ಲೇಖಕ: admin

ನವದೆಹಲಿ ಜು.20 : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ, ಕಠಿಣ ಶಿಕ್ಷೆಯಾಗಲಿದೆ ಎಂದರು. ಈ ಪ್ರಕರಣದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ. ವಿಷಯ ಕೇಳಿ ನನ್ನ ಹೃದಯ ತುಂಬಾ ನೋವಾಗಿದ್ದು, ಸಿಟ್ಟಿನಿಂದ ಕುದಿಯುತ್ತಿದೆ. ಮಣಿಪುರದ ಘಟನೆ ಯಾವುದೇ ಸುಸಂಸ್ಕೃತ ಸಮಾಜಕ್ಕೆ ನಾಚಿಕೆಗೇಡಿನ ವಿಚಾರವಾಗಿದೆ. ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕೆಂದು ಹೇಳಿದರು. ವಿಶೇಷವಾಗಿ ಮಹಿಳೆಯರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

Read More

ಮಡಿಕೇರಿ ಜು.20 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ ಮುಂಗಾರು ದುರ್ಬಲವಾಗಿದ್ದರು, ಆಗೊಮ್ಮೆ ಈಗೊಮ್ಮೆ ಹಠಾತ್ತನೆ ಸುರಿಯುವ ಗಾಳಿ ಮಳೆಯಿಂದ ಪ್ರಮುಖವಾಗಿ ವಿದ್ಯುತ್ ಸಂಪರ್ಕಕ್ಕೆ ಅಡಚಣೆಯಾಗುತ್ತಿದ್ದು, ವರ್ಷದ ಆರಂಭದಿಂದ ಇಲ್ಲಿಯವರೆಗೆ ಒಟ್ಟು 1,111 ವಿದ್ಯುತ್ ಕಂಬಗಳಿಗೆ ಹಾನಿಯುಂಟಾಗಿದೆ. ಗ್ರಾಮೀಣ ಭಾಗಗಳಲ್ಲಿ ಮಳೆಯಿಂದ ಮರಗಳು ಧರೆಗುರುಳುವ ಮೂಲಕ ವಿದ್ಯುತ್ ಕಂಬಗಳು ಮುರಿರು ಬೀಳುತ್ತಿದೆ. ಈ ಎಲ್ಲಾ ಹಂತಗಳಲ್ಲಿ ಚೆಸ್ಕಾಂ ಇಲಾಖಾ ಸಿಬ್ಬಂದಿಗಳು ಆದಷ್ಟು ತುರ್ತು ಕ್ರಮ ಕೈಗೊಂಡು ವಿದ್ಯುತ್ ಮರು ಸಂಪರ್ಕವನ್ನು ಕಲ್ಪಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜಿಲ್ಲೆಯ ಐದು ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಅಲ್ಲಲ್ಲಿ ಮರದ ಕೊಂಬೆಗಳು ಮುರಿದು ಬೀಳುವ ಘಟನೆಗಳು ಸಾಕಷ್ಟು ನಡೆದಿವೆಯಾದರು, ಬೃಹತ್ ಗಾತ್ರದ 35 ಮರಗಳು ಬಿದ್ದಿವೆಯಾದರೆ, ಗಾಳಿ ಮಳೆಗೆ 71 ಟ್ರಾನ್ಸ್ ಫಾರ್ಮರ್‍ಗಳಿಗೆ ಹಾನಿಯಾಗಿದ್ದು, ವಿದ್ಯುತ್ ಕಂಬ ಮತ್ತು ಟ್ರಾನ್ಸ್ ಪಾರ್ಮರ್‍ಗಳು ಹಾಳಾಗಿ ಅಂದಾಜು 1.40 ಕೋಟಿ ರೂ. ನಷ್ಟ ಚೆಸ್ಕಾಂ ಇಲಾಳೆಗೆ ಉಂಟಾಗಿದೆ. 49 ಮನೆಗಳಿಗೆ ಹಾನಿ :  ಪ್ರಸಕ್ತ ಸಾಲಿನಲ್ಲಿ ಮಳೆಯಿಂದಾಗಿ…

Read More

ಚೆಯ್ಯಂಡಾಣೆ ಜು.20 :  ಬ್ಯಾಂಕ್ ಆಫ್ ಬರೋಡಾ ಶಾಖೆಯ 116ನೇ ಸಂಸ್ದಾಪನಾ ದಿನದ ಅಂಗವಾಗಿ ಕರಡ ಶಾಖೆಯ ವತಿಯಿಂದ ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಹಾಗೂ ಊಟದ ತಟ್ಟೆಯನ್ನು  ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಬ್ಯಾಂಕಿನ ವ್ಯವಸ್ಥಾಪಕ  ಸಿ.ವಿ.ಮಹೇಶ್ ವರ್ಮಾ, ಸೀನಿಯರ್ ಆಫಿಸರ್ ರಾಜೀವ್ ಹಾಗೂ ಸಿಬ್ಬಂದಿಗಳು, ಶಾಲೆಯ ಮುಖ್ಯ ಶಿಕ್ಷಕಿ ಡಿ.ಕೆ. ಲೀಲಾವತಿ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು, ಗ್ರಾಮಸ್ಥರು  ಹಾಜರಿದ್ದರು. ವರದಿ : ಅಶ್ರಫ್  

Read More

ಮಡಿಕೇರಿ ಜು.20 : ಕರ್ನಾಟಕ ಸರ್ಕಾರವು 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಕೊಡಗು ಜಿಲ್ಲೆಗೆ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕವನ್ನು ಅಧಿಸೂಚಿಸಲಾಗಿದೆ. ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. 2023-24 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು ರೂ.47 ಸಾವಿರ ಹಾಗೂ ಅಡಿಕೆ ಬೆಳೆಗೆ ರೂ.1,28,000 ಆಗಿದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ.5 ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಿದೆ. ವಿಮಾ ನೋಂದಣಿಗೆ ಜುಲೈ, 31 ಕೊನೆ…

Read More

ಮಡಿಕೇರಿ ಜು.20 : ನಗರದ ವಿದ್ಯಾನಗರದಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ‘ಉಪಾಹಾರ ಗೃಹ’ವನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನಡೆಸಲು ಮರು ಟೆಂಡರ್/ಕೊಟೇಷನ್ ಆಹ್ವಾನಿಸಲಾಗಿದೆ. ಮರು ಟೆಂಡರ್/ಕೊಟೇಷನ್ ಸಲ್ಲಿಸಲು ಆ.2 ರ ಸಂಜೆ 6 ಗಂಟೆ ವರೆಗೆ ಕಾಲಾವಕಾಶವಿದೆ. ಮುಚ್ಚಿದ ಲಕೋಟೆಗಳನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು, ಮಡಿಕೇರಿ ಇವರ ಸಮ್ಮುಖದಲ್ಲಿ ಆ.7 ರಂದು ಸಂಜೆ 6 ಗಂಟೆಗೆ ತೆರೆಯಲಾಗುತ್ತದೆ. ಷರತ್ತು ಹಾಗೂ ನಿಬಂಧನೆಗಳ ಬಗ್ಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಜು.20 : ಮಿಲಿಟರಿ ಪಿಂಚಣಿರಹಿತ ಕರ್ನಾಟಕ ಮಾಜಿ ಸೈನಿಕರ ಮತ್ತು ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2023-24 ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೊಮಾ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ಅನುದಾನ ಹಾಗೂ ವಿಶೇಷ ಅನುದಾನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಜು.20 : ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್  ತಿಳಿಸಿದ್ದಾರೆ.

Read More

ಮಡಿಕೇರಿ ಜು.20 : ಪ್ರಸಕ್ತ ಸಾಲಿನ ಜುಲೈ ಆವೃತ್ತಿಯ ಸ್ನಾತಕ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ ಹಾಗೆಯೇ ಸ್ನಾತಕೋತ್ತರ ಎಂ.ಎ, ಎಂ.ಎ-ಪತ್ರಿಕೋದ್ಯಮ. ಎಂ.ಕಾಂ, ಎಂ.ಬಿ.ಎ, ಎಂ.ಲಿಬ್, ಎಂ.ಎಸ್ಸಿ , ಎಂ.ಸಿ.ಎ, ಎಂ.ಎಸ್,ಡಬ್ಲ್ಯೂ ಹಾಗೂ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮಡಿಕೇರಿ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಈ ಅವಕಾಶವನ್ನು ಎಲ್ಲಾ ಉದ್ಯೋಗ ಆಕಾಂಕ್ಷಿಗಳು ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ತೆರೆದ ಶಿಕ್ಷಣದ ಮೂಲಕ ಪದವಿ ಪಡೆಯಬಹುದಾಗಿದೆ ಎಂದು ಮುಕ್ತ ವಿಶ್ವ ವಿದ್ಯಾಲಯ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ. ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಎ+ ಮಾನ್ಯತೆ ಪಡೆದ ದೂರ ಶಿಕ್ಷಣ ನೀಡುವ ವಿಶ್ವ ವಿದ್ಯಾನಿಲಯವಾಗಿದೆ. ಯು.ಜಿ.ಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ ಭೌತಿಕ ಶಿಕ್ಷಣ(ರೆಗ್ಯುಲರ್) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (ಮುಕ್ತ ವಿವಿ)…

Read More

ಮಡಿಕೇರಿ ಜು.20 : 2023-24ನೇ ಸಾಲಿನಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್‍ಫೇರ್ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಪ್ರಕರಣವು ಜುಲೈ 2022 ರಿಂದ ಸೆಪ್ಟೆಂಬರ್ 30, 2023ರ ಒಳಗೆ ನಡೆದಿರಬೇಕು. ಪ್ರಕರಣ ನಡೆದ ದಿನಾಂಕಕ್ಕೆ 6 ರಿಂದ 18 ವರ್ಷದ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಪ್ರಶಸ್ತಿ ನೀಡಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಪ್ರಕರಣ ನಡೆದಿರುವ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಎಫ್‍ಐಆರ್ ದಾಖಲಾಗಿರಬೇಕು. ಪ್ರಶಸ್ತಿಯು ಪದಕ (ಚಿನ್ನ, ಬೆಳ್ಳಿ ಪದಕ), ಪ್ರಶಸ್ತಿ ಪತ್ರ ಹಾಗೂ ನಗದು…

Read More

ಮಡಿಕೇರಿ ಜು.20 : ಕರ್ನಾಟಕ ಮೂಲ ನಿವಾಸಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ 2023-24 ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೊಮಾ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ (ಹವಿಲ್ದಾರ್ ರ್ಯಾಂಕ್‍ಮೇಲಿನ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ) ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆ ದಿನವಾಗಿದೆ. ಹವಿಲ್ದಾರ್ ಮತ್ತು ಕೆಳಗಿನ ರ್ಯಾಂಕ್‍ನ ಮಾಜಿ ಸೈನಿಕರು ಶಿಷ್ಯವೇತನಕ್ಕಾಗಿ ವೆಬ್‍ಸೈಟ್ (WWW.KSB.GOV.IN)  ಆನ್‍ಲೈನ್‍ನಲ್ಲಿ ಸೆಪ್ಟೆಂಬರ್ ಮಾಹೆಯ ಒಳಗಡೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ತಿಳಿಸಿದ್ದಾರೆ.

Read More