ಮಡಿಕೇರಿ ಜು.22 : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ಸರ್ವ ಸದಸ್ಯರ 2ನೇ ಮಹಾಸಭೆ ಜು.30 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ತಿಳಿಸಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಕಾವೇರಿ ಕಲ್ಯಾಣ ಮಂಟಪದ ಆವರಣದಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಕುಟುಂಬ ಸಹಿತರಾಗಿ ಹಾಜರಾಗಿ ಸಲಹೆ, ಸೂಚನೆ ನೀಡುವಂತೆ ಮನವಿ ಮಾಡಿದರು. ಸಭೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರನ್ನು ಆಹ್ವಾನಿಸಲಾಗಿದೆ. ಸದಸ್ಯರು ಸ್ಟಾಂಪ್ ಅಳತೆಯ ಭಾವಚಿತ್ರವನ್ನು ತಂದು ತಮ್ಮ ತಮ್ಮ ಗುರುತಿನ ಚೀಟಿಯನ್ನು ಪಡೆದುಕೊಳ್ಳಬಹುದಾಗಿದೆ. ಸಂಘದ ಸದಸ್ಯತ್ವ ಬಯಸುವ ಮಾಜಿ ಸೈನಿಕರು ಸಭೆಗೆ ಹಾಜರಾಗಿ ಸದಸ್ಯತ್ವ ಪಡೆದುಕೊಳ್ಳಬಹುದು ಎಂದರು. ಹತ್ತನೇ ತರಗತಿ ಪರೀಕ್ಷೆಯಲ್ಲಿ ಸ್ಟೇಟ್ ಸಿಲಬಸ್ ನಲ್ಲಿ ಶೇ.95 ಮೇಲ್ಪಟ್ಟು ಅಂಕ ಪಡೆದ, ಸಿಬಿಎಸ್ ನಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಅಲ್ಲದೆ ಕ್ರೀಡೆ,…
ಲೇಖಕ: admin
ಬೆಂಗಳೂರು : ರಫ್ತು ಮಾಡುವುದರಲ್ಲಿ ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು ಎರಡನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ರಫ್ತು ಮಾಡುವುದರಲ್ಲಿ ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುತ್ತದೆ ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಗಿತ್ತು. ಈಗ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು. ಹೊಸ ಕೈಗಾರಿಕಾ ನೀತಿಯನ್ನು ಸರ್ಕಾರ ಘೋಷಣೆ ಮಾಡಿದಾಗ ಕೈಗಾರಿಕೋದ್ಯಮಿಗಳು ನೀತಿಯನ್ನು ಬೆಂಬಲಿಸಿ ಸ್ವಾಗತಿಸಿದರು. ಈಗಲೂ ಎಲ್ಲರೊಂದಿಗೆ ಚರ್ಚೆ ಮಾಡಿ ರಫ್ತು ಬೆಳವಣಿಗೆಗೆ ಪೂರಕವಾದಂಥ ಕೈಗಾರಿಕಾ ನೀತಿಯನ್ನು ರೂಪಿಸಲು ಕ್ರಮ ವಹಿಸಲಾಗುವುದು. ಎಂ.ಬಿ.ಪಾಟಲ್ ಅವರು ಕೈಗಾರಿಕಾ ಇಲಾಖೆಯ ನೇತೃತ್ವವನ್ನು ವಹಿಸಿದ್ದು, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆ ಆಗಬೇಕು ಎನ್ನುವ ಆಶಯವನ್ನು ಹೊಂದಿದ್ದಾರೆ. ಕರ್ನಾಟಕ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು…
ಮಡಿಕೇರಿ ಜು.22 : ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕಾವೇರಿ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಮಡಿಕೇರಿ ಜು.22 : ಗಾಳಿ ಮಳೆಗೆ ಹೈಸೋಡ್ಲೂರು – ಬಿರುನಾಣಿ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಪೊನ್ನಂಪೇಟೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು.
ಮಡಿಕೇರಿ ಜು.22 : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಪಣತೊಟ್ಟು, ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಎಂದು ಚೆಟ್ಟಳ್ಳಿ ಗ್ರಾಮ ಪಂಚಾಯತಿ ಸದಸ್ಯರ ಸಿ.ಇ ತೀರ್ಥಕುಮಾರ್ ಅಭಿಪ್ರಾಯಪಟ್ಟರು. ಗಾಂಧಿ ಯುವಕ ಸಂಘ ಕಂಡಕರೆ ಹಾಗೂ ಗಾಂಧಿ ಯುವಕ ಸಂಘ ಸರ್ವಧರ್ಮೀಯ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಸಮಿತಿ ವತಿಯಿಂದ ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 25 ಕುರ್ಚಿಗಳ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಯ ಬಗ್ಗೆ ಎಲ್ಲರಿಗೂ ಕೀಳರಿಮೆ ಉಂಟಾಗಿದೆ. ಮಕ್ಕಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ನೀಡಿದರೆ ಮಾತ್ರ ಸರ್ಕಾರಿ ಶಾಲೆ ಉಳಿಯುವುದು. ಇತ್ತೀಚಿನ ದಿನಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯಿಂದ ಸರ್ಕಾರಿ ಶಾಲೆಗಳು ಮುಚ್ಚುವಂತಹ ಪರಿಸ್ಥಿತಿ ಎದುರಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ನೀಡುವಂತೆ ಮುತುವರ್ಜಿವಹಿಸಿದರೆ ಮಾತ್ರ ಸರ್ಕಾರಿ ಶಾಲೆಗಳು ಉಳಿಯುವಂತಾಗುವುದು. ಮುಂದಿನ ದಿನಗಳಲ್ಲಿ ಕಂಡಕರೆ ಶಾಲೆಗೆ ಗ್ರಾಮ ಪಂಚಾಯತಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶ್ರಮವಹಿಸಲಾಗುವುದೆಂದು ಚೆಟ್ಟಳ್ಳಿ…
ನಾಪೋಕ್ಲು ಜು.22 : ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಸರ್ಕಾರ ಕೊಡಗನ್ನು ಜಂಗಲ್ ರಾಜ್ಯ ಎಂದು ಘೋಷಿಸಿ ಮನುಷ್ಯರನ್ನು ಕೊಡಗಿನಿಂದ ಹೊರಹಾಕಬಹುದಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೊಡಗು ಬೆಳೆಗಾರರ ಒಕ್ಕೂಟದ ಉಪಾಧ್ಯಕ್ಷ, ಭಾರತೀಯ ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ಡಾ.ಸಣ್ಣುವಂಡ ಎಂ.ಕಾವೇರಪ್ಪ ಹೇಳಿದರು. ನಾಪೋಕ್ಲು ವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವ -ಪ್ರಾಣಿ ಸಂಘರ್ಷ ಕೊಡಗಿನ ಅತ್ಯಂತ ಭೀಕರ ಸಮಸ್ಯೆ. ಮೊದಲು ದಕ್ಷಿಣ ಕೊಡಗಿನ ಕೆಲವು ಭಾಗ ಮತ್ತು ಸೋಮವಾರಪೇಟೆಯ ಕೆಲವು ಪ್ರದೇಶಗಳಿಗೆ ಸೀಮಿತವಾಗಿತ್ತು. ಈಗ ಇದು ಪ್ರತಿಯೊಬ್ಬರ ಸಮಸ್ಯೆಯಾಗಿದೆ. ಆನೆಗಳಿಗೆ ಕೃಷಿಕರ ತೋಟಗಳು ಮತ್ತು ಅರಣ್ಯ ಸರ್ಕಾರಿ ಆಸ್ಪತ್ರೆಗಳಾಗಿವೆ ಎಂದರು. ಉತ್ತಮ ಆಹಾರ ಮತ್ತು ನೀರಿನ ಸೌಕರ್ಯ ಉತ್ತಮವಾಗಿರುವುದರಿಂದ ಕಾಡಾನೆಗಳು ಕೃಷಿಕರ ತೋಟಗಳಿಗೆ ಲಗ್ಗೆ ಇಡುತ್ತಿವೆ. ಇದರಿಂದ ಬೆಳೆಗಾರರು ಸಂಪೂರ್ಣವಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಕೃಷಿಕರ ತೋಟ ಈಗ ಆನೆ ಹೆರಿಗೆಗೆ ಅತ್ಯುತ್ತಮ ಆಸ್ಪತ್ರೆಗಳಾಗಿವೆ. ಖಾಸಗಿ ಎಸ್ಟೇಟ್‌ಗಳಿಂದ ಆನೆಗಳನ್ನು ಕಾಡಿಗೆ ಓಡಿಸಲು ಸರ್ಕಾರಗಳು ಸೋಲಾರ್ ಫೆನ್ಸಿಂಗ್, ರೈಲ್ವೆ ಬ್ಯಾರಿಕೇಡ್ ಮತ್ತು…
ನಾಪೋಕ್ಲು ಜು.22 : ಕಕ್ಕಬೆ ಗ್ರಾ.ಪಂ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಯಿಂದಾಗಿ ನಸೀಮ ಎಂಬವರ ಮನೆಯ ಮೇಲ್ಛಾವಣಿಯ ಶೀಟುಗಳು ಹಾರಿಹೋಗಿ ನಷ್ಟ ಸಂಭವಸಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಕಂದಾಯ ಪರಿವೀಕ್ಷಕ (ಅರ್.ಐ) ರವಿಕುಮಾರ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿ, ಸೂಕ್ತ ಕ್ರಮ ಕೈಗೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜು.22 : ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಲಾಯಿತು. ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕುಟ್ಟಂಚೆಟ್ಟೀರ ಮಾದಪ್ಪ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ಸಭೆಯ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಹಿತವಚನ ನುಡಿಯಾಡಿ ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿದರು. ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಚೋಕಿರ ರತೀಶ್ ತಮ್ಮಯ್ಯ ನೂತನವಾಗಿ ಆಯ್ಕೆ ಆಗಿರುವ ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ ಬೋಧಿಸಿ ತಮ್ಮ ತಮ್ಮ ಕಾರ್ಯದಕ್ಷತೆಯ ಬಗ್ಗೆ ಮಾರ್ಗದರ್ಶನವನ್ನು ನೀಡಿದರು. ಈ ಸಂದರ್ಭ ವಿದ್ಯಾ ಸಂಸ್ಥೆಯಲ್ಲಿ 10 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆಸಲ್ಲಿಸಿದ ಬಿದ್ದಾಟಂಡ ರಹನಾ ಸಂಪತ್ ಅವರನ್ನು ಶಾಲಾ ಆಡಳಿತ ಮಂಡಳಿ ಪರವಾಗಿ ಶಾಲು ಒದಿಸಿ ಕಿರು ಕಾಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ನಿರ್ದೇಶಕಿ ವಿದ್ಯಾ ಸುರೇಶ್, ಶಾಲಾ ಬೋಧಕ ವೃಂದ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ನಡೆದ ವಿವಿಧ…
ಮಡಿಕೇರಿ ಜು.22 : ಕೊಡಗಿನ ಗಡಿ ಕರಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಗೆ, ಭಾಗಮಂಡಲ-ಕರಿಕೆ ನಡುವಿನ ರಸ್ತೆಯ ಹಲವೆಡೆಗಳಲ್ಲಿ ಬರೆ ಕುಸಿತದೊಂದಿಗೆ ಮರಗಳು ಉರುಳಿ ರಸ್ತೆ ಸಂಚಾರಕ್ಕೆ ತೊಡಕುಂಟಾಗಿದೆ. ಭಾಗಮಂಡಲ-ಕರಿಕೆ ರಸ್ತೆ ನೆರೆಯ ಕೇರಳ ರಾಜ್ಯವನ್ನು ಸಂಪರ್ಕಿಸುವ ರಸ್ತೆಯೂ ಆಗಿದ್ದು, ಬರೆ ಹಾಗೂ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮಡಿಕೇರಿ ಜು.22 : ವಿಧಾನಸಭಾ ಕಲಾಪದಿಂದ ಹತ್ತು ಮಂದಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ, ವಕ್ತಾರ ಮಹೇಶ್ ಜೈನಿ, ನಗರಾಧ್ಯಕ್ಷ ಮನುಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ರಾಜ್ಯ ರೈತ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಪ್ರಮುಖರಾದ ಜಗದೀಶ್, ಎಸ್.ಸಿ.ಸತೀಶ್, ಶ್ವೇತ ಸೇರಿದಂತೆ ಮತ್ತಿತರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.






