ಮಡಿಕೇರಿ ಸೆ.15 : ಭಾಗಮಂಡಲ ಸಮೀಪದ ಅಯ್ಯಂಗೇರಿ ಗ್ರಾಮದ ಉದಿಯನ ಕಾಳಪ್ಪ ಹಾಗೂ ದಮಯಂತಿ ಅವರ ಪುತ್ರ, ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯು.ಕೆ.ಜಿತನ್ (33) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಬೆoಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ಮೃತಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಭಾರತೀಯ ಸೇನೆಯಲ್ಲಿ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಿತನ್ ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಪ್ರಸ್ತುತ ಎಂಇಜಿ ಸೆಂಟರ್ ನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೆ.16 ರಂದು ಅಂತ್ಯಕ್ರಿಯೆ ನಡೆಯಲಿದೆ. ಮೃತರು ಪತ್ನಿ ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ.
ಲೇಖಕ: admin
ಬೆಂಗಳೂರು ಸೆ.15 : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದರು. ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು. We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ…
ಮಡಿಕೇರಿ ಸೆ.15 : ಗೌರಿ ಗಣೇಶೋತ್ಸವದ ಪ್ರಯುಕ್ತ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಸಾಮೂಹಿಕ ಗಣಪತಿ ಹೋಮ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಹಾಗೂ ತಕ್ಕಮುಖ್ಯಸ್ಥರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ದೇವಾಲಯದ ತಕ್ಕಮುಖ್ಯಸ್ಥರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಸುಗುಣ ಮುತ್ತಣ್ಣ, ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಸೆ.19ರಂದು ಚೌತಿ ಪೂಜೆ ನಡೆಯಲಿದ್ದು, ಊರಿನವರು ಮಾತ್ರವಲ್ಲದೆ ಸಾರ್ವಜನಿಕರು ಸಾಮೂಹಿಕ ಗಣಪತಿ ಹೋಮದಲ್ಲಿ ಪಾಲ್ಗೊಂಡು ಪೂಜೆ ಮಾಡಿಸಬಹುದಾಗಿದೆ ಎಂದರು. ಅಂದು ಬೆಳಿಗ್ಗೆ 7.30 ಗಂಟೆಗೆ ಗಣಪತಿ ಹೋಮ ಆರಂಭವಾಗಲಿದ್ದು, ಪ್ರಸಾದ ವಿನಿಯೋಗದ ಬಳಿಕ ಬೆಳಗಿನ ಉಪಹಾರ ಇರುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಪೂಜೆ ಮಾಡಿಸುವವರು ಒಂದು ದಿನ ಮುಂಚಿತವಾಗಿ ಪೂಜಾ ಸಾಮಾಗ್ರಿಗಳನ್ನು ನೀಡುವ ಮೂಲಕ ಪೂಜೆಯ ಬಗ್ಗೆ ಮಾಹಿತಿ ನೀಡಬೇಕಿದೆ. ಹೆಚ್ಚಿನ ಮಾಹಿತಿಗೆ 9845308910 ಅಥವಾ 9483815430 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಮಡಿಕೇರಿ ಸೆ.15 : ಕೊಡವ ಕೂಟಾಳಿಯಡ ಕೂಟದ ವತಿಯಿಂದ ಪೊನ್ನಂಪೇಟೆ ತಾಲೂಕು ಕಾಕೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಮೆಡಿಕಲ್ ಕಿಟ್ ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಕೂಟದ ಅಧ್ಯಕ್ಷ ಚಂಗುಲಂಡ ಸೂರಜ್, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ಇನ್ನಿತರ ಕಾರಣಗಳಿಂದ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ, ನಮ್ಮ ಕೂಟದ ವತಿಯಿಂದ ಶಾಲೆಯ ಕುಂದು ಕೊರತೆಗಳ ಬಗ್ಗೆ ಶಾಸಕರ ಗಮನಕ್ಕೆ ತರಲಾಗುವುದೆಂದು ತಿಳಿಸಿದರು. ಸಂಘಟನೆಯ ನಿರ್ದೇಶಕ ಬೊಜ್ಜಂಗಡ ಚಂಗಪ್ಪ ಮಾತನಾಡಿ, ಇತ್ತೀಚೆಗೆ ತಮ್ಮ ಊರಿನ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಯ ಬಡಮಕ್ಕಳಿಗೆ ನೋಟ್ ಬುಕ್ ಹಾಗೂ ಮತ್ತಿತರ ಶಾಲಾ ಸಾಮಾಗ್ರಿಗಳ ಕೊರತೆಯ ಬಗ್ಗೆ ಮುಖ್ಯೋಪಾಧ್ಯಾಯರು ತಿಳಿಸಿದ್ದು, ಸ್ವಯಂ ಪ್ರೇರಿತರಾಗಿ ಮೆಡಿಕಲ್ ಕಿಟ್ ಹಾಗೂ ನೋಟು ಬುಕ್ ಗಳನ್ನು ನೀಡಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಮೆಡಿಕಲ್ ಕಿಟ್, ನೋಟ್ ಬುಕ್ ಹಾಗೂ ಇತರ ಸಾಮಾಗ್ರಿಗಳನ್ನು ಶಾಲಾ ಶಿಕ್ಷಕ ವೃಂದದವರಿಗೆ ಹಸ್ತಾಂತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ …
ಮಡಿಕೇರಿ ಸೆ.15 : ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮೊದಲು ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮ ಆಯೋಜಿಸುವಂತೆ ಪೌರಾಯುಕ್ತ ವಿಜಯ ಕೋರಿದ್ದಾರೆ. ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್, ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ ವಿಗ್ರಹಗಳನ್ನು ಬಳಸುವುದು. ಇಲ್ಲವಾದಲ್ಲಿ ರೂ.10 ಸಾವಿರ ವರೆವಿಗೂ ದಂಡ ವಿಧಿಸಲಾಗುವುದು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಪ್ರತಿಷ್ಠಾಪಿಸಿ ಕಾರ್ಯಕ್ರಮಗಳನ್ನು ಆಯೋಜಿಸುವುದು. ನಗರಸಭೆ ವತಿಯಿಂದ ಗಣಪತಿ ವಿಗ್ರಹಗಳ ವಿಸರ್ಜನೆಗೆ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಗೌರಿ ಕೆರೆಯನ್ನು ಗುರುತಿಸಿ, ಅವಶ್ಯ ವ್ಯವಸ್ಥೆಗಳನ್ನು ಮಾಡಿದ್ದು, ಸದರಿ ಸ್ಥಳದಲ್ಲೆ ವಿಗ್ರಹಗಳನ್ನು, ಹೂವು ಹಣ್ಣುಗಳನ್ನು…
ಮಡಿಕೇರಿ ಸೆ.15 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಇಂದು ತೀರ್ಥ ಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪಾದಯಾತ್ರೆಯನ್ನು ಆರಂಭಿಸಿತು. ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದೆ. ಶುಕ್ರವಾರ ಬೆಳಗ್ಗೆ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಕೊಡವ ಲ್ಯಾಂಡ್ ಪರ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಂಡಿತು.
ಮಡಿಕೇರಿ ಸೆ.15 : ಕಾನೂನು ಮಾಪನ ಶಾಸ್ತ್ರ ನೀರಿಕ್ಷಕರು ಮಡಿಕೇರಿ ಕಚೇರಿ ವತಿಯಿಂದ ತಾತ್ಕಾಲಿಕ ಶಿಬಿರವು ಸೆ.14 ರಿಂದ ಸೆ.21 ರವರೆಗೆ ವಿರಾಜಪೇಟೆಯ ಫೆಡರೇಷನ್ ಮಿಲ್ ಆವರಣದಲ್ಲಿ ನಡೆಯಲಿದೆ. ವಿರಾಜಪೇಟೆ ನಗರ ಮತ್ತು ಸುತ್ತಮುತ್ತಲಿನ ವರ್ತಕರು ಮತ್ತು ತೂಕ ಅಳತೆ ಉಪಯೋಗದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮಲ್ಲಿರುವ ತೂಕ ಅಳತೆ ಸಾಧನೆಗಳಿಗೆ ಸತ್ಯಾಪನೆ ಮುದ್ರೆ ಮಾಡಿಸಿಕೊಳ್ಳಬೇಕೆಂದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮಡಿಕೇರಿ ಉಪ ವಿಭಾಗ ನಿರೀಕ್ಷಕರಾದ ಡಿ.ಆರ್ ಲಿಂಗರಾಜು ತಿಳಿಸಿದ್ದಾರೆ.
ಮಡಿಕೇರಿ ಸೆ.15 : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ “ಗಣೇಶ ಚತುರ್ಥಿ” ಹಬ್ಬವನ್ನು ಆಚರಿಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಸೆ.19 ರಂದು “ಗಣೇಶ ಚತುರ್ಥಿ” ಹಬ್ಬವನ್ನು ನಡೆಸಲಾಗುತ್ತಿದೆ. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸೆ.19 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕಾಧಿಕಾರಿ ತಿಳಿಸಿದ್ದಾರೆ.
ಸಿದ್ದಾಪುರ ಸೆ.15 : ರಾಜ್ಯ ದಲ್ಲಿ ನೂತನ ಶಿಕ್ಷಣ ನೀತಿಗೆ ಸಮಿತಿ ರಚಿಸುವಂತೆ ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ ನ ರಾಜ್ಯಾಧ್ಯಕ್ಷೆ ವೀಣಾ ನಾಯ್ಕ್ ಒತಾಯಿಸಿದ್ದಾರೆ. ಪತ್ರಿಕಾ ಪ್ರಕಟನೆ ನೀಡಿದ ಅವರು, ಬಹುತ್ವಕ್ಕೆ ಒತ್ತು ನೀಡುವ ಅವೈಜ್ಞಾನಿಕ ಶಿಕ್ಷಣ ನೀತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ಸ್ವಾಗತ ವ್ಯಕ್ತಪಡಿಸಿದ ಅವರು ಶಿಕ್ಷಣ ತಜ್ಞರು ಹಾಗೂ ವಿದ್ಯಾರ್ಥಿ ಸಂಘಟನೆಯನ್ನು ಒಳಗೊಂಡಂತೆ ಸಮಿತಿ ರಚನೆ ಮಾಡುವಂತೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು. ಶಿಕ್ಷಣವು ಸಮವರ್ತಿ ಪಟ್ಟಿಗೆ ಒಳಪಡುವುದರಿಂದ ಸಂವಿಧಾನಾತ್ಮಕ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಮುಂದಾಗ ಬೇಕಿದೆ ಎಂದರು. ಪ್ರಸ್ತುತ ವಿದ್ಯಾರ್ಥಿಗಳಿಗೆ ಮೌಢ್ಯ, ಕಂದಾಚಾರಗಳನ್ನ ಒಗಲಾಡಿಸುವ ವೈಜ್ಞಾನಿಕ ಶಿಕ್ಷಣ ನೀತಿ ಜಾರಿಯಾಗ ಬೇಕಿದೆ ಎಂದರು. ದತ್ತು ನಿರ್ಧಾರಕ್ಕೆ ವಿರೋಧ:- ಸರಕಾರಿ ಶಾಲೆ ಮತ್ತು ಕಾಲೇಜುಗಳನ್ನು ಸಬಲೀಕರಣಗೊಳಿಸುವ ಹಿನ್ನೆಲೆಯಲ್ಲಿ ಖಾಸಾಗಿಯವರಿಗೆ ದತ್ತು ನೀಡುವ ಸರಕಾರದ ನಿರ್ಧಾರವನ್ನು ಶ್ರವಣ ಬೆಳಗೊಳದಲ್ಲಿ ನಡೆದ ಎ.ಐ.ಎಸ್.ಎಫ್ 16ನೇ ರಾಜ್ಯ ಸಮ್ಮೇಳನದಲ್ಲಿ ಬಲವಾಗಿ ವಿರೋಧಿಸಿದ್ದು, ಸರ್ಕಾರಿ ಶಾಲೆ ಕಾಲೇಜುಗಳ ಬಲವರ್ಧನೆ…
ಮಡಿಕೇರಿ ಸೆ.15 : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಸಾಗ್ಯ ಗ್ರಾಮ ನಿವಾಸಿ ಎಂ.ಮಲ್ಲೇಶ(24) ಎಂಬಾತನೇ ಬಂಧಿತ ಆರೋಪಿ. ಈತನ ಬಳಿಯಿಂದ 28 ಗ್ರಾಂ. ಚಿನ್ನಾಭರಣ, 1 ಬೆಳ್ಳಿ ಚೈನ್ ಸಹಿತ ಒಟ್ಟು 1.39 ಲಕ್ಷ ರೂ. ಮೌಲ್ಯದ ಸ್ವತ್ತನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಮುಡಿ ಗ್ರಾಮದ ರಾಜಕಾಲೋನಿ ನಿವಾಸಿ ಎನ್.ಮಂಜುನಾಥ್ ಅವರು ಇದೇ ಜೂನ್ 17ರಂದು ಬೆಳಗೆ 9 ಗಂಟೆಗೆ ಮನೆಗೆ ಬೀಗ ಹಾಕಿ ಅದರ ಕೀ ಯನ್ನು ಹಿತ್ತಲಿನಲ್ಲಿರುವ ಹೂ ಕುಂಡದಲ್ಲಿಟ್ಟು ಕೆಲಸಕ್ಕೆ ತೆರಳಿದ್ದರು. ಸಂಜೆ ಮನೆಗೆ ಬಂದು ನೋಡಿದಾಗ ಮಲಗುವ ಕೋಣೆಯ ಗಾದ್ರೇಜ್‍ನಲ್ಲಿಟ್ಟಿದ್ದ 1.35 ಲಕ್ಷ ರೂ. ಮೌಲ್ಯದ 28 ಗ್ರಾಂ ಚಿನ್ನಾಭರಣ ಮತ್ತು 4 ಸಾವಿರ ರೂ. ಮೌಲ್ಯದ 1 ಬೆಳ್ಳಿ ಚೈನ್ ಕಳುವಾಗಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಜುನಾಥ್ ಅವರು…






