ಮಡಿಕೇರಿ ಸೆ.15 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವರ ಪುಣ್ಯಕ್ಷೇತ್ರ ತಲಕಾವೇರಿಯಿಂದ (ತಾವುನಾಡ್) ಪಾದಯಾತ್ರೆ ಆರಂಭವಾಯಿತು. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ಪದಾಧಿಕಾರಿಗಳು ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಬೇಡಿಕೆ ಪರ ಪ್ರಾರ್ಥನೆ ಸಲ್ಲಿಸಿದರು. ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದ್ದು, ಮೊದಲ ಹಂತದಲ್ಲಿ ಇಂದು ತಾವುನಾಡ್, ದೇಶ ಮಂದ್ (ತಲಕಾವೇರಿ- ಭಾಗಮಂಡಲ-ಪುಲಿಕೋಟ್) 10.00 ಗಂಟೆಗೆ ಬಲ್ಲತ್‍ನಾಡ್ (ಬಲ್ಲಮಾವಟಿ) 2.30 ಗಂಟೆಗೆ ಬೆಂಗ್‍ನಾಡ್ (ಚೇರಂಬಾಣೆ) (ಮಡಿಕೇರಿ ತಾಲೂಕು) ಮೂಲಕ ಹಾದುಹೋಗುತ್ತದೆ.
ಲೇಖಕ: admin
ಮಡಿಕೇರಿ, ಸೆ.15 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ ಸೆ.16 ರಂದು ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಮೇಳೈಸಲಿವೆ. ಬೆಳಿಗ್ಗೆ 10 ಗಂಟೆಯಿಂದ ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ವಿವಿಧ ಮನರಂಜನಾ ಸ್ಪರ್ಧೆಗಳ ಮೋಜು ಅನಾವರಣಗೊಳ್ಳಲಿದೆ. ಬಳಿಕ ಮಧ್ಯಾಹ್ನ 1.30ರಿಂದ ಜಿಲ್ಲೆಯ ಪ್ರತಿಷ್ಠಿತ ನೃತ್ಯ ತರಬೇತು ಸಂಸ್ಥೆಗಳ ಮಕ್ಕಳಿಂದ ಮೈನವಿರೇಳಿಸುವ ನೃತ್ಯ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ನೃತ್ಯೋತ್ಸವದಲ್ಲಿ ಪಾಲ್ಗೊಳ್ಳಲಿರುವ ಸಂಸ್ಥೆಗಳ ಕಿರುಪರಿಚಯ ಇಲ್ಲಿದೆ. ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ, ಮಡಿಕೇರಿ ಕಳೆದ ನಾಲ್ಕು ವರ್ಷಗಳ ಹಿಂದೆ ಆರಂಭವಾದ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ಅಭಿಷೇಕ್ ಸಾರಥ್ಯದಲ್ಲಿ ನಡೆಯುತ್ತಿದೆ. ನಾಲ್ಕು ಬಾರಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಸಂಸ್ಥೆ, ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದೆ. ಸೋಮವಾರಪೇಟೆಯ ಎಡಿಸಿ ಡ್ಯಾನ್ಸ್ ಸ್ಪರ್ಧೆಯಲ್ಲಿ ಪ್ರಥಮ, ಕುಶಾಲನಗರದ ಡ್ಯಾನ್ಸ್ ಬೀಟ್ಸ್ ಚಾಂಪಿಯನ್‍ಶಿಪ್‍ನಲ್ಲಿ ಪ್ರಥಮ, ಗೋಣಿಕೊಪ್ಪಲಿನ ರಾಜ್ಯ ಮಟ್ಟದ ಕಲೋತ್ಸವ ಚಾಂಪಿಯನ್‍ಶಿಪ್‍ನಲ್ಲಿ ಪ್ರಥಮ, 2022ರ ಯುವ ದಸರಾದಲ್ಲಿ ಪ್ರಥಮ ಸ್ಥಾನ,…
ಮಡಿಕೇರಿ ಸೆ.15 : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಶ್ರೀ ರಾಜ ರಾಜೇಶ್ವರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎನ್.ಡಿ.ವಿಜು ಉದ್ಘಾಟಿಸಿದರು. ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ಬಡ್ಡಿರ ನಳಿನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರತಿಭಾ ಕಾರಂಜಿಯ ಹಿನ್ನಲೆಯ ಕುರಿತು ಮಾಹಿತಿ ನೀಡಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವೀಣಾ ರೈ, ಬಾಳೆಯಡ ದಿವ್ಯ, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕರಾದ ಕವನ್ ಕುಮಾರ್, ರೋಸಮ್ಮ ಉಪಸ್ಥಿತರಿದ್ದರು. ಪ್ರತಿಭಾ ಕಾರಂಜಿಯಲ್ಲಿ ಚೇರಂಬಾಣೆ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಿದ್ದಾಪುರ ಸೆ.14 : ವಿದ್ಯಾರ್ಥಿಗಳು ಶಿಕ್ಷಣ, ಕ್ರೀಡೆ, ಕಲಾ ಸಾಹಿತ್ಯ ಅಭಿಮಾನದಿಂದ ತಮ್ಮದೇಯಾದ ಪ್ರತಿಭೆ ಅನಾವರಣಗೊಳಿಸುವ ಮೂಲಕ ಪ್ರತಿಭಾನ್ವಿತರಾಗಿ ಸಮಾಜದಲ್ಲಿ ಗುರುತಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಇಕ್ರಾ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮೂಹ ಸಂಪನ್ಮೂಲ ಚಟ್ಟಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಾಮಾಜಿಕ ಜಾಲತಾಣ ಹಾಗೂ ದುಷ್ಟಗಳಿಂದ ದೂರವಿದ್ದು ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡಲ್ಲಿ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದ್ದು, ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಪೋಷಕರು ಹೆಚ್ಚು ಗಮನ ಹರಿಸುವುದರ ಮೂಲಕ ಉತ್ತಮ ಭವಿಷ್ಯ ರೂಪಿಸಲು ಸಹಕಾರ ನೀಡಬೇಕೆಂದು ಹೇಳಿದ ಅವರು ವಿದ್ಯಾರ್ಥಿಗಳಿಗೆ ಇಲಾಖೆಯ ನಿರ್ದೇಶನಗಳ ಬಗ್ಗೆ ಮಾಹಿತಿ ನೀಡಿದರು. ಚಟ್ಟಳ್ಳಿ ಕ್ಲಸ್ಟರ್ ಮಟ್ಟದ ಸಿ ಆರ್ ಪಿ ಅಶೋಕ್ ಮಾತನಾಡಿ ಒಂದರಿಂದ ಹತ್ತನೇ ತರಗತಿ ವರೆಗಿನ…
ಮಡಿಕೇರಿ ಸೆ.14 : ಪ್ರವಾದಿ ಪೈಗಂಬರ್ ಮುಹಮ್ಮದ್ ಮುಸ್ತಫ (ಸ್ವಲ್ಲಲ್ಲಾಹು ಅಲೈಹಿ ವಸಲ್ಲಮ್) ಅವರ ಜನ್ಮದಿನದ ಅಂಗವಾಗಿ ಕೊಡಗು ಜಿಲ್ಲಾ ಎಸ್‍ವೈಎಸ್ ಸಮಿತಿ ವತಿಯಿಂದ ಸೆ.17 ರಂದು ಬೃಹತ್ ಮೀಲಾದ್ ಘೋಷಣಾ ರ್ಯಾಲಿ ಹಾಗೂ ಮೌಲಿದ್ ಮಜ್ಲಿಸ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಕಾರ್ಯದರ್ಶಿ ಸಿ.ಎಂ.ಹಮೀದ್ ಮೌಲವಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಅವರ ಜೀವನದ ಸಂದೇಶವನ್ನು ಸಾರುವ ಮೂಲ ಉದ್ದೇಶದಿಂದ ಪ್ರತಿ ವರ್ಷದಂತೆ ಈ ಬಾರಿಯೂ ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ವಿರಾಜಪೇಟೆಯಲ್ಲಿ ಪುಣ್ಯ ಪ್ರವಾದಿ (ಸ್ವ,ಅ) ಸ್ನೇಹ, ಸಮತ್ವ, ಸಹಿಷ್ಣುತೆ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಮೀಲಾದ್ ಘೋಷಣಾ ರ್ಯಾಲಿಯು ಭಾನುವಾರ ಸಂಜೆ 4 ಗಂಟೆಗೆ ವಿರಾಜಪೇಟೆ ಶಾಫಿ ಜುಮಾ ಮಸೀದಿಯಿಂದ ಆರಂಭಗೊಂಡು ಪಟ್ಟಣದಲ್ಲಿ ಸಂಚರಿಸಿ ಈದ್ಗಾ ಮೈದಾನದಲ್ಲಿ ಕೊನೆಗೊಳ್ಳಲಿದೆ. ನಂತರ ಬೃಹತ್ ಮೌಲಿದ್ ಮಜ್ಲಿಸ್ ಆಧ್ಯಾತ್ಮಿಕ ಸಂಗಮವು ನಡೆಯಲಿದೆ ಎಂದರು. ರ್ಯಾಲಿಯುದ್ಧಕ್ಕೂ ಪ್ರವಾದಿ ಕೀರ್ತನೆ, ಸರ್ವರೊಂದಿಗೂ…
ಮಡಿಕೇರಿ ಸೆ.14 : ಪೊನ್ನಂಪೇಟೆ “66/11 ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸ ಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಸೆಪ್ಟೆಂಬರ್ 16 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ಗಂಟೆಯ ವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 33/11 ಕೆವಿ ಶ್ರೀಮಂಗಲ, 33/11 ಕೆವಿ ಸಿದ್ದಾಪುರ 33/11 ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಸೆ.14 : ಗೌರಿ-ಗಣೇಶ ಹಬ್ಬ ಆಚರಣೆ ಸಂಬಂಧ ಅಗತ್ಯ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸುವಂತೆ ವರ್ಣಿತ್ ನೇಗಿ ಅವರು ಕೋರಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಗೌರಿ-ಗಣೇಶ ಹಬ್ಬ ಆಚರಿಸುವ ಸಂಬಂಧ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದನ್ನು ಪಾಲಿಸುವಂತೆ ಜಿ.ಪಂ.ಸಿಇಒ ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ , ಮಾತನಾಡಿ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಕಾನೂನು ಮತ್ತು ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಏನಾದರೂ ಸಮಸ್ಯೆಗಳು ಇದ್ದಲ್ಲಿ ಗಮನಕ್ಕೆ ತರುವಂತೆ ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಡಿಕೇರಿ ನಗರದ ಚೇತನ್, ನಗರದ ಗೌರಿ ಕೆರೆಯಲ್ಲಿ ಹೂಳು ತುಂಬಿದ್ದು,…
ಮಡಿಕೇರಿ ಸೆ.14 : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಹಿಂದಿ ದಿವಸವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಹಿಂದಿ ದಿವಸದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಶುದ್ಧ ಉಚ್ಚಾರಣ್ ಹಾಗೂ ದೋಹಾ ವಾಚನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಶುದ್ಧ ವಿಚಾರಣ್ ಸ್ಪರ್ಧೆಯಲ್ಲಿ ದ್ವಿತೀಯ ಬಿಸಿಎ ಯ ಜಿ. ಆರ್.ವಿಘ್ನೇಶ್ ಪ್ರಥಮ, ಎಂ.ಎಂ. ಭಜನ್ ದ್ವಿತೀಯ ಸ್ಥಾನ ಪಡೆದರು. ದೋಹಾ ವಾಚನದಲ್ಲಿ ಪ್ರಥಮ ಬಿಸಿಎ ಯ ಜಾಸ್ಮಿನ್ ಪ್ರಥಮ ಹಾಗೂ ಬಿಬಿಎ ಯ ಇಂಷಾ ರಣೀಮ್ ದ್ವಿತೀಯ ಸ್ಥಾನ ಪಡೆದರು. ತೀರ್ಪುಗಾರರಾಗಿ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ಕ್ರಿಸ್ಟಿನಾ, ಹಿಂದಿ ಶಿಕ್ಷಕರಾದ ಅಬ್ದುಲ್ ಮುನೀರ್ ಕಾರ್ಯನಿರ್ವಹಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಸಿ.ಎ.ದೀಪ , ಹಿಂದಿ ಪ್ರಾಧ್ಯಾಪಕಿ ಬಿ. ಎ.ಶಶಿಕಲಾ ಹಾಜರಿದ್ದರು. ವಿದ್ಯಾರ್ಥಿನಿ ಬಿ.ಬಿ. ಹಿಂದಿ ದಿವಸದ ಮಹತ್ವವನ್ನು ಕುರಿತು ಮಾತನಾಡಿದರು. ವಿದ್ಯಾರ್ಥಿನಿ ಸನ ಸ್ವಾಗತಿಸಿ, ನಿರೂಪಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಹಿಂದಿ ವಿಭಾಗದ ಎಲ್ಲಾ ವಿದ್ಯಾರ್ಥಿಗಳು…
ಮಡಿಕೇರಿ ಸೆ.14 : ತಿರುಪತಿಯಿಂದ ತಿರುಮಲಕ್ಕೆ ಹೋಗುವ ಪಾದಾಚಾರಿ ಮಾರ್ಗದ ಎರಡೂ ಬದಿಗಳಲ್ಲಿ ಕಬ್ಬಿಣದ ಬೇಲಿಗಳನ್ನು ನಿರ್ಮಿಸಿ ಭಕ್ತರ ಹಾಗೂ ಪ್ರಾಣಿಗಳ ರಕ್ಷಣೆಗೆ ಟಿಟಿಡಿ ಮುಂದಾಗಬೇಕು ಎಂದು ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಿರುಮಲಕ್ಕೆ ಹೋಗುವ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಡುಪ್ರಾಣಿಗಳಿವೆ. ಭಕ್ತರು ಅಲ್ಲಿರುವ ಜಿಂಕೆ ಮತ್ತಿತರ ಪ್ರಾಣಿಗಳಿಗೆ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು, ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಕರಡಿ, ಚಿರತೆ ಸೇರಿದಂತೆ ಕೆಲವು ಪ್ರಾಣಿಗಳಿಂದ ಭಕ್ತರಿಗೆ ಅಪಾಯವಿದೆ. ಇತ್ತೀಚೆಗೆ ಚಿರತೆ ದಾಳಿಯಿಂದ ಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ನಿಯೋಗ ತಿರುಪತಿ ತಿರುಮಲ ಮಾರ್ಗದ ಇಕ್ಕೆಲಗಳನ್ನು ಖುದ್ದು ಪರಿಶೀಲಿಸಿ ಈ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದಾಗಿ ಹೇಳಿದ್ದಾರೆ. ತಿರುಮಲ ಪಾದಾಚಾರಿ ಮಾರ್ಗದ ಎರಡೂ ಬದಿಗಳಲ್ಲಿ ಕಬ್ಬಿಣದ ಬೇಲಿಗಳನ್ನು ಅಳವಡಿಸುವ ಮೂಲಕ ಭಕ್ತರು ಹಾಗೂ ವನ್ಯಜೀವಿಗಳನ್ನು ರಕ್ಷಿಸಬೇಕೆಂದು ಟಿಟಿಡಿ ಸಮಿತಿಗೆ ಮನವಿ ನೀಡಲಾಗಿದೆ. ಭಕ್ತರು…
ಮಡಿಕೇರಿ ಸೆ.14 : ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬನ್ನಂಡ ಪೃಥ್ವಿ ಭೇಟಿ ಮಾಡಿ ಕೊಡಗು ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ವಿಂಗಡಣೆ ಕುರಿತು ಚರ್ಚಿಸಿದರು.






