ಲೇಖಕ: admin

ಮಡಿಕೇರಿ ಸೆ.14 : ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ನಾಗರಿಕರು ಪಿ.ಓ.ಪಿ ಗಣೇಶ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಜಿಲ್ಲಾ ಉಪ ಪರಿಸರ ಅಧಿಕಾರಿ ಎಂ. ಎಸ್.ನೇತ್ರಾವತಿ ಮನವಿ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಜಿಲ್ಲಾ ಘಟಕದ ವತಿಯಿಂದ ಶಾಲಾ – ಕಾಲೇಜುಗಳಲ್ಲಿ ಇಕೋ ಕ್ಲಬ್/ ವಿಜ್ಞಾನ ಸಂಘ/ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ,ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಇನ್ನಿತರ ಸಂಘಗಳು/ ಎಸ್ ಡಿ ಎಂ ಸಿ ಹಾಗೂ ಶಾಲಾ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಸೆ.18 ರಂದು ನಡೆಯಲಿರುವ ಗೌರಿ-…

Read More

ಬೆಂಗಳೂರು ಸೆ.14: ಭಾಗಮಂಡಲ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾಮಗಾರಿ ಚುರುಕುಗೊಳಿಸುವಂತೆ ಹಾಗೂ ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದ ವ್ಯಾಪ್ತಿಯ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಿ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮಗಳನ್ನ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕರೊಂದಿಗೆ ಸಭೆಯನ್ನು ನಡೆಸಿ ಮಾಹಿತಿ ಪಡೆದುಕೊಂಡರು. ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬೀಳುವ ಹಾಗೂ ಪುಣ್ಯಕ್ಷೇತ್ರವಾದ ಭಾಗಮಂಡಲಕ್ಕೆ ಪ್ರತಿವರ್ಷ ಮಳೆಗಾಲದಲ್ಲಿ 2-3 ತಿಂಗಳ ಕಾಲ ರಸ್ತೆ ಸಂಪರ್ಕ ಕಡಿತಗೊಂಡು ಸಮಸ್ಯೆ ಎದುರಿಸುತ್ತಿದ್ದ ಹಿನ್ನಲೆಯಲ್ಲಿ ಮೇಲ್ಸೇತುವೆ ಕಾಮಗಾರಿ ಆರಂಭಿಸಲಾಯಿತು. ಆದರೆ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಈ ವರ್ಷದ ಮಳೆಗಾಲದಲ್ಲೂ ಜನರಿಗೆ ಸಂಚಾರಕ್ಕೆ ಅವಕಾಶ ದೊರೆತಿರಲಿಲ್ಲ. ಈ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮುಂದಿನ ಬಾರಿ ಜಿಲ್ಲಾ ಪ್ರವಾಸದಲ್ಲಿ ಈ ಬಗ್ಗೆ ಪರಿಶೀಲನೆ…

Read More

ಮಡಿಕೇರಿ ಸೆ.14  : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 5.76 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.03 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1829.16 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3124.82 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.25 ಮಿ.ಮೀ. ಕಳೆದ ವರ್ಷ ಇದೇ ದಿನ 25.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2702.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4521.75 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.02 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 20.32 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1382.78 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2424.69 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.23…

Read More

ಮೂರ್ನಾಡು ಸೆ.14 :  2023-24ನೇ ಸಾಲಿನ ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮದಲ್ಲಿ ಮೂರ್ನಾಡು ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದ ಜನಪದ ಗೀತೆಯಲ್ಲಿ ಸುಧೀಕ್ಷ ಗಣಪತಿ, ಸುಂಸ್ಕೃತ ಮತ್ತು ಧಾರ್ಮಿಕ ಪಠಣ ಭೂಮಿಕ ಭಟ್, ಆಶುಭಾಷಣ ಜಯ ಸ್ವರೂಪ್, ಛದ್ಮವೇಷ ವಿ.ವಿ. ಭಾರ್ಗವಿ, ಚರ್ಚಾಸ್ಪರ್ಧೆ ಎ.ಬಿ. ಕೃತಿಕ, ಹಿಂದಿ ಭಾಷಣ ಲಹರಿ ತಮ್ಮಯ್ಯ, ಕನ್ನಡ ಭಾಷಣ ಪಿ.ವಿ. ಜೀವಿತ, ಕ್ವಿಜ್‍ನಲ್ಲಿ ಎಂ.ಬಿ. ಯಶ್ಮಿತ ಮತ್ತು ಪಿ.ವಿ. ಜೀವಿತ, ಭರತನಾಟ್ಯ ಟಿ.ಎನ್. ಅನುಪದ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಸ್ಪರ್ಧೆಗಳಲ್ಲಿ ಕ್ಲೈ ಮಾಡೆಲಿಂಗ್ ಪ್ರಧಾನ್ ಬಸಪ್ಪ, ಸುಂಸ್ಕೃತ ಮತ್ತು ಧಾರ್ಮಿಕ ಪಠಣದಲ್ಲಿ ಯು.ಆರ್. ನಿಹಾರಿಕ ಹಾಗೂ ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಸ್ಪರ್ಧೆಗಳಲ್ಲಿ ಭಕ್ತಿಗೀತೆ ಶ್ರದ್ಧಾ, ಕಥೆ ಹೇಳುವುದು ಬಿ.ಸಿ. ಹಿಮಾನಿ, ಅಭಿನಯ ಗೀತೆ ಸಿ.ಸಿ. ದೀಕ್ಷಾ, ಕ್ಲೈ ಮಾಡೆಲಿಂಗ್ ಧನ್ವಿತ, ಸುಂಸ್ಕೃತ ಮತ್ತು ಧಾರ್ಮಿಕ…

Read More

ನಾಪೋಕ್ಲು ಸೆ.14 : ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದ ಕ್ಲಸ್ಟರ್ ಹಂತದ ಕನ್ನಡ ಭಾಷಣ, ಧಾರ್ಮಿಕ ಪಠಣ, ಭಾವಗೀತೆ ಛದ್ಮವೇಶ, ಚಿತ್ರಕಲೆ, ಚರ್ಚಾ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳು ತಾಲೂಕು ಹಂತದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ತಮ್ಮಯ್ಯ ತಿಳಿಸಿದ್ದಾರೆ. ಕನ್ನಡ ಭಾಷಣದಲ್ಲಿ ಮಹಮ್ಮದ್, ಧಾರ್ಮಿಕ ಪಠಣ( ಸಂಸ್ಕೃತ) ಶಮಂತ್, ಭಾವಗೀತೆಯಲ್ಲಿ ಬಿಷನ್ ಬಿದ್ದಪ್ಪ,ಛದ್ಮವೇಷದಲ್ಲಿ ರಚನ್ ಎಚ್.ಎಂ,ಚಿತ್ರಕಲೆಯಲ್ಲಿ ಯುಕ್ತ ಪೊನ್ನಮ್ಮ, ಚರ್ಚಾ ಸ್ಪರ್ಧೆಯಲ್ಲಿ ಶರಣ್ಯ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಶಮಂತ್ ಮತ್ತು ದರ್ಶ ದೇಚಮ್ಮ ತಂಡ ಪ್ರಥಮ ಸ್ಥಾನ ಗಳಿಸಿದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 5-7 ವಿಭಾಗದ ಸಂಸ್ಕೃತ ಧಾರ್ಮಿಕ ಪಠಣ(ಸಂಸ್ಕೃತ)ದಲ್ಲಿ ಶಾನ್ ದೇವಯ್ಯ ಪ್ರಥಮ ಸ್ಥಾನ ಗಳಿಸಿದರೆ, 1-4 ವಿಭಾಗದ ಲಘು ಸಂಗೀತ, ಛದ್ಮವೇಷ, ಕಥೆ ಹೇಳುವುದು,…

Read More

ಮಡಿಕೇರಿ ಸೆ.14 : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ಸಂಬಂಧ “ಆನ್‍ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ 2023-24 ನೇ ಸಾಲಿಗೆ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಭೇತಿ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರ್ರಿಶ್ಚಿಯನ್, ಬೌದ್ಧ, ಜೈನ್, ಪಾರ್ಸಿ, ಸಿಖ್) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ 21 ರಿಂದ 35 ವರ್ಷಗಳು ಮೀರಿರಬಾರದು. ಈಗಾಗಲೇ ಇಲಾಖೆ/ಖಾಸಾಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಸೆಷ್ಟೆಂಬರ್,…

Read More

ಮಡಿಕೇರಿ ಸೆ.14 : ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವ ಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಯ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ಪ್ರತ್ಯೇಕ ವಿಭಾಗಗಳಲ್ಲಿ ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದೆ. ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕವಾಗಿ ಹಾಗೂ ಕ್ರಮವಾಗಿ ತಲಾ 3 ಸಾವಿರ ರೂ, 2 ಸಾವಿರ ರೂ. ಹಾಗೂ 1 ಸಾವಿರ ರೂ. ಹಾಗೂ ರಾಜ್ಯ ಮಟ್ಟದಲ್ಲಿ ವಿಜೇತರಾದವರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕವಾಗಿ ಹಾಗೂ ಕ್ರಮವಾಗಿ ತಲಾ 31 ಸಾವಿರ ರೂ, 21 ಸಾವಿರ ರೂ. ಹಾಗೂ 11 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಪ್ರೌಢ ಶಾಲಾ ವಿಭಾಗ: ನನಗೇಕೆ ಗಾಂಧೀಜಿ ಇಷ್ಟವಾಗುತ್ತಾರೆ. ನನ್ನ ಬದುಕಿನಲ್ಲಿ…

Read More

ಸುಂಟಿಕೊಪ್ಪ ಸೆ.14 : ಹನ್ನೆರಡನೇ ಶತಮಾನದಲ್ಲಿ ಜನರು ಅನುಭವಿಸುತ್ತಿದ್ದ ಸಾಮಾಜಿಕ ಅಸಮಾನತೆಗಳನ್ನು ನೀಗಿಸಲು ಎಲ್ಲಾ ಜಾತಿ ವರ್ಗಗಳ ವಚನಕಾರರು ವಚನಗಳನ್ನು ರಚಿಸಿ ಜನರಲ್ಲಿ ಸಾಮಾಜಿಕ ಪ್ರಜ್ಞೆಯ ಜೊತೆಗೆ ಅವರ ಜೀವನ ಸುಧಾರಣೆಗೆ ರೂಪಿಸಿದ ಜನರಾಡುವ ಸರಳ ಭಾಷೆಯ ವಚನಗಳು ಸದ್ಗುಣಗಳನ್ನು ಭಿತ್ತಿ ಬೆಳೆವ ಭೂಮಿಕೆ ಎಂದು ಕುಶಾಲನಗರ ಸರ್ಕಲ್ ಇನ್ಸ್ ಪೆಕ್ಟರ್ ರಾಜೇಶ್ ಕೋಟ್ಯಾನ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ” ವಿದ್ಯಾರ್ಥಿಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ಸರ್ವ ಶ್ರೇಷ್ಠ ಸಾಹಿತ್ಯ ಹಾಗೂ ಸಂಸ್ಕ್ರತಿ ಉಳಿಸಬೇಕಾದುದು ಹಾಗೂ ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಾದುದು ಇಂದಿನ ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಬೇಕಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಚನ ಸಾಹಿತ್ಯ,ದಾಸ ಸಾಹಿತ್ಯ, ಕೀರ್ತನೆ ಮೊದಲಾದ ಭಾರತೀಯ ಸಂಸ್ಕ್ರತಿಯ ಪರ್ವಗಳನ್ನು ಅರಿತು ಸಮಾಜಕ್ಕೆ ಉಣಬಡಿಸುವ ಮೂಲಕ ಸುಗಮ ಸಮಾಜ ಕಟ್ಟಬೇಕಿದೆ. ನಾಲ್ಕು ದಿನಗಳ ಮಾನವ ಬದುಕನ್ನು ಸುಂದರವಾಗಿ ಕಳೆಯಬೇಕಿದ್ದಲ್ಲಿ…

Read More

ಕೊಡ್ಲಿಪೇಟೆ ಸೆ.14 :  ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆಗೆ ಪೌಷ್ಟಿಕ ಆಹಾರ ಅಗತ್ಯವಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಪೌಷ್ಟಿಕ ಆಹಾರಗಳನ್ನು ನೀಡುವುದರೊಂದಿಗೆ ಅದರ ಮಹತ್ವ ಕುರಿತು ಅರಿವು ಮೂಡಿಸಬೇಕು ಎಂದು ಬ್ಯಾಡಗೊಟ್ಟ ಗ್ರಾ.ಪಂ ಅಧ್ಯಕ್ಷ ಹನೀಫ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೋಮವಾರಪೇಟೆ ತಾಲೂಕು ವತಿಯಿಂದ ದೊಡ್ಡಕುಂದ ಅಂಗನವಾಡಿ ಕೇಂದ್ರದಲ್ಲಿ ನಡೆದ ಪೋಷಣಾ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಸಿರಿಧಾನ್ಯಗಳು, ತರಕಾರಿಗಳನ್ನು ಹೆಚ್ಚಾಗಿ ಬಳಸುವ ಮೂಲಕ ನಮ್ಮ ಹಿರಿಯರು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಂಡಿದ್ದರು. ಹಳ್ಳಿಗಳಲ್ಲಿ ಅಕ್ಕಿಯನ್ನು ನೋಡುತ್ತಿದ್ದುದೇ ಅಪರೂಪವಾಗಿತ್ತು. ಆದರೆ ಈಗ ಅಕ್ಕಿ, ಸಕ್ಕರೆ ಮೊದಲಾದ ಪದಾರ್ಥಗಳನ್ನು ಹೆಚ್ಚಾಗಿ ಬಳಸಲಾಗುತ್ತಿದೆ ಎಂದರು. ಮಕ್ಕಳು ಹಸಿವಿನಿಂದ ಬಳಲಬಾರದು ಎಂದು ಸರ್ಕಾರ ಮಧ್ಯಾಹ್ನದ ಬಿಸಿಯೂಟ ನೀಡುತ್ತಿದೆ. ಮಕ್ಕಳು ಪೌಷ್ಟಿಕಾಂಶ ಆಹಾರಗಳನ್ನು ಸೇವಿಸಬೇಕು. ಆಹಾರ ಪದಾರ್ಥಗಳನ್ನು ವ್ಯರ್ಥ ಮಾಡಬಾರದು ಎಂದು ಹೇಳಿದರು. ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕಿ ದುಂಬಿತಾ…

Read More

ಕುಶಾಲನಗರ  ಸೆ.14 :  ದೊಡ್ಡತ್ತೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸಮವಸ್ತ್ರ  ವಿತರಿಸಿದರು. ನಂತರ  ಮಾತನಾಡಿದ  ಅವರು  ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಎಲ್ಲರೂ ತಮ್ಮ ತಮ್ಮ ಗ್ರಾಮದ ಶಾಲೆಗಳ ಬಗ್ಗೆ ಶಾಲೆಯ ಆಡಳಿತ ಮಂಡಳಿಯೊಂದಿಗೆ ಸಹಕರಿಸಬೇಕು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವುದು ಕಡಿಮೆ ಆಗಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಎಂದರು. ಶಾಲೆಗಳಲ್ಲಿ ಕುಡಿಯುವ ನೀರು, ಕಟ್ಟಡಗಳ ಸಮಸ್ಯೆ, ಅರೋಗ್ಯ, ರಸ್ತೆ, ಉಪಹಾರ ಸೇರಿದಂತೆ  ಮೂಲಭೂತ ಸೌಕರ್ಯಗಳ ಕೊರತೆ ಉಂಟಾದಲ್ಲಿ  ಸಮಸ್ಯೆಗಳ ಬಗ್ಗೆ ನನಗೆ ಆಗಲಿ ಸ್ಥಳೀಯ ಜನಪ್ರತಿನಿಧಿಗಳಿಗಾಗಲಿ ಮಾಹಿತಿ ನೀಡಬೇಕು ಎಂದರು. ಮಕ್ಕಳ ಮುಖಾಂತರವೇ ದೇಶ ಬದಲಾವಣೆಯಗಲು ಸಾಧ್ಯ, ಸರ್ಕಾರಿ ಶಾಲೆಯ ಮಕ್ಕಳಿಗೆ ನಮ್ಮಿಂದ ಹೆಚ್ಚಿನ ಪ್ರೋತ್ಸಾಹ, ಅನುದಾನಗಳನ್ನು ನೀಡಲಾಗುವುದು. ಸರ್ಕಾರಿ ಶಾಲೆಯ ಉನ್ನತಿಗಾಗಿ ಶಾಲೆಯ ಮಕ್ಕಳ ಹಿತಕ್ಕಾಗಿ ಸರ್ಕಾರವು ಮತ್ತು ನಾನು ಯಾವಾಗಲು ನಿಮ್ಮ ಪರ ಇರುತ್ತೇವೆ ಎಂದು…

Read More