ಮಡಿಕೇರಿ ಸೆ.16 : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಭಾರತೀಯ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಒಂದು ಸಾವಿರದ ಐದುನೂರಕ್ಕೂ ಅಧಿಕ ವಿದ್ಯಾರ್ಥಿಗಳು ಏಕಕಾಲದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಒಟ್ಟಾಗಿ ಓದಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಸಂವಿಧಾನದ ಪೀಠಿಕೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಲೇಖಕ: admin
ಮಡಿಕೇರಿ ಸೆ.15 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಇಂದು ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪಾದಯಾತ್ರೆಯನ್ನು ಆರಂಭಿಸಿತು. ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದೆ. ಶುಕ್ರವಾರ ಬೆಳಗ್ಗೆ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಕೊಡವ ಲ್ಯಾಂಡ್ ಪರ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಂಡಿತು. ತಲಕಾವೇರಿ (ತಾವುನಾಡ್), ದೇವಟ್ ಪರಂಬ್ (ದೇಶ ಮಂದ್), ಮಚ್ಚುರೋಡೆ ಮಂದ್ (ಬಲ್ಲತ್ ನಾಡ್) ಮತ್ತು ಬೇಂಗ್ ನಾಡ್ ಮಂದ್ (ಚೇರಂಬಾಣೆ) ಯಲ್ಲಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪಾದಯಾತ್ರೆಯ ಉದ್ದೇಶದ ಕುರಿತು ಮಾತನಾಡಿದರು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಬೇಡಿಕೆ ಈಡೇರುವವರೆಗೆ ಸಂವಿಧಾನದ ಚೌಕಟ್ಟಿನಡಿ ಸಿಎನ್‌ಸಿ…
ಮಡಿಕೇರಿ ಸೆ.15 : ಸಾರ್ವಜನಿಕರನ್ನು ಸತಾಯಿಸದೆ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ಡಿವೈಎಸ್‍ಪಿ ಎಂ.ಎಸ್.ಪವನ್ ಕುಮಾರ್ ಅವರು ಹೇಳಿದ್ದಾರೆ. ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಶುಕ್ರವಾರ ದೂರು ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಆಗಮಿಸಿದಾಗ ಸೌಜನ್ಯದಿಂದ ನಡೆದುಕೊಳ್ಳಬೇಕು. ಸಾರ್ವಜನಿಕರನ್ನು ಕುಳಿತು ಮಾತನಾಡಿಸಬೇಕು. ತಮ್ಮ ಹಂತದಲ್ಲಿ ಕೆಲಸ ಆದಲ್ಲಿ ಕಾಲ ಮಿತಿಯಲ್ಲಿ ಮಾಡಿಕೊಡಬೇಕು. ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು ಎಂದು ಲೋಕಾಯುಕ್ತ ಡಿವೈಎಸ್‍ಪಿ ಅವರು ಸಲಹೆ ಮಾಡಿದರು. ಸರ್ಕಾರಿ ಕಚೇರಿಗಳಲ್ಲಿ ಮಾಜಿ ಸೈನಿಕರು ಹಾಗೂ ವೃದ್ಧರಿಗೆ ಪ್ರಥಮ ಆದ್ಯತೆ ನೀಡಿ ಕೆಲಸ ಮಾಡಬೇಕು. ಮಹಿಳೆಯರು ಹಾಗೂ ಇತರರಿಗೆ ಹಲವು ದಾಖಲಾತಿ, ಪ್ರಮಾಣ ಪತ್ರಗಳಿಗೆ ಕಚೇರಿಗೆ ಆಗಮಿಸಿದಾಗ ನಿಯಮಾನುಸಾರ ಕೆಲಸ ಮಾಡಿಕೊಡಬೇಕು ಎಂದರು. ಪ್ರತೀ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಗುರುತಿನ ಚೀಟಿಯನ್ನು ಹೊಂದಿರಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಪವನ್ ಕುಮಾರ್ ಅವರು ನಿರ್ದೇಶನ…
ಮಡಿಕೇರಿ ಸೆ.15 : ಇಡೀ ವಿಶ್ವದಲ್ಲಿಯೇ ಮಾದರಿ ಸಂವಿಧಾನವನ್ನು ಹೊಂದಿರುವ ಭಾರತವು ಏಕತೆ ಮತ್ತು ಭ್ರಾತೃತ್ವವನ್ನು ಸಾರಿದೆ. ಸಮಾನತೆ, ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ ಹಾಗೂ ಪ್ರಜಾಸತ್ತಾತ್ಮಕ ಗಣರಾಜ್ಯವನ್ನು ಹೊಂದಿದೆ ಎಂದು ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಶುಕ್ರವಾರ ನಡೆದ ‘ಸಂವಿಧಾನ ಪೀಠಿಕೆ ವಾಚನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಂವಿಧಾನ ಪೀಠಿಕೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಒಳಗೊಂಡಿದ್ದು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವತಂತ್ರವನ್ನು ಸಂವಿಧಾನದ ಪೀಠಿಕೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದರು. ಭಾರತೀಯ ಪ್ರಜೆಗಳಾದ ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಅವಕಾಶಗಳು ದೊರೆಯುವಂತೆ ಮಾಡುವುದು ಸಂವಿಧಾನದ ಆಶಯವಾಗಿದೆ. ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕಿದೆ ಎಂದು ಅನಿತಾ ಪೂವಯ್ಯ ಅವರು ವಿವರಿಸಿದರು. ಭಾರತ…
ಮಡಿಕೇರಿ ಸೆ.15 : ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡದೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವುದು ಅಸಾಧ್ಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 40ನೇ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷ ಗುರುತಿಸಬೇಕು. ಪ್ರತಿ ಹಂತದಲ್ಲಿ ಕಾರ್ಯಕರ್ತೆಯರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಮಹಿಳೆಯರು ರಾಜಕೀಯವಾಗಿ ಸಬಲರಾಗಬೇಕು, ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಕನಸು ನನಸಾಗಿಸಬೇಕು. ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ ಮಹಿಳೆಯರ ಮೇಲೆ…
ಮಡಿಕೇರಿ ಸೆ.15 : “ಪೊಮ್ಮಾಲೆ ಕೊಡಗ್” ಕೊಡವ ಸಿನಿಮಾದ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರಿಗೆ “ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ” ಲಭಿಸಿದೆ. ಅ.8 ರಂದು ಮಹಾರಾಷ್ಟ್ರದ ಔರಂಗಬಾದ್ ಶಿಲೋಡಿನಲ್ಲಿ ನಡೆಯುವ ಐಡಿಯಲ್ ಅಂತರ ರಾಷ್ಟ್ರೀಯ ಸಿನಿಮೋತ್ಸವದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಕಾಶ್ ಕಾರ್ಯಪ್ಪ ಅವರು ಪ್ರಶಸ್ತಿ ಪಡೆಯಲಿದ್ದಾರೆ. 2022ರಲ್ಲಿ ಸ್ವಸ್ತಿಕ್ ಎಂಟರ್ ಟೈನ್‍ಮೆಂಟ್ ಬ್ಯಾನರ್ ಅಡಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣದಲ್ಲಿ ಹಲವು ಯಶಸ್ವಿ ಕೊಡವ ಮತ್ತು ಕನ್ನಡ ಸಿನಿಮಾಗಳು ತೆರೆಗೆ ಬಂದಿವೆ. ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದು ಖ್ಯಾತಿ ಗಳಿಸಿರುವ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು “ಪೊಮ್ಮಾಲೆ ಕೊಡಗ್” ಕೊಡವ ಚಿತ್ರವನ್ನು ನಿರ್ದೇಶಿಸಿ ಹೆಸರು ಗಳಿಸಿದ್ದಾರೆ. ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವದ ಎನ್‍ಎಫ್‍ಡಿಸಿ ಫಿಲಂ ಬಜಾರ್ ನಲ್ಲಿ ಪ್ರಥಮ ಬಾರಿಕಗೆ ಪ್ರದರ್ಶನ ಕಂಡ ಮೊದಲ ಕೊಡವ ಸಿನಿಮಾ ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಗಿದೆ. ಅಲ್ಲದೇ ಕೊಲ್ಕತ್ತ ಅಂತರಾಷ್ಟ್ರೀಯ ಫಿಲಂ ಫೆಸ್ಟಿವಲ್‍ನಲ್ಲಿ ಏಷ್ಯನ್ ವಿಭಾಗದ ಸ್ಪರ್ಧೆಗೆ ಆಯ್ಕೆಯಾದ ಮೊದಲ ಕೊಡವ…
ಮಡಿಕೇರಿ ಸೆ.15 : ನಾಪೋಕ್ಲು ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಅಸ್ಸಾಂ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ನಾಪೋಕ್ಲುವಿನಲ್ಲಿ ವಾಸವಿರುವ ಅಸ್ಸಾಂ ಮೂಲದ ದಿಲ್ಷಾನ್ ಬೇಗಂ(44) ಬಂಧಿತ ಆರೋಪಿಯಾಗಿದ್ದು, ಆಕೆಯ ಬಳಿಯಿದ್ದ 2 ಕೆ.ಜಿ. 260 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆ ಪೊಲೀಸರು ದಾಳಿ ನಡೆಸಿದರು. ಸೋಮವಾರಪೇಟೆ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ ಮಾರ್ಗದರ್ಶನದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಸೆ.15 : ಪಿಎಂ ಸ್ವನಿಧಿ ಯೋಜನೆಯ ರಾಜ್ಯ ಸಂಚಾಲಕ ಎ.ರಾಮದಾಸ್ ಅವರನ್ನು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಸನ್ಮಾನಿಸಿ ಗೌರವಿಸಿತು. ಪತ್ರಿಕಾ ವಿತರಕರನ್ನು ಪಿಎಂ ಸ್ವನಿಧಿ ಯೋಜನೆ ವ್ಯಾಪ್ತಿಗೆ ಸೇರಿಸಲು ಸಹಕರಿಸಿದ ಹಿನ್ನೆಲೆ ಸಂಘದ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದರು. ರಾಮದಾಸ್ ಅವರನ್ನು ಮೈಸೂರಿನಲ್ಲಿ ಭೇಟಿಯಾದ ಸಂದರ್ಭ ಸಂಘದ ರಾಜ್ಯಾಧ್ಯಕ್ಷ ಶಂಕರ್ ಕುದರೆಮೋತಿ, ಕೊಡಗು ಜಿಲ್ಲಾಧ್ಯಕ್ಷ ಟಿ.ಜಿ.ಸತೀಶ್, ನಿರ್ದೇಶಕ ಕೆ.ಎನ್.ಶಿವಪ್ರಸಾದ್, ವಿವಿಧ ಜಿಲ್ಲೆಗಳ ಪದಾಧಿಕಾರಿಗಳಾದ ಕೃಷ್ಣ ಬೆಂಗಳೂರು, ಸತೀಶ್ ಶಿವಮೊಗ್ಗ, ಕೃಷ್ಣ ದಾವಣಗೆರೆ, ಸಂತೋಷ್ ಹಾಸನ, ಸುನಿಲ್ ಹಾಸನ ಮತ್ತಿತರರು ಹಾಜರಿದ್ದರು. ಪಿಎಂ ಸ್ವನಿಧಿ ಯೋಜನೆ ವ್ಯಾಪ್ತಿಗೆ ಪತ್ರಿಕಾ ವಿತರಕರನ್ನು ಸೇರ್ಪಡೆ ಮಾಡಿದ್ದು, ಈ ವರ್ಗದವರು ಸೇರಿದಂತೆ ಬೀದಿ ಬದಿ ವ್ಯಾಪಾರಿಗಳು ಒಳಗೊಂಡ ಅಸಂಘಟಿತ ಕ್ಷೇತ್ರದಲ್ಲಿರುವವರಿಗೆ ಕಿರು ಸಾಲಸೌಲಭ್ಯ ಕಲ್ಪಿಸಲು ಸೆ.16ರಿಂದ ಅ.15ರ ವರೆಗೆ ಮಾಸಾಚರಣೆ ಕೈಗೊಳ್ಳಲಾಗಿದೆ ಎಂದು ಟಿ.ಜಿ.ಸತೀಶ್ ತಿಳಿಸಿದರು. ಪಿಎಂ ಸ್ವನಿಧಿ ಹಾಗೂ ಸ್ವನಿಧಿ ಸೇ ಸಮೃದ್ಧಿ ಯೋಜನೆಗಳಡಿ ಎಲ್ಲಾ ಎಂಟು ಸಾಮಾಜಿಕ ಭದ್ರತಾ ಯೋಜನೆಗಳನ್ನು…
ಮಡಿಕೇರಿ ಸೆ.15 : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಎನ್.ಎಸ್.ಎಸ್ ವಿಭಾಗದಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಒಟ್ಟಾಗಿ ಸಂವಿಧಾನದ ಪ್ರಸ್ತಾವನೆ/ಪೀಠಿಕೆಯನ್ನು ಓದುವ ಮೂಲಕ ನಮ್ಮ ಜೀವನದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯುತ್ತೇವೆಂದು ಪ್ರತಿಜ್ಞೆ ಮಾಡಿದರು. ಈ ಸಂದರ್ಭ ಮಾತನಾಡಿದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಆರ್.ದಿವ್ಯ, 1997ರ ಸೆ.15ರಂದು ಇಂಟರ್ ಪಾರ್ಲಿಮಂಟರಿ ಯೂನಿಯನ್ (IPU) ಪ್ರಜಾಪ್ರಭುತ್ವದ ಸಾರ್ವತ್ರಿಕ ಘೋಷಣೆಯನ್ನು (Universal Declaration on Democracy) ಅಂಗೀಕರಿಸಿದ ಸವಿನೆನಪಿಗಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2007 ನವೆಂಬರ್ 8 ರಂದು ನಿರ್ಣಯವನ್ನು ಅಂಗೀಕರಿಸಿ ಇನ್ನು ಮುಂದೆ ಪ್ರತೀ ವರ್ಷ ಸೆ.15ನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾಗಿ ಆಚರಿಸುವ ನಿರ್ಣಯ ಕೈಗೊಂಡರು. ಅದರಂತೆ 2008ರಿಂದ ಸೆಪ್ಟೆಂಬರ್ 15ನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾಗಿ ಆಚರಿಸುತ್ತಾ ಬಂದಿದ್ದು, ಈ ವರ್ಷದ ಘೋಷವಾಕ್ಯ “Empowering the Next Generation” ಎಂಬುದಾಗಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ನಮ್ಮ…
ಮಡಿಕೇರಿ ಸೆ.15 : ಶೂ ಒಳಗೆ ಸೇರಿಕೊಂಡಿದ್ದ ನಾಗರಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಉರಗ ರಕ್ಷಕ ಸ್ನೇಕ್ ಸುರೇಶ್ ಪೂಜಾರಿ ಯಶಸ್ವಿಯಾಗಿದ್ದಾರೆ. ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿ ಗ್ರಾಮದ ಶಾಲಿ ಎಂಬುವವರು ಮನೆಯ ಹೊರ ಭಾಗದಲ್ಲಿ ಇಟ್ಟಿದ್ದ ಶೂ ಒಳಗೆ ಹಾವು ಸೇರಿಕೊಂಡಿತ್ತು. ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳಲು ಶೂ ತೆಗೆದಾಗ ಹಾವು ಇರುವುದು ಕಂಡು ಬಂತು. ಆತಂಕಗೊಂಡ ಶಾಲಿ ಅವರು ತಕ್ಷಣ ಸ್ನೇಕ್ ಸುರೇಶ್ ಪೂಜಾರಿ ಅವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಸುರೇಶ್ ಹಾವನ್ನು ಸೆರೆ ಹಿಡಿದು ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟರು. ಮನೆಯ ಹೊರ ಭಾಗದಲ್ಲಿರುವ ಪಾದರಕ್ಷೆ ಮತ್ತಿತರ ವಸ್ತುಗಳನ್ನು ಬಳಸುವಾಗ ಎಚ್ಚರಿಕೆಯಿಂದ ಸೂಕ್ಷ್ಮವಾಗಿ ಗಮನಿಸಬೇಕು. ಹಾವುಗಳು ಕಂಡು ಬಂದಲ್ಲಿ ಕೊಲ್ಲದೆ ಉರಗ ರಕ್ಷಕರಿಗೆ ಮಾಹಿತಿ ನೀಡಬೇಕು ಎಂದು ಸುರೇಶ್ ಮನವಿ ಮಾಡಿದ್ದಾರೆ.






