದ ಮನೆಯ ಹಿಂಭಾಗದ ಗೋಡೆಯು ಕುಸಿದಿದ್ದು ಮೇಲ್ಚಾವಣಿ, ಗೋಡೆ , ಶೀಟ್ ಗಳು ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ.

Read More

ಕರಿಕೆ ಜು.24 :  ಭಾರೀ  ಮಳೆಯಿಂದಾಗಿ ಕರಿಕೆಯ ಬಾಳೆ ಬಳಪು-ಕುಂಡತ್ತಿಕಾನ ಕಾಲೋನಿಯ ಹೊಸ ರಸ್ತೆ ಕುಸಿದಿದೆ.  ಚರಂಡಿ ನಿರ್ಮಾಣ ಮಾಡದೆ ಇರುವುದರಿಂದ ಮತ್ತು ತೋಡಿಗೆ ಮೋರಿ ನಿರ್ಮಿಸದೆ ಇರುವುದರಿಂದ ರಸ್ತೆ ಕುಸಿದಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಜನ ಸಂಚಾರ ಅಸಾಧ್ಯವಾಗಿದ್ದು, ಅತಂತ್ರ ಪರಿಸ್ಥಿತಿ ಎದುರಾಗಿದೆ. ಈ ಹಿಂದೆಯೇ ಹಲವು ಬಾರಿ ಗ್ರಾ.ಪಂ ಗೆ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಆರೋಪಿಸಿರುವ ಸ್ಥಳೀಯರು, ಜಿಲ್ಲಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

Read More

ನಾಪೋಕ್ಲು ಜು.24 : ಇಂಟರಾಕ್ಟ್ ಕ್ಲಬ್ ದೇಶ ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲೂ ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ರೊಟೇರಿಯನ್ ಬಿ.ಜಿ ಅನಂತಶಯನ ಹೇಳಿದರು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24ರ ಸಾಲಿನ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ವಿದ್ಯಾರ್ಥಿಗಳು ಹಂತ ಹಂತವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದ ಅವರು ವಿದ್ಯಾರ್ಥಿ-ಶಿಕ್ಷಕರ ಸಂಬಂಧ ಅನ್ಯೋನ್ಯವಾಗಿ ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು ಎಂದರು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಶಾಲಾ ಹಂತದಲ್ಲಿ ಸಂಘಗಳ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರೊಂದಿಗೆ ದೇಶದ ಉತ್ತಮ ಪ್ರಜೆಗಳಾಗಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಶಾಲೆಯ ಪ್ರಾಂಶುಪಾಲ ಬಿ.ಎಂ.ಶಾರದ ಮಾತನಾಡಿ, ಶಾಲಾ ಹಂತದಲ್ಲಿ ವಿವಿಧ ಸಂಘಗಳು ಚಟುವಟಿಕೆಗಳಿಂದ ಕೂಡಿದ್ದು, ದೇಶ ವಿದೇಶಗಳಲ್ಲಿ ಇಂಟರಾಕ್ಟ್ ಕ್ಲಬ್ ನಡೆಸುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ ಅಧ್ಯಕ್ಷ…

Read More