ಮಡಿಕೇರಿ ಆ.17 : ಕುಶಾಲನಗರ ತಾಲ್ಲೂಕು ನಂಜರಾಯಪಟ್ಟಣ ವಿವಿದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ವತಿಯಿಂದ ನಬಾರ್ಡ್ ಸಹಯೋಗದಲ್ಲಿ ನಿರ್ಮಿಸಲಾದ ನೂತನ ಬಹುಸೇವಾ ಕೇಂದ್ರದ ಗೋದಾಮು ಮಳಿಗೆಗಳು, ನೂತನ ಕಚೇರಿ, ಆಡಳಿತ ಸಭಾಂಗಣ ಮತ್ತು ನೂತನ ಸಹಕಾರ ಭವನದ ಉದ್ಘಾಟನಾ ಸಮಾರಂಭವು ಆ.20 ರಂದು ಬೆಳಗ್ಗೆ 11 ಗಂಟೆಗೆ ನಂಜರಾಯಪಟ್ಟಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಮಾಜಿ ಕ್ರೀಡಾ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೊಡಂದೇರ ಪಿ.ಬಾಂಡ್ ಗಣಪತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಅಪ್ಪಚಟ್ಟೋಳಂಡ ಮನು ಮುತ್ತಪ್ಪ, ನಂಜರಾಯಪಟ್ಟಣ ಗ್ರಾ.ಪಂ.ಅಧ್ಯಕ್ಷರಾದ ಸಿ.ಎಲ್.ವಿಶ್ವ, ನಬಾರ್ಡ್ ಜಿಲ್ಲಾ…
ಲೇಖಕ: admin
ಮಡಿಕೇರಿ ಆ.17 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಆ.20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ವಿರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಕೆ.ದಯಾನಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ…
ಮಡಿಕೇರಿ ಆ.17 : ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಕೊಡಗು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್ ರಚಿಸಲಾಗುತ್ತಿದ್ದು, ಕೊಡಗು ಜಿಲ್ಲಾ ವ್ಯಾಪ್ತಿಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ ವೇತನ-ಭತ್ಯೆ ರಹಿತವಾಗಿ, ಸ್ವ-ಇಚ್ಚೆಯಿಂದ ಕಾರ್ಯ ನಿರ್ವಹಿಸಲು ಆಸಕ್ತಿಯುಳ್ಳವರು ಸೆ.1 ರೊಳಗೆ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ, ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ, ದೂ.ಸಂ. 08272-229866 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಆ.17 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್4 ಮಕ್ಕಂದೂರು, ಎಫ್11 ಗಾಳಿಬೀಡು ಮತ್ತು ಎಫ್10 ಕುಂಡಮೇಸ್ತ್ರಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಆ.19 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕರ್ಣಂಗೇರಿ, ಕೆ.ನಿಡುಗಣೆ, ಮಕ್ಕಂದೂರು, ಕಾಲೂರು, ದೇವಸ್ತೂರು, ಗಾಳಿಬೀಡು, ಆರ್‍ಟಿಒ ಕಚೇರಿ, ಕೂಟುಹೊಳೆ, ಮುಕ್ಕೋಡ್ಲು, ಆವಂಡಿ, ಹಮ್ಮಿಯಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಆ.17 : ಪ್ರಸಕ್ತ(2023-24) ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ 2022 ನೇ ವರ್ಷದಲ್ಲಿ (01-01-2022 ರಿಂದ 31-12-2022) ರ ರಾಷ್ಟ್ರೀಯ, ಅಂತರ್‍ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕವನ್ನು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಅರ್ಹ ಕ್ರೀಡಾಪಟುಗಳು ರಾಷ್ಟ್ರೀಯ, ಅಂತರ್‍ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಪಡೆದು ಸೆಪ್ಟೆಂಬರ್, 02 ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-220986 ಮತ್ತು ತರಬೇತುದಾರರು 9980887499 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಚೆಯ್ಯಂಡಾಣೆ ಆ.17 : ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾರತೀಯ ಸೇನೆಯ ಯೋಧ ಹವಾಲ್ದಾರ್ ಚೈಯಂಡ ಶಂಕರಿ ಧ್ವಜಾರೋಹಣ ನೆರವೆರಿಸಿದರು. ಮುಖ್ಯ ಶಿಕ್ಷಕಿ ಹೇಮಾ ಕುಮಾರಿ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ಹಾಡು, ರಾಷ್ಟ ಗೀತೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲೆಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಈ ಸಂದರ್ಭ ಎಸ್ ಡಿ ಎಂ ಸಿ ಅಧ್ಯಕ್ಷ ರತ್ನಾ, ಚೈಯಂಡ ಲವ ಅಪ್ಪಚ್ಚು, ಶಾಲಾ ಶಿಕ್ಷಕ ವೃಂದ , ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ಅಶ್ರಫ್
ಮಡಿಕೇರಿ ಆ.17 : ಕುಂಜಿಲ-ಕಕ್ಕಬ್ಬೆ ಸಮೀಪದ ವಯಕೋಲ್ ರೌಳತುಲ್ ಉಲೂಂ ಮದ್ರಸದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಯಕೋಲ್ ಸಮಿತಿ ಅಧ್ಯಕ್ಷ ಅಹ್ಮದ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಮದ್ರಸ ಅಧ್ಯಾಪಕ ರಫೀಖ್ ಸಖಾಫಿ ಪ್ರಾಸ್ತಾವಿಕ ಮಾತನಾಡಿ, ವಿದ್ಯಾರ್ಥಿಗಳು ಶಾಂತಿ ಮತ್ತು ಶಿಸ್ತು ಬದ್ಧವಾಗಿಜೀವನ ಕ್ರಮವನ್ನು ಅಳವಡಿಸಿಕೊಳ್ಳಬೇಕು. ದೇಶ ಪ್ರೇಮವನ್ನು ಸಾರುವವರಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಯಕೋಲ್ ಸಮಿತಿ ಕಾರ್ಯದರ್ಶಿ ಅಬು, ಕೋಶಾಧಿಕಾರಿ ಉಸ್ಮಾನ್, ಸಮಿತಿ ಸದಸ್ಯರುಗಳು, ಮದ್ರಸ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.
ಬೆಂಗಳೂರು: ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆ ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಅದಾದ ಬಳಿಕ ಸತತ ಮೂರು ಕಕ್ಷೆ ಪರಿಚಲನೆ ಮೂಲಕ (ಆಗಸ್ಟ್ 6, 9 ಹಾಗೂ 14) ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.
ಮಡಿಕೇರಿ ಆ.17 : ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಜಂಟಿ ಆಶ್ರಯದಲ್ಲಿ ಆ.20 ರಂದು ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸರ 108ನೇ ಜನ್ಮದಿನಾಚರಣೆ ನಡೆಯಲಿದೆ. ಅಂದು ಅಪರಾಹ್ನ 2.30 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಚಿವ ಎಂ.ಸಿ.ನಾಣಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆಸಲ್ಲಿಸಿದ ಮಹಿಳೋದಯ ಮಹಿಳಾ ಒಕ್ಕೂಟದ ಸಂಯೋಕರಾದ ಜಾಯ್ಸ್ ಮೆನೇಜಸ್, ತಣಲ್ ವೃದ್ಧಾಶ್ರಮದ ಮೇಲ್ವಿಚಾರಕಿ ಬಿ.ಕೆ.ಶಶಿಕಲಾ, ಕೂರ್ಗ್ ಬ್ಲಡ್ ಪೌಂಡೇಷನ್‍ನ ಎಂ.ಸಮೀರ್, ಸಮಾಜ ಸೇವಕ ಬಾಬು ಚಂದ್ರ ಉಳ್ಳಾಗಡ್ಡಿ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಲಿದ್ದಾರೆ. ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್, ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ.ಮುದ್ದಯ್ಯ ಗೌರವ ಉಪಸ್ಥಿತರಿರಲಿದ್ದಾರೆ.
ಮಡಿಕೇರಿ ಆ.17 : ಅಖಿಲ ಅಮ್ಮಕೊಡವ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿವರ್ಷದಂತೆ ಈ ಬಾರಿಯೂ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 7ನೇ ತರಗತಿ ಮೇಲ್ಪಟ್ಟ ಜನಾಂಗದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಮತ್ತು ವ್ಯಾಸಂಗ ಮಾಡುತ್ತಿರುವ ಬಗ್ಗೆ ಶಾಲೆಯಿಂದ ದೃಡೀಕರಣ ಪತ್ರ ಅಥವಾ ಶುಲ್ಕ ಪಾವತಿಯ ಪ್ರತಿಯೊಂದಿಗೆ ಅರ್ಜಿಯನ್ನು ಸೆ.15ರ ಒಳಗಾಗಿ ಆಯಾ ಗ್ರಾಮದಲ್ಲಿನ ಸಂಘದ ಪ್ರತಿನಿಧಿಗಳಿಗೆ ಅಥವಾ ಎನ್.ಕೆ.ಉಮೇಶ್ ಕೇಚಮಯ್ಯ, ಅಧ್ಯಕ್ಷರು, ಅ.ಅ.ಕೊ.ವಿ.ಸಂ. ಪೊನ್ನಂಪೇಟೆ, ಕುಟ್ಟಂದಿ ಗ್ರಾಮ ಮತ್ತು ಅಂಚೆ, 9480425773 ವಿಳಾಸಕ್ಕೆ ಸಲ್ಲಿಸುವಂತೆ ಸಂಘದ ಅಧ್ಯಕ್ಷ ಉಮೇಶ್ ಕೇಚಮಯ್ಯ ತಿಳಿಸಿದ್ದಾರೆ.






