ಲೇಖಕ: admin

ಮಡಿಕೇರಿ ಜು.19 : ಪ್ರಸಕ್ತ (2023-24) ಸಾಲಿನ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದಲ್ಲಿ ತಾಳೆ ಬೆಳೆಯನ್ನು ತೋಟಗಾರಿಕಾ ಇಲಾಖಾ ಪಾಲುದಾರ ಕಂಪನಿಯಾದ ಪತಂಜಲಿ ಫುಡ್ಸ್ ಲಿಮಿಟೆಡ್ ಅವರೊಂದಿಗೆ ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಅದರಂತೆ ತಾಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳಲು ಒಂದು ಹೆಕ್ಟೇರ್‍ಗೆ 143 ಉತ್ಕೃಷ್ಟ ಗುಣ ಮಟ್ಟದ ತಾಳೆ ಸಸಿಗಳು ಬೇಸಾಯ ಹಾಗೂ ಇತರೆ ವೆಚ್ಚ ಸೇರಿ ರೂ.20 ಸಾವಿರ ಸಹಾಯಧನ ನೀಡಲಾಗುತ್ತದೆ. ಹಾಗೆಯೇ ಮುಂದಿನ ಮೊದಲನೇ, ಎರಡನೇ, ಮೂರನೇ ಹಾಗೂ ನಾಲ್ಕನೇ ವರ್ಷದ ಪಾಲನೆಗೆ ರೂ.5,250 ಪ್ರತಿ ಹೆಕ್ಟೇರ್‍ಗೆ ಸಹಾಯಧನ ನೀಡಲಾಗುವುದು. ಇದರ ಜೊತೆಗೆ ತಾಳೆ ಕಟಾವು ಯಂತ್ರ, ಡಿಸೇಲ್ ಪಂಪ್‍ಸೆಟ್ ಖರೀದಿಗೆ ಶೇ.50ರ ಸಹಾಯಧನ ಹಾಗೂ ಅಂತರ ಬೇಸಾಯ ಕೈಗೊಂಡಿದ್ದಲ್ಲಿ ಹೆಕ್ಟೇರ್‍ಗೆ ರೂ. 5 ಸಾವಿರ ಸಹಾಯಧನ ನೀಡಲಾಗುತ್ತದೆ. ಆಸಕ್ತ ರೈತರು ನಿಗದಿತ ಅರ್ಜಿ ನಮೂನೆ, ಪಹಣೆ (ಆರ್‍ಟಿಸಿ) ಆಧಾರ್ ಕಾರ್ಡ್ ಹಾಗೂ ಮತ್ತಿತರ ದಾಖಲಾತಿಗಳನ್ನು ಆಯಾಯ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಜುಲೈ,…

Read More

ಮಡಿಕೇರಿ ಜು.19 : ಪ್ರಸಕ್ತ(2023-24) ಸಾಲಿನಿಂದ ಸೋಮವಾರಪೇಟೆ ತಾಲ್ಲೂಕಿನ ಬಿ.ಟಿ.ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ಕೋರ್ಸ್ ಪ್ರಾರಂಭಿಸಲಾಗಿದೆ. ದ್ವಿತೀಯ ಪಿಯುಸಿ ತರಗತಿಯಲ್ಲಿ ಯಾವುದೇ ಸಂಯೋಜನೆಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಪ್ರಥಮ ವರ್ಷ ಬಿಸಿಎ ತರಗತಿಗೆ ಪ್ರವೇಶಾತಿ ಹೊಂದಬಹುದಾಗಿದೆ. ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್, ಭಾವಚಿತ್ರದೊಂದಿಗೆ ಈ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.9591163808, 948007249, 9480057029, 9590433420, 8050252033 ನ್ನು ಸಂಪರ್ಕಿಸಬಹುದು ಎಂದು ಸೋಮವಾಪೇಟೆ ತಾಲ್ಲೂಕಿನ ಬಿ.ಟಿ.ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಮಡಿಕೇರಿ ಜು.19 : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಜುಲೈ ಮಾಹೆಯಲ್ಲಿ “ಪ್ಲಾಸ್ಟಿಕ್ ಮುಕ್ತ ಅಭಿಯಾನ” ಕೈಗೊಂಡಿದ್ದು, ನಗರದಲ್ಲಿ ಈಗಾಗಲೇ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಿರ್ಬಂಧಿಸಿದ್ದು, ನಗರಸಭೆ ವತಿಯಿಂದ ಆಗ್ಗಿಂದಾಗೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‍ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುತ್ತಿದೆ. ಈ ಕಾರ್ಯವನ್ನು ನಗರಸಭೆಯು ಮುಂದುವೆರೆಸಲಿದ್ದು, ಸಾರ್ವಜನಿಕರು ಹಾಗೂ ಉದ್ದಿಮೆದಾರರು ಸಹಕರಿಸಲು ಕೋರಿದೆ. ಸರ್ಕಾರದ ಆದೇಶದಂತೆ ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳ ಅಕ್ರಮ ಮಾರಾಟ, ದಾಸ್ತಾನು ಸಂಗ್ರಹಣೆ ಹಾಗೂ ಬಳಕೆ ಕುರಿತಂತೆ ದಂಡಗಳನ್ನು ವಿಧಿಸಲಾಗುವುದೆಂದು ಈ ಮೂಲಕ ತಿಳಿಯಪಡಿಸಿದೆ. ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಮಾರಾಟಕ್ಕೆ ಮೊದಲನೇ ಅಪರಾಧಕ್ಕೆ ದಂಡ ರೂ.500, 2ನೇ ಅಪರಾಧಕ್ಕೆ ದಂಡ ರೂ.1,000, ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಅಕ್ರಮ ದಾಸ್ತಾನು 1 ಕೆ.ಜಿ. ಮೊದಲನೇ ಅಪರಾಧಕ್ಕೆ ರೂ.500, ಎರಡನೇ ಅಪರಾಧಕ್ಕೆ 1000, 1 ರಿಂದ 10 ಕೆ.ಜಿ.ವರೆಗೆ ಮೊದಲನೆ ಅಪರಾಧಕ್ಕೆ ರೂ.2 ಸಾವಿರ, ಎರಡನೇ ಅಪರಾಧಕ್ಕೆ ರೂ.5 ಸಾವಿರ, 10 ರಿಂದ 50 ಕೆ.ಜಿ.ವರೆಗೆ ಮೊದಲನೇ ಅಪರಾಧಕ್ಕೆ ರೂ.5 ಸಾವಿರ,…

Read More

ಮಡಿಕೇರಿ ಜು.19 : ಕೇಂದ್ರದ ಮಾಜಿ ಸಚಿವ ಹಾಗೂ ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ರಾಜ್ಯಸಭಾ ನಿಧಿಯಿಂದ ಕೊಡಗು ಜಿಲ್ಲೆಗೆ ನೀಡಿದ ಅನುದಾನದಲ್ಲಿ ನೂರುಕ್ಕನಾಡ್ ಹಿಲ್ಸ್-ಕತ್ತಲೆಕಾಡ್ ರಸ್ತೆ ಅಭಿವೃದ್ಧಿಯಾಗಿದೆ. ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಡಾ.ಸುಬ್ರಮಣಿಯನ್ ಸ್ವಾಮಿ ಅವರ ಆಪ್ತ ಹಾಗೂ ವಿಹೆಚ್‍ಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕೊಡವರು ಹಾಗೂ ಕೊಡಗಿನ ಮೇಲಿನ ಅಭಿಮಾನ ಮತ್ತು ಪ್ರೀತಿಯಿಂದ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಅನುದಾನವನ್ನು ನೀಡಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಪ್ರಯತ್ನದ ಫಲವಾಗಿ ಇಂದು ರಸ್ತೆ ನಿರ್ಮಾಣಗೊಂಡಿದೆ. ಗ್ರಾಮಸ್ಥರು ಕಾಮಗಾರಿಯ ಬಗ್ಗೆ ಹೆಚ್ಚು ಆಸಕ್ತಿ ತೋರಿ ತಮ್ಮನ್ನು ತಾವು ತೊಡಗಿಸಿಕೊಂಡ ಕಾರಣ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗಿದೆ ಎಂದರು. ಯಾವುದೇ ಯೋಜನೆಗಳು ಅನುಷ್ಠಾನಗೊಳ್ಳುವಾಗ ಆಯಾ ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟದ ಬಗ್ಗೆ ನಿಗಾ ವಹಿಸಬೇಕಾಗುತ್ತದೆ. ಹೆದ್ದಾರಿಗಳು ಮಾತ್ರ ಉತ್ತಮವಾಗಿದ್ದರೆ ಸಾಲದು, ಗ್ರಾಮೀಣ…

Read More

ಮಡಿಕೇರಿ ಜು.19 : ಜಿಲ್ಲಾ ಸಹಾಯವಾಣಿ 08272-298379, 9535626053, ಮಡಿಕೇರಿ ಸಹಾಯವಾಣಿ 08272-295087, 9980898522, ಸೋಮವಾರಪೇಟೆ ಸಹಾಯವಾಣಿ 08276-200023, 9980955250, ಕುಶಾಲನಗರ ಸಹಾಯವಾಣಿ 08276-200023, 9980955250, ವಿರಾಜಪೇಟೆ ಸಹಾಯವಾಣಿ 7795732295, ಪೊನ್ನಂಪೇಟೆ ಸಹಾಯವಾಣಿ 7795732295.

Read More

ಮಡಿಕೇರಿ ಜು.19 : ಜಿಲ್ಲೆಯ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000 ಗಳನ್ನು ನೀಡುವ ಸರ್ಕಾರದ ಪ್ರಮುಖ ಕರ್ಯಕ್ರಮಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಬುಧವಾರ ಚಾಲನೆ ದೊರೆತಿದ್ದು, ಜು.20 ರಿಂದ ಕೊಡಗು ಜಿಲ್ಲೆಯಲ್ಲಿ ನೋಂದಣಿ ಕಾರ್ಯ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ  ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖ ಅರ್ಹತೆಗಳು:-ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಮಾತ್ರ ಅನ್ವಯವಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಯಾರು ಅರ್ಹರಾಗುವುದಿಲ್ಲ :  ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‍ಟಿ ರಿಟನ್ರ್ಸ್ ಸಲ್ಲಿಸುವವರಾಗಿದ್ದಲ್ಲಿ ಅರ್ಹರಾಗುವುದಿಲ್ಲ. ಯೋಜನೆಯಡಿ ನೋಂದಾಯಿಸಲು ಬೇಕಾದ ದಾಖಲಾತಿಗಳು: ಪಡಿತರ ಚೀಟಿಯ ಸಂಖ್ಯೆ, ಯಜಮಾನಿಯ ಹಾಗೂ ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಯಜಮಾನಿ ಆಧಾರ್‍ಗೆ ಜೋಡಣೆಯಾಗಿರುವ ಬ್ಯಾಂಕ್…

Read More

ಮಡಿಕೇರಿ ಜು.19 :  ರಾತ್ರಿ ಸುರಿದ ಭಾರೀ ಮಳೆಗೆ ಮನೆಯ ಮೇಲ್ಛಾವಣಿ  ಕುಸಿದು ಗೋಡೆಗಳಿಗೆ ಹಾನಿಯಾಗಿರುವ ಘಟನೆ  ಸೋಮವಾರಪೇಟೆ ಮಾದೇಶ್ವರ ಬ್ಲಾಕ್ ನಡೆದಿದೆ.   ಮಾದೇಶ್ವರ ಬ್ಲಾಕ್ ನ  ನಿವಾಸಿ  ತಿಮ್ಮಯ್ಯ ಎಂಬುವವರ ಮನೆಯ  ಮೇಲ್ಚಾವಣಿ ಕುಸಿದು ಅಡುಗೆ ಮನೆ ಹಾಗೂ ಕೊಣೆಯ ಗೋಡೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, ಅಪಾರ ನಷ್ಟ ಉಂಟಾಗಿದೆ.     

Read More

ಮಡಿಕೇರಿ ಜು.19 : ಬೆಟ್ಟಗೇರಿ ಗ್ರಾಮ ಪಂಚಾಯ್ತಿಯ ಅರ್ವತ್ತೊಕ್ಲು ಗ್ರಾಮದಲ್ಲಿ ಬೇಕೋಟ್ ಮಕ್ಕ ಕ್ಲಬ್ ವತಿಯಿಂದ ಜು.23 ರಂದು ತೃತೀಯ ವರ್ಷದ ಹಿಂದು ಬಾಂಧವರ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆಯೆಂದು ಕ್ಲಬ್ ಸಲಹೆಗಾರರಾದ ಕಡ್ಲೇರ ಕೀರ್ತನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ವತ್ತೊಕ್ಲು ಗ್ರಾಮದ ತಳೂರು ಎಂ.ಚಂಗಪ್ಪ ಮತ್ತು ತಳೂರು ಎಂ.ಕುಶಾಲಪ್ಪನವರ ಗದ್ದೆಯಲ್ಲಿ ವೈವಿಧ್ಯಮಯವಾದ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕ್ರೀಡಾಕೂಟಕ್ಕೆ ಬೆಳಗ್ಗೆ 8 ಗಂಟೆಗೆ ಸಂಸದ ಪ್ರತಾಪ ಸಿಂಹ ಮತ್ತು ಸ್ಥಳ ದಾನಿಗಳಾದ ತಳೂರು ಎಂ.ಚಂಗಪ್ಪ, ತಳೂರು ಎಂ.ಕುಶಾಲಪ್ಪ ಮತ್ತು ತಳೂರು ಜಿ. ದೇವರಾಜ್ ಅವರು ಚಾಲನೆ ನೀಡಲಿದ್ದು, ಹಲ ಗಣ್ಯರನ್ನು ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ. ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುತ್ತದೆಂದು ಹೇಳಿದರು. ಸ್ಪರ್ಧೆಗಳು- ಕೆಸರು ಗದ್ದೆ ಕ್ರೀಡಾ ಕೂಟದಲ್ಲಿ ತಲಾ 16 ತಂಡಗಳಿಗೆ ಸೀಮಿತವಾಗಿ ಪುರುಷರ ಕ್ರಿಕೆಟ್, ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಆಸಕ್ತ ತಂಡಗಳು ಜು.21 ರ ಸಂಜೆ 5 ಗಂಟೆಯ ಒಳಗಾಗಿ ತಮ್ಮ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕು.…

Read More

ಮಡಿಕೇರಿ ಜು.19 : ಸರ್ಕಾರಿ ಕಚೇರಿಗಳಲ್ಲಿ ಕಳೆದ ಹಲವು ವರ್ಷಗಳಿಂದ ಖಾಯಂ ಆಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಮತ್ತು ಅರ್ಜಿಗಳನ್ನು ವಿಲೇವಾರಿ ಮಾಡದೆ ಸತಾಯಿಸಲಾಗುತ್ತಿದೆ ಎಂದು ಸೋಮವಾರಪೇಟೆ ರೈತ ಸಂಘದ ಸಂಚಾಲಕ ಕೆ.ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಕೂರು ಗಾಮದ ವ್ಯಕ್ತಿಯೊಬ್ಬರು ಜಾಗವನ್ನು ಮಾರಾಟ ಮಾಡಲು ಅನುಮತಿ ಕೋರಿ ಕಳೆದ ಐದು ವರ್ಷಗಳಿಂದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ಕಚೇರಿಗೆ ಹಲವು ಬಾರಿ ಅರ್ಜಿ ಸಲ್ಲಿಸಿದ್ದು, ಅಧಿಕಾರಿಗಳು ಇಲ್ಲಸಲ್ಲದ ಸಬೂಬು ನೀಡಿ ಕಚೇರಿಯಿಂದ ಕಚೇರಿಗೆ ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿದರು. ಸಂಬಂಧಿಸಿದ ವ್ಯಕ್ತಿಯು ವೃದ್ದಾಪ್ಯ ಮತ್ತು ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದು, ಜಾಗವನ್ನು ಮಾರಾಟ ಮಾಡಿ ಮಗನ ಮನೆಗೆ ತೆರಳಲು ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಮನವಿ ಮಾಡಿದರು. ಕಳೆದ ಹಲವು ವರ್ಷಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಂದ ತೊಂದರೆಯಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ…

Read More

ಮಡಿಕೇರಿ ಜು.19 : ನಗರಸಭಾ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲೆ ಐಟಿಐ ಜಂಕ್ಷನ್ ಬಳಿ ನಡೆದಿರುವ ಹಲ್ಲೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಎಸ್‌ಆರ್‌ವಿಕೆಎಲ್ ಫೇರ್ ಅಸೋಸಿಯೇಷನ್ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಡಾ.ಮೋಹನ್ ಅಪ್ಪಾಜಿ, ನಗರಸಭಾ ಸದಸ್ಯರಾಗಿರುವ ಕಾಳಚಂಡ ಅಪ್ಪಣ್ಣ ಅವರು ನಮ್ಮ ವೆಲ್ ಫೇರ್ ಅಸೋಸಿಯೇಷನ್ ಸದಸ್ಯರೂ ಆಗಿದ್ದಾರೆ. ಜಾಗದ ದಾಖಲೆಗಳಿಗೆ ಸಂಬಂಧಿಸಿದಂತೆ ಇವರ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ. ದಾಖಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಅಥವಾ ಉಪ ವಿಭಾಗಾಧಿಕಾರಿಗಳಿಗೆ ದೂರನ್ನು ನೀಡಬಹುದಿತ್ತು. ಆದರೆ, ನಗರಸಭಾ ಸದಸ್ಯನ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯವೆಂದರು. ಇತ್ತೀಚೆಗೆ ಐಟಿಐ ಜಂಕ್ಷನ್ ಬಳಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಈ ಬಗ್ಗೆಯೂ ಪೊಲೀಸ್ ಇಲಾಖೆಯ ಗಮನವನ್ನು ಅಸೋಸಿಯೇಷನ್ ಸೆಳೆದಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಅಸೋಸಿಯೇಷನ್ ಸದಸ್ಯ, ಸುಬ್ರಮಣ್ಯ ನಗರದ ನಿವಾಸಿ ಹುದೇರಿ ನಾಗೇಶ್ ಮಾತನಾಡಿ, ಐಟಿಐ ಜಂಕ್ಷನ್ ಬಳಿ ಬೆಳಗ್ಗೆ…

Read More